ಸರ್ಕಾರಿ ಉದ್ಯೋಗದ ಆಮಿಷವೊಡ್ಡಿ ಬಿಜೆಪಿ ಕಾರ್ಪೊರೇಟರ್‌ನಿಂದ ಮಹಿಳೆ ಮೇಲೆ ಅತ್ಯಾಚಾರ

Date:

ಮಧ್ಯಪ್ರದೇಶದ ಇಂಧೋರ್‌ನಲ್ಲಿ ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ಆಮಿಷವೊಡ್ಡಿ ತನ್ನ ಮೇಲೆ ಇಂಧೋರ್ ಪಾಲಿಕೆಯ ಬಿಜೆಪಿ ಕಾರ್ಪೊರೇಟರ್ ಅತ್ಯಾಚಾರ ಎಸಗಿದ್ದಾನೆ ಎಂದು ಮಹಿಳೆಯೊಬ್ಬರು ಆರೋಪಿಸಿದ್ದಾರೆ. ದ್ವಾರಕಾಪುರಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

2023ರ ಮೇ 10ರಿಂದ 2024ರ ಏಪ್ರಿಲ್ 16ವರೆಗೆ ತನ್ನ ಮೇಲೆ ಬಿಜೆಪಿ ಕಾರ್ಪೊರೇಟರ್ ಶಾನು ಶರ್ಮಾ ಎಂಬಾತ ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ ಎಂದು ಮಹಿಳೆ ದೂರಿನಲ್ಲಿ ಆರೋಪಿಸಿದ್ದಾರೆ.

“ತಾನು ಬ್ಯಾಂಕ್‌ನಲ್ಲಿ 1 ಲಕ್ಷ ರೂ. ಸಾಲ ಮಾಡಿದ್ದೆ. ಆ ಸಾಲ ತೀರಿಸಲು ಶಾನು ಶರ್ಮಾ ಹಣ ನೀಡಿದ್ದರು. ಅಲ್ಲದೆ, ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ಆಮಿಷವೊಡ್ಡಿ, ತನ್ನೊಂದಿಗೆ ಲೈಂಗಿಕ ಸಂಬಂಧ ಬೆಳೆಸಿದ್ದರು. ಅವರ ಕಚೇರಿಯಲ್ಲಿ ಕೆಲಸ ಕೊಟ್ಟಿದ್ದರು. ನನ್ನ ಮೇಲೆ ಆಗ್ಗಾಗ್ಗೆ ಅತ್ಯಾಚಾರ ಎಸಗುತ್ತಿದ್ದರು. ನನ್ನ ಗೆಳೆಯನಿಂದ ದೂರ ಇರುವಂತೆ ಒತ್ತಾಯಿಸಿದ್ದರು. ನಾನು ಒಪ್ಪದಿದ್ದಾಗ, ಹಣ ವಾಪಸ್‌ ಕೊಡುವಂತೆ ಕೇಳಿ, ಕಿರುಕುಳ ನೀಡಲಾರಂಭಿಸಿದ್ದರು” ಎಂದು ಮಹಿಳೆ ದೂರಿನಲ್ಲಿ ವಿವರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಕೆಯ ದೂರಿನ ಆಧಾರ ಮೇಲೆ ಬಿಜೆಪಿ ಕಾರ್ಪೊರೇಟ್‌ ಶಾನು ಶರ್ಮಾ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್‌) 376, 376(2)(ಎನ್‌) ಹಾಗೂ 506ರ ಅನ್ವಯ ಎಫ್‌ಐಆರ್ ದಾಖಲಿಸಲಾಗಿದೆ. ಆತನ ವಿರುದ್ಧ ಪ್ರಕರಣ ದಾಖಲಿಸದಂತೆ ಪೊಲೀಸರಿಗೆ ಬಿಜೆಪಿ ಮುಖಂಡರು ಒತ್ತಡ ಹಾಕಿದ್ದರು ಎಂದೂ ಆರೋಪಿಸಲಾಗಿದೆ.

“ಪ್ರಕರಣ ದಾಖಲಿಸಿಕೊಂಡಿದ್ದೇವೆ. ತನಿಖೆ ನಡೆಯುತ್ತಿದ್ದು, ಕ್ರಮ ತೆಗೆದುಕೊಳ್ಳಲಾಗುತ್ತದೆ” ಎಂದು ಡಿಸಿಪಿ ರಾಜೇಶ್ ದಾಂದೋತಿಯಾ ಮಾಹಿತಿ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...