ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಬಂಧನ

Date:

ಹಾಸನದ ಜೆಡಿಎಸ್‌ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣವು ರಾಜ್ಯದಲ್ಲಿ ದೊಡ್ಡಮಟ್ಟದಲ್ಲಿ ಸದ್ದು ಮಾಡುತ್ತಿರುವ ಬೆನ್ನಲ್ಲೇ, ಇದೇ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಯಾಗಿರುವ ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣ ವರದಿಯಾಗಿತ್ತು.

ಈ ಬಗ್ಗೆ ಮಹಿಳೆಯೋರ್ವರು ನೀಡಿರುವ ದೂರಿನ ಮೇರೆಗೆ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಅವರನ್ನು ಚಿತ್ರದುರ್ಗ ಜಿಲ್ಲೆಯಲ್ಲಿ ಪೊಲೀಸರು ವಶಕ್ಕೆ ಪಡೆದು, ಬಂಧಿಸಿರುವುದಾಗಿ ವರದಿಯಾಗಿದೆ.

ಹಿರಿಯೂರಿನಲ್ಲಿ ವಕೀಲ ದೇವರಾಜೇಗೌಡ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಎಸ್‌ಐಟಿಗೆ ಒಪ್ಪಿಸಲು ತಯಾರಿ ನಡೆಸಿದ್ದಾರೆ. ಹೊಳೆನರಸೀಪುರ ಪೊಲೀಸರು ನೀಡಿದ ಮಾಹಿತಿ ಮೇರೆಗೆ ಬೆಂಗಳೂರಿನಿಂದ ಬಳ್ಳಾರಿಗೆ ಹೋಗುತ್ತಿದ್ದಾಗ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಹಿನ್ನೆಲೆ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ವಶಕ್ಕೆ ಪಡೆಯಲಾಗಿದೆ. ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಸಂಬಂಧ ಕೇಸ್ ದಾಖಲಾಗಿತ್ತು. ಇಂದು ಅದೇ ಮಹಿಳೆ ವಿರುದ್ಧ ದೇವರಾಜೇಗೌಡ ಹೆಬ್ಬಾಳ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದೀಗ ದೇವರಾಜೇಗೌಡ ಹಿರಿಯೂರು ಠಾಣೆ ಪೊಲೀಸರ ವಶದಲ್ಲಿದ್ದಾರೆ ಎಂದು ತಿಳಿದುಬಂದಿದೆ.

ಏಪ್ರಿಲ್ 1ರಂದು ಹೊಳೆನರಸೀಪುರ ನಗರ ಠಾಣೆಯಲ್ಲಿ ಸಂತ್ರಸ್ತ ಮಹಿಳೆ ದೂರು ನೀಡಿದ್ದು, ತಮ್ಮ ನಿವೇಶನವೊಂದರ ಮಾರಾಟ ವಿಚಾರವಾಗಿ ವಕೀಲ ದೇವರಾಜೇಗೌಡ ಸಂಪರ್ಕ ಮಾಡಿ, ಬಳಿಕ ಬ್ಲ್ಯಾಕ್‌ಮೇಲ್ ಮಾಡಿ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ದೂರಿನಲ್ಲಿ ಉಲ್ಲೇಖಿಸಿದ್ದರು.

“ಸೈಟ್ ಮಾರಾಟ ಮಾಡಿಸಿಕೊಡುವ ನೆಪದಲ್ಲಿ ತನ್ನನ್ನು ಲೈಂಗಿಕವಾಗಿ ಬಳಕೆ ಮಾಡಿಕೊಂಡಿದ್ದಾರೆ. ಹೆದರಿಸಿ ಬೆದರಿಸಿ ತನ್ನ ಮೇಲೆ ದೌರ್ಜನ್ಯ ನಡೆಸಲಾಗಿದೆ. ವಿಡಿಯೋ ಕಾಲ್ ಮಾಡಿ ಮಾನಸಿಕ ಹಿಂಸೆ ನೀಡಿದ್ದಾರೆ” ಎಂದು ಆರೋಪಿಸಿ ದೂರಿನಲ್ಲಿ ತಿಳಿಸಿದ್ದರು. ವಿಡಿಯೋ ಕಾಲ್ ಮಾಡಿ ತನ್ನ ಖಾಸಗಿ ಅಂಗಾಂಗ ತೋರಿಸಿ ಪ್ರಚೋದನೆಗೆ ಯತ್ನಿಸಿದ್ದಾರೆ. ಹೀಗಾಗಿ ಮಹಿಳೆ‌ ದೂರು ಆಧರಿಸಿ ಹೊಳೆನರಸೀಪುರ ನಗರ ಠಾಣೆಯಲ್ಲಿ ಎಫ್ ಐಆರ್​ ದಾಖಲಾಗಿತ್ತು.

ಇದನ್ನು ಓದಿದ್ದೀರಾ? ಪ್ರಜ್ವಲ್ ರೇವಣ್ಣ ಬಳಿಕ ವಕೀಲ ದೇವರಾಜೇಗೌಡ ಸರದಿ: ಮಹಿಳೆಗೆ ಬ್ಲ್ಯಾಕ್‌ಮೇಲ್ ಮಾಡಿ ಲೈಂಗಿಕ ಕಿರುಕುಳ ಆರೋಪ

ಈ ಪ್ರಕರಣಕ್ಕೆ ಸಂಬಂಧಿಸಿ ಜಾಮೀನಿಗಾಗಿ ದೇವರಾಜೇಗೌಡ ಮೇ 8ರಂದು ಹಾಸನದ ಎರಡನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಮೇ 15ಕ್ಕೆ ಕೋರ್ಟ್ ವಿಚಾರಣೆ ಮುಂದೂಡಿದೆ. ಈ ನಡುವೆಯೇ ಇಂದು(ಶುಕ್ರವಾರ) ಸಂಜೆ ಪೊಲೀಸರು ವಶಕ್ಕೆ ಪಡೆದು, ಬಂಧಿಸಿರುವುದಾಗಿ ತಿಳಿದುಬಂದಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...