ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದ ಮಹಿಳೆ ಸಾವು

Date:

ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಮತ್ತು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದ ಮಹಿಳೆ (ಸಂತ್ರಸ್ತೆಯ ತಾಯಿ) ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.

ದೂರುದಾರೆಯು ಕಳೆದ ಕೆಲವು ವರ್ಷಗಳಿಂದ ಲಂಗ್ ಕ್ಯಾನ್ಸರ್‌ ಕಾಯಿಲೆಯಿಂದ ಬಳಲುತ್ತಿದ್ದರು. ಬನ್ನೇರುಘಟ್ಟ ರಸ್ತೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಉಸಿರಾಟದ ತೊಂದರೆ ಕಾಣುತ್ತಿದ್ದಂತೆ ಹುಳಿಮಾವು ಬಳಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಇವರು ಯಡಿಯೂರಪ್ಪ ವಿರುದ್ಧ ತಮ್ಮ ಅಪ್ರಾಪ್ತ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಮಾಡಿ ಇತ್ತೀಚೆಗೆ ದೂರು ನೀಡಿದ್ದರು. ಅದರಂತೆ, ಯಡಿಯೂರಪ್ಪ ವಿರುದ್ಧ ದೂರು ದಾಖಲಿಸಿಕೊಂಡಿದ್ದ ಪೊಲೀಸರು ಎಫ್​ಐಆರ್ ದಾಖಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜಕೀಯವಾಗಿ ಸದ್ದು ಮಾಡಿದ ಪ್ರಕರಣ

ಲೋಕಸಭೆ ಚುನಾವಣೆ ಹೊಸ್ತಿಲಲ್ಲೇ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ ಎಸಗಿದ ಆರೋಪದಡಿ, ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಕೆಲವು ದಿನಗಳ ಮಟ್ಟಿಗೆ ರಾಜಕೀಯವಾಗಿಯೂ ಸದ್ದು ಮಾಡಿತ್ತು.

ಪ್ರಕರಣದ ಹಿನ್ನೆಲೆ

ಪತಿಯೇ ತನ್ನ ಮಗಳಿಗೆ ಲೈಂಗಿಕ ಕಿರುಕುಳ ನೀಡಿದ್ದ ಎಂಬ ಆರೋಪದ ದೂರು ದಾಖಲಿಸಿಕೊಳ್ಳಲು ಪೊಲೀಸರು ಹಿಂದೇಟು ಹಾಕುತ್ತಿದ್ದಾರೆ ಎಂದು ಫೆಬ್ರವರಿ 2 ರಂದು ಸಹಾಯ ಕೇಳಲು ಬಿ ಎಸ್‌ ಯಡಿಯೂರಪ್ಪ ಅವರ ಮನೆಗೆ ಮಗಳ ಜೊತೆ ಹೋಗಿದ್ದೆ. ಆಗ  ಮಗಳನ್ನು ಕೋಣೆಗೆ ಕರೆದೊಯ್ದ ಯಡಿಯೂರಪ್ಪ ಅವರು ಆಕೆಯ ಅಂಗಾಂಗ ಮುಟ್ಟಿ ದೌರ್ಜನ್ಯ ಎಸಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು. ಈ ಪ್ರಕರಣದಲ್ಲಿ ಆರೋಪಿ ಯಡಿಯೂರಪ್ಪ ಅವರ ಹೇಳಿಕೆಯನ್ನು ಪೊಲೀಸರು ಪಡೆದಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...