ಹರಿಯಾಣ ಚುನಾವಣಾ ಫಲಿತಾಂಶ ಒಪ್ಪಲ್ಲ, ಇವಿಎಂ ‘ಮ್ಯಾನಿಪುಲೇಷನ್’ ಆಗಿದೆ: ಕಾಂಗ್ರೆಸ್

Date:

ಹರಿಯಾಣ ವಿಧಾನಸಭೆ ಚುನಾವಣಾ ಫಲಿತಾಂಶವನ್ನು ನಾವು ಒಪ್ಪಿಕೊಳ್ಳುವುದಿಲ್ಲ, ಕೆಲವೆಡೆ ಇವಿಎಂ ‘ಮ್ಯಾನಿಪುಲೇಷನ್’ ಆಗಿದೆ ಎಂದು ಕಾಂಗ್ರೆಸ್ ಹೇಳಿದೆ. ಜೊತೆಗೆ ಈ ಫಲಿತಾಂಶವು ‘ಆಘಾತ’ ಮತ್ತು ‘ಆಶ್ಚರ್ಯ’ ಉಂಟು ಮಾಡಿದೆ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ.

ಸುಮಾರು 14 ಕ್ಷೇತ್ರಗಳಲ್ಲಿ ಎಣಿಕೆ ಪ್ರಕ್ರಿಯೆ ಮತ್ತು ಇವಿಎಂಗಳ (ವಿದ್ಯುನ್ಮಾನ ಮತಯಂತ್ರಗಳು) ಕಾರ್ಯನಿರ್ವಹಣೆಯಲ್ಲಿ ಗಂಭೀರವಾದ ವ್ಯತ್ಯಾಸಗಳನ್ನು ಕಾಂಗ್ರೆಸ್ ಬೊಟ್ಟು ಮಾಡಿದೆ. ಈ ವಿಚಾರದಲ್ಲಿ ಚುನಾವಣಾ ಆಯೋಗವನ್ನು ಸಂಪರ್ಕಿಸುವುದಾಗಿಯೂ ಹೇಳಿದೆ.

ಈ ಬಗ್ಗೆ ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಹರಿಯಾಣ ಫಲಿತಾಂಶವು ‘ಮ್ಯಾನಿಪುಲೇಷನ್’ ಗೆಲುವಾಗಿದೆ ಮತ್ತು ಜನರ ಇಚ್ಛೆಯನ್ನು ಬುಡಮೇಲು ಮಾಡಿದೆ. ಇದು ಪಾರದರ್ಶಕ ಮತ್ತು ಪ್ರಜಾಸತ್ತಾತ್ಮಕ ಪ್ರಕ್ರಿಯೆಗಳ ಸೋಲು ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ʼಈ ದಿನʼ ವಿಶ್ಲೇಷಣೆ | ಹರಿಯಾಣ ಚುನಾವಣೆ ಕಾಂಗ್ರೆಸ್ ಕೈ ತಪ್ಪಿದ್ದೇಕೆ?

“ಹರಿಯಾಣದಲ್ಲಿ ಫಲಿತಾಂಶಗಳು ಸಂಪೂರ್ಣವಾಗಿ ಅನಿರೀಕ್ಷಿತವಾಗಿದೆ. ಇದು ನೆಲದ ವಾಸ್ತವಕ್ಕೆ ವಿರುದ್ಧವಾಗಿದೆ. ಹರಿಯಾಣದ ಜನರು ಬದಲಾವಣೆ ಮತ್ತು ಪರಿವರ್ತನೆಯ ಮನಸ್ಸು ಮಾಡಿದ್ದಾರೆ. ಇದು ಅದರ ವಿರುದ್ಧವಾಗಿದೆ. ಈ ಪರಿಸ್ಥಿತಿಯಲ್ಲಿ ಇಂದು ಪ್ರಕಟವಾಗಿರುವ ಫಲಿತಾಂಶವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ನಾನು ಭಾವಿಸುತ್ತೇನೆ” ಎಂದು ರಮೇಶ್ ಹೇಳಿದರು.

“ಕನಿಷ್ಠ ಮೂರು ಜಿಲ್ಲೆಗಳಲ್ಲಿ ಎಣಿಕೆ ಪ್ರಕ್ರಿಯೆ ಮತ್ತು ಇವಿಎಂಗಳ ಸಮಸ್ಯೆ ಉಂಟಾಗಿದೆ. ಈ ಬಗ್ಗೆ ಕಾಂಗ್ರೆಸ್ ಗಂಭೀರವಾದ ದೂರು ಸ್ವೀಕರಿಸಿದೆ. ಶೇಕಡ 99ರಷ್ಟು ಬ್ಯಾಟರಿ ಹೊಂದಿರುವ ಇವಿಎಂಗಳಲ್ಲಿ ಕಾಂಗ್ರೆಸ್‌ ಸೋಲುತ್ತಿದೆ ಎಂಬ ಫಲಿತಾಂಶ ತೋರಿಸಿದೆ. ಆದರೆ ಅದಕ್ಕಿಂತ ಕಡಿಮೆ ಬ್ಯಾಟರಿ ಇದ್ದ ಯಂತ್ರಗಳು ಕಾಂಗ್ರೆಸ್ ಗೆಲುವಿನತ್ತ ಮುಖ ಮಾಡಿದಂತೆ ತೋರಿಸಿದೆ” ಎಂದು ಕಾಂಗ್ರೆಸ್ ನಾಯಕ ಆರೋಪಿಸಿದ್ದಾರೆ.

ಹರಿಯಾಣದ ಕೆಲವು ಭಾಗಗಳಲ್ಲಿ ಇವಿಎಂ ದುರ್ಬಳಕೆಯಾಗಿದೆ ಎಂದು ಕಾಂಗ್ರೆಸ್ ನಾಯಕ ಪವನ್ ಖೇರಾ ಹೇಳಿದ್ದಾರೆ.

ಇನ್ನು ಮತ ಎಣಿಕೆ ಸಂದರ್ಭದಲ್ಲಿ ಕಾಂಗ್ರೆಸ್ ಚುನಾವಣಾ ಫಲಿತಾಂಶದ ಅಪ್‌ಡೇಟ್ ವಿಳಂಬವಾಗುತ್ತಿರುವ ಬಗ್ಗೆ ಪ್ರಶ್ನೆ ಮಾಡಿದ್ದರು. ಈ ಬಗ್ಗೆ ಎಕ್ಸ್‌ನಲ್ಲಿ ದೂರು ಪ್ರತಿಯನ್ನು ಪೋಸ್ಟ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ವಕ್ತಾರ ಜೈರಾಮ್ ರಮೇಶ್, “ಚುನಾವಣಾ ಆಯೋಗಕ್ಕೆ ನಾನು ಪತ್ರ ಬರೆದಿದ್ದೇನೆ. ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಟ್ರೆಂಡ್‌ಗಳನ್ನು ಅಪ್‌ಡೇಟ್ ಮಾಡುವಲ್ಲಿ ವಿಳಂಬದ ಬಗ್ಗೆ ನಾನು ಪತ್ರ ಬರೆದಿದ್ದೇನೆ” ಎಂದು ತಿಳಿಸಿದ್ದರು. ಆದರೆ ಚುನಾವಣಾ ಆಯೋಗ ಮಾತ್ರ ಈ ಆರೋಪವನ್ನು ನಿರಾಕರಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...