ಸಾಹಿತಿಗಳೂ ರಾಜಕಾರಣಿಗಳೇ, ಸರ್ಕಾರದಿಂದ ನೇಮಕವಾಗಿದ್ದಾರೆ, ಸಭೆ ಮಾಡಿದ್ದೇನೆ: ಡಿ ಕೆ ಶಿವಕುಮಾರ್

Date:

ಇತ್ತೀಚೆಗೆ ಕೆಪಿಸಿಸಿ ಕಚೇರಿಗೆ ಸಾಹಿತ್ಯ, ಸಂಸ್ಕೃತಿ ಹಾಗೂ ಇತರ ಅಕಾಡೆಮಿಗಳ ಅಧ್ಯಕ್ಷರ ಮತ್ತು ಪದಾಧಿಕಾರಿಗಳನ್ನು ಕರೆಸಿಕೊಂಡಿದ್ದರ ಬಗ್ಗೆ ಸಾರ್ವಜನಿಕವಾಗಿ ಆಕ್ಷೇಪ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್‌ ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, “ಮಾಧ್ಯಮಗಳಿಗೆ ಎಲ್ಲವೂ ತಪ್ಪು ಎನಿಸಬಹುದು. ಸಾಹಿತಿಗಳು ಕೂಡ ಒಂದು ರೀತಿಯಲ್ಲಿ ರಾಜಕಾರಣಿಗಳೇ, ಅವರೂ ರಾಜಕಾರಣಕ್ಕೆ ಬರಬಹುದು. ಕಾಂಗ್ರೆಸ್‌ ಪಕ್ಷದ ಕಚೇರಿಗೆ ಸಾಹಿತಿಗಳನ್ನು ಕರೆದು ಚರ್ಚಿಸಿದ್ದೇನೆ. ಇದರಲ್ಲಿ ತಪ್ಪೇನಿದೆ” ಎಂದು ಪ್ರಶ್ನಿಸಿದರು.

ಅಕಾಡೆಮಿ ಅಧ್ಯಕ್ಷರು, ಪದಾಧಿಕಾರಿಗಳನ್ನು ಕರೆಸಿಕೊಂಡ ಬಗ್ಗೆ ಅಕ್ಷೇಪ ವ್ಯಕ್ತವಾಗುತ್ತಿದೆಯಲ್ಲ ಎಂದು ಸುದ್ದಿಗಾರರು ಪ್ರಶ್ನಿಸಿದಾಗ, “ಅಕಾಡೆಮಿ ಅಧ್ಯಕ್ಷರ ಸಭೆ ನಾನೇ ಕರೆದಿದ್ದು. ಅದರಲ್ಲೇನಿದೆ. ಪಕ್ಷದ ಕಚೇರಿಯಲ್ಲಿ ಕರೆದಿದ್ದು ಸರಿಯಲ್ಲ ಅಂತ ನಿಮಗೆ ಅನ್ನಿಸಿರಬಹುದು. ಇದು ಸರ್ಕಾರದ ನೇಮಕ. ಹೀಗಾಗಿ ಎಲ್ಲಿ ಬೇಕಾದರೂ ಕರೆಸಿಕೊಳ್ಳಬಹುದು. ಎಲ್ಲಿ ಬೇಕಾದರೂ ಸಭೆ ಮಾಡಬಹುದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಾಹಿತ್ಯ ಮತ್ತು ಸಂಸ್ಕೃತಿಗೆ ಸೇರಿದ ಅಕಾಡೆಮಿಗಳು ಸ್ವತಂತ್ರ ಸಂಸ್ಥೆಗಳಲ್ಲವೇ, ಅವುಗಳ ಅಧ್ಯಕ್ಷರನ್ನು ಕರೆಸೋದು ಎಷ್ಟು ಸರಿ ಎಂದು ಪ್ರಶ್ನಿಸಿದಾಗ, “ಅವೆಲ್ಲಾ ಇಂಡಿಪೆಂಡೆಂಡ್‌ ಬಾಡಿ ಅಲ್ಲ, ಆಲ್‌ ಆರ್‌ ಪೊಲಿಟೀಷಿಯನ್ಸ್‌, ಅವರದ್ದೇ ಆದ ಸಿದ್ಧಾಂತಗಳನ್ನು ಇಟ್ಟುಕೊಂಡು ಅವರೂ ರಾಜಕೀಯ ಮಾಡುತ್ತಾರೆ. ಆದರೆ, ಅದನ್ನು ಅವರು ಹೇಳಿಕೊಳ್ಳದೇ ಇರಬಹುದು. ಅವರಿಗೆ ಅವರದ್ದೇ ಆದ ಹಕ್ಕುಗಳಿವೆ. ನಾನು ಕರೆದಾಗ, ಇಷ್ಟ ಇದ್ದೋರು ಬಂದಿದ್ದಾರೆ. ಕೆಲವರು ಬಂದಿಲ್ಲ” ಎಂದು ಹೇಳಿದರು.

“ನಾವು ಪಕ್ಷದ ಪದಾಧಿಕಾರಿಗಳನ್ನು, ರಾಜಕಾರಣಿಗಳನ್ನು ಬೇರೆ ಬೇರೆ ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನಾಗಿ ನೇಮಿಸುವುದಿಲ್ಲವೇ. ನೇಮಕ ಮಾಡೋದು ಸರ್ಕಾರ ಇಚ್ಛೆ. ಈಗ ನಿಮ್ಮನ್ನೂ ಪ್ರೆಸ್‌ ಸೆಕ್ರೆಟರಿ ಮಾಡೋದಿಲ್ವೆ, ನೀವು ಬೆಳಗಿಂದ ಸಾಯಂಕಾಲದ ತನಕ ನಮ್ಮ ಹಿಂದೆ ಓಡಾಡುವುದಿಲ್ಲವೇ? ನಮಗೋಸ್ಕರ ಬಡಿದಾಡೋದಿಲ್ವೆ. ಇದು ಕೂಡ ಅಷ್ಟೇ” ಎಂದು ಶಿವಕುಮಾರ್ ಸಮರ್ಥಿಸಿಕೊಂಡರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...