ಯಶವಂತಪುರ ಶಾಸಕ ಎಸ್ ​ಟಿ ಸೋಮಶೇಖರ್​ ಬಿಜೆಪಿಯಲ್ಲಿಲ್ಲ: ಆರ್‌ ಅಶೋಕ್‌

Date:

ಯಶವಂತಪುರ ಶಾಸಕ ಎಸ್ ​ಟಿ ಸೋಮಶೇಖರ್​ ಬಿಜೆಪಿಯಲ್ಲಿಲ್ಲ. ನಮ್ಮ ಪಕ್ಷದಿಂದ ಒಂದು ಕಾಲು ಹೊರಗಿಟ್ಟಿದ್ದು, ​ ಕಾಂಗ್ರೆಸ್​ನವರ ಸಂಪರ್ಕದಲ್ಲಿದ್ದಾರೆ ಎಂದು ವಿಧಾನಸಭಾ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಹೇಳಿದರು.

ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ರಾಜ್ಯಸಭೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ವಿರುದ್ಧ ಸೋಮಶೇಖರ್ ಮತ ಹಾಕಿದ್ದಾರೆ. ಅವರ​ ವಿರುದ್ಧ ಬಿಜೆಪಿ ವರಿಷ್ಠರು ನಿರ್ಧಾರ ತೆಗೆದುಕೊಳ್ಳುತ್ತಾರೆ” ಎಂದರು.

ಮಂಡ್ಯ, ಮೈಸೂರು ಗೆಲ್ಲುತ್ತೇವೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಂಸದೆ ಸುಮಲತಾ ಪ್ರಭಾವ ಬಳಸಿಕೊಂಡು ಮಂಡ್ಯ, ಮೈಸೂರು ಗೆಲ್ಲುತ್ತೇವೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಸುಮಲತಾಗೆ ಬೆಂಬಲ ನೀಡಿದ್ದೆವು. ಈ ಬಾರಿ ಚುನಾವಣಾ ಪ್ರಚಾರಕ್ಕೆ ಸಂಸದೆ ಸುಮಲತಾರನ್ನು ಬಳಸಿಕೊಳ್ಳುತ್ತೇವೆ. ಈಗಾಗಲೇ ಕೇಂದ್ರ ನಾಯಕರ ಜೊತೆ ಸುಮಲತಾ ಮಾತನಾಡಿದ್ದಾರೆ” ಎಂದು ತಿಳಿಸಿದರು.

“ಸಂಸದೆ ಸುಮಲತಾ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಜೊತೆಗೆ ಕ್ರಿಕೆಟಿಗ ದೊಡ್ಡ ಗಣೇಶ್ ಮತ್ತು ಕೊಪ್ಪಳ ಮಾಜಿ ಸಂಸದ ಶಿವರಾಮಗೌಡ ಕೂಡ ಬಿಜೆಪಿ ಸೇರಿದ್ದಾರೆ. ಮೊನ್ನೆ ಬೆಂಗಳೂರಿಗೆ ಕೇಂದ್ರ ಸಚಿವ ಅಮಿತ್ ಶಾ ಬಂದಾಗ ಮೈತ್ರಿ ಬಗ್ಗೆ ಸ್ಪಷ್ಟ ನಿರ್ದೇಶನ ಕೊಟ್ಟಿದ್ದಾರೆ. ಜೆಡಿಎಸ್​ ಹಾಗೂ ಬಿಜೆಪಿ ತಳಮಟ್ಟದಿಂದಲೇ ಹೊಂದಾಣಿಕೆ ಆಗಬೇಕು ಎಂದಿದ್ದಾರೆ” ಎಂದರು.

“ಬೀದರ್​ನಲ್ಲಿ ಅಸಮಾಧಾನ ಶಮನವಾಗಿದೆ, ಎಲ್ಲರೂ ಒಗ್ಗಟ್ಟಾಗಿದ್ದೇವೆ. ರಾಜ್ಯದ ಎಲ್ಲಾ ಕಡೆ ಸಮನ್ವಯ ಸಮಿತಿ‌ ಸಭೆ ಮಾಡುತ್ತಿದ್ದೇವೆ. ಜೆಡಿಎಸ್ ಹಾಗೂ ಬಿಜೆಪಿ ಹಾಲು ಜೇನಿನಂತೆ ಒಗ್ಗೂಡುತ್ತಿದ್ದೇವೆ” ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...