ಮಂಗನಿಗೆ ಸಾರಾಯಿ ಕುಡಿಸಿದ ಹಾಗೆ ಯತ್ನಾಳ್‌ ಮಾತು: ಮುರುಗೇಶ್ ನಿರಾಣಿ ಕಿಡಿ

Date:

  • ಹುಚ್ಚರ ತರ ಯತ್ನಾಳ್ ‌ಏನೇನೋ ಮಾತಾಡ್ತಾರೆ
  • ಯತ್ನಾಳ್‌ ಮಾತನಾಡುವ ಸಂಗತಿಗಳಿಗೆ ಬೆಲೆ ಇಲ್ಲ

ಮಂಗನಿಗೆ ಸಾರಾಯಿ ಕುಡಿಸಿ, ಅದರ ಬಾಲಕ್ಕೆ ಪಟಾಕಿ ಹಚ್ಚಿದ್ರೆ ಏನಾಗುತ್ತೋ ಆ ರೀತಿ ಹುಚ್ಚರ ತರ ಅವನು ಮಾತನಾಡ್ಕೊಂತ ಹೋಗುತ್ತಿದ್ದಾನೆ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಏಕವಚನದಲ್ಲೇ ತಮ್ಮದೇ ಪಕ್ಷದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ವಿರುದ್ಧ ಕಿಡಿಕಾರಿದರು.

ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಯತ್ನಾಳ್‌ ಮಾತನಾಡುವ ಸಂಗತಿಗಳಿಗೆ ಬೆಲೆ ಇಲ್ಲ. ಒಂದು ಕಿವಿಯಲ್ಲಿ ಕೇಳಿ ಇನ್ನೊಂದು ಕಿವಿಯಲ್ಲಿ ಬಿಡಬೇಕು ಎಂದರು.

“ಅವರು ಬಿ ಎಸ್‌ ಯಡಿಯೂರಪ್ಪ ಕುಟುಂಬದಿಂದ ಹಿಡಿದು ಯಾರನ್ನೂ ಉಳಿಸಿಲ್ಲ. ಸ್ವಪಕ್ಷದ ನಾಯಕರ ವಿರುದ್ಧವೇ ನಾಲಿಗೆ ಹರಿಬಿಡುತ್ತಾರೆ. ನಾನೇ ಮುಂದಿನ ಮುಖ್ಯಮಂತ್ರಿ, ನಾನೇ ಮುಂದಿನ ರಾಜ್ಯಾಧ್ಯಕ್ಷ ಎಂಬುದು ಅವರ ಸ್ವಘೋಷಣೆ” ಎಂದು ತಿರುಗೇಟು ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಿಜೋರಾಂ ಪ್ರಚಾರಕ್ಕೆ ಮೋದಿ ಚಕ್ಕರ್; ಜನಾಕ್ರೋಶದ ಭಯವೇ?

“ಯತ್ನಾಳ್‌ ಹೇಳಿಕೆಯನ್ನು ನಮ್ಮ ರಾಜ್ಯ ನಾಯಕರಾಗಲಿ ಅಥವಾ ರಾಷ್ಟ್ರೀಯ ನಾಯಕರಾಗಲಿ ಗಂಭೀರವಾಗಿ ಪರಿಗಣಿಸಿಲ್ಲ. ಅವರ ಬಗ್ಗೆ ನಾವು ತಲೆಕೆಡಿಸಿಕೊಳ್ಳಲ್ಲ” ಎಂದು ಹೇಳಿದರು.

ಬಿ ವೈ ವಿಜಯೇಂದ್ರ ನೇಮಕ ವಿಚಾರವಾಗಿ ಪ್ರತಿಕ್ರಿಯಿಸಿ, “ದೀಪಾವಳಿ ಉಡುಗೊರೆಯಾಗಿ ಬಿ ವೈ ವಿಜಯೇಂದ್ರ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ಲಭಿಸಿದೆ. ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ಅವರು ಯಶಸ್ಸು ಸಾಧಿಸುತ್ತಾರೆ ಎನ್ನುವ ವಿಶ್ವಾಸ ನನಗಿದೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...