ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆ: ಬಿಜೆಪಿ ಶಾಸಕ ಯತ್ನಾಳ್ ವಿವಾದಾತ್ಮಕ ಹೇಳಿಕೆ

Date:

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಎನ್‌ಐಎ ಅಧಿಕಾರಿಗಳು ನಿನ್ನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಬಿಜೆಪಿ ಮುಖಂಡನೋರ್ವನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು.

ಈ ಸಂಬಂಧ ನಿನ್ನೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಟ್ವೀಟ್ ಮಾಡಿ, “ಬಾಂಬ್ ಸ್ಫೋಟಕ್ಕೆ ನಮ್ಮ ಸರ್ಕಾರವೇ ಕಾರಣ ಅನ್ನೋವಂತೆ ಮಾತಾನಾಡುತ್ತಿದ್ದ ರಾಜ್ಯದ ಕೇಸರಿ ಕಲಿಗಳು ಈಗ ಏನು ಹೇಳುತ್ತಾರೆ? ಬಿಜೆಪಿ ಮುಖಂಡನನ್ನು ಎನ್‌ಐಎ ವಶಕ್ಕೆ ಪಡೆದಿದೆ ಎಂದ ಮೇಲೆ ರಾಮೇಶ್ವರಂ ಕೆಫೆ ಸ್ಫೋಟದಲ್ಲಿ ಬಿಜೆಪಿ ಕೈವಾಡ ಇದೆ ಎಂದು ಅರ್ಥ ಅಲ್ಲವೇ? ಧರ್ಮ ರಕ್ಷಣೆ ಹೆಸರಲ್ಲಿ ರಾಜ್ಯದಲ್ಲಿ ಬಿಜೆಪಿ ನಡೆಸುತ್ತೀರೋ ಕೇಸರಿ ಭಯೋತ್ಪಾದನೆ ಎಷ್ಟು ಗಂಭೀರ ಸಮಸ್ಯೆಗಳನ್ನು ಹುಟ್ಟು ಹಾಕುತ್ತಿದೆ ಅನ್ನೋದಕ್ಕೆ ಇದಕ್ಕಿಂತಾ ಸಾಕ್ಷಿ ಬೇಕಾ? ಆರ್‌ಎಸ್‌ಎಸ್‌ ಸಿದ್ಧಾಂತಗಳನ್ನು ದೇಶದ ಮೇಲೆ ಹೇರುತ್ತಿರುವ ಕೇಂದ್ರ ಬಿಜೆಪಿಯು ಇದಕ್ಕೇನು ಹೇಳುತ್ತದೆ? ಎಂದು ಪ್ರಶ್ನಿಸಿದ್ದರು.

ಈ ಬಗ್ಗೆ ವಿಜಯಪುರದಲ್ಲಿ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೆಲವರು ಮೊಬೈಲ್ ವ್ಯಾಪಾರಿಗಳಿರುತ್ತಾರೆ. ಅದೇ ರೀತಿ ಬಿಜೆಪಿ ಕಾರ್ಯಕರ್ತ ಕೂಡ ಮೊಬೈಲ್ ವ್ಯಾಪಾರಿ. ಅವರ ಬಳಿ ಯಾರು ಬಂದಿರುತ್ತಾರೋ ಇಲ್ಲವೋ ಎಂಬುದು ಗೊತ್ತಿರುವುದಿಲ್ಲ. ಆತ ತನಿಖೆಗೆ ಸಹಕಾರ ನೀಡುತ್ತೇನೆ ಎಂದು ಹೇಳಿದ್ದಾನೆ. ಇದರಲ್ಲಿ ಯಾವುದೇ ಸಮಸ್ಯೆ ಇಲ್ಲ” ಎಂದು ಯತ್ನಾಳ್ ತಿಳಿಸಿದಾಗ, ಸಚಿವ ಗುಂಡೂರಾವ್ ಅವರು ಇದನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ ಎಂದು ಪತ್ರಕರ್ತ ಕೇಳಿದ್ದಕ್ಕೆ, “ಗುಂಡೂರಾವ್ ಅವರ ಮನೆಯಲ್ಲಿ ಹೆಚ್ಚು ಕಡಿಮೆ ಅರ್ಧ ಪಾಕಿಸ್ತಾನ ಇದೆ. ಹಾಗಾಗಿ, ದೇಶದ ವಿರುದ್ಧ ಹೇಳಿಕೆ ಕೊಡುವುದು ದಿನೇಶ್ ಗುಂಡೂರಾವ್ ಅವರಿಗೆ ಚಟವಾಗಿದೆ” ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಸಚಿವ ದಿನೇಶ್ ಗುಂಡೂರಾವ್ ಅವರ ಪತ್ನಿ ತಬು ಅವರು ಮುಸ್ಲಿಂ ಸಮುದಾಯದವರು. ಹೀಗಾಗಿಯೇ ಯತ್ನಾಳ್ ಅವರು ಅವರನ್ನು ಪರೋಕ್ಷವಾಗಿ ಪಾಕಿಸ್ತಾನದವರು ಎಂದು ಕರೆಯುವ ಮೂಲಕ ವಿವಾದ ಸೃಷ್ಟಿಸಿದ್ದಾರೆ.

ಯತ್ನಾಳ್ ಹೇಳಿಕೆಯನ್ನು ಖಂಡಿಸಿ ಟ್ವೀಟ್ ಮಾಡಿರುವ ಗುಂಡೂರಾವ್ ಪತ್ನಿ, “ದಿನೇಶ್ ಗುಂಡೂರಾವ್ ಅವರ ಮನೆಯು ಅರ್ಧ ಪಾಕಿಸ್ತಾನ ಎಂದು ಬಿಜೆಪಿ ಶಾಸಕ ಯತ್ನಾಳ್ ನೀಡಿರುವ ಹೇಳಿಕೆಯು ಅಗ್ಗದ ಹೇಳಿಕೆ. ಅವಹೇಳನಕಾರಿ ಮತ್ತು ಮಾನಹಾನಿಕರ. ನಾನು ಮುಸ್ಲಿಂ ಸಮುದಾಯದಲ್ಲಿ ಹುಟ್ಟಿರಬಹುದು, ಆದರೆ ನನ್ನ ಭಾರತೀಯತೆಯನ್ನು ಯಾರೂ ಪ್ರಶ್ನಿಸುವಂತಿಲ್ಲ. ಈ ಬಗ್ಗೆ ಚುನಾವಣಾಧಿಕಾರಿ ಕ್ರಮ ಕೈಗೊಳ್ಳುತ್ತಾರೆಯೇ?” ಎಂದು ಪ್ರಶ್ನಿಸಿದ್ದು, ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸೇರಿ ಡಿ ಕೆ ಶಿವಕುಮಾರ್ ಅವರನ್ನು ಟ್ಯಾಗ್ ಮಾಡಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...