ಯತ್ನಾಳ್​​​ ಉಚ್ಛಾಟನೆ | ಬಿಜೆಪಿ ತೊರೆಯುವಂತೆ ಪಂಚಮಸಾಲಿ ಸಮುದಾಯಕ್ಕೆ ಸ್ವಾಮೀಜಿ ಕರೆ

Date:

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿ ಉಚ್ಛಾಟನೆ ಮಾಡಿದ್ದಾರೆ. ಅವರ ಉಚ್ಛಾಟನೆಯನ್ನು ಹಲವರು ಖಂಡಿಸಿದ್ದಾರೆ. ಯತ್ನಾಳ್ ಅವರನ್ನು ಪಕ್ಷದಿಂದ ಹೊರಹಾಕಿರುವ ಬಿಜೆಪಿಯನ್ನು ತೊರೆಯುವಂತೆ ಪಂಚಮಸಾಲಿ ಸಮುದಾಯಕ್ಕೆ ಸಮುದಾಯದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಕರೆಕೊಟ್ಟಿದ್ದಾರೆ.

ಧಾರವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಯತ್ನಾಳ್ ಅವರು ಪಂಚಮಸಾಲಿ ಸಮುದಾಯದ ಪ್ರಮುಖ ನಾಯಕರಲ್ಲಿ ಒಬ್ಬರು . ಅವರನ್ನು ಬಿಜೆಪಿ ಉಚ್ಛಾಟನೆ ಮಾಡಿದೆ. ಯತ್ನಾಳ್‌ ಉಚ್ಛಾಟನೆಗೆ ಯಡಿಯೂರಪ್ಪ ಮತ್ತು ಅವರ ಕುಟುಂಬವೇ ಮುಖ್ಯ ಕಾರಣ” ಎಂದು ಆರೋಪಿಸಿದ್ದಾರೆ.

ಯತ್ನಾಳ್‌ ಉಚ್ಛಾಟನೆಯನ್ನು ಪಕ್ಷವು ವಾಪಸ್‌ ಪಡೆಯಬೇಕು. ಇಲ್ಲದಿದ್ದಲ್ಲಿ, ಬಿಜೆಪಿಯಲ್ಲಿರುವ ಪಂಚಾಮಸಾಲಿ ಮುಖಂಡರು ಪಕ್ಷಕ್ಕೆ ರಾಜೀನಾಮೆ ನೀಡಿ, ಎಲ್ಲರೂ ಹೊರಬರಬೇಕು” ಎಂದು ಕರೆಕೊಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪಂಚಮಸಾಲಿ ಸಮುದಾಯದ ನಾಯಕರನ್ನು ತುಳಿಯುತ್ತಿರುವವರ ವಿರುದ್ಧ ಬೃಹತ್ ಹೋರಾಟ ಮಾಡುತ್ತೇವೆ. ಹಿಂದೆ, ಕಿತ್ತೂರು ರಾಣಿ ಚನ್ನಮ್ಮಾರಿಗೆ ಮೋಸ ಮಾಡಿದ ಶಕ್ತಿಗಳೇ ಈಗ ಪಂಚಮಸಾಲಿ ಸಮುದಾಯದವನ್ನು ತುಳಿಯುತ್ತಿವೆ. ಯತ್ನಾಳ್‌ ಎಂದಿಗೂ ಪಕ್ಷ ವಿರೋಧಿ ಕೆಲಸ ಮಾಡಿಲ್ಲ. ಯತ್ನಾಳ್​ ಉಚ್ಛಾಟನೆಯು ಪಂಚಮಸಾಲಿ ಸಮುದಾಯಕ್ಕೆ ನೋವುಂಟುಮಾಡಿದೆ” ಎಂದು ಹೇಳಿದ್ದಾರೆ.

ಈ ವರದಿ ಓದಿದ್ದೀರಾ?: ಹನಿಟ್ರ್ಯಾಪ್ | ಕರ್ನಾಟಕ ರಾಜಕಾರಣ ಕಂಡ ‘ಗಲೀಜುಗಾಥೆ’ಗಳ ಸರಮಾಲೆ

ಶಾಸಕ ಯತ್ನಾಳ್ ಅವರನ್ನು ಉಚ್ಚಾಟನೆ ಮಾಡಿ ಬುಧವಾರ ಬಿಜೆಪಿ ಹೈಕಮಾಂಡ್‌ ಆದೇಶಿಸಿದೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮತ್ತು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಯತ್ನಾಳ್ ನಿರಂತರವಾಗಿ ಮತ್ತು ಬಹಿರಂಗವಾಗಿ ವಾಗ್ದಾಳಿ ನಡೆಸುತ್ತಿದ್ದರು. ಹಲವಾರು ಭ್ರಷ್ಟಾಚಾರದ ಗಂಭೀರ ಆರೋಪ ಮಾಡಿದ್ದರು. ಅವರಿಗೆ ಬಿಜೆಪಿ ಶಿಸ್ತು ಕಮಿಟಿ ಎರಡು ಬಾರಿ ನೋಟಿಸ್‌ ಕೊಟ್ಟಿತ್ತು. ಪಕ್ಷದ ನಾಯಕರ ವಿರುದ್ಧ ಬಹಿರಂಗವಾಗಿ ಹೇಳಿಕೆ ಕೊಡುವುದು, ಆರೋಪ ಮಾಡುವುದನ್ನು ನಿಲ್ಲಿಸುವಂತೆ ಎಚ್ಚರಿಕೆಯನ್ನೂ ಕೊಟ್ಟಿತ್ತು. ನೋಟಿಸ್‌ಗಳಿಗೆ ಯತ್ನಾಳ್‌ ನೀಡಿದ್ದ ಉತ್ತರಗಳು ಸಮಂಜಸವಾಗಿಲ್ಲ ಎಂದು ಕಮಿಟಿ ಹೇಳಿತ್ತು. ಈ ಬೆನ್ನಲ್ಲೇ ಯತ್ನಾಳ್ ಅವರನ್ನು ಉಚ್ಛಾಟನೆ ಮಾಡಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...