ಸದನದ ಹೊರಗೆ ‘ವಿಪಕ್ಷ ನಾಯಕ’ ಯಡಿಯೂರಪ್ಪ

Date:

ಚುನಾವಣಾ ರಾಜಕೀಯದಿಂದ ನಿವೃತ್ತಿ ಪಡೆದಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ವಿಧಾನಸಭೆಯ ಹೊರಗೆ ಕಾಂಗ್ರೆಸ್ ಸರ್ಕಾರದ ವಿರುದ್ಧ ‘ವಿರೋಧ ಪಕ್ಷದ ನಾಯಕ’ನಾಗಿ ರಾಜಕೀಯದಲ್ಲಿ ಸಕ್ರಿಯರಾಗಿರಲಿದ್ದಾರೆ.

“ಜುಲೈ 3ರಂದು ರಾಜ್ಯಪಾಲರು ಸದನದಲ್ಲಿ ಭಾಷಣ ಮಾಡಿದ ಬಳಿಕ ವಿಧಾನಸೌಧದ ಆವರಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಎದುರು ಧರಣಿ ಆರಂಭಿಸುತ್ತೇನೆ. ಅಧಿವೇಶನ ಮುಗಿಯುವವರೆಗೂ (10 ದಿನ) ಧರಣಿ ನಡೆಸುತ್ತೇನೆ. ಕಾಂಗ್ರೆಸ್ ಜನರಿಗೆ ಸುಳ್ಳು ಗ್ಯಾರಂಟಿಗಳನ್ನು ನೀಡಿ, ಅಧಿಕಾರಕ್ಕೆ ಬಂದಿದೆ. ಗ್ಯಾರಂಟಿಗಳನ್ನು ಜಾರಿಗೊಳಿಸಬೇಕು, ಇಲ್ಲವೇ ಅಧಿಕಾರದಿಂದ ಕೆಳಗಿಳಿಯಬೇಕು” ಎಂದು ಯಡಿಯೂರಪ್ಪ ಹೇಳಿದ್ದಾರೆ.

ಜುಲೈ 3ರಿಂದ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಜುಲೈ 7ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ 14ನೇ ಬಜೆಟ್ ಮಂಡಿಸುವ ಸಾಧ್ಯತೆಯಿದೆ. “ಸದನದ ಒಳಗೆ, ಚುನಾಯಿತ ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ಹೋರಾಟ ನಡೆಸುತ್ತಾರೆ. ಸದನದ ಹೊರಗೆ, ವಿಧಾನಸಭಾ ಚುನಾವಣೆಯಲ್ಲಿ ಸೋತ ನಾಯಕರನ್ನು ಸರ್ಕಾರ ಎದುರಿಸಬೇಕು” ಎಂದು ಯಡಿಯೂರಪ್ಪ ಒತ್ತಿ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದರರ್ಥ ಪ್ರತಿಪಕ್ಷದ ನಾಯಕ ಬಿಜೆಪಿ ಶಾಸಕರನ್ನು ಸದನದ ಒಳಗೆ ಮುನ್ನಡೆಸಿದರೆ, ಯಡಿಯೂರಪ್ಪ ವಿಧಾನಸಭೆ ಪ್ರವೇಶಿಸಲು ಸಾಧ್ಯವಾಗದ ನಾಯಕರ ಗುಂಪನ್ನು ಮುನ್ನಡೆಸುತ್ತಾರೆ. ವಿಶೇಷವಾಗಿ, ಕಾಂಗ್ರೆಸ್‌ ಸರ್ಕಾರದ ಅನ್ನಭಾಗ್ಯ ಯೋಜನೆ ಸೇರಿದಂತೆ ಐದು ಗ್ಯಾರಂಟಿಗಳ ಅನುಷ್ಠಾನದಲ್ಲಿನ ವೈಫಲ್ಯಗಳ ಬಗ್ಗೆ ಹೋರಾಟ ನಡೆಸಲಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಬರೀ ಹಣ, ಧಿಮಾಕು, ಅಧಿಕಾರ ಮದದಿಂದ ರಾಜಕಾರಣ ಮಾಡಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ

“ಯುಡಿಯೂರಪ್ಪ ಅವರು ಐದು ದಶಕಗಳ ಕಾಲದ ತಮ್ಮ ರಾಜಕೀಯ ಜೀವನದಲ್ಲಿ ವಿರೋಧ ಪಕ್ಷದ ನಾಯಕರಾಗಿ ಹೋರಾಟ ನಡೆಸಿದ್ದಾರೆ. ಅವರು ರಾಜಕೀಯವಾಗಿ ಸಕ್ರಿಯರಾಗಿರಲು ಬಯಸುತ್ತಾರೆ. ಅವರು ಪರಿಗಣಿಸಬೇಕಾದ ನಾಯಕರಾಗಿ ಪ್ರಾಮುಖ್ಯತೆ ಪಡೆಯಲು ಬಯಸುತ್ತಾರೆ” ಎಂದು ರಾಜಕೀಯ ವಿಶ್ಲೇಷಕರು ಹೇಳುತ್ತಾರೆ.

ಆದರೆ, ಆಡಳಿತಾರೂಢ ಕಾಂಗ್ರೆಸ್ ಕೂಡ ಬಿಜೆಪಿ ಮತ್ತು ಯಡಿಯೂರಪ್ಪ ಅವರನ್ನು ಎದುರಿಸಲು ಸಿದ್ಧವಾಗಿದೆ. “ಅವರು ಧರಣಿ ನಡೆಸಲು ಸ್ವತಂತ್ರರು. ಆದರೆ, ಅವರಿಗೆ ಯಾವ ನೈತಿಕ ಹಕ್ಕಿದೆ? ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಪಡೆದಿರುವ 1 ಲಕ್ಷ ರೂ.ವರೆಗಿನ ಕೃಷಿ ಸಾಲ ಮನ್ನಾ, ರೈತರಿಗೆ ಹತ್ತು ಗಂಟೆ ನಿರಂತರ ವಿದ್ಯುತ್ ಮತ್ತು ನೀರಾವರಿ ಕ್ಷೇತ್ರಕ್ಕೆ 1.5 ಲಕ್ಷ ಕೋಟಿ ರೂ. ಸೇರಿದಂತೆ ಬಿಜೆಪಿ ತನ್ನ ಪ್ರಣಾಳಿಕೆಯ ಭರವಸೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲವಾಗಿದೆ. ಈಗ ರಾಜ್ಯಕ್ಕೆ ಅಕ್ಕಿ ಕೊಡಲು ನಿರಾಕರಿಸಿರುವ ಕೇಂದ್ರವೇ ರಾಜ್ಯ ಸರ್ಕಾರದ ವಿರುದ್ಧ ಧರಣಿ ನಡೆಸುವುದು ಅರ್ಥಹೀನ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...