ಕೋರ್ಟ್‌ನ ಕೃಪೆಯಿಂದಾಗಿ ಯಡಿಯೂರಪ್ಪ ಜೈಲುಪಾಲಾಗದೆ ಹೊರಗಿದ್ದಾರೆ: ಸಿದ್ದರಾಮಯ್ಯ

Date:

ರಾಜಕೀಯದಲ್ಲಿ ತೆಗಳುವವರು, ಹೊಗಳುವವರು ಇರುತ್ತಾರೆ. ಶತ್ರುಗಳೂ , ಅಭಿಮಾನಿಗಳೂ ಇರುತ್ತಾರೆ. ಪ್ರಜಾಪ್ರಭುತ್ವದಲ್ಲಿ ಎಲ್ಲರೂ ನನ್ನನ್ನು ಸಹಮತಿಸಲೇ ಬೇಕೆಂಬ ಭಾವನೆ ನನಗಿಲ್ಲ. ಒಟ್ಟಾರೆ ಪ್ರಜಾಪ್ರಭುತ್ವದಲ್ಲಿ ಆರೋಗ್ಯಕರ ಚರ್ಚೆ, ಟೀಕೆಗಳು ನಡೆದಾಗ ಮಾತ್ರ ಪ್ರಜಾಪ್ರಭುತ್ವ ಯಶಸ್ವಿಯಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಅವರು ಇಂದು (ಅ.11) ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, “ಚಾಮುಂಡೇಶ್ವರಿ ತಾಯಿಗೆ ಪುಷ್ಪಾರ್ಚನೆ ಮಾಡುವ ಸೌಭಾಗ್ಯವನ್ನು ರಾಜ್ಯದ ಜನ ಹಲವು ಬಾರಿ ಒದಗಿಸಿಕೊಟ್ಟಿದ್ದಾರೆ. ತಾಯಿಯ ಆಶೀರ್ವಾದ ನನ್ನ ಮೇಲೆ ಸದಾ ಇರುವ ಕಾರಣದಿಂದಲೇ ದೀರ್ಘಕಾಲದಿಂದ ರಾಜಕೀಯದಲ್ಲಿ ಇರಲು ಸಾಧ್ಯವಾಗಿದೆ” ಎಂದು ತಿಳಿಸಿದರು.

ದಸರಾ ಉತ್ಸವದ ಬಗ್ಗೆ ಪತ್ರಿಕೆಗಳಲ್ಲಿ ವತಿಯಿಂದ ಪ್ರಕಟವಾದ ಸರ್ಕಾರದ ಜಾಹಿರಾತಿನ ಬಗ್ಗೆ ತಮ್ಮ ಅಭಿಪ್ರಾಯ ನೀಡುತ್ತಾ, ದುಷ್ಟರಿಗೆ ಶಿಕ್ಷೆ, ಶಿಷ್ಟರ ರಕ್ಷೆಯನ್ನು ದಸರೆಯ ಪ್ರತೀಕ. ವಿಜಯನಗರ ಅರಸರ ಜಯದ ಸಂಕೇತವಾಗಿ ಪ್ರಾರಂಭಿಸಲಾದ ಆಯುಧಪೂಜೆ ದಸರಾ ಉತ್ಸವವನ್ನು ಮೈಸೂರು ಒಡೆಯರ್ ರವರು ಮುಂದುವರೆಸಿದ್ದು, ಇಂದಿಗೂ ಆ ಪರಂಪರೆಯನ್ನು ಪಾಲಿಸಲಾಗುತ್ತಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದುಷ್ಟರ ಸಂಹಾರ ಆಗಬೇಕಿದೆ ಎಂದು ಜಾಹಿರಾತಿನ ಬಗ್ಗೆ ವ್ಯಂಗ್ಯವಾಡಿದ ಸಂಸದೆ ಶೋಭಾ ಕರಂದ್ಲಾಜೆಯವರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿ, “ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಸಂಸದೀಯ ಮಂಡಳಿಯ ಸದಸ್ಯತ್ವದಿಂದ ತೆಗೆದುಹಾಕಲು ಚಿಂತಿಸುವ ಬದಲು ಈ ರೀತಿ ಸುಳ್ಳು ಮಾತನಾಡುವುದು ತಪ್ಪು. ಕೋರ್ಟ್‌ನ ಕೃಪೆಯಿಂದಾಗಿ ಅವರು ಜೈಲುಪಾಲಾಗದೆ ಹೊರಗಿದ್ದಾರೆ” ಎಂದರು.

ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಹೋರಾಟ ಹಮ್ಮಿಕೊಳ್ಳುತ್ತಿರುವುದಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿ, “ಸರ್ಕಾರಕ್ಕೆ ಕೆಲವು ಮೊಕದ್ದಮೆಗಳ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳುವ ಅಧಿಕಾರ ಸಚಿವಸಂಪುಟದ ಉಪಸಮಿತಿಗಿರುತ್ತದೆ. ಗೃಹಸಚಿವರು ಈ ಉಪಸಮಿತಿಯ ನೇತೃತ್ವ ವಹಿಸಿದ್ದು, ಸಮಿತಿಯ ವಿವೇಚನೆಯಂತೆ ಪ್ರಕರಣದ ದೂರನ್ನು ಹಿಂದಕ್ಕೆ ಪಡೆದಿದೆ. ಆದಾಗ್ಯೂ ಈ ವಿಚಾರವಾಗಿ ಹೆಚ್ಚಿನ ಮಾಹಿತಿಯನ್ನು ಪಡೆಯುತ್ತೇನೆ ಎಂದರು. ಬಿಜೆಪಿಯವರು ಕೇವಲ ಸುಳ್ಳು ವಿಚಾರಗಳ ಆಧರಿಸಿಯೇ ಹೋರಾಟ ಮಾಡುತ್ತಾರೆ. ಸತ್ಯದ ಪರವಾಗಿ ಅವರ ಹೋರಾಟ ಎಂದಿಗೂ ಕಾಣಸಿಗುವುದಿಲ್ಲ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...