ಬೆಂಗಳೂರು ಬಂದ್‌ | ವ್ಯವಹಾರ ನಡೆಸಿ ಹಾನಿ ಆದರೆ ಅವರೇ ಹೊಣೆ: ಯಡಿಯೂರಪ್ಪ

Date:

  • ‘ವಹಿವಾಟು ಸ್ಥಗಿತಗೊಳಿಸಿ ಬಂದ್‌ಗೆ ಬೆಂಬಲ ನೀಡಬೇಕು’
  • ‘ಬೆಂಗಳೂರು ಬಂದ್ ಸಂಪೂರ್ಣವಾಗಿ ಬಂದ್‌ ಆಗಲೇಬೇಕು’

ಕಾವೇರಿ ವಿಚಾರದಲ್ಲಿ ಕರೆ ನೀಡಲಾಗಿರುವ ಬೆಂಗಳೂರು ಬಂದ್‌ಗೆ ಹೋಟೆಲ್‌, ಅಂಗಡಿ, ಮುಂಗಟ್ಟುಗಳ ಮಾಲೀಕರು ವಹಿವಾಟು ಸ್ಥಗಿತಗೊಳಿಸಿ ಬಂದ್‌ಗೆ ಬೆಂಬಲ ನೀಡಬೇಕು. ಒಂದು ವೇಳೆ ಯಾರಾದರೂ ಬಾಗಿಲು ತೆರೆದು ವ್ಯವಹಾರ ನಡೆಸಲು ಪ್ರಯತ್ನಿಸಿದರೆ ಮುಂದಾಗುವ ತೊಂದರೆಗಳಿಗೆ ಅವರೇ ಹೊಣೆ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ ಎಸ್‌ ಯಡಿಯೂರಪ್ಪ ಎಚ್ಚರಿಸಿದರು.

ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, “ಮಂಗಳವಾರದ ಬೆಂಗಳೂರು ಬಂದ್ ಸಂಪೂರ್ಣವಾಗಿ ಬಂದ್‌ ಆಗಲೇಬೇಕು.‌ ಬಂದ್ ವಿಚಾರದಲ್ಲಿ ಯಾವ ಗೊಂದಲವೂ ಇಲ್ಲ”‌ ಎಂದರು.

“ಬೆಂಗಳೂರು ಬಂದ್‌ ಬೆಂಬಲಿಸಿ ಬಿಜೆಪಿ ಶಾಸಕರು ಮತ್ತು ಸಂಸದರು ವಿಧಾನಸೌಧದ ಆವರಣದಲ್ಲಿನ ಮಹಾತ್ಮ ಗಾಂಧಿ ಪ್ರತಿಮೆ ಎದುರು ಧರಣಿ ನಡೆಸಲಿದ್ದಾರೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? Live Updates | ಬೆಂಗಳೂರು ಬಂದ್‌ಗೆ ಅವಕಾಶವಿಲ್ಲ: ನಗರ ಪೊಲೀಸ್ ಕಮಿಷನರ್ ದಯಾನಂದ್ ಸ್ಪಷ್ಟನೆ

“ಈಗ ರಾಜ್ಯದ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ತಮಿಳುನಾಡಿನ ಏಜೆಂಟರಂತೆ ವರ್ತಿಸುವುದನ್ನು ನಿಲ್ಲಿಸಬೇಕು. ಕಾವೇರಿ ಕಣಿವೆಯ ಜಲಾಶಯಗಳಲ್ಲಿ 59 ಟಿಎಂಸಿ ಅಡಿ ನೀರು ಮಾತ್ರ ಲಭ್ಯವಿದೆ. ಕಾಂಗ್ರೆಸ್‌ ಸರ್ಕಾರದಿಂದ ಈ ಪರಿಸ್ಥಿತಿ ನಿರ್ಮಾಣವಾಗಿದೆ. ಒಂದು ಹನಿ ನೀರು ಕೂಡ ತಮಿಳುನಾಡಿಗೆ ಹರಿಯದಂತೆ ತಡೆಯಬೇಕು” ಎಂದು ಒತ್ತಾಯಿಸಿದರು.

ಪ್ರಧಾನಿ ನರೇಂದ್ರ ಮೋದಿಯವರು ಮಧ್ಯ ಪ್ರವೇಶಿಸಬೇಕು ಎಂದು ಆಗ್ರಹಿಸಿ ಜೆಡಿಎಸ್‌ ವರಿಷ್ಠ ಎಚ್‌ ಡಿ ದೇವೇಗೌಡ ಅವರು ಪತ್ರ ಬರೆದಿರುವ ಕುರಿತು ಪತ್ರಕರ್ತರು ಪ್ರಶ್ನಿಸಿದಾಗ, “ಪತ್ರ ಬರೆದಿರುವುದು ಗೊತ್ತಿದೆ. ಆ ಬಗ್ಗೆ ಈಗ ಮಾತನಾಡುವುದಿಲ್ಲ” ಎಂದಷ್ಟೇ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...