ಬಿಹಾರ | SIR ಬಳಿಕ ಮೃತರೆಂದು ಘೋಷಿಸಲ್ಪಟ್ಟ ಇಬ್ಬರನ್ನು ಸುಪ್ರೀಂ ಕೋರ್ಟ್‌ಗೆ ಹಾಜರುಪಡಿಸಿದ ಯೋಗೇಂದ್ರ ಯಾದವ್

Date:

ಬಿಹಾರದಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಬಳಿಕ ಮೃತಪಟ್ಟಿದ್ದಾರೆ ಎಂದು ಘೋಷಿಸಲಾದ ಇಬ್ಬರನ್ನು ಚುನಾವಣಾ ವಿಶ್ಲೇಷಕ ಪ್ರೊ. ಯೋಗೇಂದ್ರ ಯಾದವ್ ಮಂಗಳವಾರ ಸುಪ್ರೀಂ ಕೋರ್ಟ್‌ಗೆ ಹಾಜರುಪಡಿಸಿದ್ದಾರೆ. ಸ್ವತಃ ತಾವೇ ವಾದ ಮಂಡಿಸಿದ್ದಾರೆ.

ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಜಾಯ್‌ಮಲ್ಯ ಬಾಗ್ಚಿ ಅವರ ಪೀಠದ ಎದುರು ವಾದ ಮಂಡಿಸಿದ ಯೋಗೇಂದ್ರ ಯಾದವ್ ಅವರು, ಇಬ್ಬರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಗಿದೆ. ಹಾಗಾಗಿ ಅವರ ಹೆಸರುಗಳನ್ನ ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ. ಆದರೆ ಅವರಿಬ್ಬರೂ ಜೀವಂತವಾಗಿದ್ದಾರೆ ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಯೋಗೇಂದ್ರ ಯಾದವ್‌ ಅಂಕಣ | ಗೃಹ ಬಳಕೆ ವೆಚ್ಚ ಸಮೀಕ್ಷೆ; ಆಳುವ ವರ್ಗವು ಈ ತಪ್ಪು ಕಲ್ಪನೆಯಿಂದ ಎಂದು ಮುಕ್ತವಾಗುತ್ತದೆ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದಯವಿಟ್ಟು ಇವರನ್ನು ನೋಡಿ. ಇವರು ಸತ್ತಿದ್ದಾರೆ ಎಂದು ಘೋಷಿಸಲಾಗಿದೆ. ಹಾಗಾಗಿ ಇವರ ಹೆಸರು ಮತದಾರರ ಪಟ್ಟಿಯಲ್ಲಿಲ್ಲ. ಆದರೆ ಅವರು ಜೀವಂತವಾಗಿದ್ದಾರೆ. ಅವರನ್ನು ನೋಡಿ, ಇಲ್ಲೇ ಇದ್ದಾರೆ” ಎಂದು ವಿಚಾರಣೆಯ ವೇಳೆ ಯೋಗೇಂದ್ರ ಯಾದವ್ ಹೇಳಿದ್ದಾರೆ.

ಭಾರತ ಚುನಾವಣಾ ಆಯೋಗದ ಪರವಾಗಿ ಹಾಜರಾದ ಹಿರಿಯ ವಕೀಲ ರಾಕೇಶ್ ದ್ವಿವೇದಿ, ಇದನ್ನು ‘ನಾಟಕ’ ಎಂದು ಕರೆದಿದ್ದಾರೆ. ಇದು ಅಜಾಗರೂಕ ದೋಷವಾಗಿರಬಹುದು ಎಂದು ನ್ಯಾಯಮೂರ್ತಿ ಬಾಗ್ಚಿ ಹೇಳಿದರು. “ಅಜಾಗರೂಕತೆಯಿಂದ ಆದ ತಪ್ಪಾಗಿರಬಹುದು, ಸರಿಪಡಿಸಬಹುದು. ಆದರೆ ನಿಮ್ಮ ವಾದವನ್ನು ನಾವು ಪರಿಗಣಿಸುತ್ತೇವೆ” ಎಂದು ನ್ಯಾಯಾಧೀಶರು ತಿಳಿಸಿದ್ದಾರೆ.

“ಈಗಾಗಲೇ ಹಲವು ಮಂದಿಯನ್ನು ಮತದಾರರ ಪಟ್ಟಿಯಿಂದ ಹೊರಗಿಡಲಾಗಿದೆ. 65 ಲಕ್ಷಕ್ಕೂ ಹೆಚ್ಚು ಮಂದಿಯನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ. 2003ರಲ್ಲಿ ವಿಶೇಷವೆಂದರೆ ‘ತೀವ್ರ’ ಪದವನ್ನು ಬಳಸುವುದನ್ನು ಹೊರತುಪಡಿಸಿ ಎಸ್‌ಐಆರ್‌ ಅನ್ನು ಮಾಡಲಾಗಿದೆ. ಶೂನ್ಯ ಸೇರ್ಪಡೆಯೊಂದಿಗೆ ಪರಿಷ್ಕರಣೆ ನಡೆದ ದೇಶದ ಇತಿಹಾಸದಲ್ಲಿ ನಡೆದ ಮೊದಲ ಪ್ರಕ್ರಿಯೆ ಇದಾಗಿದೆ” ಎಂದು ಹೇಳಿದರು.

“ಪುರುಷರಿಗಿಂತ ಅಧಿಕ ಮಹಿಳೆಯರ ಹೆಸರನ್ನು ಅಳಿಸಲಾಗಿದೆ. 31 ಲಕ್ಷ ಮಹಿಳೆಯ ಹೆಸರನ್ನು ತೆಗೆದುಹಾಕಲಾಗಿದೆ. 25 ಲಕ್ಷ ಪುರುಷರ ಹೆಸರನ್ನು ಅಳಿಸಲಾಗಿದೆ. ಈ ಸಂಖ್ಯೆ 1 ಕೋಟಿ ದಾಟುವುದು ಖಚಿತ. ಇದು ಪರಿಷ್ಕರಣೆಯ ವಿಷಯವಲ್ಲ. ಇವರನ್ನು ನೋಡಿ, ಇವರನ್ನು ಸತ್ತಿರುವುದಾಗಿ ಘೋಷಿಸಲಾಗಿದೆ. ಆದರೆ ಜೀವಂತವಾಗಿದ್ದಾರೆ” ಎಂದು ತಿಳಿಸಿದ್ದಾರೆ.

ಬಿಹಾರದಲ್ಲಿ ನವೆಂಬರ್‌ನ ಒಳಗಾಗಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ತರಾತುರಿಯಲ್ಲಿ ಚುನಾವಣಾ ಆಯೋಗ ಮತದಾರರ ಪಟ್ಟಿ ಪರಿಷ್ಕರಣೆ ಮಾಡಿದೆ. 65 ಲಕ್ಷಕ್ಕೂ ಅಧಿಕ ಮಂದಿಯ ಹೆಸರನ್ನು ಪಟ್ಟಿಯಿಂದ ತೆಗೆದು ಹಾಕಲಾಗಿದೆ. ಈ ಪೈಕಿ ಹಲವು ಮಂದಿ ಅರ್ಹರಾಗಿದ್ದರೂ ತಮ್ಮ ಮತದಾನದ ಹಕ್ಕನ್ನು ಕಳೆದುಕೊಂಡಿದ್ದಾರೆ ಎಂದು ಕೆಲವು ಸಮೀಕ್ಷೆಗಳು ಹೇಳುತ್ತವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...