ಯೋಗೇಶ್ವರ್ ಬಿಜೆಪಿ ಬಿಟ್ಟಿದ್ದು ಆಶ್ಚರ್ಯವಿಲ್ಲ, ಕಾಂಗ್ರೆಸ್‌ಗೆ ಕುಮಾರಣ್ಣನೇ ಟಾರ್ಗೆಟ್: ನಿಖಿಲ್ ಕುಮಾರಸ್ವಾಮಿ

Date:

ಬಿಜೆಪಿಗೆ ಸಿ ಪಿ ಯೋಗೇಶ್ವರ್ ರಾಜೀನಾಮೆ ಕೊಟ್ಟಿರುವುದು ಆಶ್ಚರ್ಯ ಪಡುವಂತದ್ದು ಏನೂ ಇಲ್ಲ, ಗಾಳಿಯಲ್ಲಿ ಗುಂಡು ಹೊಡೆಯುವಂತ ಆರೋಪ ಅಲ್ಲ, ಯಾವಾಗ ತರಾತುರಿ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ಕೊಟ್ರೋ ಅವತ್ತೇ ಗೊತ್ತಿತ್ತು ಇದರಲ್ಲಿ ಆಶ್ಚರ್ಯ ಏನು ಇಲ್ಲ” ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.

ಜೆಪಿ ನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳ ಜತೆ ಮಾತನಾಡಿದ ಅವರು, “ಚನ್ನಪಟ್ಟಣ ಟಿಕೆಟ್ ವಿಚಾರದಲ್ಲಿ ಕಳೆದ ಎರಡು ತಿಂಗಳಿಂದ ನಿರಂತರವಾಗಿ ನನ್ನ ಹೆಸರು ಚಾಲ್ತಿಯಲ್ಲಿದೆ. ಜೆಡಿಎಸ್ ಕಾರ್ಯಕರ್ತರು ನಿಖಿಲ್‌ಗೆ ಟಿಕೆಟ್ ಕೊಟ್ರೆ ನಾವು ಕೆಲಸ ಮಾಡ್ತೀವಿ ಅಂದಿದ್ರು. ಇಲ್ಲಿ ಯಾವುದೇ ತೀರ್ಮಾನಗಳು ಅಂತಿಮ ಆಗಬೇಕಾದ್ರೆ ಎನ್‌ಡಿಎ ಕಡೆಯಿಂದ ಘೋಷಣೆ ಆಗಬೇಕು. ನಿನ್ನೆಯೂ ಕುಮಾರಸ್ವಾಮಿ ಅವರು ಇದನ್ನೇ ಹೇಳಿದ್ದಾರೆ. ‘ತಾಳಿದವನು ಬಾಳಿಯಾನು’ ಅಂತ. ಅಂತಿಮವಾಗಿ ನಮ್ಮ ನಾಯಕರು ಮತ್ತು ಬಿಜೆಪಿ ನಾಯಕರು ಅಭ್ಯರ್ಥಿಯನ್ನು ಘೋಷಣೆ ಮಾಡುತ್ತಾರೆ” ಎಂದರು.

ಕಾಂಗ್ರೆಸ್‌ಗೆ ಕುಮಾರಣ್ಣನೇ ಟಾರ್ಗೆಟ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಂಗ್ರೆಸ್‌ಗೆ ಕುಮಾರಸ್ವಾಮಿಯೇ ಟಾರ್ಗೆಟ್ ಮಾಧ್ಯಮ ಪ್ರಶ್ನೆಗೆ ಉತ್ತರಿಸಿ ಅವರು, “ಕಳೆದ ಲೋಕಸಭಾ ಚುನಾವಣೆಯ ಫಲಿತಾಂಶ 14 ಲೋಕಸಭೆ ಕ್ಷೇತ್ರಗಳಲ್ಲಿ 12 ಕ್ಷೇತ್ರವನ್ನು ಗೆದ್ದಿದ್ದೇವೆ. ಅದ್ರಲ್ಲಿ ಪ್ರಮುಖ ಪಾತ್ರ ನಮ್ಮ ಕಾರ್ಯಕರ್ತರು, ಕುಮಾರಣ್ಣನ ನಾಯಕತ್ವ ಈ ವಿಚಾರಕ್ಕೆ ಕುಮಾರಣ್ಣ ಟಾರ್ಗೆಟ್ ಮಾಡುತ್ತಿದ್ದಾರೆ” ಎಂದು ಹೇಳಿದರು.

ಯೋಗೇಶ್ವರ್ ಹೇಳಿಕೆಗೆ ಕುಮ್ಮಕ್ಕು ಕೊಟ್ಟವರು ಯಾರಂತ ಗೊತ್ತಾಗುತ್ತಿದೆ

“ಬಿಜೆಪಿಯ ರಾಜ್ಯಮಟ್ಟದ ಒಕ್ಕಲಿಗರನ್ನು ಕುಮಾರಣ್ಣ ಅವರು ತುಳಿತಾರೆ ಅನ್ನೋ ಮಾತಿಗೆ ಕುಮ್ಮಕ್ಕು ಕೊಟ್ಟವರು ಯಾರು ಎಂಬುದು ಪ್ರಸ್ತುತ ಬೆಳವಣಿಗೆ ನೋಡಿದರೆ ರಾಜ್ಯದ ಜನಕ್ಕೆ ಗೊತ್ತಾಗುತ್ತಿದೆ” ಎಂದು ನಿಖಿಲ್ ಕುಮಾರಸ್ವಾಮಿ ಪರೋಕ್ಷವಾಗಿ ಡಿ ಕೆ ಶಿವಕುಮಾರ್‌ ವಿರುದ್ಧ ಕಿಡಿಕಾರಿದರು.

ಚನ್ನಪಟ್ಟಣ ಟಿಕೆಟ್‌ ವಿಚಾರವಾಗಿ ಮಾತನಾಡಿ, “ಎನ್‌ಡಿಎ ಅಭ್ಯರ್ಥಿ ನಿಲ್ಲಲಿದ್ದಾರೆ. ಸಾಮಾನ್ಯ ಕಾರ್ಯಕರ್ತ ಚುನಾವಣೆಗೆ ನಿಲ್ಲಬೇಕು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯವಾಗಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...