‘ಅಕ್ಬರ್‌ಪುರ ಹೆಸರು ಯಾಕೆ?’; ಉತ್ತರ ಪ್ರದೇಶದಲ್ಲಿ ಮತ್ತೆ ಹೆಸರು ಬದಲಾವಣೆಯ ಸುಳಿವು ನೀಡಿದ ಯೋಗಿ

Date:

ಅಕ್ಬರ್‌ಪುರ ನಗರದ ಹೆಸರನ್ನು ಉಚ್ಚರಿಸುವುದರಿಂದ ಬಾಯಿಗೆ ಕೆಟ್ಟ ರುಚಿ ಬರುತ್ತದೆ. ಖಚಿತವಾಗಿರಿ, ಇವೆಲ್ಲವೂ ಬದಲಾಗುತ್ತವೆ. ನಾವು ನಮ್ಮ ರಾಷ್ಟ್ರದಿಂದ ವಸಾಹತುಶಾಹಿಯ ಎಲ್ಲ ಕುರುಕುಗಳನ್ನು ತೊಡೆದುಹಾಕಬೇಕು ಮತ್ತು ನಮ್ಮ ಪರಂಪರೆಯನ್ನು ಗೌರವಿಸಬೇಕು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಆ ಮೂಲಕ, ಆ ರಾಜ್ಯದಲ್ಲಿ ಮತ್ತೆ ಹೆಸರು ಬದಲಾವಣೆ ನಡೆಸುವ ಸುಳಿವು ನೀಡಿದ್ದಾರೆ.

ಮುಸ್ಲಿಮರ ವಿರುದ್ಧದ ದ್ವೇಷ ಬಿತ್ತುತ್ತಲೇ ಬಿಜೆಪಿ ರಾಜಕೀಯ ಮಾಡುತ್ತಿದೆ. ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಕೋಮು ಆಡಳಿತ ನಡೆಸುತ್ತಿದ್ದಾರೆ. ಈ ಹಿಂದೆ, ಅಲ್ಲಿನ ಎಲ್ಲ ಸರ್ಕಾರಿ ಕಟ್ಟಡಗಳಿಗೂ ಕೇಸರಿ ಬಣ್ಣ ಬಳಿಸಿದ್ದ ಯೋಗಿ, ಹಲವಾರು ನಗರಗಳ ಹೆಸರನ್ನೂ ಬದಲಿಸಿದ್ದರು. ಇದೀಗ, ಮತ್ತೆ ಹೆಸರು ಬದಲಾವಣೆಯ ಸೂಚನೆ ನೀಡಿದ್ದಾರೆ. ಅಕ್ಬರ್‌ಪುರವನ್ನು ಅಕ್ಷರಪುರವೆಂದು ಬದಲಿಸುವ ಮಾತನಾಡಿದ್ದಾರೆ.

ಅಕ್ಬರ್‌ಪುರದ ಆಚೆಗೆ, ಅಲಿಗಢ್, ಅಜಮ್‌ಗಢ್, ಷಹಜಹಾನ್‌ಪುರ, ಗಾಜಿಯಾಬಾದ್, ಫಿರೋಜಾಬಾದ್, ಫರೂಕಾಬಾದ್ ಮತ್ತು ಮೊರಾದಾಬಾದ್ ಸೇರಿದಂತೆ ರಾಜ್ಯದೊಳಗಿನ ಹಲವಾರು ಜಿಲ್ಲೆಗಳ ಹೆಸರನ್ನು ಬದಲಾಯಿಸಲು ಪರಿಗಣಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಹಿಂದೆ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಗೌರವಾರ್ಥವಾಗಿ ರಾಜ್ಯದಲ್ಲಿ ಹಲವಾರು ರಸ್ತೆಗಳು, ಉದ್ಯಾನವನಗಳು ಮತ್ತು ಕಟ್ಟಡಗಳಿಗೆ ವಾಯಪೇಯಿ ಅವರ ಹೆಸರನ್ನು ಮರುನಾಮಕರಣ ಮಾಡಲಾಗಿತ್ತು.

ಹೆಚ್ಚುವರಿಯಾಗಿ, ದೇಶದ ನಾಲ್ಕನೇ ಜನನಿಬಿಡ ಜಂಕ್ಷನ್ ಆಗಿರುವ ಐಕಾನಿಕ್ ಮುಘಲ್ಸರಾಯ್ ರೈಲು ನಿಲ್ದಾಣವನ್ನು ದೀನ್ ದಯಾಳ್ ಉಪಾಧ್ಯಾಯ ಜಂಕ್ಷನ್ ಎಂದು ಬದಲಿಸಲಾಗಿತ್ತು.

2019ರ ಕುಂಭಮೇಳಕ್ಕೆ ಮುನ್ನ, ಅಲಹಾಬಾದ್‌ಅನ್ನು ಪ್ರಯಾಗ್‌ರಾಜ್ ಎಂದು ಮರುನಾಮಕರಣ ಮಾಡಲಾಗಿತ್ತು.

ಇತ್ತೀಚೆಗೆ, ಅಲಿಗಢ ನಗರವನ್ನು ಹರಿಗಢ ಎಂದು ಮರುನಾಮಕರಣ ಮಾಡಬೇಕೆಂದು ಅಲ್ಲಿನ ಪಾಲಿಕೆ ಒತ್ತಾಯಿಸಿ, ನಿರ್ಣಯವನ್ನು ಅಂಗೀಕರಿಸಿದೆ. ಅಲ್ಲದೆ, ಫಿರೋಜಾಬಾದ್ ಅನ್ನು ಚಂದ್ರನಗರ ಎಂದು, ಮೈನ್‌ಪುರಿಯನ್ನು ಮಾಯಾಪುರಿ ಎಂದು ಮರುನಾಮಕರಣ ಮಾಡಲು ಪ್ರಸ್ತಾಪ ಸಲ್ಲಿಸಲಾಗಿದೆ.

ಉತ್ತರ ಪ್ರದೇಶ ಪ್ರೌಢ ಶಿಕ್ಷಣ ರಾಜ್ಯ ಸಚಿವೆ ಗುಲಾಬ್ ದೇವಿ ಅವರು ತಮ್ಮ ತವರು ಜಿಲ್ಲೆ ಸಂಭಾಲ್ ಹೆಸರನ್ನು ಪೃಥ್ವಿರಾಜ್ ನಗರ ಅಥವಾ ಕಲ್ಕಿ ನಗರ ಎಂದು ಬದಲಾಯಿಸಬೇಕೆಂದು ಒತ್ತಾಯಿಸಿದ್ದಾರೆ. ಬಿಜೆಪಿಯ ಮಾಜಿ ಶಾಸಕಿ ದೇವಮಣಿ ದ್ವಿವೇದಿ ಅವರು ಸುಲ್ತಾನ್‌ಪುರ ಜಿಲ್ಲೆಯ ಹೆಸರನ್ನು ಕುಶಭವನಪುರ ಎಂದು ಬದಲಾಯಿಸಬೇಕೆಂದು ಆಗ್ರಹಿಸಿದ್ದಾರೆ. ಸಹರಾನ್‌ಪುರದ ದಿಯೋಬಂದ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಬ್ರಜೇಶ್ ಸಿಂಗ್ ಕೂಡ ದೇವ್ಬಂದ್ ಅನ್ನು ದೇವವೃಂದವೆಂದು ಮರುನಾಮಕರಣ ಮಾಡಲು ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...