‘ಮೋದಿ ಮತ್ತೆ ಪ್ರಧಾನಿಯಾದರೆ ಪಿಒಕೆ 6 ತಿಂಗಳಲ್ಲಿ ಭಾರತದ ತೆಕ್ಕೆಗೆ’ ಎಂದಿದ್ದ ಯೋಗಿ; ಕಾಲೆಳೆದ ಟ್ರೋಲಿಗರು

Date:

ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾದ ಆರು ತಿಂಗಳಲ್ಲಿ ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು ಭಾರತದ ಭಾಗವಾಗುವುದು ಎಂದು ಹೇಳಿದ್ದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇದೀಗ ಟ್ರೋಲಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಹಾಗೆಯೇ ನೆಟ್ಟಿಗರ ಅಪಹಾಸ್ಯಕ್ಕೂ ಯೋಗಿ ವಸ್ತು ವಿಷಯವಾಗಿದ್ದಾರೆ.

ಇದೇ ವರ್ಷದ ಮೇ 18ರಂದು ಮಹಾರಾಷ್ಟ್ರದಲ್ಲಿ ಬಿಜೆಪಿ ಅಭ್ಯರ್ಥಿ ಪರವಾಗಿ ಲೋಕಸಭೆ ಚುನಾವಣೆ ಪ್ರಚಾರವನ್ನು ನಡೆಸಿದ್ದ ಯೋಗಿ ಆದಿತ್ಯನಾಥ್, “ಮೋದಿ ಪ್ರಧಾನಿಯಾದ ಆರು ತಿಂಗಳಲ್ಲಿ ಪಾಕ್ ಆಕ್ರಮಿತ ಕಾಶ್ಮೀರ ಭಾರತದ ಭಾಗವಾಗಲಿದೆ” ಎಂದು ಹೇಳಿದ್ದರು.

ಯೋಗಿ ಈ ಭಾಷಣ ಮಾಡಿ ಇಂದಿಗೆ ಆರು ತಿಂಗಳುಗಳಿದ್ದು, ನೆಟ್ಟಿಗರು “ಪಿಒಕೆ ಭಾರತದ ಭಾಗವಾಗುವುದು ಯಾವಾಗ” ಎಂದು ಆದಿತ್ಯನಾಥ್ ಅವರನ್ನು ಪ್ರಶ್ನಿಸಿ, ಅವರ ಕಾಲೆಳೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಬಾಬಾ ಸಿದ್ದೀಕಿಯಂತೆ ಕೊಲ್ಲುತ್ತೇವೆ; ಯುಪಿ ಸಿಎಂ ಯೋಗಿ ಆದಿತ್ಯನಾಥ್‌ಗೆ ಜೀವ ಬೆದರಿಕೆ!

ಟ್ರೋಲಿಗರು, ನೆಟ್ಟಿಗರ ಗೇಲಿ

ಈಗಾಗಲೇ ಹಲವು ಬಾರಿ ಸುಳ್ಳು ಭರವಸೆಗಳ ಮೂಲಕ ಟ್ರೋಲ್‌ಗೆ ಗುರಿಯಾಗಿರುವ ಹಿರಿಯ ಬಿಜೆಪಿ ನಾಯಕ ಆದಿತ್ಯನಾಥ್ ಸದ್ಯ ಪಾಕ್ ಆಕ್ರಮಿತ ಕಾಶ್ಮೀರ ವಿಚಾರದಲ್ಲಿ ನೆಟ್ಟಿಗರಿಗೆ ಆಹಾರವಾಗಿದ್ದಾರೆ.

“ಇಂದು ಸಂಜೆಯೊಳಗೆ ಭಾರತದ ಹೊಸ ನಕ್ಷೆ ತಯಾರಾಗಲಿದೆ. ಆ ನಕ್ಷೆಯಲ್ಲಿ ಪಾಕಿಸ್ತಾನ ಆಕ್ರಮಿತ ಕಾಶ್ಮೀರವು ಭಾರತದ ಭಾಗವಾಗಲಿದೆ. ರೈಲ್ವೆ ಸಚಿವರು ಪಾಕ್ ಆಕ್ರಮಿತ ಕಾಶ್ಮೀರಕ್ಕೆ ರೈಲು ಕೂಡಾ ಆರಂಭಿಸಲಿದ್ದಾರೆ” ಎಂದು ನೆಟ್ಟಿಗರೊಬ್ಬರು ವ್ಯಂಗ್ಯವಾಡಿದ್ದಾರೆ. ಇನ್ನೋರ್ವ ನೆಟ್ಟಿಗರು “ಯೋಗಿ ಗಡುವು ಈಗಾಗಲೇ ಮುಕ್ತಾಯವಾಗಿದೆ. ತನ್ನ ಈ ಸುಳ್ಳು ಹೇಳಿಕೆಗೆ ರಾಜೀನಾಮೆ ನೀಡಲಿ” ಎಂದು ಆಗ್ರಹಿಸಿದ್ದಾರೆ.

“ಯೋಗಿ ಆದಿತ್ಯನಾಥ್ ಅವರಿಗೆ ಇನ್ನು ಒಂಬತ್ತು ಗಂಟೆಗಳು ಮಾತ್ರ ಬಾಕಿ ಉಳಿದಿದೆ. ಆದರೆ ಅವರು ಚುನಾವಣಾ ಪ್ರಚಾರದಲ್ಲಿಯೇ ಬ್ಯುಜಿಯಾಗಿದ್ದಾರೆ” ಎಂದು ನೆಟ್ಟಿಗರೊಬ್ಬರು ಪೋಸ್ಟ್ ಒಂದಕ್ಕೆ ಕಾಮೆಂಟ್‌ ಮಾಡಿದ್ದಾರೆ. ಇನ್ನೂ ಕೆಲವು ನೆಟ್ಟಿಗಳು “ಪಾಕ್ ಆಕ್ರಮಿತ ಕಾಶ್ಮೀರ ಭಾರತದ ಪಾಲಾಗುವುದು ಯಾವಾಗ ಎಂದು ಯೋಗಿ ಅವರನ್ನೇ ಕೇಳುವ” ಎಂದು ಯೋಗಿ ಅಧಿಕೃತ ಎಕ್ಸ್ ಖಾತೆಗೆ ಟ್ಯಾಗ್ ಮಾಡಿದ್ದಾರೆ.

“ಜನರು ಇದೇ ಮೊದಲ ಬಾರಿಗೆ ಮೋಸ ಹೋಗುತ್ತಿರುವುದಾ? ಈ ಹಿಂದೆ ಮೋದಿ ಪ್ರಧಾನಿಯಾದರೆ ಎಲ್ಲರ ಖಾತೆಗೆ 15 ಲಕ್ಷ ರೂಪಾಯಿ ಜಮೆ ಮಾಡಲಾಗುವುದು ಎಂದು ಹೇಳಿದ್ದರು. ಈಗ ಪಿಒಕೆ ಭಾರತದ ಭಾಗವಾಗಲಿದೆ ಎಂದು ಹೇಳಿಕೊಂಡಿದ್ದಾರೆ. ಮೋಸಕ್ಕೆ ಒಳಗಾಗುತ್ತಿರುವುದು ಜನರ ತಪ್ಪು” ಎಂದು ಜಿಮ್ಮಿ ಎಂಬ ನೆಟ್ಟಿಗರೊಬ್ಬರು ಅಭಿಪ್ರಾಯಿಸಿದ್ದಾರೆ.

ಕಾಮೆಂಟ್ 1

ಈ ನಡುವೆ ಕೆಲವು ಬಿಜೆಪಿ, ಯೋಗಿ ಬೆಂಬಲಿಗರು “ಯೋಗಿ ಹೇಳಿರುವುದು ಮೋದಿ ಪ್ರಧಾನಿಯಾದ ಆರು ತಿಂಗಳಲ್ಲಿ ಪಾಕ್ ಭಾರತದ ಭಾಗವಾಗಲಿದೆ ಎಂದು. ಹಾಗಾಗಿ ನೀವು ಮೇ 18ರ ಬದಲಾಗಿ ಜೂನ್ 4 ಅನ್ನು ಗಡುವಿನ ಆರಂಭದ ದಿನಾಂಕವಾಗಿ ಪರಿಗಣಿಸಿ. ಇನ್ನೂ ಕೂಡಾ 20ಕ್ಕೂ ಅಧಿಕ ದಿನಗಳಿವೆ. ಕಾದು ನೋಡಿ” ಎಂದು ಹೇಳಿಕೊಂಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...