ಅಂಕೆ ಮೀರಿದ ಭಂಡತನಕ್ಕೆ ನೀವೇ ಉತ್ತಮ ಉದಾಹರಣೆ; ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಕಿಡಿ

Date:

ಅಂಕೆ ಮೀರಿದ ಭಂಡತನಕ್ಕೆ ಮುಖ್ಯಮಂತ್ರಿ ನೀವೇ ಅತ್ಯುತ್ತಮ ಉದಾಹರಣೆ ಸಿದ್ದರಾಮಯ್ಯನವರೇ. ಭಾವುಕನಾಗಿ ಮಾತನಾಡುವ ಭರದಲ್ಲಿ ಗೌರವಾನ್ವಿತ ರಾಷ್ಟ್ರಪತಿಗಳನ್ನು ಏಕವಚನದಲ್ಲಿ ಸಂಬೋಧಿಸಿದೆ ಎಂದು ನೀವು ಕೊಟ್ಟಿರುವ ಸಮಜಾಯಿಷಿ ಮೊಸಳೆಯನ್ನೂ ನಾಚಿಸುವಂತಿದೆ ಎಂದು ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏಕವಚನದಲ್ಲಿ ಮಾತನಾಡಿದ್ದಾರೆ ಎಂದು ಆರೋಪಿಸಿರುವ ಕುಮಾರಸ್ವಾಮಿ ಸರಣಿ ಟ್ವೀಟ್​ ಮೂಲಕ ವಾಗ್ದಾಳಿ ನಡೆಸಿದ್ದಾರೆ.

“ಗ್ರಾಮೀಣ ಸೊಗಡಿನ ವ್ಯಕ್ತಿತ್ವ ನನ್ನದು. ನಾನು ಮಾತನಾಡುವುದೇ ಹಾಗೆ” ಎಂದು ನೀವು ಸಮರ್ಥಿಸಿಕೊಳ್ಳುತ್ತಿರಿ. ಸಮರ್ಥನೆಗೂ ಒಂದು ಅಳತೆ, ಗೌರವ ಇರುತ್ತದೆ. ಅದಾವುದನ್ನೂ ನೀವು ಲೆಕ್ಕಕ್ಕೇ ಇಟ್ಟಿಲ. ಹೌದಲ್ಲವೇ” ಎಂದು ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಎರಡನೇ ಸಲ ಸಿಎಂ ಆಗಿ ಎಲ್ಲ ರೀತಿಯ ಶಿಷ್ಟಾಚಾರದ ಸುಖ ಅನುಭವಿಸುತ್ತಿದ್ದೀರಿ ಮತ್ತು ಪಾಲಿಸುತ್ತಿದ್ದೀರಿ, ಸರಿ. ಆದರೆ, ಭಾಷೆ ವಿಚಾರದಲ್ಲಿ ನೀವು ಯಾಕೆ ಶಿಷ್ಟಾಚಾರ ಕಲಿತಿಲ್ಲ, ಪಾಲಿಸುತ್ತಿಲ್ಲ? ನಿಮ್ಮ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರಿಗೆ ಏಕವಚನ ಪ್ರಯೋಗಿಸುವಿರಾ?” ಎಂದು ಹರಿಹಾಯ್ದಿದ್ದಾರೆ.

“ಈ ಸೋಗಲಾಡಿತನವನ್ನು ಅರ್ಥ ಮಾಡಿಕೊಳ್ಳದಷ್ಟು ಮುಗ್ಧರೇ ನಮ್ಮ ಜನರು. ಸಿದ್ದರಾಮಯ್ಯನವರೇ, ನಿನ್ನೆ ದಿನ ಶೋಷಿತರ ಜಾಗೃತಿ ಸಮಾವೇಶದಲ್ಲಿ ನಿಮ್ಮ ಭಾಷಣದಲ್ಲಿ ಭಾವುಕತೆ, ಮುಗ್ಧತೆ ಇತ್ತೇ? ಸುಳ್ಳು ಹೇಳುವುದಕ್ಕೂ ಸಂಕೋಚ ಬೇಡವೇ? ನಿಮ್ಮ ಭಾಷಣ ದುರಾಹಂಕಾರದ ಪರಮಾವಧಿ ಮತ್ತು ಆ ಸಮಾವೇಶದ ಕರ್ತೃ,ಕರ್ಮ, ಕ್ರಿಯೆ ಎಲ್ಲವೂ ನೀವೇ. ಹೌದೋ ಅಲ್ಲವೋ? ದೇಶದ ಅತ್ಯುನ್ನತ ಸ್ಥಾನದಲ್ಲಿರುವ ಗೌರವಾನ್ವಿತ ರಾಷ್ಟ್ರಪತಿಗಳ ಬಗ್ಗೆ, ಅದರಲ್ಲೂ ಮಹಿಳೆಯ ಬಗ್ಗೆ ಏಕವಚನ ಪ್ರಯೋಗಿಸುವಾಗ ಭಾವುಕತೆಯಲ್ಲಿ ನಿಮ್ಮ ವಿವೇಕ ಸತ್ತು ಹೋಗಿತ್ತಾ?” ಎಂದು ವಾಗ್ದಾಳಿ ನಡೆಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೂವರು ಮಾನಗೆಟ್ಟ ನಾಯಕರು ಮತ್ತು ರಾಮ ರಾಜಕಾರಣ

“ಎರಡು ಬಾರಿ ಸಿಎಂ ಆದವರು, ಡಿಸಿಎಂ, ಹಣಕಾಸು ಸಚಿವರೂ ಆಗಿದ್ದವರು.. ವಕೀಲರೂ, ಸ್ವಯಂಘೋಷಿತ ಸಂವಿಧಾನ ತಜ್ಞರೂ ಆಗಿರುವ ನಿಮ್ಮಂತಹ ಪಂಡಿತರೇ ಭಾವುಕತೆಯಿಂದ ಬಾಯಿ ತಪ್ಪಿದರೆ ಹೇಗೆ? ಇನ್ನು ಆ ನಿಮ್ಮ ಭಾಷಣ! ಅದನ್ನು ಭಾಷಣ ಎನ್ನಲು ಸಾಧ್ಯವೇ? ನಿಮ್ಮ ಭಾಷಣ ನಿಮ್ಮ ಹೃದಯದಲ್ಲಿ ತುಂಬಿದ್ದ ಅಸಹನೆಯ ನಂಜು. ಅನ್ಯಜಾತಿಗಳ ಮೇಲೆ ಮಡುಗಟ್ಟಿದ ದ್ವೇಷ. ಜಾತಿ-ಧರ್ಮಗಳ ನಡುವೆ ಬೆಂಕಿ ಇಡಲು ನೀವು ಕಕ್ಕಿದ ಕಾರ್ಕೋಟಕ ವಿಷಜ್ವಾಲೆ. ಜಾತಿ ವ್ಯವಸ್ಥೆ ಇರುವರೆಗೆ ಇಂಥ ಸಮಾವೇಶಗಳು ನಡೆಯಬೇಕು ಎನ್ನುತ್ತೀರಿ! ಅಂದರೆ ಕಾರ್ಕೋಟಕ ವಿಷಜ್ವಾಲೆ ನಿರಂತರ ಎಂದಾಯಿತು! ನಿರಂತರವಾಗಿ ಅಧಿಕಾರದಲ್ಲಿ ಸುಖಿಸಿದ ನೀವು ಶೋಷಿತ ವರ್ಗಕ್ಕೆ ಮಾಡಿದ್ದೇನು?” ಎಂದು ಕಿಡಿಕಾರಿದ್ದಾರೆ.

“ಮೀಸಲಾತಿ ಬಗ್ಗೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹೇಳಿದ್ದೇನು? ಅವರ ನಿಲುವು ಏನಾಗಿತ್ತು? ಸಂವಿಧಾನವೇ ನನ್ನ ಧರ್ಮಗ್ರಂಥ ಎನ್ನುವ ನೀವು, ಇಷ್ಟು ಬೇಗ ಸಂವಿಧಾನ ಬರೆದವರ ಮಾತನ್ನೇ ಮರೆತರೆ ಹೇಗೆ? 14 ಬಜೆಟ್ ಮಂಡಿಸಿದ ಅಪರ ವಿತ್ತವಿಶಾರದರಾದ ತಮಗೆ ಮರೆವೇ? ಇನ್ನೆಷ್ಟು ವರ್ಷ ಸುಳ್ಳುಗಳನ್ನೇ ಹೇಳಿ ಸತ್ಯವನ್ನು ಸಾಗ ಹಾಕುತ್ತೀರಿ? ನನ್ನಂತೆಯೇ ಶೋಷಿತ ಸಮಾಜದಿಂದ ಬಂದವರು, ಅವರ ಬಗ್ಗೆ ಅಪಾರ ಗೌರವವಿದೆ. ಅವರನ್ನು ಏಕವಚನದಲ್ಲಿ‌ ಸಂಬೋಧಿಸಬಾರದಿತ್ತು. ಅಚಾತುರ್ಯದಿಂದ ಆಗಿರುವ ಈ ಪ್ರಮಾದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದಿದ್ದೀರಿ. ವಿಷಾದ ವ್ಯಕ್ತಪಡಿಸುವ ಸೌಜನ್ಯ ತೋರಿಸಿದ್ದೀರಿ, ಸಂತೋಷ. ಆದರೆ; ನಿಮ್ಮ ನಂಜಿನ ವಿಷ ರಾಜ್ಯವನ್ನೆಲ್ಲಾ, ದೇಶವನ್ನೆಲ್ಲಾ ವ್ಯಾಪಿಸುತ್ತಿದೆ. ಇದಕ್ಕೆ ಏನಂತೀರಿ?” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...