ನೀವು ನಮ್ಮ ಬೆನ್ನೆಲುಬು, ಪಕ್ಷದ ಡಿಎನ್‌ಎ: ಕಾಂಗ್ರೆಸ್ ಕಾರ್ಯಕರ್ತರಿಗೆ ರಾಹುಲ್ ಸಂದೇಶ

Date:

ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಮುನ್ನ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಗುರುವಾರ ಕಾಂಗ್ರೆಸ್ ಕಾರ್ಯಕರ್ತರಿಗೆ ಸಂದೇಶವೊಂದನ್ನು ಪೋಸ್ಟ್ ಮಾಡಿದ್ದು, “ನೀವು ನಮ್ಮ ಬೆನ್ನೆಲುಬು, ಪಕ್ಷದ ಡಿಎನ್‌ಎ” ಎಂದು ಹೇಳಿದ್ದಾರೆ.

ಕಾಂಗ್ರೆಸ್‌ನ ಅಧಿಕೃತ ಎಕ್ಸ್‌ ಖಾತೆಯಲ್ಲಿ ಈ ಪೋಸ್ಟ್ ಮಾಡಲಾಗಿದ್ದು ರಾಹುಲ್ ಗಾಂಧಿ, “ಬಿಜೆಪಿ-ಆರ್‌ಎಸ್‌ಎಸ್ ಭಾರತದ ಕಲ್ಪನೆಗೆ ವಿರುದ್ಧವಾಗಿವೆ. ಕಾನೂನಿನ ಚೌಕಟ್ಟಿನ ಮೇಲೆ ದಾಳಿ ಮಾಡುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನೀವು ಕಾಂಗ್ರೆಸ್ ಕಾರ್ಯಕರ್ತರು, ನಮ್ಮ ಬೆನ್ನೆಲುಬು ಮತ್ತು ನಮ್ಮ ಪಕ್ಷದ ಡಿಎನ್‌ಎ. ನೀವು ನಮ್ಮ ಸಿದ್ಧಾಂತವನ್ನು ಅರ್ಥಮಾಡಿಕೊಂಡಿದ್ದೀರಿ ಮತ್ತು ಅದಕ್ಕಾಗಿ ನೀವು ಪ್ರತಿದಿನ ಹೋರಾಡುತ್ತಿದ್ದೀರಿ. ನೀವು ಇಲ್ಲದೆ ನಮಗೆ ಏನನ್ನೂ ಮಾಡಲು ಸಾಧ್ಯವಿಲ್ಲ” ಎಂದು ರಾಹುಲ್ ಗಾಂಧಿ ಕಾಂಗ್ರೆಸ್ ಕಾರ್ಯಕರ್ತರಿಗೆ ಹೇಳಿದ್ದಾರೆ.

ಇದನ್ನು ಓದಿದ್ದೀರಾ?  ಇತ್ತೀಚಿನ ಮೋದಿ ಸಂದರ್ಶನ ಫ್ಲಾಪ್ ಶೋ, ಬಿಜೆಪಿ 150 ಸ್ಥಾನ ಕೂಡಾ ದಾಟಲ್ಲ: ರಾಹುಲ್ ಗಾಂಧಿ

“ಪ್ರಸ್ತುತ ಚುನಾವಣೆ ಆರಂಭವಾಗುತ್ತಿದೆ. ಆದರೆ ಬಿಜೆಪಿ-ಆರ್‌ಎಸ್‌ಎಸ್ ಭಾರತದ ಕಲ್ಪನೆಗೆ ವಿರುದ್ಧವಾಗಿದೆ. ಅವರು ನಮ್ಮ ಸಂವಿಧಾನ, ದೇಶದ ಪ್ರಜಾಪ್ರಭುತ್ವ ರಚನೆ, ಇಸಿಐ ಸೇರಿದಂತೆ ಭಾರತದ ಕಾನೂನು ಚೌಕಟ್ಟಿನ ಮೇಲೆ ದಾಳಿ ಮಾಡುತ್ತಿದ್ದಾರೆ. ನೀವು ಆರ್‌ಎಸ್‌ಎಸ್ ಸಿದ್ದಾಂತದ ವಿರುದ್ಧವಾಗಿ ಬೀದಿಗಳಲ್ಲಿ, ಹಳ್ಳಿಗಳಲ್ಲಿ ಮತ್ತು ಎಲ್ಲೆಡೆ ಹೋರಾಡುತ್ತೀರಿ, ನೀವು ರಕ್ಷಕರು” ಎಂದು ರಾಹುಲ್ ತಿಳಿಸಿದ್ದಾರೆ.

“2024 ರ ಲೋಕಸಭಾ ಚುನಾವಣೆ ವೇಳೆ ಭಾರತದ ಜನರ ಪ್ರಮುಖ ವಿಚಾರಗಳನ್ನು ನಮ್ಮ ಪ್ರಣಾಳಿಕೆಯಲ್ಲಿ ಸೇರಿಸಲು ನೀವು ನಮಗೆ ಸಹಾಯ ಮಾಡಿದ್ದೀರಿ. ನಾವು ನಿಮ್ಮನ್ನು ಅವಲಂಬಿಸಿದ್ದೇವೆ ಮತ್ತು ನಾವು ನಿಮ್ಮನ್ನು ಪ್ರೀತಿಸುತ್ತೇವೆ. ನಾನು ನಿಮಗೆ ನನ್ನ ಶುಭಾಶಯಗಳನ್ನು ತಿಳಿಸುತ್ತೇನೆ. ನಾವು ಬಿಜೆಪಿ ಮತ್ತು ಅವರ ಸಿದ್ಧಾಂತವನ್ನು ಸೋಲಿಸಲಿದ್ದೇವೆ” ಎಂದು ಕೂಡಾ ರಾಹುಲ್ ಗಾಂಧಿ ಹೇಳಿದ್ದಾರೆ.

ಇದನ್ನು ಓದಿದ್ದೀರಾ?   ಕೇಂದ್ರ ಸರ್ಕಾರ ಉದ್ಯಮಿಗಳ ಏಳಿಗೆಗಾಗಿ ಮಾತ್ರ ಕೆಲಸ ಮಾಡುತ್ತಿದೆ: ರಾಹುಲ್‌ ಗಾಂಧಿ ವಾಗ್ದಾಳಿ

18 ನೇ ಲೋಕಸಭೆಯ 543 ಸದಸ್ಯರನ್ನು ಆಯ್ಕೆ ಮಾಡಲು 2024 ರ ಲೋಕಸಭೆ ಚುನಾವಣೆಯು ಏಪ್ರಿಲ್ 19ರಿಂದ ಜೂನ್ 1ರವರೆಗೆ ಏಳು ಹಂತಗಳಲ್ಲಿ ನಡೆಯಲಿವೆ. ಜೂನ್ 4ರಂದು ಫಲಿತಾಂಶ ಪ್ರಕಟವಾಗಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...