ಜೀವ ಉಳಿಸಲು ವೈದ್ಯರೇ ಆಗಬೇಕಿಲ್ಲ; ರಕ್ತದಾನದ ಮೂಲಕವೂ ಜೀವ ಉಳಿಸಬಹುದು: ಸಚಿವ ಗುಂಡೂರಾವ್

Date:

ವಿಶ್ವ ರಕ್ತದಾನಿಗಳ ದಿನಾಚರಣೆಯ ಅಂಗವಾಗಿ ಬೆಂಗಳೂರಿನಲ್ಲಿ‌ ಇಂದು ವಿಧಾನ ಸೌಧದಿಂದ ಕಂಠೀರವ ಕ್ರೀಡಾಂಗಣದವರೆಗೆ ರಕ್ತದಾನದ ಕುರಿತು ಜಾಗೃತಿ ಜಾಥಾ ನಡೆಸಲಾಯಿತು. ಜಾಥಾಗೆ ಚಾಲನೆ ನೀಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರಕ್ತದಾನಿಗಳೊಂದಿಗೆ ಹೆಜ್ಜೆ ಹಾಕಿದರು.

ವಿಶ್ವ ರಕ್ತದಾನಿಗಳ ದಿನಾಚರಣೆಯನ್ನು ಪ್ರತಿ ವರ್ಷ ಜೂನ್ 14ನೇ ರಂದು ಜಗತ್ತಿನಾದ್ಯಂತ 2004 ರಿಂದ ಆಚರಿಸಿಕೊಂಡು ಬರಲಾಗುತ್ತಿದೆ. ಪ್ರತಿವರ್ಷದಂತೆ ಈ ವರ್ಷವೂ ಸಹ ವಿಶ್ವರಕ್ತದಾನಿಗಳ ದಿನಾಚರಣೆಯನ್ನು ರಾಜ್ಯ ಮಟ್ಟದಲ್ಲಿ ಜಾಥಾ ಮೂಲಕ ಆಚರಿಸಿ, ಸಾರ್ವಜನಿಕರಲ್ಲಿ ರಕ್ತದಾನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲಾಯಿತು. ರಕ್ತವನ್ನು ಸಕಾಲದಲ್ಲಿ ಪೂರೈಕೆ ಮಾಡುವ ಮುಖಾಂತರ ಜೀವಗಳನ್ನು ಉಳಿಸಬಹುದು.‌ ಈ ನಿಟ್ಟಿನಲ್ಲಿ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡುವ ದಾನಿಗಳನ್ನು ಗೌರವಿಸಿ ಇತರರನ್ನು ರಕ್ತದಾನ ಮಾಡುವಂತೆ ಪ್ರೇರೇಪಿಸುವ ನಿಟ್ಟಿನಲ್ಲಿ ಇಂದು ಆರೋಗ್ಯ ಇಲಾಖೆ ಹಾಗೂ KSAPS ಸಂಸ್ಥೆಯಿಂದ ಜಾಥಾ ಹಮ್ಮಿಕೊಳ್ಳಲಾಗಿತ್ತು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“20 ವರ್ಷಗಳ ರಕ್ತದಾನದ ಸಂಭ್ರಮಾಚರಣೆ ಸಂದರ್ಭದಲ್ಲಿ ಧನ್ಯವಾದ ರಕ್ತದಾನಿಗಳೇ, “Your Gift of Life is Priceless” ಎಂಬ ಘೋಷವಾಕ್ಯದೊಂದಿಗೆ ಈ ಬಾರಿಯ ರಕ್ತದಾನಿಗಳ ದಿನಾಚರಣೆಯನ್ನ ಆಚರಿಸಲಾಯಿತು.

ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, “ಒಬ್ಬರ ಜೀವ ಉಳಿಸಲು ವೈದ್ಯರೇ ಆಗಬೇಕಿಲ್ಲ. ರಕ್ತದಾನ ಮಾಡುವ ಮೂಲಕವು ಒಬ್ಬರ ಜೀವ ಉಳಿಸಬಹುದು. ರಕ್ತದಾನ ಮಾಡುವ ಮೂಲಕ ಹಲವರ ಜೀವನದಲ್ಲಿ ಬದಲಾವಣೆ ತರಬಹುದು” ಎಂದು ಹೇಳಿದರು.

“ದೇಶದಲ್ಲಿ ರಕ್ತಕ್ಕಿರುವ ಬೇಡಿಕೆಯನ್ನ ಗಮನದಲ್ಲಿಟ್ಟುಕೊಂಡು ರಕ್ತದಾನಕ್ಕೆ ನಾವೆಲ್ಲರೂ ಮುಂದಾಗಬೇಕಿದೆ. ಹೆಚ್ಚು ರಕ್ತದಾನದ ಅಗತ್ಯತೆ ಇದೆ” ಎಂದು ಸಚಿವ ದಿನೇಶ್ ಗುಂಡೂರಾವ್ ಅಭಿಪ್ರಾಯಪಟ್ಟರು.

ಇದನ್ನು ಓದಿದ್ದೀರಾ? ಪೋಕ್ಸೋ ಪ್ರಕರಣ | ಬಿಎಸ್‌ವೈ ಬಂಧಿಸದಂತೆ ಹೈಕೋರ್ಟ್‌ ಮಧ್ಯಂತರ ಆದೇಶ

ರಕ್ತದಾನದ ಕುರಿತು ಜನರಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವತ್ತ ಆರೋಗ್ಯ ಇಲಾಖೆ ಹಾಗೂ ಕರ್ನಾಟಕ ಸ್ಟೇಟ್ ಏಡ್ಸ್ ಪ್ರಿವೆನ್ಷನ್ ಸೊಸೈಟಿ ಅವರು ಹಮ್ಮಿಕೊಂಡಿದ್ದ ಈ ರೀತಿಯ ಜಾಥಾ ಕಾರ್ಯಕ್ರಮಗಳು ಉತ್ತಮವಾದವು ಎಂದರು. ಜಾಥಾದಲ್ಲಿ ಪಾಲ್ಗೊಂಡಿದ್ದ ಸಾವಿರಾರು ಸ್ವಯಂ ಸೇವಕರು ರಕ್ತದಾನ ಮಾಡುವ ಕುರಿತು ಪ್ರತಿಜ್ಞೆ ಸ್ವೀಕರಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...