ಬಿಧುರಿ ‘ಮಹಿಳಾ ವಿರೋಧಿ’ – ಬಿಜೆಪಿ ನಾಯಕನ ನಿವಾಸದ ಗೇಟ್‌ ಮೇಲೆ ಬರೆದ ಪ್ರತಿಭಟನಾಕಾರರು

Date:

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಸಂಸದೆ ಪ್ರಿಯಾಂಕಾ ಗಾಂಧಿ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡುವ ಮೂಲಕ ದೆಹಲಿಯ ಕಲ್ಕಾಜಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಮೇಶ್ ಬಿಧುರಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.

“ದೆಹಲಿಯ ಕಲ್ಕಾಜಿ ಕ್ಷೇತ್ರದಲ್ಲಿ ಗೆದ್ದರೆ ಕ್ಷೇತ್ರದ ರಸ್ತೆಗಳನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರ ಕೆನ್ನೆಯಂತೆ ನುಣುಪಾಗಿ ನಿರ್ಮಿಸಲಾಗುವುದು” ಎಂದು ಹೇಳಿಕೆ ನೀಡುವ ಮೂಲಕ ಬಿಜೆಪಿ ಶಾಸಕ ರಮೇಶ್ ಬಿಧುರಿ ಭಾನುವಾರ ವಿವಾದದಲ್ಲಿ ಸಿಲುಕಿದ್ದಾರೆ. ಅದಾದ ಬಳಿಕ ಮಾಧ್ಯಮಗಳ ಮುಂದೆ ತನ್ನ ಹೇಳಿಕೆಯನ್ನು ಸಮರ್ಥಿಸಿಕೊಂಡು ವಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಇದನ್ನು ಓದಿದ್ದೀರಾ? ಪ್ರಿಯಾಂಕಾ ಗಾಂಧಿ ಕೆನ್ನೆಯಂತೆ ನುಣುಪಾದ ರಸ್ತೆ ನಿರ್ಮಾಣ : ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಖಂಡನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೆಹಲಿ ಪ್ರದೇಶ ಯುವ ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ ಬಿಜೆಪಿ ನಾಯಕ ರಮೇಶ್ ಬಿಧುರಿ ನಿವಾಸದ ಹೊರಗಡೆ ಪ್ರತಿಭಟನೆ ನಡೆಸಿದರು. ದೆಹಲಿ ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷ ಅಕ್ಷಯ್ ಲಾಖ್ರಾ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ಬಿಧುರಿ ನಿವಾಸದ ಗೇಟ್‌ ಮೇಲೆ ಕಪ್ಪು ಪೇಂಟ್‌ ಬಳಸಿ ‘ಮಹಿಳಾ ವಿರೋಧಿ’ ಎಂದು ಬರೆದಿದ್ದಾರೆ. ಒಂದು ಹೆಣ್ಣಿನ ದೇಹದ ಬಗ್ಗೆ ಈ ರೀತಿ ಹೇಳಿಕೆ ನೀಡುವುದು ಖಂಡನಾರ್ಹ ಎಂದು ಯುವ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು ಬಿಧುರಿ ಈ ಹಿಂದೆಯೂ ಇದೇ ರೀತಿ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದರು ಎಂಬುದನ್ನು ಅಕ್ಷಯ್ ಲಾಖ್ರಾ ಒತ್ತಿ ಹೇಳಿದ್ದಾರೆ. “ಇಷ್ಟೊಂದು ಕೀಳಾಗಿ ಆಲೋಚಿಸಿರುವ ಬಿಧುರಿ ಕ್ಷಮೆಯಾಚಿಸಬೇಕು. ಬಿಜೆಪಿ ನಾಯಕ ಕ್ಷಮೆ ಕೇಳುವವರೆಗೂ ನಮ್ಮ ಹೋರಾಟ ನಿಲ್ಲದು” ಎಂದು ಎಚ್ಚರಿಕೆ ನೀಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...