ದೆಹಲಿ-ಮಣಿಪುರ ಸಮಸ್ಯೆ | ಎನ್‌ಡಿಎಗೆ ಬೆಂಬಲ ಸೂಚಿಸಿದ ವೈಎಸ್ಆರ್ ಕಾಂಗ್ರೆಸ್

Date:

ದೆಹಲಿಯಲ್ಲಿ ಸೇವೆಗಳ ಮೇಲೆ ನಿಯಂತ್ರಣ ಸಾಧಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ಮಂಡಿಸಲು ಹೊರಟಿರುವ ವಿವಾದಾತ್ಮಕ ಮಸೂದೆಗೆ ವೈಎಸ್ಆರ್ ಕಾಂಗ್ರೆಸ್ ಪಕ್ಷದ ಸಂಸದರು ಬೆಂಬಲ ಸೂಚಿಸಿದ್ದಾರೆ.

ಈ ಮಸೂದೆಗೆ ರಾಜ್ಯಸಭೆಯಲ್ಲಿ ಅಂಗೀಕಾರವಾಗದಂತೆ ತಡೆಯಲು ವಿಪಕ್ಷಗಳು ಕಾರ್ಯತಂತ್ರ ರೂಪಿಸುತ್ತಿರುವ ನಡುವೆಯೇ ಈ ಬೆಳವಣಿಗೆ ನಡೆದಿದ್ದು, ಕೇಂದ್ರ ಸರ್ಕಾರ ಮಸೂದೆ ಮಂಡಿಸಲು ಇದ್ದ ಅಡೆತಡೆಗಳನ್ನು ನಿವಾರಿಸಲು ಸಿದ್ಧವಾಗಿದೆ.

ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್ಆರ್ ಕಾಂಗ್ರೆಸ್ ಪಕ್ಷವು ಬೆಂಬಲ ನೀಡಿದ್ದಕ್ಕೆ ಎನ್‌ಡಿಎ ಮೈತ್ರಿಕೂಟ ಧನ್ಯವಾದ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಹೇಳಿಕೆ ನೀಡಿರುವ ವೈಎಸ್ಆರ್ ಕಾಂಗ್ರೆಸ್ ಪಕ್ಷದ ನಾಯಕ ವಿ ವಿಜಯಸಾಯಿ ರೆಡ್ಡಿ, “ನಾವು ಎರಡೂ ವಿಷಯಗಳಲ್ಲಿ ಅಂದರೆ ದೆಹಲಿ ಸಮಸ್ಯೆ ಮಾತ್ರವಲ್ಲದೆ ಮಣಿಪುರ ವಿಷಯದಲ್ಲೂ ಕೇಂದ್ರ ಸರ್ಕಾರದ ಪರವಾಗಿ ಮತ ಚಲಾಯಿಸುತ್ತೇವೆ” ಎಂದು ತಮ್ಮ ಬೆಂಬಲವನ್ನು ಪುನರುಚ್ಚರಿಸಿದರು.

ರಾಜ್ಯಸಭೆಯಲ್ಲಿ ವೈಎಸ್ಆರ್ ಕಾಂಗ್ರೆಸ್ ಪಕ್ಷದಿಂದ ಒಂಬತ್ತು ಸದಸ್ಯರಿದ್ದು, ಅವರ ಬೆಂಬಲವು ಮಸೂದೆ ಅಂಗೀಕಾರಕ್ಕೆ ನಿರ್ಣಾಯಕವಾಗಿತ್ತು.

ವೈಎಸ್ಆರ್ ಕಾಂಗ್ರೆಸ್ ಪಕ್ಷವು ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟಕ್ಕೆ(ಎನ್‌ಡಿಎ) ಬೆಂಬಲವನ್ನು ನೀಡುತ್ತಿದ್ದಂತೆ, ವಿವಾದಾತ್ಮಕ ದೆಹಲಿ ನಿಯಂತ್ರಣ ಮಸೂದೆಯನ್ನು ರಾಜ್ಯಸಭೆಯಲ್ಲಿ ಅಂಗೀಕರಿಸುವುದು ಹೆಚ್ಚು ಖಚಿತವಾಗಿದೆ.

123 ಮತಗಳನ್ನು ಒಳಗೊಂಡಿರುವ ಎನ್‌ಡಿಎ, ವಿರೋಧ ಪಕ್ಷದ ಮೈತ್ರಿಕೂಟದ ನಿರೀಕ್ಷಿತ 108 ಮತಗಳ ವಿರುದ್ಧ ಬಹುಮತವನ್ನು ಹೊಂದಿದೆ.

ಒಂಬತ್ತು ಸಂಸದರನ್ನು ಹೊಂದಿರುವ ಬಿಜು ಜನತಾ ದಳವು ಈ ವಿಷಯದಲ್ಲಿ ತನ್ನ ನಿಲುವನ್ನು ಇನ್ನೂ ಅಂತಿಮಗೊಳಿಸಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...