‘ಯುವನಿಧಿ’ ಕಾಗದದ ಮೇಲಿನ ಯೋಜನೆಯಾಗಿ ಉಳಿಯುವ ಸಾಧ್ಯತೆ ದಟ್ಟವಾಗಿದೆ: ಬಿಜೆಪಿ ಟೀಕೆ

Date:

“ಯುವನಿಧಿಗೆ ಗ್ರಹಣ ಬಡಿದಿದ್ದು, ಅದು ಕಾಗದದ ಮೇಲಿನ ಯೋಜನೆಯಾಗಿ ಉಳಿಯುವ ಸಾಧ್ಯತೆ ದಟ್ಟವಾಗಿದೆ” ಎಂದು ಕಾಂಗ್ರೆಸ್‌ ಗ್ಯಾರಂಟಿ ಯೋಜನೆಗಳ ವಿರುದ್ಧ ಬಿಜೆಪಿ ಟೀಕಿಸಿದೆ.

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಬಿಜೆಪಿ, “ಮೊದಲ ಕ್ಯಾಬಿನೆಟ್ ನಲ್ಲಿಯೇ ಜಾರಿಯಾಗಬೇಕಿದ್ದ ಗ್ಯಾರಂಟಿಗಳನ್ನು ಈಡೇರಿಸದೇ, ಬಜೆಟ್ ನಲ್ಲಿ ಅನುಷ್ಠಾನದ ಬಗ್ಗೆ ಸ್ಪಷ್ಟನೆ ನೀಡದೇ, ತಾನು ನುಡಿದಂತೆ ನಡೆಯದ ಸರ್ಕಾರ ಎಂಬುದನ್ನು ಸಿದ್ದರಾಮಯ್ಯ ಅವರ ಬಜೆಟ್ ಸಾಬೀತುಪಡಿಸಿದೆ” ಎಂದು ಆರೋಪಿಸಿದೆ.

“ಅಧಿಕಾರ ಸ್ವೀಕರಿಸಿದ ಬಳಿಕ, ಮೊದಲ ಸಚಿವ ಸಂಪುಟ ಸಭೆಯಲ್ಲಿಯೇ, ತಾನು ಘೋಷಿಸಿದ ಎಲ್ಲ ಐದು ಗ್ಯಾರಂಟಿಗಳನ್ನು ಈಡೇರಿಸುತ್ತೇನೆ ಎಂದು ಜನರ ಕಿವಿ ಮೇಲೆ ಹೂವು ಇಟ್ಟಿದ್ದ ಎಟಿಎಂ ಸರ್ಕಾರ ಈಗ ಅಧಿಕಾರಕ್ಕೆ ಬಂದು ತನ್ನ ಬಜೆಟ್ ಮಂಡಿಸಿದರೂ ಆ ಬಗ್ಗೆ ಸ್ಪಷ್ಟತೆ ನೀಡುತ್ತಿಲ್ಲ. ಗ್ಯಾರಂಟಿ ಜಾರಿಗೊಳಿಸದೇ, “ನಾಳೆ ಬಾ” ಎಂದು ಟೈಂ ಪಾಸ್ ಮಾಡುತ್ತಿದೆ” ಎಂದು ವ್ಯಂಗ್ಯವಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಐದು ಗ್ಯಾರಂಟಿಗಳಲ್ಲಿ ಶಕ್ತಿ ಯೋಜನೆ ಜಾರಿಗೊಳಿಸಲು 15 ದಿನ ಬೇಕಾಯಿತು. ಆದರೆ, ಈ ಬಜೆಟ್‌ನಲ್ಲಿ, ರಾಜ್ಯ ಸಾರಿಗೆ ಸಂಸ್ಥೆಗೆ ಶಕ್ತಿ ತುಂಬುವ ಅಂಶಗಳನ್ನು ಪ್ರಸ್ತಾಪಿಸಿಲ್ಲ” ಎಂದು ಆರೋಪಿಸಿದೆ.

“ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ತಾನು ನುಡಿದಂತೆ 10 ಕೆಜಿ ಅಕ್ಕಿ ನೀಡದೇ, 05 ಕೆಜಿ ಅಕ್ಕಿಯ ದರ ನೀಡುತ್ತೇನೆಂದು ಹೇಳಿ, ಕೇಂದ್ರ ಸರ್ಕಾರ ನೀಡುವ 05 ಕೆಜಿ ಅಕ್ಕಿಯಲ್ಲಿ, 02 ಕೆಜಿ ಅಕ್ಕಿಗೆ ಕನ್ನ ಹಾಕಿದೆ” ಎಂದು ದೂರಿದೆ.

“ಗೃಹ ಜ್ಯೋತಿ ಗ್ಯಾರಂಟಿಯನ್ನು ಜಾರಿಗೊಳಿಸದೇ, ವಿದ್ಯುತ್ ದರ ಏರಿಸಿ, ಜನರ ಜೇಬಿಗೆ ಶಾಕ್ ನೀಡಿದೆ. ಈ ತಿಂಗಳ ಬಿಲ್ ಪಾವತಿಸಿ, ಮುಂದಿನ ತಿಂಗಳು ಬಿಲ್ ಬರುವುದಿಲ್ಲ ಎಂದು ಹೇಳುತ್ತಾ ಜನತೆಯನ್ನು ವಂಚಿಸುತ್ತಿದೆ. ಗೃಹಲಕ್ಷ್ಮಿಗೆ ನೂರಾರು ಷರತ್ತು ವಿಧಿಸಿ, ಕೊನೆಗೆ ಸರ್ವರ್ ಹ್ಯಾಕ್ ಎಂಬ ಸುಳ್ಳು ಸುದ್ದಿಯನ್ನು ಸಚಿವರು ಹೇಳಿದ್ದರು, ಈಗ ಷರತ್ತುಗಳ ಬಗ್ಗೆ ಮಾತನಾಡುತ್ತಿದ್ದಾರೆ” ಎಂದು ದೂರಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...