ಗುಜರಾತ್ ಗಲಭೆ | ಕೊಲೆಯಾದ ಮಾಜಿ ಕಾಂಗ್ರೆಸ್ ಸಂಸದರ ಪತ್ನಿ ಝಕಿಯಾ ಜಾಫ್ರಿ ನಿಧನ

Date:

2002ರ ಗುಜರಾತ್ ಗಲಭೆಯಲ್ಲಿ ಕೊಲೆಯಾದ ಮಾಜಿ ಕಾಂಗ್ರೆಸ್ ಸಂಸದ ಎಹ್ಸಾನ್ ಜಾಫ್ರಿ ಅವರ ಪತ್ನಿ ಝಕಿಯಾ ಜಾಫ್ರಿ ಅವರು ಶನಿವಾರ ಅಹಮದಾಬಾದ್‌ನಲ್ಲಿ ನಿಧನರಾದರು. ಅವರಿಗೆ 86 ವರ್ಷ ವಯಸ್ಸಾಗಿತ್ತು.

2002ರ ಫೆಬ್ರವರಿ 28ರಂದು ಗೋಧ್ರಾದಲ್ಲಿ ಸಬರಮತಿ ಎಕ್ಸ್‌ಪ್ರೆಸ್ ರೈಲಿಗೆ ಬೆಂಕಿ ಹಚ್ಚಿದ ಮರುದಿನ ಅಹಮದಾಬಾದ್‌ನಲ್ಲಿ ಮುಸ್ಲಿಮರು ಅಧಿಕವಾಗಿ ವಾಸಿಸುವ ಪ್ರದೇಶವಾದ ಗುಲ್ಬರ್ಗ್ ಸೊಸೈಟಿಯಲ್ಲಿ 69 ಜನರ ಕೊಲೆಯಾಗಿತ್ತು. ಕೊಲೆಯಾದವರ ಪೈಕಿ ಮಾಜಿ ಕಾಂಗ್ರೆಸ್ ಸಂಸದ ಎಹ್ಸಾನ್ ಜಾಫ್ರಿ ಕೂಡಾ ಒಬ್ಬರಾಗಿದ್ದರು. ಇದಾದ ಬಳಿಕ ರಾಜ್ಯಾದ್ಯಂತ ಭೀಕರ ಗಲಭೆ ಉಂಟಾಗಿತ್ತು.

ಇದನ್ನು ಓದಿದ್ದೀರಾ? ವಿಜಯಪುರ | ಬಾಬ್ರಿ ಮಸೀದಿ, ಗುಜರಾತ್ ಗಲಭೆಯನ್ನು ಪಠ್ಯದಿಂದ ಕೈಬಿಟ್ಟ ಎನ್‌ಸಿಇಆರ್‌ಟಿ: ಎಐಡಿಎಸ್ಒ ಆಕ್ರೋಶ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗೋಧ್ರಾ ರೈಲು ದಹನ ಘಟನೆಯ ಬಳಿಕ ನಡೆದ ಗಲಭೆಗೆ ಉನ್ನತ ರಾಜಕೀಯ ನಾಯಕರೇ ಹೊಣೆಗಾರರು ಎಂದು ವಾದಿಸಿದ್ದ ಎಹ್ಸಾನ್ ಜಾಫ್ರಿ ಅವರ ಪತ್ನಿ ಝಕಿಯಾ ಜಾಫ್ರಿ ಸುಪ್ರೀಂ ಕೋರ್ಟ್‌ ಮೆಟ್ಟಲೇರಿ ರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದ್ದರು.

ಝಕಿಯಾ ಜಾಫ್ರಿ ನಿಧನದ ಬಗ್ಗೆ ಅವರ ಪುತ್ರ ತನ್ವೀರ್ ಜಾಫ್ರಿ ಮಾಹಿತಿ ನೀಡಿದ್ದಾರೆ. “ನನ್ನ ತಾಯಿ ಅಹಮದಾಬಾದ್‌ನಲ್ಲಿರುವ ನನ್ನ ಸಹೋದರಿಯ ಮನೆಗೆ ಭೇಟಿ ನೀಡುತ್ತಿದ್ದರು. ತಮ್ಮ ದೈನಂದಿನ ದಿನಚರಿಯನ್ನು ಮುಗಿಸಿ ತಮ್ಮ ಕುಟುಂಬ ಸದಸ್ಯರೊಂದಿಗೆ ಸಾಮಾನ್ಯವಾಗಿ ಮಾತನಾಡುತ್ತಿದ್ದಾಗ ದಿಡೀರ್ ಅಸ್ವಸ್ಥತೆ ಕಾಣಿಸಿಕೊಂಡಿದ್ದಾಗಿ ಕರೆ ಬಂದಿದೆ. ವೈದ್ಯರು ಬೆಳಿಗ್ಗೆ 11:30ರ ಸುಮಾರಿಗೆ ನನ್ನ ತಾಯಿ ನಿಧನರಾಗಿರುವುದಾಗಿ ತಿಳಿಸಿದ್ದಾರೆ” ಎಂದು ಹೇಳಿದರು.

ಈ ಬಗ್ಗೆ ಸಾಮಾಜಿಕ ಕಾರ್ಯಕರ್ತೆ, ಝಕಿಯಾ ಜೊತೆ ಸಹದೂರುದಾರೆಯಾದ ತೀಸ್ತಾ ಸೆಟಲ್‌ವಾಡ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. “ಮಾನವ ಹಕ್ಕುಗಳ ಪರ ಹೋರಾಡಿದ ನಾಯಕಿ ಝಕಿಯಾ ಆಪಾ ಕೇವಲ 30 ನಿಮಿಷಗಳ ಹಿಂದೆ ನಿಧನರಾದರು. ಕುಟುಂಬದೊಂದಿಗೆ ನಾವಿದ್ದೇವೆ” ಎಂದು ಪೋಸ್ಟ್ ಮಾಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...