ಬೆಂಗಳೂರು | ನೈಸ್‌ ಕಂಪನಿಯ ಭೂ ಸಂತ್ರಸ್ತ ರೈತರಿಂದ ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ

Date:

ನೈಸ್‌ ಕಂಪನಿಗೆ ಪಾಲುದಾರಿಕೆ ನೀಡಿರುವ ರಾಜ್ಯ ಸರ್ಕಾರದ ನಡೆಯನ್ನು ವಿರೋಧಿಸುವ ಮತ್ತು ನೈಸ್‌ ಕಂಪನಿಯು ಯಾವುದೇ ರೀತಿಯಲ್ಲೂ ಕಾಮಗಾರಿ ನಡೆಸದಂತೆ ನಿರ್ಬಂಧ ಹೇರುವಂತೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ನೈಸ್‌ ಭೂ ಸಂತ್ರಸ್ತ ರೈತರು ಇಂದು (ಆ.21) ಪ್ರತಿಭಟನೆ ನಡೆಸಿದರು..

ನೈಸ್‌ ಕಂಪನಿಗೆ ನೀಡಿರುವ ಬಿಎಂಐಸಿ ಯೋಜನೆಯ ಪಾಲುದಾರಿಕೆಯನ್ನು ರದ್ದುಗೊಳಿಸಬೇಕು. ಭೂ ಸ್ವಾಧೀನ ಹಾಗೂ ರಸ್ತೆ ನಿರ್ಮಾಣದಲ್ಲಿ ನೈಸ್‌ ಕಂಪನಿಯ ಹಗರಣವನ್ನು ತನಿಖೆಗೆ ಒಳಪಡಿಸಿ ನ್ಯಾಯ ನೀಡಬೇಕು ಹಾಗೂ ರೈತರ ಗಮನಕ್ಕೆ ಬಾರದೆ ಅಥವಾ ಒತ್ತಾಯ ಪೂರ್ವಕವಾಗಿ ಜಮೀನುಗಳನ್ನು ಭೂಸ್ವಾಧೀನ ಮಾಡಿರುವ ಎಲ್ಲಾ ಪ್ರಕರಣಗಳನ್ನು ರದ್ದುಪಡಿಸಬೇಕು ಎಂದು ರೈತ ಹೋರಾಟಗಾರರು ಆಗ್ರಹಿಸಿದರು.

ಭೂ ಸ್ವಾಧೀನ ಪ್ರಕಟಣೆ ಮತ್ತು ಕೋರ್ಟ್‌ ತೀರ್ಪುಗಳ ಹೆಸರಿನಲ್ಲಿ ಕಂಪನಿಯು ರೈತರ ಮೇಲೆ ನಡೆಸುತ್ತಿರುವ ದೌರ್ಜನ್ಯ ದಬ್ಬಾಳಿಕೆಗಳನ್ನು ಈ ಕೂಡಲೇ ನಿಲ್ಲಿಸಬೇಕು. ನೈಸ್‌ ಕಂಪನಿಯು ಕೆಐಎಡಿಬಿಯ ಜೊತೆ ಜಂಟಿಯಾಗಿ ಅಕ್ರಮ ಮೈತ್ರಿಯಿಂದ ಹಗಲು ದರೋಡೆ ನಡೆಸಿರುವ ಹೆಚ್ಚುವರಿ ಭೂಮಿಯನ್ನು ಹಿಂತಿರುಗಿಸಬೇಕು ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಸ್ತುತ ಟೋಲ್‌ ಸಂಗ್ರಹಿಸುತ್ತಿರುವ ರಸ್ತೆಯಲ್ಲಿ ತಮ್ಮ ಭೂಮಿ ಕಳೆದುಕೊಂಡ ರೈತರಿಗೆ ಮೊದಲೇ ನೀಡಿರುವ ಒಪ್ಪಂದದಂತೆ ಹೆಚ್ಚಿನ ಪರಿಹಾರ ಮತ್ತು ನಿವೇಶನ ನೀಡುವಲ್ಲಿ ಸರ್ಕಾರವು ವಿಫಲವಾಗಿದೆ. ಬಿಎಂಐಸಿ ಯೋಜನೆಯ ನೆಪದಲ್ಲಿ ನೈಸ್‌ ಕಂಪನಿಯು ನಡೆಸುತ್ತಿರುವ ರಿಯಲ್‌ ಎಸ್ಟೇಟ್‌ ವ್ಯವಹಾರವನ್ನು ನಿರ್ಬಂಧಿಸಬೇಕು. ಕಂಪನಿಗೆ ಗುತ್ತಿಗೆಗೆ ನೀಡಿರುವ ಎಲ್ಲಾ ಸರ್ಕಾರಿ ಜಾಗವನ್ನು ಹಿಂಪಡೆದು ಮನೆ ನಿವೇಶನಕ್ಕಾಗಿ ಅರ್ಜಿ ಸಲ್ಲಿಸಿರುವ ಎಲ್ಲ ವಸತಿ ರಹಿತರಿಗೆ ಮನೆ, ನಿವೇಶನ ನೀಡಬೇಕು ಜೊತೆಗೆ ಸರ್ಕಾರಿ ಭೂಮಿಯಲ್ಲಿ ವಾಸಿಸುತ್ತಿರುವ ಎಲ್ಲಾ ಬಡವರಿಗೂ ಹಕ್ಕು ಪತ್ರ ನೀಡಬೇಕು ಎಂದು ಪ್ರತಿಭಟನೆಯ ವೇಳೆ ತಮ್ಮ ಬೇಡಿಕೆಗಳನ್ನು ತಿಳಿಸಿದರು.

ಸ್ಥಳಕ್ಕೆ ಆಗಮಿಸಿದ ಪಿಡಬ್ಲ್ಯೂಡಿ ಕರ್ನಾಟಕ ಮುಖ್ಯ ಎಂಜಿನಿಯರ್ ಮಂಜಪ್ಪ ಅವರು ಬೇಡಿಕೆ ಪತ್ರವನ್ನು ಸ್ವೀಕರಿಸಿ, ರೈತರ ಸಮಸ್ಯೆಯ ಬಗ್ಗೆ ಸಚಿವರ ಜೊತೆಗೆ ಚರ್ಚೆ ನಡೆಸಿ, ಪರಿಹಾರ ನೀಡುವುದಾಗಿ ಭರವಸೆ ನೀಡಿದರು.

ಇದನ್ನು ಓದಿದ್ದೀರಾ? ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ ಎ ಮುರಿಗೆಪ್ಪ

ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ನೈಸ್‌ ಭೂ ಸಂತ್ರಸ್ತ ರೈತ ಸಮಿತಿಯ ರಾಜ್ಯ ಉಪಾದ್ಯಕ್ಷ ಎನ್‌ ವೆಂಕಟಾಚಲಯ್ಯ, ಪ್ರಧಾನ ಕಾರ್ಯದರ್ಶಿ ಟಿ ಯಶವಂತ, ರಾಜ್ಯ ಸಮಿತಿ ಸದಸ್ಯೆ ಗಾಯತ್ರಿ ಜೆ, ಜಿಲ್ಲಾ ಕಾರ್ಯದರ್ಶಿ ವೆಂಕಟಚಲಪ್ಪ ಸೇರಿದಂತೆ ಮೊದಲಾದವರು ಪ್ರತಿಭಟನೆಯಲ್ಲಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಂತ್ರಜ್ಞಾನದ ಹೆಬ್ಬಾಗಿಲು ಬೆಂಗಳೂರು; ವಿಶ್ವದ ಗಮನ ಸೆಳೆದ Bengaluru Tech Summit 2025

ಏಷ್ಯಾದ ಅತಿ ದೊಡ್ಡ ತಂತ್ರಜ್ಞಾನ ಸಮಾವೇಶಗಳಲ್ಲಿ ಒಂದಾದ ಬೆಂಗಳೂರು ಟೆಕ್ ಸಮ್ಮಿಟ್...

ಚುನಾವಣಾ ನಿರಂಕುಶ ಪ್ರಭುತ್ವದತ್ತ ಭಾರತ ಜಾರುತ್ತಿದೆ: ಮಾಧವ ದೇಶಪಾಂಡೆ

ನಮ್ಮದು ಬೂದು ಬಣ್ಣದ ಚುನಾಯಿತ ಪ್ರಜಾಪ್ರಭುತ್ವದ ಮಾದರಿಯಾಗಿತ್ತು. ಅದೀಗ ಚುನಾಯಿತ ಸರ್ವಾಧಿಕಾರಕ್ಕೆ,...

SIR ಹೆಸರಿನಲ್ಲಿ ನಡೆಯುತ್ತಿರುವುದು ರಕ್ತರಹಿತ ನರಮೇಧ: ಪರಕಾಲ ಪ್ರಭಾಕರ್

"ಒಂದು ದೇಶದ ನಾಗರಿಕನ ಹಕ್ಕುಗಳನ್ನು ಕಿತ್ತುಕೊಳ್ಳುವುದೆಂದರೆ ಆತನನ್ನು ಕೊಂದಂತೆಯೇ. ಹಕ್ಕಿಲ್ಲದ ವ್ಯಕ್ತಿ...

ಬೆಂಗಳೂರಿಗರನ್ನು ಕೈಬೀಸಿ ಕರೆಯುತ್ತಿದೆ ಜಿಕೆವಿಕೆಯ ‘ಕೃಷಿ ಮೇಳ’; ಯಂತ್ರಗಳದೇ ಕಾರುಬಾರು!

ಕಾಂಟ್ರೀಟ್‌ ಕಾಡಾಗಿರುವ ಬೆಂಗಳೂರಿಗೆ ಹಸಿರಿನ ರಂಗೇರಿದೆ. ಬೆಂಗಳೂರಿನ ಗಾಂಧಿ ಕೃಷಿ ವಿಜ್ಞಾನ...