ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಳ: ಪೊಲೀಸರೇ ಕಾರಣ?

Date:

ದೇಶದಾದ್ಯಂತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (SC/ST) ಜನರ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳು ದಿನೇ ದಿನೇ ಏರಿಕೆಯಾಗುತ್ತಲೇ ಇದೆ. ಇದಕ್ಕೆ ಪೂರಕವೆಂಬಂತೆ ಕರ್ನಾಟಕದಲ್ಲಿ ಶೇ.37.74 ರಷ್ಟು ಹೆಚ್ಚಾಗಿರುವ ವರದಿಯಾಗಿದೆ.

2021ರಲ್ಲಿ 1,751 ಪ್ರಕರಣಗಳಿಂದ 2025ರ ವೇಳೆಗೆ 2,412 ಪ್ರಕರಣಗಳಿಗೆ ಏರಿದೆ. ವರದಿಯಲ್ಲಿನ ಆಘಾತಕಾರಿ ಸಂಗತಿಯೆಂದರೆ, ದೇಶದ ಐಟಿ ರಾಜಧಾನಿಯಾದ ಬೆಂಗಳೂರು ಮೊದಲ ಸ್ಥಾನದಲ್ಲಿದ್ದು, ಗೃಹ ಸಚಿವ ಜಿ.ಪರಮೇಶ್ವರ ಅವರ ತವರು ಕ್ಷೇತ್ರವಾದ ತುಮಕೂರು ಎರಡನೇ ಸ್ಥಾನದಲ್ಲಿದೆ.

ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆಗಟ್ಟಲು ಕಠಿಣ ಕಾನೂನು ಕ್ರಮಗಳು, ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ (DCRE) ಕ್ಕೆ ವಿಶೇಷ ಪೊಲೀಸ್ ಠಾಣೆಯ ಮಾನ್ಯತೆ ಇದ್ದರೂ ಪ್ರಕರಣ ಸಂಖ್ಯೆ ಹೆಚ್ಚಾಗುತ್ತಿರುವುದು ದುರಂತವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳೆದ ಐದು ವರ್ಷಗಳಲ್ಲಿ ರಾಜ್ಯದಲ್ಲಿ 10,573 SC/ST ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ. ಇವುಗಳಲ್ಲಿ 1,598 ಪ್ರಕರಣಗಳು ಹುಸಿಯಾಗಿದ್ದು, ಕೇವಲ 47 ಪ್ರಕರಣಗಳಲ್ಲಿ ಶಿಕ್ಷೆ ವಿಧಿಸಲಾಗಿದೆ. ಹಾಗೆಯೇ 1,050 ಪ್ರಕರಣಗಳು ಖುಲಾಸೆಯಾಗಿವೆ. 2025ರಲ್ಲಿಯೇ ರಾಜ್ಯದಾದ್ಯಂತ ದಾಖಲಾದ 2,412 ಪ್ರಕರಣಗಳಲ್ಲಿ, ಮೊದಲ ಸ್ಥಾನದಲ್ಲಿರುವ ಬೆಂಗಳೂರು ನಗರದಲ್ಲಿ 261, ಎರಡನೇ ಸ್ಥಾನದಲ್ಲಿರುವ ತುಮಕೂರಿನಲ್ಲಿ 139, ಮೂರನೇ ಸ್ಥಾನದಲ್ಲಿರುವ ಬೆಳಗಾವಿಯಲ್ಲಿ 128 ಹಾಗೂ ನಾಲ್ಕನೇ ಸ್ಥಾನದಲ್ಲಿರುವ ರಾಯಚೂರಿನಲ್ಲಿ 121, ಐದನೇ ಸ್ಥಾನದಲ್ಲಿರುವ ಹಾಸನದಲ್ಲಿ 116 ಪ್ರಕರಣಗಳು ದಾಖಲಾಗಿವೆ.

ಇದನ್ನು ಓದಿ : ಬೀದರ್‌ | ದಲಿತರ ಮೇಲಿನ ದೌರ್ಜನ್ಯ ನಿರಂತರ : ಜನರ ಧ್ವನಿ ಸಂಘಟನೆ ಧರಣಿ

SC/ST ಗಳ ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟುವ ಸಲುವಾಗಿ 2025ರ ಏಪ್ರಿಲ್ ತಿಂಗಳಿನಲ್ಲಿ, ಬೆಂಗಳೂರಿನಲ್ಲಿ ಎರಡು, ಪ್ರತಿ ಜಿಲ್ಲೆಗೆ ಒಂದರಂತೆ ಒಟ್ಟು 33 DCRE ವಿಶೇಷ ಪೊಲೀಸ್ ಠಾಣೆಯನ್ನು ರಾಜ್ಯ ಸರ್ಕಾರ ಸ್ಥಾಪಿಸಿತ್ತು. ಇದನ್ನು ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ‘ರಕ್ಷಣಾ ಘಟಕ’ವಾಗಿ ಘೋಷಣೆ ಮಾಡಿತ್ತು.

ಅದರಂತೆ ಅಸ್ಪೃಶ್ಯತಾ ನಿಷೇಧ ಕಾಯ್ದೆ-1955 ಹಾಗೂ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ-1989ರ ಅಡಿಯಲ್ಲಿ ದಲಿತರ ಮೇಲೆ ನಡೆಯುವ ದೌರ್ಜನ್ಯ ಪ್ರಕರಣಗಳಲ್ಲಿ ವಿಶೇಷ ಪೊಲೀಸ್ ಠಾಣೆಗಳ ಮೂಲಕ ಆರೋಪಿಗಳ ವಿರುದ್ಧ ತ್ವರಿತವಾಗಿ ಕಾನೂನು ಕ್ರಮ ಕೈಗೊಳ್ಳುವುದು ಇದರ ಉದ್ದೇಶವಾಗಿತ್ತು.

ಈಗ DCRE ಘಟಕಗಳಿಗೆ ವಿಶೇಷ ಠಾಣೆ ಮಾನ್ಯತೆ ಲಭಿಸಿರುವ ಕಾರಣ, ಎಫ್‌ಐಆರ್ ದಾಖಲಿಸುವ ಅಧಿಕಾರವಿದೆ. ತ್ವರಿತವಾಗಿ ತನಿಖೆ ನಡೆಸಿ, ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸುವುದಕ್ಕೂ ಸಂಪೂರ್ಣ ಮುಕ್ತವಾಗಿದೆ.

newindianexpress2026 01 18a79t41 1
ಕೃಪೆ : ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್

ಈ ಕುರಿತು ‘ಈದಿನ’ ಜೊತೆ ಮಾತನಾಡಿದ ಸಾಮಾಜಿಕ ಕಾರ್ಯಕರ್ತೆ ನಾಗಮಣಿ, “ದಲಿತರ ಮೇಲಿನ ದಬ್ಬಾಳಿಕೆಯನ್ನು ಕಡಿಮೆ ಮಾಡುವ ಉದ್ದೇಶದಿಂದಲೇ ರಾಜ್ಯದಲ್ಲಿ DCRE ಠಾಣೆಯನ್ನು ತೆರೆಯಲಾಗಿದೆ ಎಂದು ರಾಜ್ಯ ಸರ್ಕಾರ ಹೇಳಿತ್ತು. ದಲಿತರಲ್ಲದ ಬಲಿತರು DCRE ಗಳಲ್ಲಿ ಅಧಿಕಾರಿಗಳಾಗಿದ್ದಾರೆ. ಇವರೇ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು, ದಲಿತರ ಮೇಲಿನ ದೌರ್ಜನಕ್ಕೆ ಕಾರಣರಾಗಿದ್ದಾರೆ” ಎಂದು ಆರೋಪ ಮಾಡಿದರು.

“DCRE ಠಾಣೆಗಳಲ್ಲಿ ಎಷ್ಟು ಪ್ರಕರಣಗಳು ದಾಖಲಾಗಿವೆ?, ಎಷ್ಟು ಪ್ರಕರಣಗಳಲ್ಲಿ ನ್ಯಾಯ ಸಿಕ್ಕಿದೆ?, ಎಷ್ಟು ಜನರಿಗೆ ಕಾನೂನಿನ ಮೂಲಕ ಶಿಕ್ಷೆಯಾಗಿದೆ?” ಎಂದು ಪ್ರಶ್ನಿಸಿದರು.

ವಕೀಲೆ ರಾಜಲಕ್ಷ್ಮೀ ಅಂಕಲಗಿ ‘ಈದಿನ’ ಜೊತೆ ಮಾತನಾಡಿ, “ಶರಣರ ಕಾಲದಲ್ಲಿಯೂ ಜಾತಿ ಎನ್ನುವುದು ಇತ್ತು. ಅದರೊಳಗಿನ ತಾರತಮ್ಯವನ್ನು ಹೋಗಲಾಡಿಸಲು ಬಸವಣ್ಣ ತರದ ಅನೇಕ ದಾರ್ಶನಿಕರು ಶ್ರಮಿಸಿದ್ದಾರೆ. ಆದರೆ ಇವತ್ತಿನ ಕಾಲದಲ್ಲಿ ರಾಜಕೀಯ ನಾಯಕರುಗಳೇ ಜಾತಿ ಹೆಸರಿನಲ್ಲಿ ಕೀಳು ಮಟ್ಟದ ಭಾಷೆಯನ್ನು ಉಪಯೋಗಿಸುತ್ತಿದ್ದಾರೆ. ಈ ತರದ ರಾಜಕಾರಣಿಗಳ ಹಿಂಬಾಲಕರು ಸಹ ಇದೇ ಪ್ರವೃತ್ತಿಗೆ ಬಂದಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದರು.

“ಇಷ್ಟು ದಿನ ಸಾಮಾನ್ಯ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳನ್ನು ದಾಖಲಿಸಲಾಗುತ್ತಿತ್ತು. ಆದರೆ ಕಳೆದ ವರ್ಷ, ದಲಿತರ ಮೇಲಿನ ದೌರ್ಜನ್ಯವನ್ನು ಕಡಿಮೆ ದೃಷ್ಟಿಯಿಂದ DCRE ಠಾಣೆಗಳನ್ನು ತೆರೆದರೂ ದೌರ್ಜನ್ಯ ಹೆಚ್ಚುತ್ತಿರುವುದು ದುರಂತ. DCRE ಠಾಣೆಗಳಲ್ಲಿರುವ ಪೊಲೀಸರಿಗೆ ದಲಿತರ ಮೇಲೆ ನಡೆಯುವ ದೌರ್ಜನ್ಯಗಳ ಬಗ್ಗೆ ಅರಿವು ಇರುವುದಿಲ್ಲ. ಸರ್ಕಾರ ಕೇವಲ ಠಾಣೆಗಳನ್ನು ತೆರೆಯುವುದು ಮಾತ್ರವಲ್ಲ, ಆ ಠಾಣೆಗಳಲ್ಲಿ ದಲಿತರ ಸಮಸ್ಯೆಗಳನ್ನು ಅರಿತಿರುವವರನ್ನು ನೇಮಿಸುವುದು ಒಳ್ಳೆಯದು” ಎಂದು ಆಗ್ರಹಿಸಿದರು.

“ಅನೇಕ ಸಂದರ್ಭದಲ್ಲಿ ದೌರ್ಜನ್ಯ ನಡೆದಿದ್ದಾಗಲೂ ಪೊಲೀಸರು ಪ್ರಕರಣಗಳನ್ನು ದಾಖಲಿಸಿಕೊಳ್ಳುವುದಿಲ್ಲ. ಕಂಪ್ಲೇಂಟ್ ಕೊಡಲು ಬಂದ ಸಂತ್ರಸ್ತರಿಗೆ ಬೆದರಿಸಿರುವ ಘಟನೆಗಳು ನಡೆದಿವೆ. ಒಂದು ವೇಳೆ ಕೇಸ್ ಗಳು ನಿಜವಾಗಿದ್ದರೂ ಶಿಕ್ಷೆಯೇ ಆಗುವುದಿಲ್ಲ. ಮರ್ಯಾದಗೇಡು ಹತ್ಯೆಯ ಸಂದರ್ಭದಲ್ಲಿ ಜಾತಿ ತಾರತಮ್ಯದ ಘಟನೆಗಳು ಹೆಚ್ಚಾಗಿ ಕಾಣುತ್ತವೆ. ಪ್ರೀತಿಸಿದ ಹುಡುಗ ಅಥವಾ ಹುಡುಗಿಯಲ್ಲಿ, ಒಬ್ಬರೂ ದಲಿತರಾಗಿದ್ದರೆ, ಇನ್ನೊಂದು ಸಮುದಾಯದವರು ದೌರ್ಜನ್ಯ ಮಾಡುವ ಹಂತಕ್ಕೆ ತಲುಪುತ್ತಾರೆ” ಎಂದರು.

“ಇದನ್ನು ತಡೆಗಟ್ಟಲು ಸರ್ಕಾರ ನೀತಿಗಳನ್ನು ತಯಾರಿಸುವ ಜೊತೆಗೆ, ಸರಿಯಾಗಿ ಅನುಷ್ಠಾನ ಮಾಡಬೇಕು. ಜಾತಿ ತಾರತಮ್ಯ ಎಷ್ಟು ದೊಡ್ಡ ಅಪರಾಧ ಎನ್ನುವ ಕುರಿತು ಅರಿವು ಕಾರ್ಯಕ್ರಮಗಳನ್ನು ಮಾಡಬೇಕು. ಕಾನೂನನ್ನು ಸರಿಯಾಗಿ ಉಪಯೋಗಿಸಿಕೊಳ್ಳಬೇಕು. ಸುಳ್ಳು ಮತ್ತು ಸರಿಯಾದ ದೂರುಗಳ ನಡುವಿನ ವ್ಯತ್ಯಾಸ ಗುರುತಿಸುವುದನ್ನು ಪೊಲೀಸರು ಅರಿತಿದ್ದಾಗ ಮಾತ್ರ ದೌರ್ಜನ್ಯಗಳನ್ನು ತಡೆಗಟ್ಟಬಹುದು” ಎಂದು ಹೇಳಿದರು.

ಹಿರಿಯ ದಲಿತ ಹೋರಾಟಗಾರರಾದ ಅಂಬಣ್ಣ ಅರೋಲಿಕರ್ ಅವರು ‘ಈದಿನ’ ಜೊತೆ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡರು. “ದಲಿತರ ಮೇಲಿನ ದೌರ್ಜನ್ಯ ಹೆಚ್ಚಾಗಲು ಕಾರಣ, ಮೊದಲು ದಾಖಲಾಗಿದ್ದ ಪ್ರಕರಣಗಳಿಗೆ ಸರಿಯಾದ ಶಿಕ್ಷೆಯಾಗುತ್ತಿಲ್ಲ. ಲಿಬರಲ್ ಆಗಿ ನೋಡುವುದನ್ನು ಬಿಟ್ಟು ದಲಿತರ ಪರಿಸ್ಥಿತಿಯನ್ನು ಅರಿತಾಗ ಮಾತ್ರ ಎಸ್ಸಿ ಎಸ್ಟಿ ದೌರ್ಜನ್ಯಗಳು ಕಡಿಮೆ ಆಗುತ್ತದೆ” ಎಂದರು.

“ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳಾದಾಗ ಶಿಕ್ಷೆ ಆಗುತ್ತದೆ, ಬಿಡುಗಡೆ ಮಾಡುತ್ತಾರೆ ಎನ್ನುವ ಅಸಹನೆ ಇರುವುದರಿಂದಲೇ ದೌರ್ಜನ್ಯ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಯಾವುದೇ ಕೇಸ್ ದಾಖಲಾದ ನಂತರ ಶಿಕ್ಷೆ ತ್ವರಿತವಾಗಿ ಜಾರಿಯಾದರೆ ಮಾತ್ರ ಅಪರಾಧ ಪ್ರಮಾಣ ಕಡಿಮೆ ಆಗುತ್ತದೆ” ಎಂದು ಅಭಿಪ್ರಾಯಪಟ್ಟರು.

Manoj
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...