ಧರ್ಮಸ್ಥಳ ಸೌಜನ್ಯ ಪ್ರಕರಣ | ಸಿಬಿಐಗೆ ಹೈಕೋರ್ಟ್‌ ನೋಟಿಸ್; ಈವರೆಗೆ ನಡೆದಿದ್ದೇನು?

Date:

ಕೊಂದವರು ಯಾರು? ಆಂದೋಲನ ಸೇರಿದಂತೆ ಹಲವು ಮಹಿಳಾಪರ ಹೋರಾಟಗಾರರ ಸಮಿತಿಗಳು, ಸಾಮಾಜಿಕ ಹೋರಾಟಗಾರರು 'ಬುರುಡೆ' ವಿಚಾರದಲ್ಲಿ ಹಾದಿ ತಪ್ಪಿದ್ದ ಧರ್ಮಸ್ಥಳದ ಸೌಜನ್ಯ ಪ್ರಕರಣದ ತನಿಖೆಯನ್ನು ಸರಿ ದಾರಿಗೆ ತರುವಲ್ಲಿ ಶ್ರಮಿಸುತ್ತಿದ್ದಾರೆ.

ದೇಶವನ್ನೇ ಬೆಚ್ಚಿ ಬೀಳಿಸಿದ್ದ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಕಳಪೆ ಮತ್ತು ದೋಷಪೂರಿತ ತನಿಖೆ ನಡೆದಿರುವುದು ಪದೇ ಪದೇ ಚರ್ಚೆಗೆ ಗ್ರಾಸವಾಗುತ್ತಲೇ ಇದೆ. ಈ ಆರಂಭಿಕ ತನಿಖೆಯ ದೋಷದಿಂದಾಗಿಯೇ ನ್ಯಾಯ ಇಂದಿಗೂ ಮರೀಚಿಕೆಯಾಗಿದೆ. ಪ್ರಕರಣ ನಡೆದು ಇಷ್ಟು ವರ್ಷಗಳಾದರೂ ತನಿಖೆ ವೇಳೆ ಲೋಪ ಎಸಗಿದವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂಬ ಆಗ್ರಹ ಇಂದಿಗೂ ಆಗ್ರಹವಾಗಿಯೇ ಉಳಿದಿದೆ. ಸದ್ಯ ಹೈಕೋರ್ಟ್ ಈ ಸಂಬಂಧ ಕೇಂದ್ರ ತನಿಖಾ ದಳ (ಸಿಬಿಐ) ಮತ್ತು ಅದರ ಚೆನ್ನೈ ಮೂಲದ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ನೋಟಿಸ್ ಜಾರಿ ಮಾಡಿದೆ ಎಂದು ವರದಿಯಾಗಿದೆ.

ಸಿಬಿಐ ಕೋರ್ಟ್ ಸೌಜನ್ಯ ಪ್ರಕರಣದಲ್ಲಿ ‘ದೋಷಪೂರಿತ ಮತ್ತು ಕಳಪೆ ತನಿಖೆ’ ನಡೆಸಿದ ಅಧಿಕಾರಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕೆಂದು ಸೂಚಿಸಿತ್ತು. ಹಾಗೆಯೇ ತನಿಖಾಧಿಕಾರಿಗಳು ಎಸಗಿರುವ ಲೋಪದೋಷಗಳು, ತಪ್ಪುಗಳನ್ನು ಕೂಲಂಕಷವಾಗಿ ಪರಿಶೀಲಿಸಲು ಖುಲಾಸೆ ಸಮಿತಿ ಮುಂದೆ ಈ ವಿಷಯ ಮಂಡಿಸಬೇಕು ಎಂದು ತಿಳಿಸಿತ್ತು. ಸೌಜನ್ಯಳ ತಾಯಿ ಕುಸುಮಾವತಿಯವರು ವಿಶೇಷ ಸಿಬಿಐ ನ್ಯಾಯಾಲಯ ಹೊರಡಿಸಿದ ನಿರ್ದೇಶನಗಳನ್ನು ಜಾರಿಗೆ ತರುವಂತೆ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಸದ್ಯ ಸಿಬಿಐಗೆ ನೋಟಿಸ್ ನೀಡಿದೆ. ಸದ್ಯ ಹೈಕೋರ್ಟ್ ಸೂಚನೆ ಮೇರೆಗೆ ತನಿಖೆ ಚುರುಕಾಗುವ ನಿರೀಕ್ಷೆಯಿದೆ.

ಇದನ್ನು ಓದಿದ್ದೀರಾ? ಧರ್ಮಸ್ಥಳ 74 ಅಸಹಜ ಸಾವು | ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್: ಮತ್ತೆ ಮೂಡಿದ ಭರವಸೆಯ ಕಿರಣ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಧರ್ಮಸ್ಥಳ ವ್ಯಾಪ್ತಿಯಲ್ಲಿ ಹಲವು ಅತ್ಯಾಚಾರ, ಕೊಲೆ ಪ್ರಕರಣಗಳು ನಡೆದಿವೆ. ಆದರೆ ಈ ಎಲ್ಲಾ ಪ್ರಕರಣಗಳು ಮುನ್ನೆಲೆಗೆ ಬಂದಿದ್ದು, ಸೌಜನ್ಯ ಅತ್ಯಾಚಾರ, ಕೊಲೆ ನಡೆದಾಗ. 2012ರ ಅಕ್ಟೋಬರ್ 9ರಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಧರ್ಮಸ್ಥಳದ ಬಳಿ 17 ವರ್ಷದ ಕಾಲೇಜು ವಿದ್ಯಾರ್ಥಿನಿ ಸೌಜನ್ಯಳನ್ನು ಅಪಹರಿಸಿ ಅತ್ಯಾಚಾರ ಮಾಡಲಾಗಿತ್ತು. ಮರುದಿನ ಆಕೆಯ ಮೃತದೇಹ ನೇತ್ರಾವತಿ ಸ್ನಾನಘಟ್ಟದ ಬಳಿಯ ಪೊದೆಯಲ್ಲಿ ಸಿಕ್ಕಿತ್ತು. ದಕ್ಷಿಣ ಕನ್ನಡ ಜಿಲ್ಲೆ, ಕರ್ನಾಟಕ ರಾಜ್ಯ ಮಾತ್ರವಲ್ಲದೆ ದೇಶದ ಹಲವು ಭಾಗಗಳಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಈ ವೇಳೆಯೇ ಧರ್ಮಸ್ಥಳ ವ್ಯಾಪ್ತಿಯಲ್ಲಿ ನಡೆದಿರುವ ಹಲವು ಕೊಲೆ, ನಿಗೂಢ ಸಾವು, ನಾಪತ್ತೆ ಪ್ರಕರಣಗಳು ಮುನ್ನೆಲೆಗೆ ಬಂದಿತ್ತು.

ಸೌಜನ್ಯ ಪ್ರಕರಣವನ್ನು 2013ರಲ್ಲಿ ಸಿಬಿಐಗೆ ವರ್ಗಾಯಿಸಲಾಗಿತ್ತು. ನಂತರ 2015ರಲ್ಲಿ ಮಂಗಳೂರಿನಿಂದ ಬೆಂಗಳೂರಿನ ವಿಶೇಷ ಸಿಬಿಐ ನ್ಯಾಯಾಲಯಕ್ಕೆ ವರ್ಗಾಯಿಸಲಾಗಿತ್ತು. ಈ ನಡುವೆ ಪ್ರಕರಣದ ಸಾಕ್ಷಿಯಾಗಿದ್ದ ರವಿ ಪೂಜಾರಿ ಎಂಬುವವರು ನಿಗೂಢವಾಗಿ ಸಾವನ್ನಪ್ಪಿದ್ದರು. ಸೌಜನ್ಯ ಅತ್ಯಾಚಾರ ಕೊಲೆ ನಡೆದ ಎರಡು ದಿನದಲ್ಲೇ ಸಂತೋಷ್ ರಾವ್ ಎಂಬಾತನ ಬಂಧನ ಮಾಡಲಾಗಿತ್ತು. ಸುಮಾರು 11 ವರ್ಷಗಳ ಕಾಲ ಸಂತೋಷ್ ಜೈಲಿನಲ್ಲಿದ್ದರು. ಆದರೆ ಪ್ರಕರಣದ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಿ.ಬಿ ಸಂತೋಷ್‌ ಅವರು 2023ರಲ್ಲಿ ಸಂತೋಷ ರಾವ್‌ ಪ್ರಕರಣದಲ್ಲಿ ನಿರ್ದೋಷಿ ಎಂದು ಘೋಷಿಸಿದ್ದರು. ಇವಿಷ್ಟು ನಡೆಯುತ್ತಿದ್ದಂತೆ ನಿಜಕ್ಕೂ ಈ ನೀಚ ಕೃತ್ಯವನ್ನು ಎಸಗಿದವರು ಯಾರು ಎಂಬ ಪ್ರಶ್ನೆ ಪ್ರಶ್ನೆಯಾಗಿಯೇ ಉಳಿದಿದೆ. ಅಷ್ಟರಲ್ಲೇ ಎಲ್ಲ ಸಾಕ್ಷಿ, ಸಾಕ್ಷ್ಯಗಳ ನಾಶವೂ ನಡೆದಿದೆ!

ಇದಾದ ಬಳಿಕ ಸೌಜನ್ಯ ಕುಟುಂಬ ಪ್ರಕರಣದ ಮರುತನಿಖೆಗೆ ಕೋರಿ ಹೈಕೋರ್ಟ್‌ ಮೊರೆ ಹೋಯಿತು. ಒಂದು ವರ್ಷಗಳ ಕಾಲ ದೀರ್ಘ ಹೋರಾಟ ನಡೆಸಿತು. ಆದರೆ 2024ರ ಸೆಪ್ಟೆಂಬರ್‌ನಲ್ಲಿ ಹೈಕೋರ್ಟ್‌ ಈ ಪ್ರಕರಣದ ಮರುತನಿಖೆ ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ವಜಾಗೊಳಿಸಿತು. ಇತ್ತ ಸಾಕ್ಷ್ಯಗಳೆಲ್ಲವೂ ನಾಶ, ಅತ್ತ ನ್ಯಾಯಾಂಗದ ಮೇಲಿದ್ದ ಭರವಸೆ ಕುಂದುತ್ತಿದ್ದಂತೆ ನ್ಯಾಯದ ನಿರೀಕ್ಷೆಯೂ ಬತ್ತಿಹೋಯಿತು. ಇಷ್ಟರಲ್ಲೇ ಸೌಜನ್ಯ ತಾಯಿ ಕುಸುಮಾವತಿ ಅವರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದು, 74 ಅಸಹಜ ಸಾವು ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ಎಫ್‌ಐಆರ್ ದಾಖಲಿಸಬೇಕು ಮತ್ತು ಎಸ್‌ಐಟಿ ತನಿಖೆಗೆ ಸೂಚಿಸಬೇಕು ಎಂದು ಮನವಿ ಮಾಡಿದ್ದಾರೆ. ಈ ವಿಚಾರದಲ್ಲಿ ಸದ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ನೀಡಿದೆ. ಇದೀಗ ಕಳಪೆ, ದೋಷಪೂರಿತ ತನಿಖೆ ನಡೆಸಿರುವವರ ವಿರುದ್ಧ ಕ್ರಮಕ್ಕೆ ಸಂಬಂಧಿಸಿದಂತೆ ನೋಟಿಸ್ ಕೂಡಾ ನೀಡಲಾಗಿದೆ.

ಇವೆಲ್ಲವುದರ ನಡುವೆ ಉಳಿದೆಲ್ಲಾ ಪ್ರಕರಣಗಳ ತನಿಖೆಯ ಬೇಡಿಕೆಯೂ ನಿರಂತರವಾಗಿ ಕೇಳಿಬರುತ್ತಿದೆ. ಕೊಂದವರು ಯಾರು? ಆಂದೋಲನ ಸೇರಿದಂತೆ ಹಲವು ಮಹಿಳಾಪರ ಹೋರಾಟಗಾರರ ಸಮಿತಿಗಳು, ಸಾಮಾಜಿಕ ಹೋರಾಟಗಾರರು ‘ಬುರುಡೆ’ ವಿಚಾರದಲ್ಲಿ ಹಾದಿ ತಪ್ಪಿದ್ದ ಪ್ರಕರಣದ ತನಿಖೆಯನ್ನು ಸರಿ ದಾರಿಗೆ ತರುವಲ್ಲಿ ಶ್ರಮಿಸುತ್ತಿದ್ದಾರೆ. ಈ ಎಲ್ಲಾ ಹೋರಾಟಗಳು ಸೌಜನ್ಯ ಅತ್ಯಾಚಾರ, ಕೊಲೆ ನಡೆದು 13 ವರ್ಷಗಳಾಗಿದ್ದರೂ ನ್ಯಾಯದ ಭರವಸೆಯನ್ನು ಇಂದಿಗೂ ಹಸನಾಗಿರಿಸಿದೆ.

WhatsApp Image 2025 11 17 at 4.20.34 PM
+ posts

ಪತ್ರಕರ್ತೆ, 2019ರಿಂದ ಪತ್ರಿಕೋದ್ಯಮವೇ ಬದುಕು. ರಾಜಕೀಯ, ಬ್ಯುಜಿನೆಸ್‌ ಸುದ್ದಿಗಳಲ್ಲಿ ಆಸಕ್ತಿ.

ಪೋಸ್ಟ್ ಹಂಚಿಕೊಳ್ಳಿ:

ಮಯೂರಿ ಬೋಳಾರ್
ಮಯೂರಿ ಬೋಳಾರ್
ಪತ್ರಕರ್ತೆ, 2019ರಿಂದ ಪತ್ರಿಕೋದ್ಯಮವೇ ಬದುಕು. ರಾಜಕೀಯ, ಬ್ಯುಜಿನೆಸ್‌ ಸುದ್ದಿಗಳಲ್ಲಿ ಆಸಕ್ತಿ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...