ಸದನಕ್ಕೆ ತಪ್ಪು ಮಾಹಿತಿ ; ಕೋಲು ಕೊಟ್ಟು ಹೊಡೆಸಿಕೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Date:

ಕುಟುಂಬದ ನಿರ್ವಹಣೆಯಲ್ಲಿ ಕುಟುಂಬದ ಯಜಮಾನಿಯ ಪಾತ್ರ ಅತ್ಯಂತ ಪ್ರಮುಖವಾಗಿದ್ದು, ಯಜಮಾನಿಯು ಆರ್ಥಿಕವಾಗಿ ಸಬಲೀಕರಣಗೊಂಡಲ್ಲಿ ಕುಟುಂಬದ ನಿರ್ವಹಣೆಯು ಉತ್ತಮ ಗುಣಮಟ್ಟದಲ್ಲಿರುತ್ತದೆ. ಈ ಸದುದ್ದೇಶದಿಂದ ಗೃಹಲಕ್ಷ್ಮೀ ಯೋಜನೆ ಜಾರಿಗೆ ತರಲಾಗಿದೆ.  ಯೋಜನೆಯನ್ನು ಸಫಲ ಮಾಡುವ ನಿಟ್ಟಿನತ್ತ ಕಾರ್ಯೋನ್ಮುಖವಾಗಬೇಕಿದೆ.

ಸಂವಿಧಾನದ ಆಶಯದಂತೆ ದೇಶದ ಜನಸಾಮಾನ್ಯರಿಗೆ ಸಮಾನತೆಯನ್ನು ಕಲ್ಪಿಸುವ ದೃಷ್ಟಿಯಿಂದ ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ರೂಪಿಸಿ, ಜಾರಿಗೆ ತಂದಿದೆ. ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮೀ, ಶಕ್ತಿ ಯೋಜನೆ, ಅನ್ನಭಾಗ್ಯ, ಗೃಹಜ್ಯೋತಿ ಹಾಗೂ ಯುವನಿಧಿ ಯೋಜನೆಗಳು ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ಆರ್ಥಿಕ ಬೆಂಬಲ ನೀಡಿದೆ. ಶಕ್ತಿ ಯೋಜನೆಯೂ ಉಚಿತ ಬಸ್ ಪ್ರಯಾಣದ ಮೂಲಕ ಗ್ರಾಮೀಣ ಭಾಗದ ಸಾವಿರಾರು ಕೂಲಿ ಮಹಿಳೆಯರ ಜೀವನದಲ್ಲಿ ಮಹತ್ತರ ಬದಲಾವಣೆ ತರುತ್ತಿದ್ದರೇ, ಗೃಹಲಕ್ಷ್ಮೀ ಯೋಜನೆಯೂ ಮಹಿಳೆಯರನ್ನ ಆರ್ಥಿಕ ಸಬಲೀಕರಣದತ್ತ ಕೊಂಡೊಯ್ಯುತ್ತಿದೆ.

ಈ ಯೋಜನೆಗಳು ಬಡವರಿಗೆ ಆರ್ಥಿಕ, ಸಾಮಾಜಿಕ ಶಕ್ತಿ ತುಂಬಲು ಸಾಧ್ಯವಾಗುತ್ತದೆ. ದಲಿತರು, ಹಿಂದುಳಿದವರು, ಮಹಿಳೆಯರಿಗೆ ಅನುಕೂಲವಾಗಲಿದೆ. ಶಕ್ತಿ ಯೋಜನೆ, ಅನ್ನಭಾಗ್ಯ, ಗೃಹ ಜ್ಯೋತಿ, ಗೃಹಲಕ್ಷ್ಮೀ ಯೋಜನೆಗಳು ಮಹಿಳಾ ಸಬಲೀಕರಣಕ್ಕೆ ಪೂರಕವಾಗಿವೆ. ಈ ಯೋಜನೆಯಿಂದ ರಾಜ್ಯದ ಪ್ರತಿ ಕುಟುಂಬದಲ್ಲಿನ ಯಜಮಾನಿ ಮಹಿಳೆ ಪ್ರತಿ ತಿಂಗಳಿಗೆ 2 ಸಾವಿರಗಳಂತೆ ವರ್ಷಕ್ಕೆ 24 ಸಾವಿರ ರೂಪಾಯಿಗಳನ್ನು ಪಡೆಯಲಿದ್ದಾರೆ. ರಾಜ್ಯದ 1.28 ಕೋಟಿ ಮಹಿಳೆಯರ ಕುಟುಂಬಕ್ಕೆ ಇದರ ಪ್ರಯೋಜನ ದೊರಕಲಿದೆ.

ಪಂಚ ಗ್ಯಾರಂಟಿಗಳು ರಾಜ್ಯದ ಆರ್ಥಿಕತೆಯ ಮೇಲೆ ಪರಿಣಾಮ ಬೀರುತ್ತದೆ. ರಾಜ್ಯ ಆರ್ಥಿಕ ಸಂಕಷ್ಟಕ್ಕೆ ತಲುಪುತ್ತದೆ ಎಂದು ವಿರೋಧಿಗಳು ಪದೇಪದೆ ಈ ಮಾತುಗಳನ್ನು ಹೇಳಿದ್ದರು. ಇನ್ನು ಕೆಲವರು ಇದನ್ನು ಸಹಿಸಲಾರದೆ ಅತ್ತೆ-ಸೊಸೆ, ಅತ್ತಿಗೆ- ನಾದಿನಿ ಜಗಳ ಹುಟ್ಟು ಹಾಕುವ ಯೋಜನೆ ಇದು ಎಂದು ವ್ಯಂಗ್ಯವಾಡಿದ್ದರು. ಆದರೆ, ಇತ್ತೀಚಿನ ದಿನಗಳಲ್ಲಿ ಮನೆ ಯಜಮಾನಿ ಖಾತೆಗೆ 2000 ಹಣ ನೀಡುವ ವಿಚಾರದಲ್ಲಿ ಒಂದಲ್ಲ ಒಂದು ರೀತಿಯಲ್ಲಿ ಗೊಂದಲಗಳು ಉಂಟಾಗಿವೆ. ಸರ್ಕಾರ ನುಡಿದಂತೆ ನಡೆಯುತ್ತಿಲ್ಲ, ಮಹಿಳೆಯರಿಗೆ ಪ್ರತಿ ತಿಂಗಳು ಹಣ ಜಮಾ ಆಗುತ್ತಿಲ್ಲ ಎಂದು ಮಹಿಳೆಯರು ಹಾಗೂ ವಿಪಕ್ಷಗಳು ಆಕ್ರೋಶ ಹೊರ ಹಾಕಿವೆ. ಬೆಳಗಾವಿಯಲ್ಲಿ ನಡೆಯುತ್ತಿರುವ ಸದನದಲ್ಲಿಯೂ ಕೂಡ ಈ ಬಗ್ಗೆ ಚರ್ಚೆ ನಡೆದಿದೆ. ಈ ಚರ್ಚೆಯಲ್ಲಿ ಸರ್ಕಾರವೇ ವಿಪಕ್ಷಗಳ ಕೈಗೆ ಕೋಲು ಕೊಟ್ಟು ಹೊಡೆಸಿಕೊಂಡ ಪ್ರಸಂಗ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚಳಿಗಾಲದ ವಿಧಾನಮಂಡಲ ಅಧಿವೇಶನದಲ್ಲಿ ಡಿಸೆಂಬರ್ 9ರಂದು ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಅವರು, “5 ತಿಂಗಳ ಗೃಹ ಲಕ್ಷ್ಮಿ ಹಣ ಬಂದಿಲ್ಲ. ಫೆಬ್ರವರಿ, ಮಾರ್ಚ್, ಸೆಪ್ಟೆಂಬರ್, ಅಕ್ಟೋಬರ್, ನವೆಂಬರ್ ತಿಂಗಳ ಗೃಹ ಲಕ್ಷ್ಮಿ ಹಣ ಯಾವಾಗ ಬರುತ್ತದೆ” ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಪ್ರಶ್ನೆ ಮಾಡಿದ್ದರು.

gruhalakshmi scheme news 1693366403

ಮಾಹಿತಿ ನೀಡಿದ ಸಚಿವೆ, “ರಾಜ್ಯ ಸರ್ಕಾರದಿಂದ ಆಗಸ್ಟ್-2025 ವರೆಗಿನ ಗೃಹಲಕ್ಷ್ಮಿ ಕಂತುಗಳನ್ನು ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗಿದೆ. ಯೋಜನೆ ಆರಂಭವಾದಾಗಿನಿಂದ ಯೋಜನೆಯಡಿ 1.24 ಕೋಟಿ ಮಹಿಳೆಯರಿಗೆ ರೂ.54,000 ಕೋಟಿ ಗೃಹಲಕ್ಷ್ಮಿ ಹಣ ಸಂದಾಯವಾಗಿದೆ. ಒಟ್ಟು 23 ಕಂತುಗಳಲ್ಲಿ ನೋಂದಣಿಯಾದ ಪ್ರತಿ ಕುಟುಂಬದ ಯಜಮಾನಿಗೆ ತಲಾ ರೂ.46,000 ಲಭಿಸಿದೆ” ಎಂದಿದ್ದರು.

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಡಿ.17ರಂದು ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು ಸಚಿವರ ಕ್ಷಮೆಯಾಚನೆಗೆ ಕಾರಣವಾಯಿತು.

ವಿಧಾನಸಭೆ ಕಲಾಪ ಆರಂಭಗೊಳ್ಳುತ್ತಿದ್ದಂತೆ ವಿಪಕ್ಷ ನಾಯಕ ಆರ್. ಅಶೋಕ್, ಮೂರು ದಿನಗಳಿಂದ ಸಚಿವರು ಸದನಕ್ಕೆ ಬಂದಿಲ್ಲ. ನಮ್ಮ ಪ್ರಸ್ತಾಪಕ್ಕೆ ಉತ್ತರವನ್ನೂ ನೀಡಿಲ್ಲ. ಕೂಡಲೇ ಅವರನ್ನು ಸದನಕ್ಕೆ ಕರೆಸಿ ಉತ್ತರ ಕೊಡಿಸಬೇಕು. ಅಲ್ಲದೆ, ತಪ್ಪು ಉತ್ತರ ನೀಡಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ರಾಜ್ಯದ ಜನತೆಯ ಕ್ಷಮೆ ಕೋರಬೇಕು ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ರಾಜಸ್ಥಾನ | ಎಥನಾಲ್ ಸ್ಥಾವರದ ವಿರುದ್ಧ ರೈತರ ಮಹಾಪಂಚಾಯತ್‌ ಸಮರ

ಸಚಿವರ ಉತ್ತರ ಮತ್ತು ಕ್ಷಮೆಯಾಚನೆಗೆ ಆಗ್ರಹಿಸಿ ವಿಪಕ್ಷ ಸದಸ್ಯರು ಸದನದ ವೇಳೆ ಧರಣಿ ನಡೆಸಿದರು. ಸ್ಪೀಕರ್ ಮನವಿಗೆ ಸ್ಪಂದಿಸಿದ ವಿಪಕ್ಷ ಸದಸ್ಯರು ಧರಣಿ ಹಿಂಪಡೆದರು.

ನಂತರ ಉತ್ತರ ನೀಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, “ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಹಣ ಬಂದಿಲ್ಲ ಎಂದು ಬಿಜೆಪಿಯ ಮಹೇಶ್ ಟೆಂಗಿನಕಾಯಿ ತಿಳಿಸಿದ್ದಾರೆ. ಆದರೆ, ರಾಜ್ಯದ 1.26 ಕೋಟಿ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಒಟ್ಟು 52,416 ಕೋಟಿ ರೂ.ಗಳನ್ನು ಒಟ್ಟು 23 ಕಂತುಗಳಲ್ಲಿ ಪ್ರತಿ ಮನೆಗೆ ಈವರೆಗೆ 46 ಸಾವಿರ ರೂ.ಗಳನ್ನು ಪಾವತಿಸಲಾಗಿದೆ. ಆಗಸ್ಟ್ ತಿಂಗಳವರೆಗೆ ಹಣ ಪಾವತಿಸಲಾಗಿದೆ” ಎಂದಿದ್ದಾರೆ.

“ನಾನು ಮೊದಲ ಬಾರಿಗೆ ಸಚಿವೆಯಾಗಿ ಪೂಜ್ಯ ಭಾವನೆಯಿಂದ ಕೆಲಸ ಮಾಡುತ್ತಿದ್ದೇನೆ. ಆಗಸ್ಟ್‌ ತಿಂಗಳ ವರೆಗೆ ಹಣ ಜಮೆಯಾಗಿದೆ ಎಂದು ಅಧಿಕಾರಿಗಳು ಮೊದಲು ಮಾಹಿತಿ ನೀಡಿದ್ದರು. ಆದರೆ, ಈ ಬಗ್ಗೆ ಪರಿಶೀಲಿಸಿದಾಗ ಫೆಬ್ರವರಿ ಮತ್ತು ಮಾರ್ಚ್ ತಿಂಗಳಿನ ಹಣ ಜಮೆಯಾಗಿಲ್ಲ ಎಂಬುದು ತಿಳಿದುಬಂದಿದೆ. ಎರಡು ತಿಂಗಳ ಹಣ ಫಲಾನುಭವಿಗಳ ಖಾತೆಗೆ ಜಮೆಯಾಗಿಲ್ಲ. ಸದನಕ್ಕೆ ತಪ್ಪು ಮಾಹಿತಿ ನೀಡಬೇಕು ಎಂಬ ಉದ್ದೇಶ ನನ್ನದಾಗಿರಲಿಲ್ಲ. ಆದರೆ, ನಮ್ಮಿಂದ ತಪ್ಪಾಗಿದೆ” ಎಂದು ಸದನಕ್ಕೆ ಕ್ಷಮೆ ಕೋರಿದರು.

gruhalakshmi7 1693135103

“ಸಿಎಂ ಸಿದ್ದರಾಮಯ್ಯ ಹಾಗೂ ಆರ್ಥಿಕ ಇಲಾಖೆ ಅಧಿಕಾರಿಗಳ ಜತೆಗೆ ಈ ಕುರಿತು ಚರ್ಚೆ ಮಾಡಿ ಫೆಬ್ರುವರಿ ಮತ್ತು ಮಾರ್ಚ ತಿಂಗಳ ಹಣವನ್ನು ಶೀಘ್ರವೇ ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗುವುದು” ಎಂದು ತಿಳಿಸಿದ್ದಾರೆ. “ನನ್ನ ಮಾತಿನಿಂದ ಯಾರಿಗಾದರೂ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುವೆ” ಎಂದು ತಿಳಿಸಿದ್ದಾರೆ.

ಪಂಚ ಗ್ಯಾರಂಟಿಗಳಲ್ಲಿ ಶಕ್ತಿ ಯೋಜನೆ, ಗೃಹ ಜ್ಯೋತಿ, ಅನ್ನಭಾಗ್ಯ ಅನುಷ್ಠಾನಗೊಳಿಸುವ ಮೂಲಕ ಜನರ ಮನಗೆದ್ದಿದ್ದ ಸರ್ಕಾರ ಗೃಹಲಕ್ಷ್ಮಿ ಯೋಜನೆಯನ್ನು 2023ರ ಆಗಸ್ಟ್‌ 16ರಂದು ಜಾರಿಗೊಳಿಸಿತ್ತು. ಪ್ರಿಯದರ್ಶಿನಿ ಇಂದಿರಾಗಾಂಧಿಯವರು ಬ್ಯಾಂಕುಗಳನ್ನು ರಾಷ್ಟ್ರೀಕರಣ ಮಾಡಿ ದೇಶದ ಆರ್ಥಿಕತೆಗೆ ಭದ್ರ ಬುನಾದಿ ಹಾಕಿದ ದಿನದಂದೇ ಗೃಹಲಕ್ಷ್ಮಿ ಕಾರ್ಯಕ್ರಮಕ್ಕೆ ಚಾಲನೆ ದೊರೆತ್ತಿದ್ದು ವಿಶೇಷ. ಇಡೀ ದೇಶದಲ್ಲಿ ಗೃಹಲಕ್ಷ್ಮಿ ಯೋಜನೆಯನ್ನು ಜಾರಿ ಮಾಡಿದ ಏಕೈಕ ರಾಜ್ಯ ಎಂದರೆ, ಅದು ಕರ್ನಾಟಕ ರಾಜ್ಯ . 30 ಸಾವಿರ ಕೋಟಿಯ ಒಂದೇ ಯೋಜನೆಯಾಗಿರುವ ಈ ಗೃಹಲಕ್ಷ್ಮೀ 28 ಲಕ್ಷ ಕುಟುಂಬಗಳನ್ನು ತಲುಪುತ್ತಿದೆ.

ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣವನ್ಜು ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರ ಅನೇಕ ಯೋಜನೆಗಳನ್ನು ಹಮ್ಮಿಕೊಂಡಿದೆ. ಆ ಪೈಕಿ ಗೃಹಲಕ್ಷ್ಮಿ ಯೋಜನೆ ಮಹತ್ವದಾಗಿದೆ. ಕುಟುಂಬದ ನಿರ್ವಹಣೆಯಲ್ಲಿ ಕುಟುಂಬದ ಯಜಮಾನಿಯ ಪಾತ್ರ ಅತ್ಯಂತ ಪ್ರಮುಖವಾಗಿದ್ದು, ಯಜಮಾನಿಯು ಆರ್ಥಿಕವಾಗಿ ಸಬಲೀಕರಣಗೊಂಡಲ್ಲಿ ಕುಟುಂಬದ ನಿರ್ವಹಣೆಯು ಉತ್ತಮ ಗುಣಮಟ್ಟದಲ್ಲಿರುತ್ತದೆ. ಈ ಸದುದ್ದೇಶದಿಂದ ಗೃಹಲಕ್ಷ್ಮೀ ಯೋಜನೆ ಜಾರಿಗೆ ತರಲಾಗಿದೆ. ರಾಜ್ಯ ಸರ್ಕಾರ ಯಾವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತಂದಿದೆಯೋ ಆ ಯೋಜನೆಯನ್ನು ಸಫಲ ಮಾಡುವ ನಿಟ್ಟಿನತ್ತ ಕಾರ್ಯೋನ್ಮುಖವಾಗಬೇಕಿದೆ.

ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲ ಅಧಿವೇಶದಲ್ಲಿ ಗೃಹಲಕ್ಷ್ಮಿ ಯೋಜನೆಯ ಬಗ್ಗೆ ವಿಪಕ್ಷಗಳು ಭಾರೀ ಗದ್ದಲ ಎಬ್ಬಿಸಿರುವುದು ಮಹಿಳೆಯರ ಮೇಲಿನ ಕಾಳಜಿಯಿಂದಲ್ಲ, ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ಉದ್ದೇಶ ಅವರದ್ದು. ಆದರೆ, ಸಚಿವೆ ತಪ್ಪು ಮಾಹಿತಿ ನೀಡಿದ್ದು ವಿಪಕ್ಷಗಳ ಕೈಗೆ ಕೋಲು ಕೊಟ್ಟಂತಾಗಿದ್ದು ನಿಜ. ಸದನದಲ್ಲಿ ಹೊಡೆಸಿಕೊಂಡವರು ಇನ್ನಾದರೂ ಕಾಲ ಕಾಲಕ್ಕೆ ಸರಿಯಾಗಿ ಹಣ ಬಿಡುಗಡೆ ಮಾಡಿ ಮಹಿಳೆಯರ ನಂಬಿಕೆ ಉಳಿಸಬೇಕಿದೆ.

e057b508e9e1b164fadd3c3edb023f5214f4d0a6d12066a30e302f9e3b0f6f24?s=150&d=mp&r=g
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...