ಸರ್ಕಾರಿ ಶಾಲೆಗಳ ವಿಲೀನ ನೆಪದಲ್ಲಿ ಸರ್ಕಾರ ಲಾಭ ಮಾಡಿಕೊಡುತ್ತಿರುವುದು ಯಾರಿಗೆ?

Date:

ಈ ಹಿಂದೆ ಬಿಜೆಪಿ ಸರ್ಕಾರವಿದ್ದಾಗ ಸರ್ಕಾರಿ ಶಾಲೆಗಳ ವಿಲೀನವನ್ನು ವಿರೋಧಿಸಿದ್ದ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ತನ್ನ ವರಸೆ ಬದಲಾಯಿಸಿಕೊಂಡಿದೆ. ವಿದ್ಯಾರ್ಥಿಗಳ ಕೊರತೆ ನೆಪವೊಡ್ಡಿ ಸರ್ಕಾರಿ ಶಾಲೆಗಳ ವಿಲೀನ ಮಾಡಲು ಮುಂದಾಗಿರುವ ಸರ್ಕಾರ ಅದೇ ಶಾಲೆಗಳ ಅಭಿವೃದ್ಧಿಯತ್ತ ಗಮನ ಹರಿಸುವುದು ಉತ್ತಮವಲ್ಲವೇ? ಇದು ಕ್ರಮೇಣವಾಗಿ ಸಂಪೂರ್ಣಶಿಕ್ಷಣದ ಖಾಸಗೀಕರಣವಾಗಲು ಪ್ರತ್ಯಕ್ಷ-ಪರೋಕ್ಷವಾಗಿ ಬೆಂಬಲ ನೀಡಿದ್ದಂತೆ ಆಗುವುದಿಲ್ಲವೇ?

ಸದ್ಯ ರಾಜ್ಯ ಸರ್ಕಾರವು ಮಕ್ಕಳ ಹಾಜರಾತಿ ಕಡಿಮೆ ಇರುವ ಸರ್ಕಾರಿ ಶಾಲೆಗಳನ್ನು ಹತ್ತಿರದ ‘ಕರ್ನಾಟಕ ಪಬ್ಲಿಕ್ ಶಾಲೆ’ (KPS) ಅಥವಾ ಮ್ಯಾಗ್ನೆಟ್ ಶಾಲೆಗಳೊಂದಿಗೆ ವಿಲೀನಗೊಳಿಸುವ ಚಿಂತನೆ ನಡೆಸುತ್ತಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರೇ ಹೇಳುವಂತೆ ರಾಜ್ಯದಲ್ಲಿ ಸುಮಾರು ಆರು ಸಾವಿರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ತಲಾ ಒಂದರಂತೆ ಆರು ಸಾವಿರ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು (ಕೆಪಿಎಸ್‌) ತೆರೆಯಲಾಗುತ್ತದೆ. ಈ ಶಾಲೆಗಳಿಗೆ ಸಮೀಪದ ಐದಾರು ಶಾಲೆಗಳನ್ನು ವಿಲೀನಗೊಳಿಸುವ ಚಿಂತನೆ ನಡೆಸಲಾಗುತ್ತಿದೆ.

ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಹೊಂಗನೂರಿನ ಸರ್ಕಾರಿ ಶಾಲೆಗಳನ್ನು ಒಟ್ಟುಗೂಡಿಸಿ ಕರ್ನಾಟಕ ಪಬ್ಲಿಕ್‌ ಶಾಲೆಯಾಗಿ ಪರಿವರ್ತಿಸಲು ಈಗಾಗಲೇ ಶಿಕ್ಷಣ ಇಲಾಖೆ ಒಪ್ಪಿಗೆ ನೀಡಿದೆ. ಈ ಸಂಬಂಧ ಸುತ್ತೋಲೆಯನ್ನೂ ಹೊರಡಿಸಿದೆ. ಆದರೆ ಇದು ಪರೋಕ್ಷವಾಗಿ ಶಾಲೆಗಳನ್ನೇ ಮುಚ್ಚಿಸಿದಂತೆ ಎಂದು ಶಿಕ್ಷಣ ತಜ್ಞರುಗಳ ಆರೋಪವಾಗಿದ್ದು, ಸದ್ಯ ಸರ್ಕಾರದ ನಿಲುವಿನ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಇದನ್ನು ಓದಿದ್ದೀರಾ? ಖಾಸಗಿ ಪೆಡಂಭೂತದ ನಡುವೆ ನಲುಗುವ ಸರ್ಕಾರಿ ಶಾಲೆಗಳು; ಅಭಿವೃದ್ಧಿ ಪಡಿಸಬೇಕಾದ ಆಡಳಿತಕ್ಕಿಲ್ಲ ಹೊಣೆ!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸರ್ಕಾರವು ಶಿಕ್ಷಕರ ಕೊರತೆಯನ್ನು ನಿಭಾಯಿಸಲು, ಸರ್ಕಾರಿ ಶಾಲೆಗಳಲ್ಲಿ ಇಂಗ್ಲೀಷ್ ಶಿಕ್ಷಣವನ್ನು ನೀಡಲು, ರಾಷ್ಟ್ರೀಯ ಶಿಕ್ಷಣ ನೀತಿಗೆ ವಿರುದ್ಧವಾಗಿ ರಾಜ್ಯ ಶಿಕ್ಷಣ ನೀತಿಯನ್ನು ಜಾರಿಗೆ ತರುವ ಭಾಗವಾಗಿ ಈ ಕೆಪಿಎಸ್‌ ಶಾಲೆಗಳಿಗೆ ವಿಲೀನಗೊಳಿಸುವ ಪ್ರಕ್ರಿಯೆಯನ್ನು ನಡೆಸುತ್ತಿದೆ ಎಂಬುದು ಸರ್ಕಾರದ ವಾದ. ಆದರೆ ಈ ರೀತಿ ವಿಲೀನಗೊಳಿಸುವುದರಿಂದ ಗ್ರಾಮೀಣ ಭಾಗಗಳಲ್ಲಿ ದೂರದ ಶಾಲೆಗಳಿಗೆ ಹೋಗಲು ಮಕ್ಕಳಿಗೆ ಸಾಧ್ಯವಾಗುವುದಿಲ್ಲ. ಇದರಿಂದಾಗಿ ಹೆಚ್ಚಾಗಿ ಬಡ ಹೆಣ್ಣು ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಾರೆ. ಜತೆಗೆ ಖಾಸಗೀಕರಣಕ್ಕೆ ಸಹಾಯ ಮಾಡಿದಂತಾಗುತ್ತದೆ ಎಂಬುದು ಶಿಕ್ಷಣ ತಜ್ಞರುಗಳ ಆತಂಕ. ಆದರೆ ಇವೆಲ್ಲವುದರ ನಡುವೆ ಬಡವಾಗುವುದು, ನಲುಗುವುದು ಮಕ್ಕಳು-ಪೋಷಕರು, ಶಿಕ್ಷಕರು.

ಸರ್ಕಾರಿ ಶಾಲೆಯಲ್ಲಿ ಮಕ್ಕಳ ನೇಮಕಾತಿ ಇಳಿಕೆ

ಕಳೆದ ವರ್ಷ ‘ಪ್ರಥಮ’ ಎಂಬ ಎನ್‌ಜಿಒ ನಡೆಸಿದ ಸಮೀಕ್ಷೆಯ ‘ವಾರ್ಷಿಕ ಶೈಕ್ಷಣಿಕ ಸ್ಥಿತಿಗತಿ ವರದಿಯನ್ನು (ಎಎಸ್‌ಇಆರ್)’ ಬಿಡುಗಡೆ ಮಾಡಲಾಗಿದೆ. ಈ ವರದಿ ಪ್ರಕಾರ ಸರ್ಕಾರಿ ಶಾಲೆಗಳಲ್ಲಿ 6-14 ವರ್ಷ ವಯೋಮಾನ ಮಕ್ಕಳ ದಾಖಲಾತಿ ಪ್ರಮಾಣ ಮತ್ತೆ ಇಳಿಕೆಯಾಗಿದೆ. ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ ಆರ್ಥಿಕ ಸಂಕಷ್ಟ ಉಂಟಾಗುತ್ತಿದ್ದಂತೆ ಹಲವು ಪೋಷಕರು ಸರ್ಕಾರಿ ಶಾಲೆಗಳತ್ತ ವಾಲಿದ್ದರು. ಆದರೆ ಪರಿಸ್ಥಿತಿ ಕೊಂಚ ಸುಧಾರಿಸುತ್ತಿದ್ದಂತೆ ಮತ್ತೆ ಖಾಸಗಿ ಶಿಕ್ಷಣ ಸಂಸ್ಥೆಗಳತ್ತ ಮುಖ ಮಾಡಿದ್ದಾರೆ.

ಸರ್ಕಾರಿ ಶಾಲೆಗಳಲ್ಲಿ 6-14 ವರ್ಷ ವಯಸ್ಸಿನ ಮಕ್ಕಳ ದಾಖಲಾತಿ ಪ್ರಮಾಣವು 2018ರಲ್ಲಿ ಶೇ. 65.6ರಷ್ಟಿತ್ತು. ಕೋವಿಡ್‌ ಸಮಯದ ನಂತರ, 2022ರಲ್ಲಿ ಬರೋಬ್ಬರಿ 72.9%ಗೆ ಜಿಗಿತ ಕಂಡಿತ್ತು. ಆದರೆ, 2024ರಲ್ಲಿ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಪ್ರಮಾಣ ಮತ್ತೆ 66.8%ಗೆ ಕುಸಿದಿದೆ. ಅಂದರೆ ಮತ್ತೆ ಕೋವಿಡ್ ಪೂರ್ವದ ಅವಧಿಗೆ ಇಳಿದಿದೆ. 2022ರ ವರದಿ ಪ್ರಕಾರ ರಾಜ್ಯದಲ್ಲಿ ಒಟ್ಟು 49,679 ಸರ್ಕಾರಿ ಶಾಲೆಗಳಿವೆ. ಆದರೆ 2006ರಲ್ಲಿ ಒಟ್ಟು 54,529 ಪ್ರಾಥಮಿಕ ಶಾಲೆಗಳು ಮತ್ತು 9,499 ಪ್ರೌಢಶಾಲೆಗಳು ಇದ್ದವು. 2012-13 ಮತ್ತು 2021-22 ಶೈಕ್ಷಣಿಕ ವರ್ಷಗಳ ನಡುವೆ, ಸರ್ಕಾರಿ ಪ್ರಾಥಮಿಕ ಶಾಲೆಗಳ ಸಂಖ್ಯೆಯು 22,897ರಿಂದ 20,903ಕ್ಕೆ ಇಳಿದಿದೆ. ಅಂದರೆ 2,000 ರಷ್ಟು ಕಡಿಮೆಯಾಗಿದೆ

ಈ ಎಲ್ಲಾ ಬೆಳವಣಿಗೆ ನಡುವೆ ಸದ್ಯ ಸರ್ಕಾರ ಸರ್ಕಾರಿ ಶಾಲೆಗಳ ವಿಲೀನದ ಚಿಂತನೆ ನಡೆಸುತ್ತಿದೆ. ಈ ಬಗ್ಗೆ ಈ ದಿನ.ಕಾಮ್‌ಗೆ ಪ್ರತಿಕ್ರಿಯಿಸಿದ ಶಿಕ್ಷಣ ತಜ್ಞ ಶ್ರೀಪಾದ ಭಟ್, “ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಕಡಿಮೆಯಿದೆ, ಆದ್ದರಿಂದ 50ಕ್ಕಿಂತ ಕಡಿಮೆ ಮಕ್ಕಳಿರುವ ಶಾಲೆಗಳನ್ನು ವಿಲೀನಗೊಳಿಸುವುದಾಗಿ ಎಂದು ಸರ್ಕಾರ ಹೇಳುತ್ತಿದೆ. ಆದರೆ ಚನ್ನಪಟ್ಟಣ ತಾಲ್ಲೂಕು ಹೊಂಗನೂರು ಭಾಗದಲ್ಲಿ 80-100 ವಿದ್ಯಾರ್ಥಿಗಳು ಇರುವ ಶಾಲೆಗಳನ್ನೂ ವಿಲೀನಗೊಳಿಸುತ್ತಿದ್ದಾರೆ. ಇದು ಸಂಪೂರ್ಣವಾಗಿ ಗೊಂದಲದಿಂದ ಕೂಡಿದ ನಿರ್ಧಾರ” ಎಂದು ಟೀಕಿಸಿದ್ದಾರೆ.

“ಶಾಲೆಯಲ್ಲಿ ಮಕ್ಕಳ ಪ್ರಮಾಣ ಯಾಕೆ ಕಡಿಮೆಯಾಗುತ್ತಿದೆ ಎಂದು ಯಾರೂ ಹೇಳುತ್ತಿಲ್ಲ. ಯಾವ ಪ್ರದೇಶದಲ್ಲಿ ಸರ್ಕಾರಿ ಶಾಲೆಗೆ ಕಡಿಮೆ ದಾಖಲಾಗಿಯಾಗುತ್ತಿದೆಯೋ ಅಲ್ಲಿನ ಸುತ್ತಮುತ್ತಲಿನ ಸ್ಥಿತಿಗತಿ ಹೇಗಿದೆ ಎಂಬ ಪರಿಶೀಲನೆ ನಡೆಸುತ್ತಿಲ್ಲ. ಅಲ್ಲಿ ಖಾಸಗಿ ಶಾಲೆ ಹೆಚ್ಚಾಗಿದೆಯೇ ಎಂಬ ಬಗ್ಗೆಯೂ ಯೋಚಿಸುತ್ತಿಲ್ಲ. ಮಕ್ಕಳು ಶಾಲೆಗೆ ದಾಖಲಾಗದಿರಲು ಸಾಮಾಜಿಕ ಕಾರಣ, ಬಡತನ, ಮೊದಲಾದ ಕಾರಣಗಳಿರುತ್ತದೆ. ಶಾಲೆಗಳಲ್ಲಿ ಆಗುವ ದೌರ್ಜನ್ಯ, ತಾರತಮ್ಯದಿಂದಾಗಿಯೂ ಮಕ್ಕಳು ಸರ್ಕಾರಿ ಶಾಲೆಗಳಿಂದ ದೂರ ಉಳಿಯುತ್ತಾರೆ” ಎಂದು ಅಭಿಪ್ರಾಯಿಸಿದ್ದಾರೆ.

ಇನ್ನು “ಹಲವು ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರು ಇರಲ್ಲ. ಶಿಕ್ಷಕರಿದ್ದರೂ ಸರಿಯಾಗಿ ತರಗತಿ ನಡೆಸುತ್ತಿರುವುದಿಲ್ಲ. ಒಬ್ಬರೇ ಅಧ್ಯಾಪಕರು ಇರುವ ಹಲವು ಶಾಲೆಗಳಿವೆ. ಹೀಗೆ ನೂರಾರು ಕಾರಣಗಳು ಇರುತ್ತದೆ. ಅವೆಲ್ಲವುದಕ್ಕೂ ಪರಿಹಾರ ಹುಡುಕುವುದನ್ನು ಬಿಟ್ಟು ಕರ್ನಾಟಕ ಪಬ್ಲಿಕ್ ಶಾಲೆಗಳ (ಕೆಪಿಎಸ್) ಹೆಸರಲ್ಲಿ ಶಾಲೆಗಳನ್ನು ವಿಲೀನಗೊಳಿಸುತ್ತಿದ್ದಾರೆ. ಸರ್ಕಾರ ಮೊದಲು ಶಿಕ್ಷಕರ ನೇಮಕಾತಿ ಮಾಡಲಿ, ಶಾಲೆಗಳಲ್ಲಿ ಮೂಲಭೂತ ಸೌಕರ್ಯವನ್ನು ಒದಗಿಸಲಿ. ಮುಖ್ಯವಾಗಿ ಸರ್ಕಾರಿ ಶಾಲೆಯತ್ತ ಮಕ್ಕಳು ಬರದಿರಲು ಕಾರಣವೇನೆಂದು ಸರ್ಕಾರ ಪರಿಶೀಲಿಸಲಿ” ಎಂದು ಶ್ರೀಪಾದ ಭಟ್ ಆಗ್ರಹಿಸಿದರು.

ಇದನ್ನು ಓದಿದ್ದೀರಾ? ಧಾರವಾಡ | ಸರ್ಕಾರಿ ಶಾಲೆಗಳ ವಿಲೀನ ಪ್ರಸ್ತಾಪವನ್ನು ಸರ್ಕಾರ ಕೈಬಿಡಬೇಕು; ಎಐಡಿಎಸ್‌ಒ ಆಗ್ರಹ

“ಸದ್ಯ ಸರ್ಕಾರ ಕೆಪಿಎಸ್ ಆರಂಭಿಸುವ ಘೋಷಣೆ ಮಾಡಿದೆ. ಆದರೆ ಈ ಶಾಲೆಗಳಲ್ಲಿ ಇಂಗ್ಲಿಷ್ ಶಿಕ್ಷಣ ನೀಡಲು ಶಿಕ್ಷಕರಿಗೆ ತರಬೇತಿ ನೀಡಲಾಗುತ್ತಿಲ್ಲ. ಕೆಲವೆಡೆ ಇಂಗ್ಲಿಷ್ ಪುಸ್ತಕಗಳೂ ಇಲ್ಲ. ಸರ್ಕಾರದ ಇಂಗ್ಲಿಷ್ ಮಾಧ್ಯಮಗಳಲ್ಲಿಯೂ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯುತ್ತಿಲ್ಲ. ಮಕ್ಕಳಿಗೆ ಅನ್ಯಾಯವಾಗುತ್ತಿದೆ. ಒಟ್ಟಾರೆಯಾಗಿ ಗೊಂದಲ, ದ್ವಂದ್ವ ಪರಿಸ್ಥಿತಿಯನ್ನು ನಿರ್ಮಿಸಲಾಗುತ್ತಿದೆ” ಎಂದು ದೂರಿದರು.

ಇನ್ನು ‘ಸರ್ಕಾರ ಪರೋಕ್ಷವಾಗಿ ಖಾಸಗಿ ಸಂಸ್ಥೆಗಳಿಗೆ ಬೆಂಬಲ ನೀಡುತ್ತಿದೆ ಅನಿಸುತ್ತದೆಯೇ’ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ಸದ್ಯ ಖಾಸಗಿ ಸಂಸ್ಥೆಗಳ ಸಹಾಯದಿಂದ ಕೆಪಿಎಸ್ ಮಾದರಿಯ ನಿರ್ಮಾಣಕ್ಕೆ ಸರ್ಕಾರ ಮುಂದಾಗುತ್ತಿದೆ. ಆದರೆ ಖಾಸಗಿ ಸಂಸ್ಥೆಗಳ ಬಳಕೆ ಯಾಕಾಗಿ ಮಾಡಬೇಕು” ಎಂದು ಪ್ರಶ್ನಿಸಿದರು.

ಈ ವಿಚಾರದಲ್ಲಿ ಈದಿನ ಡಾಟ್ ಕಾಮ್ ಶಿಕ್ಷಣ ಇಲಾಖೆ ಕಾರ್ಯದರ್ಶಿಗಳನ್ನು ಸಂಪರ್ಕಿಸಲು ಪ್ರಯತ್ನಿಸಿದ್ದು ಸಂಪರ್ಕಕ್ಕೆ ಲಭ್ಯವಾಗಿಲ್ಲ.

ಖಾಸಗೀಕರಣಕ್ಕೆ ಸರ್ಕಾರದ ಪರೋಕ್ಷ ಬೆಂಬಲವಲ್ಲವೇ?

ರಾಜ್ಯ, ದೇಶದಲ್ಲಿ ಹಲವು ವರ್ಷಗಳಿಂದ ಕಾಡುತ್ತಾ ಬರುತ್ತಿರುವ ಕಂಡೂ ಕಾಣದ ಸಮಸ್ಯೆ ಖಾಸಗೀಕರಣ. ಬಹುತೇಕ ಎಲ್ಲಾ ವಲಯಗಳು ಹಂತ ಹಂತವಾಗಿ ಸರ್ಕಾರದ ಅಂದರೆ ಜನರ ಕೈ ಜಾರಿ ಕಾರ್ಪೋರೇಟ್ ದೊರೆಗಳ, ಖಾಸಗಿ ಸಂಸ್ಥೆಗಳ ಮುಷ್ಠಿಗೆ ಸೇರುತ್ತಿದೆ. ಇವೆಲ್ಲವುದಕ್ಕೂ ನಮ್ಮ ಸರ್ಕಾರಗಳೇ ತಿಳಿದೊ, ತಿಳಿಯದೆಯೋ ಬೆಂಬಲ ನೀಡುತ್ತಿರುವುದು ವಿಪರ್ಯಾಸ. ಸರ್ಕಾರವಿರುವುದು ಸರ್ಕಾರಿ ಸಂಸ್ಥೆಗಳ ಬಲಪಡಿಸಲೇ ಹೊರತು, ಖಾಸಗಿ ದೊರೆಗಳಿಗೆ ಲಾಭಗಿಟ್ಟಿಸಿಕೊಡಲು ಅಲ್ಲ.

ಈ ಹಿಂದೆ ಬಿಜೆಪಿ ಸರ್ಕಾರವಿದ್ದಾಗ ಸರ್ಕಾರಿ ಶಾಲೆಗಳ ವಿಲೀನವನ್ನು ವಿರೋಧಿಸಿದ್ದ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ತನ್ನ ವರಸೆ ಬದಲಾಯಿಸಿಕೊಂಡಂತಿದೆ. ವಿದ್ಯಾರ್ಥಿಗಳ ಕೊರತೆ ನೆಪವೊಡ್ಡಿ ಸರ್ಕಾರಿ ಶಾಲೆಗಳ ವಿಲೀನ ಮಾಡಲು ಮುಂದಾಗಿರುವ ಸರ್ಕಾರ ಅದೇ ಶಾಲೆಗಳ ಅಭಿವೃದ್ಧಿಯತ್ತ ಗಮನ ಹರಿಸುವುದು ಉತ್ತಮವಲ್ಲವೇ? ಇದು ಕ್ರಮೇಣವಾಗಿ ಸಂಪೂರ್ಣಶಿಕ್ಷಣದ ಖಾಸಗೀಕರಣವಾಗಲು ಪ್ರತ್ಯಕ್ಷ-ಪರೋಕ್ಷವಾಗಿ ಬೆಂಬಲ ನೀಡಿದಂತೆ ಆಗುವುದಿಲ್ಲವೇ?

ಸದ್ಯ ಸರ್ಕಾರ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸುವ ಜತೆಗೆ ಅಲ್ಲಲ್ಲಿ ನಾಯಿಕೊಡೆಗಳಂತೆ ಹುಟ್ಟಿಕೊಳ್ಳುವ ಖಾಸಗಿ ಸಂಸ್ಥೆಗಳಿಗೂ ಕಡಿವಾಣ ಹಾಕುವುದು ಅತ್ಯಗತ್ಯ. ಅದಲ್ಲದೆ ಇರುವ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಮುಖ್ಯ. ಎಲ್ಲಾ ವ್ಯವಸ್ಥೆಗಳಿದ್ದರೂ ಕೆಲವೆಡೆ ಪೋಷಕರೇ ಸರ್ಕಾರಿ ಶಾಲೆಯತ್ತ ತಮ್ಮ ಮಕ್ಕಳು ಮುಖ ಮಾಡಲು ಬಿಡಲ್ಲ. ಇಂತಹ ಸಂದರ್ಭದಲ್ಲಿ ಪೋಷಕರೂ ಕೊಂಚ ಚಿಂತನೆಗೆ ಒಳಪಡಬೇಕಾಗುತ್ತದೆ. ‘ಆಧುನೀಕರಣ’ ಎಂಬ ಭರದಲ್ಲಿ ಮಕ್ಕಳ ಶಿಕ್ಷಣಕ್ಕಾಗಿ ಸಾಲ ಮಾಡಿ ಕೈಸುಟ್ಟುಕೊಳ್ಳುವ ಬದಲು, ಸರ್ಕಾರದ ಸೌಲಭ್ಯಗಳ ಸದುಪಯೋಗ ಮಾಡಿಕೊಳ್ಳುವತ್ತ ಪೋಷಕರೂ ಗಮನಹರಿಸುವುದು ಒಳಿತು.

WhatsApp Image 2025 11 17 at 4.20.34 PM
+ posts

ಪತ್ರಕರ್ತೆ, 2019ರಿಂದ ಪತ್ರಿಕೋದ್ಯಮವೇ ಬದುಕು. ರಾಜಕೀಯ, ಬ್ಯುಜಿನೆಸ್‌ ಸುದ್ದಿಗಳಲ್ಲಿ ಆಸಕ್ತಿ.

ಪೋಸ್ಟ್ ಹಂಚಿಕೊಳ್ಳಿ:

ಮಯೂರಿ ಬೋಳಾರ್
ಮಯೂರಿ ಬೋಳಾರ್
ಪತ್ರಕರ್ತೆ, 2019ರಿಂದ ಪತ್ರಿಕೋದ್ಯಮವೇ ಬದುಕು. ರಾಜಕೀಯ, ಬ್ಯುಜಿನೆಸ್‌ ಸುದ್ದಿಗಳಲ್ಲಿ ಆಸಕ್ತಿ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...