ಮಂಡ್ಯ ಸಾಹಿತ್ಯ ಸಮ್ಮೇಳನ | ಸಿ ಟಿ ರವಿ ಪ್ರಬಂಧ ಮಂಡನೆಗೆ ಪ್ರಗತಿಪರರ ವಿರೋಧ

Date:

ಇಂದು ಬೆಳಿಗ್ಗೆ 11ಕ್ಕೆ ನಡೆಯಲಿರುವ “ಸಾಹಿತ್ಯ ಕೇಂದ್ರಿತವಾದ ಸೈದ್ಧಾಂತಿಕ-ರಾಜಕೀಯ ನಿಲುವು” ಗೋಷ್ಠಿಯಲ್ಲಿ ಸಿ ಟಿ ರವಿ ಪ್ರಬಂಧ ಮಂಡನೆ

ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಎರಡನೇ ದಿನವಾದ ಇಂದು (ಶನಿವಾರ) ಬೆಳಿಗ್ಗೆ 11 ಗಂಟೆಗೆ ಪ್ರಧಾನ ವೇದಿಕೆಯಲ್ಲಿ ನಡೆಯಲಿರುವ ʼಸಾಹಿತ್ಯದಲ್ಲಿ ರಾಜಕೀಯ; ರಾಜಕೀಯದಲ್ಲಿ ಸಾಹಿತ್ಯʼ ಗೋಷ್ಠಿಯಲ್ಲಿ ಬಿಜೆಪಿ ಮುಖಂಡ, ಎಂ ಎಲ್‌ ಸಿ ಸಿ ಟಿ ರವಿ ಪಾಲ್ಗೊಳ್ಳಬಾರದು ಎಂದು ಪ್ರಗತಿಪರರು, ಸಾಹಿತಿಗಳು ವಿರೋಧ ವ್ಯಕ್ತಪಡಿಸಿದ್ದಾರೆ.

ʼಸಾಹಿತ್ಯ ಕೇಂದ್ರಿತವಾದ ಸೈದ್ಧಾಂತಿಕ-ರಾಜಕೀಯ ನಿಲುವುʼ ವಿಷಯದ ಬಗ್ಗೆ ಸಿ ಟಿ ರವಿ ಪ್ರಬಂಧ ಮಂಡಿಸಲಿದ್ದಾರೆ. ಕಾನೂನು ಸಚಿವ ಎಚ್‌ ಕೆ ಪಾಟೀಲ್ ಗೋಷ್ಠಿಯ ಅಧ್ಯಕ್ಷತೆ ವಹಿಸಲಿದ್ದಾರೆ. ಬಿ ಎಲ್‌ ಶಂಕರ್‌ ಆಶಯ ಭಾಷಣ ಮಾಡಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿ ಟಿ ರವಿ ಅವರು ಸಾಹಿತ್ಯ ಗೋಷ್ಠಿಯಲ್ಲಿ ಭಾಗವಹಿಸಬಾರದು. ಇಡೀ ಮಹಿಳಾ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ, ಅಂಥವರು ಮಂಡ್ಯದಲ್ಲಿ ನಡೆಯುತ್ತಿರುವ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುವುದು ಮಂಡ್ಯ ಜನತೆಗೂ ಅವಮಾನ ಎಂದು ಹಲವರು ಈ ದಿನ ಡಾಟ್‌ ಕಾಮ್ ಜೊತೆಗೆ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಈ ದಿನದೊಂದಿಗೆ ಮಾತನಾಡಿದ ಕರ್ನಾಟಕ ಜನಶಕ್ತಿಯ ರಾಜ್ಯ ಕಾರ್ಯದರ್ಶಿ ಪೂರ್ಣಿಮಾ, “ಸಂವಿಧಾನ ವಿರೋಧಿ ಹೇಳಿಕೆಯನ್ನು ಸಮರ್ಥಿಸಿಕೊಂಡು ಅದನ್ನು ವಿರೋಧಿಸಿದ ಮಹಿಳೆಯನ್ನು ಅಶ್ಲೀಲ ಪದಗಳಿಂದ ನಿಂದಿಸಿದ ಸಿ ಟಿ ರವಿ ಮಂಡ್ಯದ ಕನ್ನಡ ಸಾಹಿತ್ಯ ಸಮ್ಮೇಳನದ ಅತಿಥಿಯಾಗಿ ಭಾಷಣ ಮಾಡುವುದನ್ನು ಕೇಳಿಸಿಕೊಳ್ಳಲು ಮಂಡ್ಯದ ಜನ ಕಾದು ಕೂತಿಲ್ಲ. ಮಂಡ್ಯ ಹಲವು ದಾರ್ಶನಿಕರು ಮಹನೀಯರನ್ನು ಕಂಡ ಜಿಲ್ಲೆ. ಕುವೆಂಪು ಅವರ ವೈಚಾರಿಕತೆ, ಸಾಮರಸ್ಯವನ್ನು ಮೈಗೂಡಿಸಿಕೊಂಡು ಸಮಸಮಾಜವನ್ನು ಕಟ್ಟಬೇಕೆಂಬ ಕನಸು ಹೊತ್ತು ಪ್ರೀತಿ ಮಾನವತೆಗಳನ್ನು ಹಂಚುತ್ತಾ ಹೆಸರಾಗಿರುವ ಜಿಲ್ಲೆ. ಅಂಬೇಡ್ಕರ್ ಎಂದರೆ ಈ ನೆಲದ ಉಸಿರು, ಅಸ್ತಿತ್ವ ಎಂದು ಧ್ವನಿ ಎತ್ತರಿಸುವ ಜಿಲ್ಲೆ. ಇಂತಹ ಜಾಗಕ್ಕೆ ಕೋಮುಕ್ರಿಮಿ, ಸಂವಿಧಾನ ವಿರೋಧಿ, ಅದರಲ್ಲೂ ಮಹಿಳಾ ವಿರೋಧಿ ಮಾತುಗಳನ್ನಾಡುತ್ತಿರುವ ರವಿಗೆ ಮಂಡ್ಯದ ಸಾಹಿತ್ಯ ಸಮ್ಮೇಳನಕ್ಕೆ ಬರಲು ಅವಕಾಶ ಕೊಡುವುದಿಲ್ಲ. ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಲು ಮಂಡ್ಯದ ಸಂವಿಧಾನ ಪರ ಮತ್ತು ಮಹಿಳಾ ಪರ ಮನಸ್ಸುಗಳು ಅವಕಾಶ ಕೊಡುವುದಿಲ್ಲ” ಎಂದು ಅವರು ಎಚ್ಚರಿಸಿದರು.

ಸಿ ಟಿ ರವಿ C T RAVI

ಜಾಗೃತ ಕರ್ನಾಟಕದ ಸುಬ್ರಹ್ಮಣ್ಯ ಮಾತನಾಡಿ, “ಮಂಡ್ಯ ಸಕ್ಕರೆ ನಾಡು, ಸದಾ ಸರ್ವರಿಗೂ ಒಳಿತನ್ನೇ ಬಯಸುವ ರೈತಾಪಿ ವರ್ಗಗಳಿರುವ ನೆಲ. ಇಲ್ಲಿ ದ್ವೇಷ ಹಂಚುವ, ಮಹಿಳೆಯರನ್ನು ಅವಮಾನಿಸುವ, ಅವರ ಘನತೆಗೆ ಧಕ್ಕೆ ತರುವ ಯಾರನ್ನೂ ನಾವು ಸಹಿಸುವುದಿಲ್ಲ. ಸಿ ಟಿ ರವಿ ತರಹದ ಮನಸ್ಥಿತಿಯ ಜನರು ಸಾಹಿತ್ಯ ವೇದಿಕೆ ಹತ್ತುವುದು ಈ ನೆಲದ ಹೆಣ್ಣುಮಕ್ಕಳಿಗೆ ಮಾಡುವ ಅವಮಾನ. ಸಿ ಟಿ ರವಿ ತಾವಾಗಿಯೇ ಮಂಡ್ಯಕ್ಕೆ ಬಾರದಿರುವ ನಿರ್ಧಾರ ಕೈಗೊಳ್ಳುವುದು ಉತ್ತಮ” ಎಂದು ತಿಳಿಸಿದರು.

“ಸಿ ಟಿ ರವಿ ಯಾವುದೇ ಕಾರಣಕ್ಕೂ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಷಣ ಮಾಡಕೂಡದು. ಸಮ್ಮೇಳನದಲ್ಲೇ ಸಾವಿರಾರು ಜನ ಆತನ ವಿರುದ್ದ ಮುಖ್ಯವೇದಿಕೆಯಲ್ಲೇ ಧರಣಿ ಮಾಡುತ್ತೇವೆ. ಯಾವುದೇ ಮುಲಾಜಿಲ್ಲದೇ ಈ ಕೂಡಲೇ ಇಂತಹ ಕ್ಷುದ್ರವ್ಯಕ್ತಿಗಳನ್ನು ಸಮ್ಮೇಳನದಿಂದ ಹೊರಕ್ಕೆ ಹಾಕಬೇಕು” ಎಂದು ಮಂಡ್ಯ ಜಿಲ್ಲಾ ಪ್ರಗತಿಪರ ಸಂಘಟನೆಗಳ ಒಕ್ಕೂಟ ಒತ್ತಾಯಿಸಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಸಿ ಟಿ ರವಿಯಂಥವರಿಗೆ ಮಹಿಳೆಯರನ್ನು ಅಪಮಾನಿಸೋದು ಮನುವಾದಿ ವ್ಯಸನ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ವಿರುದ್ಧ ಗುರುವಾರ ಸುವರ್ಣ ಸೌಧದ ವಿಧಾನ ಪರಿಷತ್ತಿನಲ್ಲಿ ಆಕ್ಷೇಪಾರ್ಹ ಪದ ಬಳಕೆ ಮಾಡಿದ ಆರೋಪದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ದೂರು ನೀಡಿದ್ದರು. ಹಿರೇಬಾಗೇವಾಡಿ ಪೊಲೀಸರು ಸುವರ್ಣಸೌಧದ ಆವರಣದಿಂದಲೇ ಬಂಧಿಸಿ ಕರೆದೊಯ್ದಿದ್ದರು. ಶುಕ್ರವಾರ ಸಂಜೆ ಜನಪ್ರತಿನಿಧಿಗಳ ನ್ಯಾಯಾಲಯವು ಬಿಡುಗಡೆಗೆ ಆದೇಶ ನೀಡಿತ್ತು.

ಸಿ ಟಿ ರವಿ ಗೋಷ್ಠಿಯಲ್ಲಿ ಭಾಗವಹಿಸುವ ಎಂಬ ಬಗ್ಗೆ ಯಾವುದೇ ಮಾಹಿತಿ ಲಭ್ಯವಿಲ್ಲ. ಈ ಬಗ್ಗೆ ಈ ದಿನ ಡಾಟ್‌ ಕಾಮ್‌ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್‌ ಜೋಶಿ ಅವರಿಂದ ಮಾಹಿತಿ ಪಡೆಯುವ ಪ್ರಯತ್ನ ಮಾಡಿದರೂ, ಅವರು ಕರೆ ಸ್ವೀಕರಿಸಿಲ್ಲ.

07e0d3e8 3f8a 4b81 8fd5 641335b91d85
ಹೇಮಾ ವೆಂಕಟ್‌
+ posts

ʼಈ ದಿನ.ಕಾಂʼನಲ್ಲಿ ಮುಖ್ಯ ವರದಿಗಾರರು.
ಉದಯವಾಣಿ, ಪ್ರಜಾವಾಣಿಯಲ್ಲಿ ವರದಿಗಾರ್ತಿಯಾಗಿ ಅನುಭವ.
ಮೂರು ಪುಸ್ತಕಗಳು ಪ್ರಕಟಗೊಂಡಿವೆ.

ಪೋಸ್ಟ್ ಹಂಚಿಕೊಳ್ಳಿ:

ಹೇಮಾ ವೆಂಕಟ್‌
ಹೇಮಾ ವೆಂಕಟ್‌
ʼಈ ದಿನ.ಕಾಂʼನಲ್ಲಿ ಮುಖ್ಯ ವರದಿಗಾರರು. ಉದಯವಾಣಿ, ಪ್ರಜಾವಾಣಿಯಲ್ಲಿ ವರದಿಗಾರ್ತಿಯಾಗಿ ಅನುಭವ. ಮೂರು ಪುಸ್ತಕಗಳು ಪ್ರಕಟಗೊಂಡಿವೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...