ರಾಜ್ಯ ಬಜೆಟ್ | ಕಲಬುರಗಿ ದಲಿತರ ಸಮಗ್ರ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ನಿರೀಕ್ಷೆ

Date:

ರಾಜ್ಯದ 2026–27ನೇ ಸಾಲಿನ ಬಜೆಟ್‌ ಮಂಡನೆ ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ವಿಶೇಷವಾಗಿ ಕಲಬುರಗಿಯಲ್ಲಿ ಸಾಮಾಜಿಕ ನ್ಯಾಯ ಮತ್ತು ಕೃಷಿ ಸಂಕಷ್ಟ ಎಂಬ ಎರಡು ಪ್ರಮುಖ ವಿಷಯಗಳು ಮತ್ತೆ ಚರ್ಚೆಯ ಕೇಂದ್ರಬಿಂದುವಾಗಿವೆ. ಕರ್ನಾಟಕದ ಒಟ್ಟು ಜನಸಂಖ್ಯೆಯಲ್ಲಿ ಶೇ.25ರಷ್ಟು ಪಾಲು ಹೊಂದಿರುವ ದಲಿತ ಸಮುದಾಯಗಳ ಶೈಕ್ಷಣಿಕ, ಆರ್ಥಿಕ ಹಾಗೂ ಸಾಮಾಜಿಕ ಅಭಿವೃದ್ಧಿಗೆ ವಿಶೇಷ ಆರ್ಥಿಕ ಕಾರ್ಯಸೂಚಿ ರೂಪಿಸಿ ಅಗತ್ಯ ಅನುದಾನ ಮೀಸಲಿಡಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ದಸಂಸ) ಸರ್ಕಾರವನ್ನು ಒತ್ತಾಯಿಸಿದೆ.

ಮತ್ತೊಂದೆಡೆ, ಬೆಳೆ ನಷ್ಟ, ಬೆಲೆ ಕುಸಿತ ಮತ್ತು ಸಾಲದ ಬಾಧೆಯಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಸಮಗ್ರ ರೈತಪರ ಬಜೆಟ್ ಅಗತ್ಯವಿದೆ ಎಂದು ವಿವಿಧ ರೈತ ಸಂಘಟನೆಗಳು ಆಗ್ರಹಿಸುತ್ತಿವೆ.

ದಸಂಸ ಮುಖಂಡ ಮರಿಯಪ್ಪ ಹಳ್ಳಿ ಈದಿನ.ಕಾಮ್‌ಗೆ ಪ್ರತಿಕ್ರಿಯಿಸಿ, ಖಾಸಗೀಕರಣದಂತಹ ಆರ್ಥಿಕ ನೀತಿಗಳ ಪರಿಣಾಮವಾಗಿ ಸಮಾಜದಲ್ಲಿ ಆರ್ಥಿಕ ಅಸಮಾನತೆ ಹೆಚ್ಚುತ್ತಿದ್ದು ದಲಿತ ಸಮುದಾಯಗಳು ನಿರಂತರ ಸಾಲಬಾಧೆ ಮತ್ತು ನಿರುದ್ಯೋಗದ ಸಂಕಷ್ಟಕ್ಕೆ ಸಿಲುಕುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದರು. ಈ ಹಿನ್ನೆಲೆಯಲ್ಲಿ ದಲಿತರ ಅಭಿವೃದ್ಧಿಗೆ ಸಮಗ್ರ ಕಾರ್ಯಯೋಜನೆ ರೂಪಿಸಿ ಸರ್ಕಾರ ಸ್ಪಷ್ಟ ಬಜೆಟ್ ಅನುದಾನ ನೀಡಬೇಕು ಎಂದು ಅವರು ಹೇಳಿದರು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಅಭಿವೃದ್ಧಿ, ಎಸ್‌ಸಿಎಸ್‌ಪಿ/ಟಿಎಸ್‌ಪಿ ಅನುದಾನದ ಸಮರ್ಪಕ ಬಳಕೆ, ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಪುನರ್ವಸತಿ ಸೇರಿದಂತೆ ಹಲವು ವಿಷಯಗಳ ಕುರಿತು ವರ್ಷಕ್ಕೊಮ್ಮೆ ಅಥವಾ ಎರಡು ವರ್ಷಕ್ಕೊಮ್ಮೆ ವಿಶೇಷ ಅಧಿವೇಶನ ನಡೆಸಿ ಸಮಗ್ರ ಚರ್ಚೆ ಹಾಗೂ ಮೌಲ್ಯಮಾಪನ ಮಾಡಬೇಕೆಂದು ಅವರು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಲಿತ ವಿದ್ಯಾರ್ಥಿಗಳ ಶಿಕ್ಷಣ ಅಭಿವೃದ್ಧಿಗೂ ಹೆಚ್ಚಿನ ಒತ್ತು ನೀಡಬೇಕು ಎಂಬುದು ಅವರ ಪ್ರಮುಖ ಬೇಡಿಕೆಯಾಗಿದೆ. ಪ್ರಾಥಮಿಕ ಶಿಕ್ಷಣದಿಂದ ಉನ್ನತ ಶಿಕ್ಷಣದವರೆಗೆ ಗುಣಮಟ್ಟದ ಸೌಲಭ್ಯಗಳನ್ನು ಒದಗಿಸಬೇಕು. ವಿದ್ಯಾರ್ಥಿವೇತನ ಹೆಚ್ಚಳ, ಹಾಸ್ಟೆಲ್ ಸೌಲಭ್ಯಗಳ ಆಧುನೀಕರಣ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉತ್ತೇಜನ ನೀಡುವ ಕಾರ್ಯಕ್ರಮಗಳನ್ನು ಜಾರಿಗೆ ತರಬೇಕು ಎಂದು ಅವರು ಹೇಳಿದರು. ‘ಪ್ರಬುದ್ಧ’ ಯೋಜನೆಯಡಿ ವಿದೇಶದಲ್ಲಿ ವ್ಯಾಸಂಗ ಮಾಡಲು ತೆರಳುವ ವಿದ್ಯಾರ್ಥಿಗಳ ಸಂಪೂರ್ಣ ಖರ್ಚನ್ನು ಸರ್ಕಾರವೇ ಭರಿಸಬೇಕು. ಬಿ.ಎಡ್., ಮೆಡಿಕಲ್ ಹಾಗೂ ಇಂಜಿನಿಯರಿಂಗ್ ಕೋರ್ಸ್‌ಗಳಿಗೆ ಸೇರುವ ದಲಿತ ವಿದ್ಯಾರ್ಥಿಗಳಿಗೆ ಕಾಲೇಜು ಶುಲ್ಕ, ಹಾಸ್ಟೆಲ್ ವೆಚ್ಚ ಮತ್ತು ವಿದ್ಯಾರ್ಥಿವೇತನಕ್ಕಾಗಿ ಪ್ರತ್ಯೇಕ ಅನುದಾನ ನೀಡಬೇಕು ಎಂಬ ಬೇಡಿಕೆಯನ್ನೂ ಅವರು ಮುಂದಿಟ್ಟರು.

ಇದರ ಜೊತೆಗೆ ಆಡಳಿತ ತರಬೇತಿ ಕೇಂದ್ರಗಳನ್ನು ಸ್ಥಾಪಿಸಿ, ಸರ್ಕಾರಿ ಇಲಾಖೆಗಳಲ್ಲಿರುವ ಖಾಲಿ ಹುದ್ದೆಗಳನ್ನು ತ್ವರಿತವಾಗಿ ಭರ್ತಿ ಮಾಡಬೇಕು ಹಾಗೂ ಬ್ಯಾಕ್‌ಲಾಗ್ ನೇಮಕಾತಿಗಳನ್ನು ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿದರು. ಆರೋಗ್ಯ ಕಾರ್ಡ್ ವಿತರಣೆ, ಅಂತರ್ಜಾತಿ ವಿವಾಹಗಳಿಗೆ ಪ್ರೋತ್ಸಾಹಧನ, ವಿಧವಾ ವೇತನ, ವೃದ್ಧಾಪ್ಯ ವೇತನ ಹಾಗೂ ಅಂಗವಿಕಲ ಪಿಂಚಣಿ ಸೇರಿದಂತೆ ಸಾಮಾಜಿಕ ಭದ್ರತಾ ಯೋಜನೆಗಳಲ್ಲಿ ವಾರ್ಷಿಕ ಹೆಚ್ಚಳ ಮಾಡಬೇಕೆಂದು ಅವರು ಹೇಳಿದರು. ದಲಿತರ ಮೇಲೆ ನಡೆಯುವ ದೌರ್ಜನ್ಯ ಪ್ರಕರಣಗಳಲ್ಲಿ ಕಠಿಣ ಕ್ರಮ ಕೈಗೊಂಡು ಹೆಚ್ಚಿನ ಪರಿಹಾರ ನೀಡಬೇಕು. ಡಾ. ಬಿ.ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರಗಳಿಗೆ ಪ್ರತ್ಯೇಕವಾಗಿ ಮೂರು ಕೋಟಿ ರೂಪಾಯಿ ಕಾರ್ಪಸ್ ನಿಧಿ ನೀಡಬೇಕು ಹಾಗೂ ಬೌದ್ಧ ಸಮುದಾಯದ ಅಭಿವೃದ್ಧಿಗಾಗಿ ಬೌದ್ಧ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು ಎಂದು ಸಲಹೆ ನೀಡಿದರು.

ಭೂಹೀನ ದಲಿತರಿಗೆ ಮನೆ ಹಾಗೂ ಕೃಷಿಭೂಮಿ ಖರೀದಿಸಲು ಮಾರುಕಟ್ಟೆ ಮೌಲ್ಯದ ಶೇ.90ರಷ್ಟು ಹಣವನ್ನು ಸರ್ಕಾರ ನೆರವಿನ ರೂಪದಲ್ಲಿ ನೀಡಬೇಕು. ರಾಜ್ಯದಲ್ಲಿ ಜಾರಿಯಲ್ಲಿರುವ ಹೊಸ ರೋಸ್ಟರ್ ಪದ್ಧತಿಯನ್ನು ಪುನರ್ ಪರಿಶೀಲಿಸಿ ಉಪವರ್ಗೀಕರಣದಿಂದ ಉಂಟಾದ ಗೊಂದಲಗಳನ್ನು ನಿವಾರಿಸಬೇಕು. ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಕಾಯ್ದೆಯಡಿ ಮೀಸಲಾದ ಅನುದಾನವನ್ನು ಇತರ ಯೋಜನೆಗಳಿಗೆ ವರ್ಗಾವಣೆ ಮಾಡುವುದನ್ನು ತಕ್ಷಣ ನಿಲ್ಲಿಸಬೇಕು ಹಾಗೂ ಸಮಾಜ ಕಲ್ಯಾಣ ಇಲಾಖೆಯ ಮೂಲಕ ಏಕಗವಾಕ್ಷಿ ವ್ಯವಸ್ಥೆಯಲ್ಲಿ ಅದರ ಬಳಕೆಯನ್ನು ನಿರ್ವಹಿಸಬೇಕು ಎಂದು ಅವರು ಹೇಳಿದರು. ಗ್ಯಾರಂಟಿ ಯೋಜನೆಗಳಿಗೆ ಎಸ್‌ಸಿಎಸ್‌ಪಿ ಹಾಗೂ ಟಿಎಸ್‌ಪಿ ಅನುದಾನವನ್ನು ಬಳಸುತ್ತಿರುವುದು ಕಾಯ್ದೆ ಉಲ್ಲಂಘನೆಯಾಗಿದೆ ಎಂದು ದಸಂಸ ಆರೋಪಿಸಿದೆ.

ಇದೇ ವೇಳೆ, ಜಿಲ್ಲೆಯ ರೈತರು ಎದುರಿಸುತ್ತಿರುವ ಸಂಕಷ್ಟಗಳಿಗೆ ಸ್ಪಂದಿಸುವ ಸಮಗ್ರ ರೈತಪರ ಬಜೆಟ್ ಮಂಡಿಸಬೇಕು ಎಂದು ವಿವಿಧ ರೈತ ಸಂಘಟನೆಗಳು ಒಗ್ಗಟ್ಟಾಗಿ ಸರ್ಕಾರವನ್ನು ಒತ್ತಾಯಿಸುತ್ತಿವೆ. ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಶರಣಬಸಪ್ಪ ಮಮಶೇಟ್ಟಿ ಮಾತನಾಡಿ, ಕೃಷಿಗೆ ಅಗತ್ಯವಾದ ಬೀಜ, ರಸಗೊಬ್ಬರ ಮತ್ತು ಕೀಟನಾಶಕ ಔಷಧಿಗಳನ್ನು ಸಮಯಕ್ಕೆ ಸರಿಯಾಗಿ ಪೂರೈಸದಿದ್ದರೆ ರೈತರು ಭಾರೀ ನಷ್ಟ ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಸಿದರು. ವಿಶೇಷವಾಗಿ ತೊಗರಿ ಬೆಳೆಗಾರರು ಮಾರುಕಟ್ಟೆಯ ಅನಿಶ್ಚಿತತೆ ಮತ್ತು ಬೆಲೆ ಕುಸಿತದಿಂದ ಸಂಕಷ್ಟದಲ್ಲಿದ್ದು, ಸರ್ಕಾರವು ಕನಿಷ್ಠ ಬೆಂಬಲ ಬೆಲೆ ಆಧಾರದ ಮೇಲೆ ತೊಗರಿ ಖರೀದಿ ನಡೆಸಿ ಪ್ರತಿ ಕ್ವಿಂಟಲ್‌ಗೆ ₹1,000 ಪ್ರೋತ್ಸಾಹಧನ ನೀಡಬೇಕು ಎಂದು ಒತ್ತಾಯಿಸಿದರು.

ದ್ವಿದಳ ಧಾನ್ಯ ಬೋರ್ಡ್ ಕೇವಲ ಹೆಸರಿನಲ್ಲಿ ಉಳಿದಿದ್ದು ಅದನ್ನು ಪರಿಣಾಮಕಾರಿಯಾಗಿ ಕಾರ್ಯರೂಪಕ್ಕೆ ತಂದು ರೈತರಿಗೆ ನೇರ ಲಾಭವಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಅವರು ಹೇಳಿದರು. ಪೌಷ್ಟಿಕಾಂಶ ಕೊರತೆಯನ್ನು ತಗ್ಗಿಸಲು ಪ್ರತಿ ರೇಷನ್ ಕಾರ್ಡ್‌ಗೆ ಒಂದು ಕೆಜಿ ತೊಗರಿ ವಿತರಣೆ ಮಾಡಬೇಕು ಹಾಗೂ ಶಾಲೆಗಳ ಬಿಸಿಯೂಟ ಯೋಜನೆಯಲ್ಲಿ ತೊಗರಿಯನ್ನು ಕಡ್ಡಾಯವಾಗಿ ಬಳಸಬೇಕು ಎಂಬ ಸಲಹೆಯನ್ನೂ ಅವರು ಮುಂದಿಟ್ಟರು. ಇತ್ತೀಚಿನ ಅತಿವೃಷ್ಟಿಯಿಂದ ಜಿಲ್ಲೆಯಲ್ಲಿ ಭಾರೀ ಬೆಳೆಹಾನಿ ಸಂಭವಿಸಿರುವ ಹಿನ್ನೆಲೆಯಲ್ಲಿ ಡಿಸಿಸಿ ಬ್ಯಾಂಕ್ ವ್ಯಾಪ್ತಿಯ ಸಹಕಾರಿ ಸಾಲಗಳನ್ನು ಮನ್ನಾ ಮಾಡಬೇಕು ಹಾಗೂ ರಾಷ್ಟ್ರೀಯೀಕೃತ ಬ್ಯಾಂಕ್‌ಗಳ ಕೃಷಿ ಸಾಲಗಳಿಗೂ ಪರಿಹಾರ ಕ್ರಮ ಕೈಗೊಳ್ಳಬೇಕು ಎಂದು ಅವರು ಹೇಳಿದರು.

ರೈತ ಮುಖಂಡ ಶ್ರೀಮಂತ ಬಿರಾದಾರ ಮಾತನಾಡಿ, ಎಂ.ಎಸ್. ಸ್ವಾಮಿನಾಥನ್ ಆಯೋಗದ ಶಿಫಾರಸ್ಸಿನಂತೆ ಕಬ್ಬಿಗೆ ಸಮರ್ಪಕ ಬೆಲೆ ಸಿಗುತ್ತಿಲ್ಲ ಎಂದು ಆರೋಪಿಸಿದರು. ಸರ್ಕಾರವು ಪ್ರತಿ ಟನ್ ಕಬ್ಬಿಗೆ ಕನಿಷ್ಠ ₹200 ಪ್ರೋತ್ಸಾಹಧನ ನೀಡಬೇಕು ಎಂದು ಅವರು ಒತ್ತಾಯಿಸಿದರು. ಹೈದರಾಬಾದ್ ಕರ್ನಾಟಕ ಭಾಗದಲ್ಲಿ ನಿರ್ಮಿಸಲಾದ ಭೀಮ, ಬೆಣ್ಣೆ ತೋರು, ಅಮರಜೈ ಹಾಗೂ ಕಂಡೊರಿ ನಾಲೆ ಯೋಜನೆಗಳು ನಿರ್ಲಕ್ಷ್ಯಕ್ಕೆ ಗುರಿಯಾಗಿವೆ. ಕಾಲುವೆಗಳಲ್ಲಿ ಮಣ್ಣು ಹಾಗೂ ಗಿಡಗಂಟು ತುಂಬಿಕೊಂಡಿರುವುದರಿಂದ ನೀರು ಸರಿಯಾಗಿ ಹರಿಯುತ್ತಿಲ್ಲ. ಕಾಲುವೆಗಳ ಸ್ವಚ್ಛತೆಗೆ ವಿಶೇಷ ಅನುದಾನ ಮೀಸಲಿಡಬೇಕು ಎಂದು ಅವರು ಟೀಕಿಸಿದರು.

ನೀರಾವರಿ ಡ್ಯಾಂಗಳ ನವೀಕರಣ, ಕಾಲುವೆಗಳ ಶುದ್ಧೀಕರಣ ಹಾಗೂ ಕೃಷಿ ಪಂಪ್‌ಸೆಟ್‌ಗಳಿಗೆ ನಿರಂತರ ವಿದ್ಯುತ್ ಪೂರೈಕೆ ಕಲ್ಪಿಸಲು ವಿಶೇಷ ಬಜೆಟ್ ಒದಗಿಸಬೇಕು ಎಂದು ರೈತರು ಒತ್ತಾಯಿಸುತ್ತಿದ್ದಾರೆ. ರೈತರಿಗೆ ಉಚಿತ ವಿದ್ಯುತ್ ಜೊತೆಗೆ ಹಗಲು ಕನಿಷ್ಠ 12 ಗಂಟೆಗಳ ನಿರಂತರ ವಿದ್ಯುತ್ ಪೂರೈಕೆ ಅಗತ್ಯವಿದೆ. ಪಂಪ್‌ಸೆಟ್‌ಗಳಿಗೆ ಸ್ಮಾರ್ಟ್ ಮೀಟರ್ ಅಳವಡಿಕೆಯನ್ನು ನಿಲ್ಲಿಸಬೇಕು ಮತ್ತು ವಿದ್ಯುತ್ ದರ ಏರಿಕೆಗೆ ಕಡಿವಾಣ ಹಾಕಬೇಕು ಎಂದು ರೈತ ಸಂಘಟನೆಗಳು ಆಗ್ರಹಿಸಿವೆ.

ಇದನ್ನೂ ಓದಿ: ಕಲಬುರಗಿ | ಬುರ್ಖಾ ಧರಿಸಿ ಹೋಳಿ ಆಡಿದ ಯುವಕರ ವಿರುದ್ಧ ಎಫ್‌ಐಆರ್

ಸಾಮಾಜಿಕ ಕಾರ್ಯಕರ್ತ ಡಾ. ಮಹೇಶ್ ರಾಠೋಡ್ ಮಾತನಾಡಿ, ಏತ ನೀರಾವರಿ ಯೋಜನೆಗಳಿಗೆ ತಕ್ಷಣ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಕಾಮಗಾರಿ ಆರಂಭಿಸಬೇಕು. ಜೇವರ್ಗಿ ಮತ್ತು ಯಡ್ರಾಮಿ ಭಾಗದ ರೈತರಿಗೆ ನೀರಾವರಿ ಸೌಲಭ್ಯ ಒದಗಿಸಬೇಕು. ತೊಗರಿ ಮಂಡಳಿ ರಚನೆ, ಎಪಿಎಂಸಿ ಮಾರುಕಟ್ಟೆ ಪ್ರಾರಂಭ ಹಾಗೂ ಸರ್ಕಾರಿ ತೊಗರಿ ಮಿಲ್ ಸ್ಥಾಪನೆಗೆ ಸರ್ಕಾರ ಮುಂದಾಗಬೇಕು ಎಂದು ಒತ್ತಾಯಿಸಿದರು.

ಒಟ್ಟಾರೆ, ರಾಜ್ಯದ ಬಜೆಟ್‌ ಮುನ್ನ ದಲಿತ ಸಮುದಾಯಗಳ ಅಭಿವೃದ್ಧಿ ಹಾಗೂ ರೈತರ ಸಂಕಷ್ಟ ಪರಿಹಾರ ಎಂಬ ಎರಡು ಪ್ರಮುಖ ವಿಷಯಗಳು ಸರ್ಕಾರದ ಮುಂದೆ ಗಂಭೀರ ಸವಾಲಾಗಿ ಪರಿಣಮಿಸಿವೆ. ಸಾಮಾಜಿಕ ನ್ಯಾಯ ಹಾಗೂ ಕೃಷಿ ರಕ್ಷಣೆಯನ್ನು ಸಮಾನವಾಗಿ ಪರಿಗಣಿಸಿ ಸ್ಪಷ್ಟ ಯೋಜನೆಗಳೊಂದಿಗೆ ಬಜೆಟ್ ಮಂಡಿಸಿದಾಗ ಮಾತ್ರ ಸಮಾಜದ ಹಿಂದುಳಿದ ವರ್ಗಗಳಿಗೂ ರೈತ ಸಮುದಾಯಕ್ಕೂ ನಿಜವಾದ ಪರಿಹಾರ ದೊರೆಯಲಿದೆ ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗುತ್ತಿದೆ.

WhatsApp Image 2024 11 08 at 12.18.37 667ed234 e1731048718511
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...