ರಾಜ್ಯ ಬಜೆಟ್ | ಯಾಲಕ್ಕಿ ನಾಡು ಹಾವೇರಿಯ ನಿರೀಕ್ಷೆಗಳೇನು?

Date:

ಯಾಲಕ್ಕಿ ಕಂಪಿನ ನಾಡು ಎಂದೇ ಪ್ರಸಿದ್ಧಿ ಪಡೆದಿರುವ ಹಾವೇರಿ ಜಿಲ್ಲೆ ಮೂಲತಃ ಕೃಷಿ ಪ್ರಧಾನ ಪ್ರದೇಶ. ಹೊಸ ಜಿಲ್ಲೆಯಾಗಿ ರೂಪುಗೊಂಡ ನಂತರವೂ ಹಲವು ಮೂಲಭೂತ ಸಮಸ್ಯೆಗಳನ್ನು ಎದುರಿಸುತ್ತಲೇ ಬಂದಿದೆ. ರಾಜ್ಯ ಸರ್ಕಾರದ ಪ್ರತಿ ಬಾರಿಯ ಬಜೆಟ್‌ ವೇಳೆಯಲ್ಲೂ ಜಿಲ್ಲೆಯ ಜನರು ದೊಡ್ಡ ನಿರೀಕ್ಷೆ ಇಟ್ಟುಕೊಳ್ಳುತ್ತಾರೆ. ಆದರೆ ವರ್ಷದಿಂದ ವರ್ಷಕ್ಕೆ ಆ ನಿರೀಕ್ಷೆಗಳು ನೆರವೇರದೇ, ನಿರಾಶೆಯೇ ಹೆಚ್ಚಾಗಿದೆ. ಈ ಬಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 17ನೇ ಬಾರಿಗೆ ಬಜೆಟ್ ಮಂಡನೆ ಮಾಡಲು ಮುಂದಾಗಿರುವ ಸಂದರ್ಭದಲ್ಲಿ, ಹಾವೇರಿ ಜಿಲ್ಲೆಯ ಜನರಲ್ಲಿ ಮತ್ತೊಮ್ಮೆ ನಿರೀಕ್ಷೆಯ ಮೊಳಕೆ ಒಡೆದಿದೆ.

ಕರ್ನಾಟಕ ರಾಜ್ಯದ ಹೃದಯ ಭಾಗದಲ್ಲಿರುವ ಹಾವೇರಿ ಜಿಲ್ಲೆ ಉತ್ತರ ಕರ್ನಾಟಕದ ಹೆಬ್ಬಾಗಿಲು ಎಂದೇ ಗುರುತಿಸಿಕೊಂಡಿದೆ. ಕೈಗಾರಿಕೆ ಸ್ಥಾಪನೆಗೆ ಅಗತ್ಯವಿರುವ ಭೌಗೋಳಿಕ ಅನುಕೂಲತೆ, ರಾಷ್ಟ್ರೀಯ ಹೆದ್ದಾರಿ ಹಾಗೂ ರೈಲ್ವೆ ಸಂಪರ್ಕ ಇದ್ದರೂ ಜಿಲ್ಲೆ ನಿರೀಕ್ಷಿತ ಅಭಿವೃದ್ಧಿ ಸಾಧಿಸಲು ವಿಫಲವಾಗಿದೆ. ಸ್ಥಳೀಯ ರಾಜಕಾರಣಿಗಳು ಹಾಗೂ ಜನಪ್ರತಿನಿಧಿಗಳ ಇಚ್ಛಾಶಕ್ತಿ ಕೊರತೆಯಿಂದ ಅನೇಕ ಮಹತ್ವದ ಯೋಜನೆಗಳು ಪೂರ್ಣ ಪ್ರಮಾಣದಲ್ಲಿ ಜಾರಿಯಾಗಿಲ್ಲ. ಇದರಿಂದಲೇ ಜಿಲ್ಲೆಯ ಅಭಿವೃದ್ಧಿಗೆ ಹಿನ್ನಡೆಯಾಗುತ್ತಿದೆ ಎಂಬ ಆರೋಪವಿದೆ. ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಸಾಲಿನ ಬಜೆಟ್ ತಯಾರಿಗಾಗಿ ವಿವಿಧ ಇಲಾಖೆಗಳೊಂದಿಗೆ ಚರ್ಚೆ ನಡೆಸಿ ಬಜೆಟ್ ಮಂಡನೆಗೆ ಸಜ್ಜಾಗಿರುವುದರಿಂದ, ಈ ಬಾರಿಯಾದರೂ ಹಾವೇರಿ ಜಿಲ್ಲೆಯ ಬಹುಕಾಲದ ಬೇಡಿಕೆಗಳು ಈಡೇರುವುವೆಂಬ ಕನಸನ್ನು ಜನರು ಹೊತ್ತಿದ್ದಾರೆ.

ಕೃಷಿ ಪ್ರಧಾನ ಜಿಲ್ಲೆಗೆ ನೀರಾವರಿ ಯೋಜನೆಗಳು, ಉದ್ಯೋಗ, ಶಿಕ್ಷಣ, ಆರೋಗ್ಯ, ಕೈಗಾರಿಕೋದ್ಯಮ, ಪ್ರವಾಸೋದ್ಯಮ ಅಭಿವೃದ್ದಿ ಕಾಣುತ್ತಿಲ್ಲ. ಕುಡಿಯುವ ನೀರು, ರಸ್ತೆ, ಚರಂಡಿ ಅವ್ಯವಸ್ಥೆ, ಕೃಷಿ ಚಟುವಟಿಕೆಗೆ ವಿದ್ಯುತ್ ಸಮಸ್ಯೆ ಹೀಗೆ ಹತ್ತು ಹಲವು ಸಮಸ್ಯೆಗಳು ಇದ್ದು, ಜಿಲ್ಲೆಯ ಜನರು ಈ ಸಲದ ಬಜೆಟ್ ನಲ್ಲಿ ಸಮಸ್ಯೆಗಳಿಗೆ ಪರಿಹಾರ ಸಿಗುವ ನಿರೀಕ್ಷೆಯಲ್ಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸೂಪರ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ನಿರೀಕ್ಷೆ

ಹಾವೇರಿ ಜಿಲ್ಲೆಯಲ್ಲಿ ಬಡ, ಮಧ್ಯಮ ಹಾಗೂ ಹಿಂದುಳಿದ ವರ್ಗದ ಜನಸಂಖ್ಯೆ ಹೆಚ್ಚಿನದಾಗಿದ್ದು, ಅನಾರೋಗ್ಯದ ಸಂದರ್ಭಗಳಲ್ಲಿ ದುಬಾರಿ ಖಾಸಗಿ ಆಸ್ಪತ್ರೆಗಳಿಗೆ ತೆರಳಲು ಅನೇಕರಿಗೆ ಸಾಧ್ಯವಾಗುತ್ತಿಲ್ಲ. ಪರಿಣಾಮವಾಗಿ ಚಿಕಿತ್ಸೆ ಪಡೆಯದೇ ಸಂಕಷ್ಟ ಅನುಭವಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲೇ ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ಸೂಪರ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಜಿಲ್ಲೆಗೆ ಅಗತ್ಯ ಎಂಬ ಒತ್ತಾಯ ಬಹುಕಾಲದಿಂದ ಕೇಳಿಬರುತ್ತಿದೆ.

ಜಿಲ್ಲೆಯ ಸಂಸದರು, ಶಾಸಕರು, ಸಚಿವರು ಹಾಗೂ ಸಾರ್ವಜನಿಕರು, ಜಿಲ್ಲೆಯ ಮೆಡಿಕಲ್ ಕಾಲೇಜು ಉದ್ಘಾಟನೆ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೂಪರ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರಿಗೆ ಮನವಿ ಸಲ್ಲಿಸಿದ್ದರು. ಈ ವೇಳೆ ಮುಖ್ಯಮಂತ್ರಿ ಆಸ್ಪತ್ರೆ ಮಂಜೂರು ಮಾಡುವುದಾಗಿ ಭರವಸೆ ನೀಡಿದ್ದರು. ಹೀಗಾಗಿ ಈ ಬಾರಿ ಬಜೆಟ್‌ನಲ್ಲಿ ಸೂಪರ್ ಮಲ್ಟಿ ಸ್ಪೇಷಾಲಿಟಿ ಆಸ್ಪತ್ರೆ ಘೋಷಣೆಯಾಗಲಿದೆ ಎಂಬ ನಿರೀಕ್ಷೆಯನ್ನು ಜಿಲ್ಲೆಯ ಜನರು ಇಟ್ಟುಕೊಂಡಿದ್ದಾರೆ.

ಶೈಕ್ಷಣಿಕ ಬೇಡಿಕೆಗಳು

ಹಾವೇರಿ ಜಿಲ್ಲೆ ಶೈಕ್ಷಣಿಕ ಕ್ಷೇತ್ರದಲ್ಲಿ ಹಲವು ಮೂಲಭೂತ ಬೇಡಿಕೆಗಳನ್ನು ಎದುರಿಸುತ್ತಿದೆ. ಜಿಲ್ಲೆಯಲ್ಲಿ ಕಾನೂನು ಮಹಾವಿದ್ಯಾಲಯ ಮಂಜೂರಾದರೂ, ಇದುವರೆಗೆ ಅಗತ್ಯ ಅನುದಾನ ಬಿಡುಗಡೆ ಆಗದೇ ಯೋಜನೆ ಸ್ಥಗಿತಗೊಂಡಿದೆ. ಅದೇ ರೀತಿ ಹಾವೇರಿ ವಿಶ್ವವಿದ್ಯಾಲಯ ಹಾಗೂ ಜಾನಪದ ವಿಶ್ವವಿದ್ಯಾಲಯಗಳು ಅನುದಾನ ಕೊರತೆಯಿಂದ ಸಂಕಷ್ಟದ ಮಧ್ಯೆ ಕಾರ್ಯನಿರ್ವಹಿಸುತ್ತಿವೆ. ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕಾಗಿ ಜಿಲ್ಲೆಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವುದರಿಂದ, ಕನಿಷ್ಠ ಹತ್ತು ವಿದ್ಯಾರ್ಥಿ ಹಾಸ್ಟೆಲ್‌ಗಳ ಮಂಜೂರು ಅಗತ್ಯವಾಗಿದೆ. ಜೊತೆಗೆ ಪ್ರತಿಯೊಂದು ಹಾಸ್ಟೆಲ್‌ನ ವಿದ್ಯಾರ್ಥಿಗಳಿಗೆ ಮಾಸಿಕ 4,500 ರೂ. ಪ್ರೋತ್ಸಾಹ ಧನ ನೀಡಬೇಕೆಂಬ ಬೇಡಿಕೆಯೂ ಇದೆ.

ಇದರೊಂದಿಗೆ ಪ್ರತಿ ತಾಲೂಕಿಗೆ ಒಂದೊಂದು ಸರ್ಕಾರಿ ಐಟಿಐ ಕಾಲೇಜು, ಡಿಪ್ಲೋಮಾ ಕಾಲೇಜು, ಮಹಿಳಾ ಪ್ರಥಮ ದರ್ಜೆ ಕಾಲೇಜು ಆರಂಭಿಸಬೇಕು. ವೃತ್ತಿಪರ ಪ್ಯಾರಾಮೆಡಿಕಲ್, ನರ್ಸಿಂಗ್ ಹಾಗೂ ಜಿಟಿಟಿಸಿ ಕೋರ್ಸ್‌ಗಳನ್ನು ಜಿಲ್ಲೆಯಲ್ಲಿ ಆರಂಭಿಸುವಂತೆ ಜಿಲ್ಲೆಯಾದ್ಯಂತ ಎಸ್ಎಫ್‌ಐ ಪ್ರತಿಭಟನೆ ನಡೆಸಿ ಸರ್ಕಾರವನ್ನು ಒತ್ತಾಯಿಸಿದೆ.

ಬೇಡ್ತಿ-ವರದಾ ನದಿ ಜೋಡಣೆ

ಜಿಲ್ಲೆಯ ಜನರು ಬಹುತೇಕ ಕೃಷಿಯನ್ನೇ ನಂಬಿಕೊಂಡು ಬದುಕುತ್ತಿದ್ದಾರೆ. ಇಲ್ಲಿಯ ಕೃಷಿಗೆ ಶಾಶ್ವತ ನೀರಾವರಿ ಅನಿವಾರ್ಯವಿದೆ.
ಬೇಡ್ತಿ -ವರದಾ ನದಿ ಜೋಡಣೆ ಕಾರ್ಯವಾದರೆ ಹಾವೇರಿ ಜಿಲ್ಲೆಯ ಜನರ ಕೃಷಿ ಚಟುವಟಿಕೆಗಳಿಗೆ ಅನುಕೂಲ ಆಗಲಿದ್ದು, ರೈತರ ಬದುಕು ಹಸನಾಗಲಿದೆ. ಹಾಗಾಗಿ ಈ ಬಜೆಟ್ ನಲ್ಲಾದರೂ ಈ ಯೋಜನೆಗೆ ವಿಶೇಷ ಅನುದಾನ ಘೋಷನೆಗೆ ರೈತ ಮುಖಂಡರು ಒತ್ತಾಯಿಸುತ್ತಿದ್ದಾರೆ. ಜಿಲ್ಲೆಯಲ್ಲಿ ಹೂವಿನ ಬೆಳೆ ಮತ್ತು ಮಾರುಕಟ್ಟೆ ಅತ್ಯಂತ ಕ್ರಿಯಾಶೀಲವಾಗಿದ್ದು, ಸುಗಂಧರಾಜ, ಚೆಂಡು ಹೂವು ಮತ್ತು ಸೇವಂತಿಗೆಗೆ ಭಾರಿ ಬೇಡಿಕೆಯಿದೆ. ಆದ್ದರಿಂದ, ಜಿಲ್ಲಾ ಕೇಂದ್ರದಲ್ಲಿ ಸುಸಜ್ಜಿತವಾದ ಹೈಟೆಕ್ ಹೂವಿನ ಮಾರುಕಟ್ಟೆ ಸ್ಥಾಪನೆಗೆ ಅನುದಾನದ ನಿರೀಕ್ಷೆಯಿದೆ.

2026-27ರ ಬಜೆಟ್‌ನಲ್ಲಿ ಹೂವಿನ ಮಾರುಕಟ್ಟೆಯ ಆಧುನೀಕರಣ ಮತ್ತು ಸೌಲಭ್ಯಗಳ ವಿಸ್ತರಣೆಗೆ ಸಂಬಂಧಿಸಿದಂತೆ ರೈತರು ಮತ್ತು ವ್ಯಾಪಾರಿಗಳು ಈ ಕೆಳಗಿನ ಪ್ರಮುಖ ನಿರೀಕ್ಷೆಗಳನ್ನು ಹೊಂದಿದ್ದಾರೆ.

ಡಿಸಿಸಿ ಬ್ಯಾಂಕ್ ಸ್ಥಾಪನೆಗೆ ಒತ್ತಾಯ: ಬಡ್ಡಿ ರಹಿತ ಸಾಲ ನೀಡುವ ಡಿಸಿಸಿ ಬ್ಯಾಂಕ್ ಧಾರವಾಡ ಜಿಲ್ಲೆಯಲ್ಲಿದೆ. ಹಾವೇರಿ ಜಿಲ್ಲೆಯಲ್ಲಿ ಡಿಸಿಸಿ ಬ್ಯಾಂಕ್ ಸ್ಥಾಪನೆ ಮಾಡಬೇಕು ಎಂಬುದು ರೈತರ ಬೇಡಿಕೆ ಆಗಿದ್ದು, ಬಜೆಟ್ ನಿರಿಕ್ಷೆಯಲ್ಲಿ ಈಡೇರುವ ಭರವಸೆಯಲ್ಲಿದ್ದಾರೆ‌.

image 2026 02 25T181023.227

ಕೃಷಿ ಆಧಾರಿತ ಕೈಗಾರಿಕೆ ಸ್ಥಾಪನೆಗೆ ಒತ್ತಾಯ: ಕೃಷಿ ಪ್ರಧಾನ ಜಿಲ್ಲೆ ಎನಿಸಿಕೊಂಡಿರುವ ಹಾವೇರಿಯಲ್ಲಿ ಮೆಕ್ಕೆಜೋಳ, ಸೋಯಾಬಿನ್, ಮೆಣಸಿನಕಾಯಿ, ಹತ್ತಿ, ಕಬ್ಬು, ಭತ್ತ, ಸೂರ್ಯಕಾಂತಿ ಬೆಳೆಯುತ್ತಾರೆ. ಹಾಗೆ ಬಾಳೆ ಮತ್ತು ಶುಂಠಿ ಜೊತೆಗೆ ಇತರೆ ಕೃಷಿ ಉತ್ಪನ್ನಗಳನ್ನು ಬೆಳೆಯುತ್ತಾರೆ. ಜಿಲ್ಲೆಯಲ್ಲಿ ಕೃಷಿ ಆಧಾರಿತ ಕೈಗಾರಿಕೆ ಸ್ಥಾಪನೆ ಮಾಡಲು ಸೂಕ್ತ ಸ್ಥಳಾವಕಾಶವಿದೆ. ಜಿಲ್ಲೆಯ ಜನಸಂಖ್ಯೆ ಆಧರಿಸಿ ಕೈಗಾರಿಕಗಳು ಸ್ಥಾಪನೆ ಆಗಿಲ್ಲ ಎಂದು ಜಿಲ್ಲೆಯ ಜನರಲ್ಲಿ ಅಸಮಾಧಾನವಿದೆ. ಈ ಬಜೆಟ್ ನಲ್ಲಾದರೂ ಹೊಸ ಕೈಗಾರಿಕೆಗಳ ಸ್ಥಾಪನೆಗೆ ಮುಖ್ಯಮಂತ್ರಿಯವರು ಪ್ರಸ್ತಾಪ ಸಲ್ಲಿಸಬೇಕು ಎಂದು ಒತ್ತಾಯಿಸುತ್ತಿದ್ದಾರೆ.

ಜಿಲ್ಲೆಯಲ್ಲಿ ಕುರಿಗಾಹಿಗಳು, ಕೋಳಿ ಸಾಕಾಣಿಕೆ ಸೇರಿ ಹಲವು ಸ್ವ ಉದ್ಯೋಗಗಳಿಗೆ ಪ್ರೋತ್ಸಾಹದ ಅಗತ್ಯವಿದೆ. ಸರಕಾರ ಸಂಸ್ಕರಣ ಘಟಕಗಳನ್ನು ಆರಂಭಿಸಬೇಕಿದೆ.

image 2026 02 25T181130.035

ಉದ್ಯೋಗ ಸೃಷ್ಟಿಗೆ ಒತ್ತು ಕೋಡಬೇಕು: ಜಿಲ್ಲೆಯಲ್ಲಿ ನಿರುದ್ಯೋಗ ಯುವಕ ಯುವತಿಯರು ಹೆಚ್ಚು ಮಂದಿ ಇದ್ದಾರೆ. ಉದ್ಯೋಗ ಅರಸಿ ದೂರದ ಮೈಸೂರು, ಬೆಂಗಳೂರು, ಮಂಗಳೂರು, ಮುಂಬೈಗೆ ಹೋಗುತ್ತಾರೆ. ಜಿಲ್ಲೆಯಲ್ಲಿಯೇ ಯುವಕ ಯುವತಿಯರಿಗೆ ಉದ್ಯೋಗ ಸಿಗುವಂತೆ ಆಗಬೇಕು ಎಂದು ಆಗ್ರಹಿಸಿದ್ದಾರೆ.

ಸಾಂಸ್ಕೃತಿಕ ಜಿಲ್ಲೆಯಾಗಿರುವ ಹಾವೇರಿ ಜಿಲ್ಲೆಯ ಸಂತ ಶಿಶುನಾಳ ಶರೀಫರ ಜನ್ಮಸ್ಥಳವಾದ ಶಿಶುವಿನಹಾಳದ ಅಭಿವೃದ್ಧಿ ಹಾಗೂ ಅಲ್ಲಿನ ಸಾಂಸ್ಕೃತಿಕ ಭವನಗಳ ಆಧುನೀಕರಣದ ನಿರೀಕ್ಷೆಯಿದೆ. ಹಾಗೇ ಶಿಶುನಾಳ ಶರೀಫರ ಹೆಸರಿನಲ್ಲಿ ಪ್ರಾಧಿಕಾರವನ್ನು ಈ ಬಜೆಟ್ ನಲ್ಲಿ ಘೋಷಣೆ ಮಾಡಬೇಕೆಂಬ ಒತ್ತಾಯವಿದೆ.

ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಯನ್ನು ವಿಸ್ತರಣೆ ಮಾಡಬೇಕಿದೆ. 1400ಕೋಟಿ ರೂ ವೆಚ್ಚದ ಆಣೂರು, ತಡಸ, ಹಂಸಬಾವಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕಿದೆ. ಹಾನಗಲ್ ತಾಲೂಕಿನಲ್ಲಿ ಮಾವು ಸಂಸ್ಕರಣಾ ಘಟಕ ಸ್ಥಾಪನೆ ಆಗಬೇಕಿದೆ.

ಇದನ್ನೂ ಓದಿ: ಹಾವೇರಿ | ಕಿಶೋರಿಯರಿಗೆ ಶಿಕ್ಷಣ ಸಾಮಗ್ರಿ ವಿತರಣೆ

ಈ ಕುರಿತು ಎಸ್ಎಫ್ ಐ ಜಿಲ್ಲಾಧ್ಯಕ್ಷ ಬಸವರಾಜ ಎಸ್ ಮಾತನಾಡಿ, “ಜಿಲ್ಲೆಯಲ್ಲಿ ಶೈಕ್ಷಣಿಕವಾಗಿ ಸಾಕಷ್ಟು ಅಭಿವೃದ್ದಿ ಆಗಬೇಕಿದೆ. ಜಿಲ್ಲೆಯಲ್ಲಿ ತಾಲೂಕಿಗೊಂದು ಐಟಿಐ ಕಾಲೇಜು, ಡಿಪ್ಲೋಮಾ ಕಾಲೇಜು, ಮಹಿಳಾ ಪ್ರಥಮ ದರ್ಜೆ ಕಾಲೇಜು, ವೃತ್ತಿಪರ ಪ್ಯಾರಾ ಮೆಡಿಕಲ್, ನರ್ಸಿಂಗ್, ಜಿಟಿಟಿಸಿ ಕೋರ್ಸ್‌ಗಳು ಆರಂಭವಾಗಬೇಕಿದೆ. ಹಾವೇರಿ ವಿವಿ, ಜಾನಪದ ವಿವಿ ಹಾಗೂ ಹನುಮನಮಟ್ಟಿ ಕೃಷಿ ವಿವಿ ಸೇರಿದಂತೆ ಶಿಕ್ಷಣ ಕ್ಷೇತ್ರಕ್ಕೆ ಅನುದಾನ ಬಿಡುಗಡೆ ಮಾಡಬೇಕು. ಸಿದ್ದರಾಮಯ್ಯ ಅವರ ಸರ್ಕಾರ ಸಾಮಾಜಿಕ ಹಾಗೂ ಸಾಂಸ್ಕೃತಿಕ ಅಭಿವೃದ್ಧಿಗೆ ಒತ್ತು ನೀಡಲಿದೆ ಎನ್ನುವ ನಿರೀಕ್ಷೆಯಿದೆ” ಎಂದರು.

WhatsApp Image 2026 02 25 at 8.24.34 AM 1
ಎಸ್ಎಫ್ಐ ಜಿಲ್ಲಾಧ್ಯಕ್ಷ ಬಸವರಾಜ್ ಎಸ್

ಡಿವೈಎಫ್ಐ ರಾಜ್ಯ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ ಮಾತನಾಡಿ, “ಕೃಷಿ ಪ್ರಧಾನ ಜಿಲ್ಲೆ ಆಗಿರುವುದರಿಂದ, ಜಿಲ್ಲೆಯಲ್ಲಿ ಬೆಳೆಯುವ ವಾಣಿಜ್ಯ ಬೆಳೆಗಳನ್ನು ಆಧರಿಸಿ ಕೈಗಾರಿಕೆಗಳ ಸ್ಥಾಪನೆಗೆ ಮುಂದಾಗಬೇಕು. ಆಗ ಜಿಲ್ಲೆಯಲ್ಲಿ ಉದ್ಯೋಗಾವಕಾಶಗಳ ಸೃಷ್ಟಿಗೂ ಅನುಕೂಲವಾಗುತ್ತದೆ” ಎಂದರು.

WhatsApp Image 2026 02 25 at 8.24.35 AM
ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಬಳ್ಳಾರಿ ಮಾತನಾಡಿ, “ಪ್ರಸ್ತುತ ನಾಲ್ಕು ಜಿಲ್ಲೆಗಳಿಗೆ ಒಂದೇ ಡಿಸಿಸಿ ಬ್ಯಾಂಕ್ ಇರುವ ವ್ಯವಸ್ಥೆಯನ್ನು ಬದಲಿಸಿ, ಹಾವೇರಿ ಜಿಲ್ಲೆಗೆ ಪ್ರತ್ಯೇಕ ಡಿಸಿಸಿ ಬ್ಯಾಂಕ್ ಸ್ಥಾಪಿಸಬೇಕು. ಈ ಬ್ಯಾಂಕ್ ಮೂಲಕ ರೈತರಿಗೆ ನೀಡಲಾಗುತ್ತಿರುವ 5 ಲಕ್ಷ ರೂ. ಬಡ್ಡಿರಹಿತ ಸಾಲ ಮಿತಿಯನ್ನು 10 ಲಕ್ಷ ರೂ.ಗಳಿಗೆ ಹೆಚ್ಚಿಸಿ, ಸಂಪೂರ್ಣ ಬಡ್ಡಿರಹಿತವಾಗಿ ಸಾಲ ನೀಡಬೇಕು” ಎಂದು ಒತ್ತಾಯಿಸಿದರು.

WhatsApp Image 2026 02 25 at 8.24.34 AM
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷರು ಮಲ್ಲಿಕಾರ್ಜುನ ಬಳ್ಳಾರಿ

ಸೂಪರ್ ಮಲ್ಟಿ ಸ್ಪೇಷಾಲಿಟಿ ಆಸ್ಪತ್ರೆ, ಶೈಕ್ಷಣಿಕ ಸಂಸ್ಥೆಗಳ ಬಲವರ್ಧನೆ, ವಿದ್ಯಾರ್ಥಿ ಹಾಸ್ಟೆಲ್‌ಗಳು, ರೈತರಿಗೆ ಬಡ್ಡಿರಹಿತ ಸಾಲ ಹಾಗೂ ಪ್ರತ್ಯೇಕ ಡಿಸಿಸಿ ಬ್ಯಾಂಕ್ ಸ್ಥಾಪನೆ ಬೇಡಿಕೆಗಳು ಕೇವಲ ಅಭಿವೃದ್ಧಿ ಆಶಯಗಳಲ್ಲ, ಜಿಲ್ಲೆಯ ಬದುಕಿಗೆ ನೇರವಾಗಿ ಸಂಬಂಧಿಸಿದ ಅಗತ್ಯಗಳಾಗಿವೆ. ಈ ಬಾರಿ ಬಜೆಟ್‌ನಲ್ಲಿ ಇವುಗಳಿಗೆ ಸ್ಪಂದನೆ ದೊರೆತರೆ, ಹಾವೇರಿ ಜಿಲ್ಲೆಯ ಜನರಲ್ಲಿ ಸರ್ಕಾರದ ಮೇಲಿನ ನಂಬಿಕೆ ಬಲವಾಗುವುದರ ಜೊತೆಗೆ, ಜಿಲ್ಲೆ ಅಭಿವೃದ್ಧಿಯ ಹೊಸ ಅಧ್ಯಾಯಕ್ಕೆ ಸಾಕ್ಷಿಯಾಗಲಿದೆ.

SHARANAPPA H SANGANALA
ಶರಣಪ್ಪ ಎಚ್ ಸಂಗನಾಳ
+ posts

ಗದಗ ಜಿಲ್ಲೆಯ ರೋಣ ತಾಲೂಕಿನ ಸವಡಿ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ. ಧ್ವನಿ ಶೈಕ್ಷಣಿಕ ಸಂಪನ್ಮೂಲ ಕೇಂದ್ರದಲ್ಲಿ ಒಂದಷ್ಟು ಕಾಲ ಕೆಲಸ. ಸದ್ಯ 'ಈ ದಿನ.ಕಾಮ್'ನಲ್ಲಿ ಮೀಡಿಯಾ ಕೋಆರ್ಡಿನೇಟರ್. ಓದು, ಪಕ್ಷಿ ವೀಕ್ಷಣೆ, ಕೃಷಿಯಲ್ಲಿ ಆಸಕ್ತಿ.

ಪೋಸ್ಟ್ ಹಂಚಿಕೊಳ್ಳಿ:

ಶರಣಪ್ಪ ಎಚ್ ಸಂಗನಾಳ
ಶರಣಪ್ಪ ಎಚ್ ಸಂಗನಾಳ
ಗದಗ ಜಿಲ್ಲೆಯ ರೋಣ ತಾಲೂಕಿನ ಸವಡಿ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ. ಧ್ವನಿ ಶೈಕ್ಷಣಿಕ ಸಂಪನ್ಮೂಲ ಕೇಂದ್ರದಲ್ಲಿ ಒಂದಷ್ಟು ಕಾಲ ಕೆಲಸ. ಸದ್ಯ 'ಈ ದಿನ.ಕಾಮ್'ನಲ್ಲಿ ಮೀಡಿಯಾ ಕೋಆರ್ಡಿನೇಟರ್. ಓದು, ಪಕ್ಷಿ ವೀಕ್ಷಣೆ, ಕೃಷಿಯಲ್ಲಿ ಆಸಕ್ತಿ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...