ದಲಿತ ನಾಯಕಿ ದಲಿತರಿಗೇ ವಿರುದ್ಧವಾಗಿ ವರ್ತಿಸುತ್ತಿರುವುದೇಕೆ?

Date:

ಹೊಸ ನಿಯಮಗಳಿಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿರುವುದನ್ನು ಬಹುಜನ ಸಮಾಜ ಪಕ್ಷದ ನಾಯಕಿ ಮಾಯಾವತಿ ಸ್ವಾಗತಿಸಿದ್ದಾರೆ. ಮಾಯಾವತಿಯವರ ಈ ನಡೆಯನ್ನು ಹಲವರು ವಿರೋಧಿಸಿದ್ದಾರೆ.

ಭಾರತೀಯ ಶಿಕ್ಷಣ ವ್ಯವಸ್ಥೆಯಲ್ಲಿ ಜಾತಿ ತಾರತಮ್ಯ ಎಂಬುದು ಅನೇಕ ದಶಕಗಳಿಂದ ಬೇರೂರಿರುವ ಗಂಭೀರ ಸಾಮಾಜಿಕ ಸಮಸ್ಯೆ. ಪ್ರಾಥಮಿಕ ಶಿಕ್ಷಣದಿಂದ ಹಿಡಿದು ಉನ್ನತ ಅಧ್ಯಯನ ಸಂಸ್ಥೆಗಳವರೆಗೆ ಜಾತಿ ಆಧಾರಿತ ತಾರತಮ್ಯದ ಪರಿಣಾಮಗಳು ವಿಭಿನ್ನ ರೂಪಗಳಲ್ಲಿ ಕಾಣಿಸಿಕೊಳ್ಳುತ್ತಿವೆ. ಪ್ರವೇಶ ಪ್ರಕ್ರಿಯೆ, ವಿದ್ಯಾರ್ಥಿವೇತನ ವಿತರಣೆ, ವಸತಿ ಸೌಲಭ್ಯಗಳು, ಮೌಲ್ಯಮಾಪನ ವ್ಯವಸ್ಥೆ ಹಾಗೂ ಅಧ್ಯಾಪಕರ ನಡವಳಿಕೆಗಳಲ್ಲಿ ಸಹ ಜಾತಿಯ ಪ್ರಭಾವ ಇದೆ ಎಂಬ ಆರೋಪಗಳು ಪದೇಪದೇ ಕೇಳಿಬರುತ್ತಿವೆ.

ವಿಶೇಷವಾಗಿ ದಲಿತ, ಆದಿವಾಸಿ ವಿದ್ಯಾರ್ಥಿಗಳು ಕ್ಯಾಂಪಸ್‌ಗಳಲ್ಲಿ ಸಾಮಾಜಿಕ ಒಂಟಿತನ, ಮಾನಸಿಕ ಒತ್ತಡ ಮತ್ತು ಅವಮಾನಕಾರಿ ವರ್ತನೆಗಳನ್ನು ಅನುಭವಿಸುತ್ತಿರುವ ಬಗ್ಗೆ ಹಲವಾರು ವರದಿಗಳು ಬೆಳಕಿಗೆ ಬಂದಿವೆ. ಕೆಲ ಪ್ರಕರಣಗಳಲ್ಲಿ ಇವು ಆತ್ಮಹತ್ಯೆಗೂ ಕಾರಣವಾಗಿರುವುದು ದೇಶದ ಆತ್ಮಸಾಕ್ಷಿಗೆ ದೊಡ್ಡ ಆಘಾತವಾಗಿದೆ.

ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ತಾರತಮ್ಯ, ದೌರ್ಜನ್ಯಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿವೆ. ವಿಶ್ವವಿದ್ಯಾಲಯಗಳಲ್ಲಿನ ಜಾತಿ ತಾರತಮ್ಯಕ್ಕೆ ರೋಹಿತ್ ವೇಮುಲಾ ಸೇರಿದಂತೆ ಹಲವರು ಬಲಿಯಾಗಿದ್ದಾರೆ. ವೇಮುಲಾ ಸಾವಿನ ಪ್ರಕರಣವು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ವಿಶ್ವವಿದ್ಯಾಲಯಗಳಲ್ಲಿನ ಜಾತಿ ದಬ್ಬಾಳಿಕೆಗಳ ಕುರಿತು ಸುಪ್ರೀಂ ಕೋರ್ಟ್ ಕೂಡ ಕಳವಳ ವ್ಯಕ್ತಪಡಿಸಿತ್ತು. ಶಿಕ್ಷಣ ಸಂಸ್ಥೆಗಳ ಕ್ಯಾಂಪಸ್‌ನಲ್ಲಿ ಜಾತಿ ತಾರತಮ್ಯಗಳನ್ನು ತಡೆಯಲು ನಿಯಮಗಳನ್ನು ರೂಪಿಸುವಂತೆ ಯುಜಿಸಿಗೆ ತಾಕೀತು ಮಾಡಿತ್ತು. ಅದರಂತೆ, ಯುಜಿಸಿ ನಿಯಮಗಳನ್ನು ರೂಪಿಸಿತ್ತು. ಇದೀಗ, ಆ ನಿಮಯಗಳ ಸುತ್ತ ಕೆಲವು ಸಮುದಾಯಗಳು ವಿವಾದ ಸೃಷ್ಟಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
supreme court 24 1

ವಿಶ್ವದ್ಯಾಲಯಗಳು ಮತ್ತು ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಯಲು ‘ವಿಶ್ವವಿದ್ಯಾಲಯ ಅನುದಾನ ಆಯೋಗ’ (ಯುಜಿಸಿ) ರೂಪಿಸಿರುವ ‘ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಅಧಿಸೂಚಿತ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ ನಿಯಮಗಳು-2026’ ರೂಪಿಸಿದೆ. ಈ ಹೊಸ ನಿಯಮಗಳ ಜಾರಿಗೆ ಸಂಬಂಧಿಸಿದಂತೆ ದೇಶಾದ್ಯಂತ ಭಿನ್ನಾಭಿಪ್ರಾಯಗಳು ವ್ಯಕ್ತವಾಗುತ್ತಿವೆ. ಒಂದು ವರ್ಗ ಈ ನಿಯಮಗಳು ಅಗತ್ಯವೆಂದು ಹೇಳುತ್ತಿದ್ದರೆ, ಮತ್ತೊಂದು ವರ್ಗ ಈ ನಿಯಮವನ್ನು ವಿರೋಧ ಮಾಡುತ್ತಿವೆ.

ಯುಜಿಸಿ ಸಿದ್ದಪಡಿಸಿರುವ ಹೊಸ ನಿಯಮಗಳು ‘ಸಾಮಾನ್ಯ ವರ್ಗ’ಗಳ ವಿರುದ್ಧ ತಾರತಮ್ಯಕ್ಕೆ ಆಸ್ಪದ ನೀಡುತ್ತವೆ ಎಂದು ಆಕ್ಷೇಪಿಸಿ ಹಲವರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿಯನ್ನೂ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರಿದ್ದ ಪೀಠ ವಿಚಾರಣೆ ನಡೆಸಿದೆ. ಯುಜಿಸಿ ರೂಪಿಸಿದ್ದ ಹೊಸ ನಿಯಮಗಳಿಗೆ ತಡೆಯೊಡ್ಡಿದೆ.

ಹೊಸ ನಿಯಮಗಳಿಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿರುವುದನ್ನು ಬಹುಜನ ಸಮಾಜ ಪಕ್ಷದ ನಾಯಕಿ ಮಾಯಾವತಿ ಸ್ವಾಗತಿಸಿದ್ದಾರೆ. ಮಾಯಾವತಿ ಈ ನಡೆಯನ್ನ ಹಲವರು ವಿರೋಧಿಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಬಹುಜನ ಸಮಾಜ ಪಕ್ಷದ ನಾಯಕಿ ಮಾಯಾವತಿ, “ದೇಶದಾದ್ಯಂತ ಸರ್ಕಾರಿ ಮತ್ತು ಖಾಸಗಿ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ಘಟನೆಗಳನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಜಾರಿಗೆ ತಂದಿರುವ ಹೊಸ ನಿಯಮಗಳು ಸಮಾಜದಲ್ಲಿ ಉದ್ವಿಗ್ನತೆಯ ವಾತಾವರಣವನ್ನು ಸೃಷ್ಟಿ ಮಾಡುತ್ತಿವೆ. ಈ ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಸುಪ್ರೀಂ ಕೋರ್ಟ್ ಹೊಸ ಯುಜಿಸಿ ನಿಯಮವನ್ನು ನಿಷೇಧಿಸಿರುವ ನಿರ್ಧಾರ ಸೂಕ್ತವಾಗಿದೆ” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ʼವಂದೇ ಮಾತರಂʼ ಹಾಡು ಹೇಳಲು ಬಾರದ ಬಿಜೆಪಿ ನಾಯಕರಿಂದ ಮುಸ್ಲಿಮರಿಗೆ ಧಮ್ಕಿ!

“ಯುಜಿಸಿ ಹೊಸ ನಿಯಮವನ್ನು ಜಾರಿಗೆ ತರುವ ಮೊದಲು ಸಮಾಜದ ಎಲ್ಲ ವರ್ಗಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಸಮಗ್ರ ಚರ್ಚೆಯ ಮೂಲಕ ನಿರ್ಧಾರ ಕೈಗೊಂಡಿದ್ದರೆ ಇಂತಹ ಬಿಗುವಿನ ವಾತಾವರಣ ಸೃಷ್ಟಿಯಾಗುವುದನ್ನ ತಪ್ಪಿಸಬಹುದಿತ್ತು” ಎಂದಿದ್ದಾರೆ.

ಮಾಯಾವತಿ ಪೋಸ್ಟ್

ಮಾಯಾವತಿ ಅವರ ಈ ಹೇಳಿಕೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಹಲವರು ಅವರ ಅಭಿಪ್ರಾಯಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಜಾತಿತಾರತಮ್ಯ ವಿರೋಧಿ ನಿಯಮಗಳ ಬಗ್ಗೆ ಈ ರೀತಿಯ ಹೇಳಿಕೆಗಳು ತಳಸಮುದಾಯಗಳ ಹೋರಾಟವನ್ನು ದುರ್ಬಲಗೊಳಿಸುತ್ತವೆ ಎಂದು ಟೀಕಿಸಿದ್ದಾರೆ. ಇನ್ನು ಕೆಲವರು, ಸಮಾಜದ ಸಮತೋಲನ ಕಾಪಾಡುವ ದೃಷ್ಟಿಯಿಂದ ಎಲ್ಲ ವರ್ಗಗಳನ್ನೂ ಒಳಗೊಂಡು ನೀತಿ ರೂಪಿಸುವ ಅಗತ್ಯವಿದೆ ಎಂಬ ಮಾಯಾವತಿ ಅವರ ಅಭಿಪ್ರಾಯಕ್ಕೆ ಬೆಂಬಲ ಸೂಚಿಸಿದ್ದಾರೆ.

l23720220310162704

ಒಟ್ಟಾರೆ, ಯುಜಿಸಿ ನಿಯಮಗಳು, ಸುಪ್ರೀಂ ಕೋರ್ಟ್ ತೀರ್ಪು ಹಾಗೂ ಮಾಯಾವತಿ ಅವರ ಪ್ರತಿಕ್ರಿಯೆಗಳು ಇದೀಗ ರಾಜಕೀಯ ಮತ್ತು ಸಾಮಾಜಿಕ ವಲಯಗಳಲ್ಲಿ ಹೊಸ ಚರ್ಚೆಗೆ ಕಾರಣವಾಗಿವೆ. ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರ ಮತ್ತು ಯುಜಿಸಿ ಯಾವ ರೀತಿಯ ನಿಲುವು ತಾಳಲಿವೆ ಎಂಬುದರತ್ತ ಎಲ್ಲರ ದೃಷ್ಟಿ ನೆಟ್ಟಿದೆ.

e057b508e9e1b164fadd3c3edb023f5214f4d0a6d12066a30e302f9e3b0f6f24?s=150&d=mp&r=g
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...