ಯಾದಗಿರಿ | ದಶಕದ ಹೋರಾಟಕ್ಕೆ ಕಲ್ಲುಬಂಡೆಗಳ ರುದ್ರಭೂಮಿ ಮಂಜೂರು; ಗ್ರಾಮಸ್ಥರ ಆಕ್ರೋಶ

Date:

ಕಳೆದ ಹತ್ತು-ಹದಿನೈದು ವರ್ಷಗಳಿಂದ ರುದ್ರಭೂಮಿಗಾಗಿ ನಡೆಸಿದ ಹೋರಾಟದ ಫಲವಾಗಿ ಸರ್ಕಾರ ಕಲ್ಲುಬಂಡೆಗಳಿಂದ ಕೂಡಿದ ಸ್ಮಶಾನ ಜಾಗವನ್ನು ಮಂಜೂರು ಮಾಡಿದ್ದು, ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹೋತಪೇಠ ಗ್ರಾಮಕ್ಕೆ ಶಾಶ್ವತ ರುದ್ರಭೂಮಿ ಮಂಜೂರು ಮಾಡುವಂತೆ ಕಳೆದ ಹತ್ತು-ಹದಿನೈದು ವರ್ಷಗಳಿಂದ ಗ್ರಾಮಸ್ಥರು ಹೋರಾಟ ನಡೆಸುತ್ತಾ ಬಂದಿದ್ದಾರೆ. ಅನೇಕ ಬಾರಿ ಜಿಲ್ಲಾಡಳಿತ ಹಾಗೂ ಸರ್ಕಾರಕ್ಕೆ ಮನವಿ ಸಲ್ಲಿಸಿದ ಬಳಿಕ, ಕೊನೆಗೂ ಸರ್ಕಾರ ಸರ್ವೆ ನಂ.186ರ ಗೈರಾಣಿ ಭೂಮಿಯಲ್ಲಿ ಎರಡು ಎಕರೆ ಜಮೀನನ್ನು ರುದ್ರಭೂಮಿಗಾಗಿ ಮಂಜೂರು ಮಾಡಿದೆ. ಆದರೆ ಮಂಜೂರಾದ ಈ ಭೂಮಿ ಸಂಪೂರ್ಣವಾಗಿ ಕಲ್ಲುಬಂಡೆಗಳಿಂದ ಕೂಡಿದ್ದು, ಶವ ಸಂಸ್ಕಾರಕ್ಕೆ ಯೋಗ್ಯವಾಗಿಲ್ಲ ಎಂದು ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಂಜೂರಾದ ರುದ್ರಭೂಮಿಯಲ್ಲಿ ಮನುಷ್ಯರಿಂದ ಗುಂಡಿ ತೋಡುವುದು ಅಸಾಧ್ಯವಾಗಿದ್ದು, ಶವ ಸಂಸ್ಕಾರಕ್ಕಾಗಿ ಜೆಸಿಬಿ ಯಂತ್ರ ಬಳಸಲೇಬೇಕಾದ ಅನಿವಾರ್ಯತೆ ಎದುರಾಗಿದೆ. ಆದರೆ ಜೆಸಿಬಿ ಯಂತ್ರದ ಮೂಲಕ ಗುಂಡಿ ತೋಡಿಸುವುದಕ್ಕೆ ಯಂತ್ರದ ಹಲ್ಲುಗಳು ಮುರಿಯುವ ಸಾಧ್ಯತೆ ಇರುವುದರಿಂದ ಚಾಲಕರು ಕೆಲಸ ಮಾಡಲು ಹಿಂದೇಟು ಹಾಕುತ್ತಿದ್ದಾರೆ. ಕೆಲವರು ಗುಂಡಿ ತೋಡಿಸಲು ಐದು ಸಾವಿರದಿಂದ ಹತ್ತು ಸಾವಿರ ರೂಪಾಯಿವರೆಗೆ ಹಣ ಕೇಳುತ್ತಿದ್ದಾರೆ. ಕೆಲ ಸಂದರ್ಭಗಳಲ್ಲಿ ಹಲ್ಲು ಮುರಿದರೆ ಅದರ ಖರ್ಚು ಸೇರಿಸಿ 30 ರಿಂದ 40 ಸಾವಿರ ರೂಪಾಯಿವರೆಗೆ ವೆಚ್ಚ ಭರಿಸಬೇಕಾಗುತ್ತದೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ. ಬಡ ಮತ್ತು ಕೂಲಿ ಕಾರ್ಮಿಕರಾಗಿರುವ ಗ್ರಾಮಸ್ಥರಿಗೆ ಇಂತಹ ಭಾರೀ ವೆಚ್ಚವನ್ನು ಭರಿಸುವುದು ಅಸಾಧ್ಯವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈದಿನ.ಕಾಮ್‌ನೊಂದಿಗೆ ಊರಿನ ಮುಖಂಡ ನಾಗರಾಜ್ ಮಾತನಾಡಿ, “ಕಲ್ಲುಬಂಡೆಗಳಿಂದ ಕೂಡಿದ ಜಾಗದಲ್ಲಿ ಶವ ಸಂಸ್ಕಾರ ಮಾಡುವುದು ಅಸಾಧ್ಯ. ಜೆಸಿಬಿ ಮೂಲಕ ಗುಂಡಿ ತೋಡಿಸಲು ಐದು–ಹತ್ತು ಸಾವಿರ ರೂ. ಕೇಳುತ್ತಾರೆ. ಬಡವರಾದ ನಾವು ಇಷ್ಟು ಹಣ ಕೊಡಲು ಸಾಧ್ಯವಿಲ್ಲ. ಸರ್ಕಾರ ಯೋಗ್ಯವಾದ ಭೂಮಿಯನ್ನು ಖರೀದಿ ಮಾಡಿ ರುದ್ರಭೂಮಿಯಾಗಿ ಮಂಜೂರು ಮಾಡಬೇಕು” ಎಂದು ಮನವಿ ಮಾಡಿದರು.

ಗ್ರಾಮಸ್ಥ ಮಲ್ಲಿಕಾರ್ಜುನ ಮಾತನಾಡಿ, “ಸುಮಾರು ಹತ್ತು-ಹದಿನೈದು ವರ್ಷಗಳಿಂದ ರುದ್ರಭೂಮಿ ಮಂಜೂರು ಮಾಡುವಂತೆ ನಾವು ಹೋರಾಟ ಮಾಡುತ್ತಿದ್ದೇವೆ. ಇವಾಗ ಸರ್ಕಾರ ಸರ್ವೆ ನಂ.186ರಲ್ಲಿ ಎರಡು ಎಕರೆ ಜಮೀನು ಮಂಜೂರು ಮಾಡಿದೆ. ಆದರೆ ಆ ಜಾಗ ಸಂಪೂರ್ಣವಾಗಿ ಕಲ್ಲುಬಂಡೆ ಹಾಗೂ ಗುಡ್ಡಗಾಡು ಪ್ರದೇಶದಿಂದ ಕೂಡಿದ್ದು, ಶವ ಸಂಸ್ಕಾರಕ್ಕೆ ಯೋಗ್ಯವಾಗಿಲ್ಲ. ಇಂತಹ ಜಾಗವನ್ನು ರುದ್ರಭೂಮಿಯಾಗಿ ಆಯ್ಕೆ ಮಾಡಿರುವುದು ಖಂಡನೀಯ” ಎಂದು ಹೇಳಿದರು.

ನಿಂಗಣ್ಣ ಗೌಡ ಮಾತನಾಡಿ, “ನಮ್ಮ ಊರಿನ ರೈತರು ರುದ್ರಭೂಮಿಗಾಗಿ ತಮ್ಮ ಜಮೀನನ್ನು ನೀಡಲು ಸಿದ್ಧರಿದ್ದಾರೆ. ಸರ್ಕಾರ ಅದನ್ನು ಖರೀದಿ ಮಾಡಿ, ಗ್ರಾಮಕ್ಕೆ ಅನುಕೂಲವಾಗುವ ಸ್ಥಳದಲ್ಲಿ ರುದ್ರಭೂಮಿಯನ್ನು ಮಂಜೂರು ಮಾಡಬೇಕು” ಎಂದು ಒತ್ತಾಯಿಸಿದರು.

“ನಮ್ಮ ಊರಿನಲ್ಲಿ ಸುಮಾರು ಆರು ಸಾವಿರ ಜನಸಂಖ್ಯೆ ಇದ್ದು, ಇಷ್ಟು ವರ್ಷಗಳಾದರೂ ಶಾಶ್ವತ ರುದ್ರಭೂಮಿಯ ಭಾಗ್ಯ ಸಿಕ್ಕಿರಲಿಲ್ಲ. ಹಳ್ಳದ ದಂಡೆಗಳಲ್ಲಿ ಹಾಗೂ ಬೇರೆ ಬೇರೆ ಜಾಗಗಳಲ್ಲಿ ಅಂತ್ಯಕ್ರಿಯೆ ಮಾಡಿಕೊಂಡು ಬಂದಿದ್ದೇವೆ. ಈಗ ರುದ್ರಭೂಮಿ ಸಿಕ್ಕಿದೆ ಎಂದು ಸಂತೋಷಪಟ್ಟೆವು. ಆದರೆ ಆ ಜಾಗದಲ್ಲಿ ಕುಡಿಯುವ ನೀರಿಗಾಗಿ ಬೋರ್‌ವೆಲ್ ಹಾಕಲಾಗಿದ್ದು, ಜೊತೆಗೆ ಕಲ್ಲುಬಂಡೆಗಳಿಂದ ಕೂಡಿರುವುದರಿಂದ ಶವ ಸಂಸ್ಕಾರವೇ ಅಸಾಧ್ಯವಾಗಿದೆ. ಇದು ‘ಕೈಗೆ ಬಂದ ತುತ್ತು ಬಾಯಿಗೆ ಬಂದಿಲ್ಲ’ ಎಂಬಂತಾಗಿದೆ” ಎಂದು ಬೇಸರ ವ್ಯಕ್ತಪಡಿಸಿದರು ಗ್ರಾಮಸ್ಥ ದಶರಣಪ್ಪ.

ಇದನ್ನೂ ಓದಿ: ಯಾದಗಿರಿ | ಮರ್ಯಾದೆ ಹತ್ಯೆ ಖಂಡಿಸಿ ದಸಂಸ ಪ್ರತಿಭಟನೆ

ಈದಿನ.ಕಾಮ್ ನೊಂದಿಗೆ ಗ್ರಾಮಸ್ಥ ದೇವಿಂದ್ರಕುಮಾರ್ ಮಾತನಾಡಿ, “2018ರಿಂದ ರುದ್ರಭೂಮಿ ಮಂಜೂರು ಮಾಡುವಂತೆ ಹೋರಾಟ ನಡೆಸುತ್ತಿದ್ದೇವೆ. ಅದರ ಫಲವಾಗಿ ಎರಡು ಎಕರೆ ಜಮೀನು ಮಂಜೂರು ಆಗಿದೆ. ಆದರೆ ಮನುಷ್ಯರಿಂದ ಗುಂಡಿ ತೋಡಲು ಸಾಧ್ಯವೇ ಇಲ್ಲ. ಜೆಸಿಬಿ ಮೂಲಕ ಗುಂಡಿ ತೋಡಿಸಬೇಕಾದರೆ ಹೆಚ್ಚಿನ ಹಣ ಕೇಳುತ್ತಾರೆ. ಕೆಲವೊಮ್ಮೆ ಜೆಸಿಬಿ ಚಾಲಕರು ಕೆಲಸಕ್ಕೂ ನಿರಾಕರಿಸುತ್ತಾರೆ. ಅಲ್ಲದೆ ಮಂಜೂರಾದ ರುದ್ರಭೂಮಿ ಊರಿನಿಂದ ಮೂರು-ನಾಲ್ಕು ಕಿಲೋಮೀಟರ್ ದೂರವಿದ್ದು, ಶವವನ್ನು ಹೊತ್ತುಕೊಂಡು ಹೋಗುವುದು ಕುಟುಂಬಗಳಿಗೆ ತೀವ್ರ ಸಂಕಷ್ಟವನ್ನುಂಟು ಮಾಡುತ್ತಿದೆ. ಆದ್ದರಿಂದ ಸರ್ಕಾರ ಕೂಡಲೇ ಯೋಗ್ಯವಾದ, ಶವ ಸಂಸ್ಕಾರಕ್ಕೆ ಅನುಕೂಲವಾಗುವ ರುದ್ರಭೂಮಿಯನ್ನು ಮಂಜೂರು ಮಾಡಬೇಕು” ಎಂದು ಒತ್ತಾಯಿಸಿದರು.

ಹೋತಪೇಠ ಗ್ರಾಮಸ್ಥರು, ಮಂಜೂರಾದ ಕಲ್ಲುಬಂಡೆ ಪ್ರದೇಶದ ಆದೇಶವನ್ನು ರದ್ದುಪಡಿಸಿ, ಗ್ರಾಮಕ್ಕೆ ಸಮೀಪದಲ್ಲಿರುವ ಸಮತಟ್ಟು ಹಾಗೂ ಯೋಗ್ಯ ಭೂಮಿಯನ್ನು ಖರೀದಿ ಮಾಡಿ ಶಾಶ್ವತ ರುದ್ರಭೂಮಿಯಾಗಿ ಮಂಜೂರು ಮಾಡುವಂತೆ ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಸರ್ಕಾರ ತಕ್ಷಣ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ತೀವ್ರಗೊಳಿಸುವ ಎಚ್ಚರಿಕೆಯನ್ನು ಗ್ರಾಮಸ್ಥರು ನೀಡಿದ್ದಾರೆ.

WhatsApp Image 2024 11 08 at 12.18.37 667ed234 e1731048718511
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...