ಏಕದಿನ ವಿಶ್ವಕಪ್ 2023 | ಶ್ರೀಲಂಕಾ ಸೋಲಿಸಿ ಮೂರನೇ ಅಚ್ಚರಿ ಫಲಿತಾಂಶ ನೀಡಿದ ಅಫ್ಘಾನ್

Date:

ಐಸಿಸಿ ಏಕದಿನ ವಿಶ್ವಕಪ್‌ 2023ರ ಟೂರ್ನಿಯಲ್ಲಿ ಅಫ್ಘಾನಿಸ್ತಾನ ತಂಡ ಮೂರನೇ ಅಚ್ಚರಿ ಫಲಿತಾಂಶ ನೀಡಿದೆ. ಈಗಾಗಲೇ ಪ್ರಬಲ ತಂಡಗಳಾದ ಇಂಗ್ಲೆಂಡ್ ಹಾಗೂ ಪಾಕಿಸ್ತಾನ ತಂಡವನ್ನು ಸೋಲಿಸಿದ್ದ ಅಫ್ಘಾನಿಸ್ತಾನ ಮತ್ತೊಂದು ಪ್ರಬಲ ಶ್ರೀಲಂಕಾ ತಂಡವನ್ನು 7 ವಿಕೆಟ್‌ಗಳಿಂದ ಮಣಿಸಿದೆ.

ಪುಣೆಯ ಎಂಸಿಎ ಮೈದಾನದಲ್ಲಿ ನಡೆದ ವಿಶ್ವಕಪ್‌ ಟೂರ್ನಿಯ 30ನೇ ಪಂದ್ಯದಲ್ಲಿ ಶ್ರೀಲಂಕಾ ನೀಡಿದ್ದ 242 ರನ್‌ಗಳ ಸವಾಲನ್ನು ಬೆನ್ನಟ್ಟಿದ ಅಫ್ಘಾನಿಸ್ತಾನ ತಂಡ  ನಾಯಕ ಹಶ್ಮತುಲ್ಲಾ ಶಾಹಿದಿ (ಅಜೇಯ 58), ರಹಮತ್ ಶಾ(62), ಅಜ್ಮತುಲ್ಲಾ ಒಮರ್ಜಾಯ್ (ಅಜೇಯ 73) ಹಾಗೂ ಇಬ್ರಾಹಿಂ ಜದ್ರಾನ್ (39) ಅವರ ಸಂಘಟನಾತ್ಮಕ ಬ್ಯಾಟಿಂಗ್‌ನಿಂದ 45.2 ಓವರ್‌ಗಳಲ್ಲಿ  ಗುರಿ ಸಾಧಿಸಿತು.

ನಾಲ್ಕು ಸೋಲು ಕಂಡಿರುವ ಶ್ರೀಲಂಕಾಕ್ಕೆ ಸೆಮಿಫೈನಲ್‌ ಕನಸು ಇನ್ನು ಮುಂದೆ ಕಷ್ಟಕರವಾಗಲಿದೆ. ಅಫ್ಘಾನ್ ತಂಡ ಮುಂದಿನ ಮೂರು ಪಂದ್ಯಗಳಲ್ಲಿ ಇದೇ ರೀತಿಯ ಅಚ್ಚರಿ ಫಲಿತಾಂಶಗಳನ್ನು ನೀಡಿದರೆ ನಾಲ್ಕರ ಘಟ್ಟಕ್ಕೆ ದಾಪುಗಾಲಿಡುವುದರಲ್ಲಿ ಯಾವುದೇ ಸಂದೇಹವಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಪಾಕ್ ಕಳಪೆ ಪ್ರದರ್ಶನಕ್ಕೆ ಹೊಣೆ ಹೊತ್ತ ಇಂಜಮಾಮ್-ಉಲ್-ಹಕ್

ಟಾಸ್‌ ಗೆದ್ದ ಅಫ್ಘಾನ್ ತಂಡದ ನಾಯಕ ಹಶ್ಮತುಲ್ಲಾ ಶಾಹಿದಿ ಶ್ರೀಲಂಕಾ ತಂಡವನ್ನು ಬ್ಯಾಟಿಂಗ್‌ ಆಹ್ವಾನಿಸಿದರು. ಅಫ್ಘಾನಿಸ್ತಾನ ಬೌಲರ್‌ಗಳ ದಾಳಿಗೆ ತತ್ತರಿಸಿದ ಶ್ರೀಲಂಕಾ ಆಟಗಾರರು ಬಿರುಸಿನ ಆಟವಾಡದೆ 49.3 ಓವರ್‌ಗಳಲ್ಲಿ ಆಲೌಟ್‌ ಆಗಿ 241 ರನ್‌ಗಳಷ್ಟನ್ನೇ ಗಳಿಸಲು ಸಾಧ್ಯವಾಯಿತು.

ಪಾತುಂ ನಿಸ್ಸಾಂಕ(46), ಕುಸಾಲ್ ಮೆಂಡಿಸ್(39), ಸದೀರ ಸಮರವಿಕ್ರಮ(36) ಹಾಗೂ ಮಹೇಶ್ ತೀಕ್ಷಣ (29) ರನ್‌ ಗಳಿಸಿ ಗೌರವಾನ್ವಿತ ಮೊತ್ತದ ಪಾಲುದಾರರಾದರು.

ಅಫ್ಘಾನ್ ತಂಡದ ಫಜಲ್ಹಕ್ ಫಾರೂಕಿ 34/4, ಮುಜೀಬ್ ಉರ್ ರೆಹಮಾನ್ 38/2 ವಿಕೆಟ್ ಗಳಿಸಿ ಯಶಸ್ವಿ ಬೌಲರ್‌ಗಳೆನಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...