ವಿಶ್ವಕಪ್ | ಕ್ಯಾಚ್ ಕೈಚೆಲ್ಲಿದ ದಕ್ಷಿಣ ಆಫ್ರಿಕಾಕ್ಕೆ ಮತ್ತೆ ‘ಚೋಕರ್ಸ್’ ಪಟ್ಟ: 8ನೇ ಬಾರಿ ಆಸೀಸ್ ಫೈನಲ್‌ಗೆ

Date:

ಐಸಿಸಿ ಏಕದಿನ ವಿಶ್ವಕಪ್‌ 2023ರ ಟೂರ್ನಿಯ ಎರಡನೇ ಸೆಮಿಫೈನಲ್‌ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ದಕ್ಷಿಣ ಆಫ್ರಿಕಾ ತಂಡವನ್ನು 3 ವಿಕೆಟ್‌ಗಳಿಂದ  ಮಣಿಸಿ ಫೈನಲ್‌ ಪ್ರವೇಶಿಸಿದೆ.

ಟೂರ್ನಿಯುದ್ದಕ್ಕೂ ಉತ್ತಮ ಪ್ರದರ್ಶನ ನೀಡಿದ್ದ ತೆಂಬಾ ಬಾವುಮಾ ನೇತೃತ್ವದ ದಕ್ಷಿಣ ಆಫ್ರಿಕಾ ಆಟಗಾರರು, ಬ್ಯಾಟಿಂಗ್‌ ವಿಭಾಗದಲ್ಲಿ ಹೆಚ್ಚು ಹೋರಾಟ ನೀಡಲು ವಿಫಲರಾಗಿ ಏಕದಿನ ವಿಶ್ವಕಪ್ ಆವೃತ್ತಿಯಲ್ಲಿ ಐದನೇ ಬಾರಿಯೂ ಸೆಮಿಫೈನಲ್‌ನಲ್ಲಿ ಮುಗ್ಗರಿಸುವ ಮೂಲಕ ‘ಚೋಕರ್ಸ್’ ಪಟ್ಟ ಉಳಿಸಿಕೊಂಡರು.

ಕೋಲ್ಕತ್ತಾ ಈಡನ್‌ ಗಾರ್ಡನ್‌ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ನೀಡಿದ್ದ 213 ರನ್‌ಗಳ ಸಾಧಾರಣ ಮೊತ್ತವನ್ನು ಬೆನ್ನಟ್ಟಿದ ಆಸ್ಟ್ರೇಲಿಯಾ, 47.2 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 8ನೇ ಬಾರಿ ಫೈನಲ್‌ ತಲುಪಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನ.19ರಂದು ಗುಜರಾತಿನ ಅಹಮದಾಬಾದಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಪ್ರಶಸ್ತಿಗಾಗಿ ರೋಹಿತ್ ಶರ್ಮಾ ನೇತೃತ್ವದ ಟೀಮ್ ಇಂಡಿಯಾ ವಿರುದ್ಧ ಸೆಣಸಲಿದೆ. ಟೀಮ್ ಇಂಡಿಯಾ ನಿನ್ನೆ ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದಿದ್ದ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ಅನ್ನು 70 ರನ್‌ಗಳಿಂದ ಮಣಿಸಿತ್ತು.

ಇಂದಿನ ಸೆಮಿಫೈನಲ್ ಪಂದ್ಯದಲ್ಲಿ ಆಸೀಸ್‌ ಪರ ಬ್ಯಾಟಿಂಗ್‌ನಲ್ಲಿ ಟ್ರಾವಿಸ್ ಹೆಡ್(62), ಸ್ಟೀವನ್‌ ಸ್ಮಿತ್ (30), ಡೇವಿಡ್‌ ವಾರ್ನರ್ (29) ಹಾಗೂ ವಿಕೆಟ್ ಕೀಪರ್ ಜೋಶ್ ಇಂಗ್ಲಿಸ್ (28) ಹಾಗೂ  8ನೇ ವಿಕೆಟ್ ಜೊತೆಯಾಟದಲ್ಲಿ ತಾಳ್ಮೆಯಿಂದ 22 ರನ್‌ಗಳ ಆಟವಾಡಿದ ಮಿಚೆಲ್ ಸ್ಟಾರ್ಕ್(16) ಹಾಗೂ ನಾಯಕ ಪ್ಯಾಟ್ ಕಮಿನ್ಸ್(14) ಕೂಡ ಆಸ್ಟ್ರೇಲಿಯಾದ ಗೆಲುವಿಗೆ ಕಾರಣರಾದರು.

ದಕ್ಷಿಣ ಆಫ್ರಿಕಾ ಪರ ತಬ್ರೇಝ್ ಶಮ್ಸಿ 42/2, ಜೆರಾಲ್ಡ್ 47/2, ಕೇಶವ್‌ ಮಹಾರಾಜ್,,ಏಡನ್ ಮರ್ಕರಂ,ಕಗಿಸೊ ರಬಾಡ ತಲಾ ಒಂದೊಂದು ವಿಕೆಟ್ ಪಡೆದು ಕೊನೆಯವರೆಗೂ ಗೆಲುವಿನ ಆಸೆ ಮೂಡಿಸಿದರೂ ಆಸೀಸ್‌ ತಂಡವನ್ನು ಆಲೌಟ್‌ ಮಾಡಲಾಗಲಿಲ್ಲ.

ದುರ್ಬಲ ಫೀಲ್ಡಿಂಗ್‌ ಕೂಡ ದಕ್ಷಿಣ ಆಫ್ರಿಕಾದ ಸೋಲಿಗೆ ಕಾರಣವಾಯಿತು. ಹಲವು ಕ್ಯಾಚುಗಳನ್ನು ಕೈಚೆಲ್ಲಿ ಗೆಲ್ಲುವ ಅವಕಾಶವನ್ನು ಕಳೆದುಕೊಂಡರು.

ಈ ಸುದ್ದಿ ಓದಿದ್ದೀರಾ? ಆಸೀಸ್ – ದಕ್ಷಿಣ ಆಫ್ರಿಕಾ ವಿಶ್ವಕಪ್ ಸೆಮಿಫೈನಲ್: ಹರಿಣಗಳ ತಂಡಕ್ಕೆ ಆರಂಭಿಕ ಆಘಾತ

ಆಸ್ಟ್ರೇಲಿಯಾ ಉತ್ತಮ ಬೌಲಿಂಗ್, ವ್ಯರ್ಥವಾದ ಮಿಲ್ಲರ್ ಶತಕ

ಈ ಮೊದಲು ಟಾಸ್‌ ಗೆದ್ದ ಹರಿಣ ತಂಡದ ನಾಯಕ ತೆಂಬಾ ಬವುಮಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ತಾವು ಮೊದಲು ಬ್ಯಾಟಿಂಗ್‌ ನಡೆಸಿದ ಬಹುತೇಕ ಪಂದ್ಯಗಳಲ್ಲಿ 300ರ ಗಡಿ ದಾಟಿದ್ದ ಹರಿಣಗಳ ತಂಡ ಇಂದು ಆಸೀಸ್‌ ಬೌಲರ್‌ಗಳ ದಾಳಿಗೆ 212 ರನ್‌ಗಳಿಗೆ ಮುಗ್ಗರಿಸಿತು.

ಸ್ಪೋಟಕ ಆಟಗಾರ ಡೇವಿಡ್‌ ಮಿಲ್ಲರ್‌ ಶತಕ ಗಳಿಸಿ ಏಕಾಂಗಿಯಾಗಿ ಹೋರಾಟ ನಡೆಸಿದರು. 24ಕ್ಕೆ 4 ವಿಕೆಟ್​ ಕಳೆದುಕೊಂಡು ಸಂಕಷ್ಟದಲ್ಲಿದ್ದ ವೇಳೆ ಕ್ರೀಸ್​ಗೆ ಬಂದ ಮಿಲ್ಲರ್​ 48ನೇ ಓವರ್​​​ವರೆಗೂ ಕ್ರೀಸಿನಲ್ಲಿ ನಿಂತು ಅಮೋಘ ಶತಕ ಸಿಡಿಸಿದರು. ಮಿಲ್ಲರ್‌ ಹಾಗೂ ಕ್ಲಾಸೆನ್ ಬಿಟ್ಟರೆ ಉಳಿದ ಆಟಗಾರರು ಸಂಪೂರ್ಣ ವಿಫಲರಾದರು.

ಕ್ಲಾಸೆನ್ (47) ಜೊತೆಗೆ ಉತ್ತಮ ಆಟವಾಡಿದ ಮಿಲ್ಲರ್​, ವಿಕೆಟ್​ಗಳು ಬೀಳುತ್ತಿದ್ದರೂ ಏಕಾಂಗಿ ಹೋರಾಟ ನಡೆಸಿದರು. 101 ರನ್‌ ಗಳಿಸಿದ ಮಿಲ್ಲರ್ 48ನೇ ಓವರ್‌ನಲ್ಲಿ ಆಸೀಸ್‌ ನಾಯಕ ಪ್ಯಾಟ್ ಕಮಿನ್ಸ್​ ಬೌಲಿಂಗ್‌ನಲ್ಲಿ ಔಟಾದರು. ಅವರ 116 ಎಸೆತಗಳ ಆಟದಲ್ಲಿ 8 ಬೌಂಡರಿ, 5 ಸಿಕ್ಸರ್‌ಗಳಿದ್ದವು.

ಆಸೀಸ್‌ ಪರ ಪ್ಯಾಟ್ ಕಮಿನ್ಸ್​, ಮಿಚೆಲ್ ಸ್ಟಾರ್ಕ್​ ತಲಾ 3 ವಿಕೆಟ್, ಜೋಶ್ ಹೇಜಲ್​ವುಡ್, ಟ್ರಾವಿಸ್ ಹೆಡ್ ತಲಾ 2 ವಿಕೆಟ್ ಪಡೆದು ಮಿಂಚಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...