ವಿಶ್ವಕಪ್ | ಡೆಸ್ಸನ್, ಡಿ ಕಾಕ್ ಭರ್ಜರಿ ಶತಕ; 358 ರನ್ ಗುರಿ ಬೆನ್ನಟ್ಟಿದ ನ್ಯೂಜಿಲೆಂಡ್‌ಗೆ ಆರಂಭಿಕ ಆಘಾತ

Date:

ರಾಸ್ಸಿ ವ್ಯಾನ್ ಡೆರ್ ಡಸ್ಸೆನ್ ಹಾಗೂ ಕ್ವಿಂಟನ್‌ ಡಿ ಕಾಕ್‌ ಭರ್ಜರಿ ಶತಕ ಹಾಗೂ ಡೇವಿಡ್ ಮಿಲ್ಲರ್ ಸ್ಪೋಟಕ ಅರ್ಧ ಶತಕದ ನೆರವಿನಿಂದ ದಕ್ಷಿಣ ಆಫ್ರಿಕಾ ತಂಡ ಐಸಿಸಿ ಏಕದಿನ ವಿಶ್ವಕಪ್‌ 2023ರ ಟೂರ್ನಿಯ 32ನೇ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡಕ್ಕೆ 358 ರನ್‌ ಗುರಿ ನೀಡಿದೆ.

ಪುಣೆಯಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್‌ ಗೆದ್ದ ನ್ಯೂಜಿಲೆಂಡ್‌ ತಂಡದ ನಾಯಕ ಟಾಮ್ ಲ್ಯಾಥಮ್ ದಕ್ಷಿಣ ಆಫ್ರಿಕಾ ತಂಡವನ್ನು ಬ್ಯಾಟಿಂಗ್‌ ಆಹ್ವಾನಿಸಿದರು. ಆರಂಭಿಕರಾಗಿ ಕಣಕ್ಕಿಳಿದ ನಾಯಕ ಟೆಂಬಾ ಬವುಮಾ ಹಾಗೂ ಸ್ಪೋಟಕ ಆಟಗಾರ ಕ್ವಿಂಟನ್‌ ಡಿ ಕಾಕ್ ಉತ್ತಮ ಆರಂಭ ನೀಡಿದರು.

ಆದರೆ 9 ನೇ ಓವರ್‌ನಲ್ಲಿ ಬೋಲ್ಟ್‌ ಬೌಲಿಂಗ್‌ನಲ್ಲಿ ಕೆಟ್ಟ ಹೊಡೆತಕ್ಕೆ ಮುಂದಾದ ನಾಯಕ ಟೆಂಬಾ ಬವುಮಾ (24) ಮಿಚೆಲ್‌ಗೆ ಕ್ಯಾಚಿತ್ತು ಔಟಾದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಂತರ ಶುರುವಾದದ್ದು ರಾಸ್ಸಿ ವ್ಯಾನ್ ಡೆರ್ ಡಸ್ಸೆನ್ ಹಾಗೂ ಕ್ವಿಂಟನ್‌ ಡಿ ಕಾಕ್‌ ಸೊಗಸಾದ ಆಟ. ಆಗಾಗ ಸಿಕ್ಸರ್‌, ಬೌಂಡರಿಗಳನ್ನು ಬಾರಿಸುತ್ತ ಉಳಿದ ಸಮಯದಲ್ಲಿ ರಕ್ಷಣಾತ್ಮಕವಾಗಿ ಆಡಿದ ಡಸ್ಸೆನ್ ಹಾಗೂ ಡಿ ಕಾಕ್‌ ಜೋಡಿ ಎರಡನೇ ವಿಕೆಟ್ ನಷ್ಟಕ್ಕೆ ಅದ್ಭುತ 200 ರನ್‌ಗಳ ಜೊತೆಯಾಟವಾಡಿದರು.

ವಿಶ್ವಕಪ್‌ನಲ್ಲಿ ಡಿ ಕಾಕ್‌ 4ನೇ ಶತಕ

ಶತಕ ಬಾರಿಸಿದ ನಂತರ 40 ನೇ ಓವರ್‌ನಲ್ಲಿ ತಂಡದ ಮೊತ್ತ 238 ರನ್‌ ಇದ್ದಾಗ 114(116 ಚೆಂಡು) ರನ್‌ ಗಳಿಸಿದ್ದ ಕ್ವಿಂಟನ್‌ ಡಿ ಕಾಕ್‌ ಸೌಥಿ ಬೌಲಿಂಗ್‌ನಲ್ಲಿ ಫಿಲಿಪ್ಸ್‌ಗೆ ಕ್ಯಾಚಿತ್ತು ಔಟಾದರು. ಅವರ ಅದ್ಭುತ ಆಟದಲ್ಲಿ 10 ಬೌಂಡರಿ ಹಾಗೂ 3 ಸಿಕ್ಸರ್‌ ಒಳಗೊಂಡಿದ್ದವು.

ಡಿ ಕಾಕ್‌ 2023ರ ವಿಶ್ವಕಪ್‌ ಟೂರ್ನಿಯಲ್ಲಿ 4ನೇ ಶತಕವಾಗಿದೆ. ರೋಹಿತ್‌ ಶರ್ಮಾ ಅವರ ಒಂದೇ ವಿಶ್ವಕಪ್‌ನಲ್ಲಿ ಪೇರಿಸಿರುವ 5 ಶತಕ ಸರಿಗಟ್ಟಲು ಒಂದು ಶತಕ ಬಾಕಿಯಿದೆ. ಅಲ್ಲದೆ ಈ ಟೂರ್ನಿಯಲ್ಲಿ 545 ರನ್‌ಗಳೊಂದಿಗೆ ಮೊದಲ ಸ್ಥಾನದಲ್ಲಿದ್ದಾರೆ.

ಈ ಸುದ್ದಿ ಓದಿದ್ದೀರಾ: 2034ರ ವಿಶ್ವಕಪ್ ಫುಟ್‌ಬಾಲ್ ಆತಿಥ್ಯ ವಹಿಸುವ ಸೌದಿ ಅರೇಬಿಯಾ

ರಾಸ್ಸಿ ವ್ಯಾನ್ ಡೆರ್ ಡಸ್ಸೆನ್ ಉತ್ತಮ ಬ್ಯಾಟಿಂಗ್‌

ಡಿ ಕಾಕ್‌ಗೆ ಉತ್ತಮ ಜೊತೆ ನೀಡಿದ ಡೆರ್ ಡಸ್ಸೆನ್ 48ನೇ ಓವರ್‌ಗಳವರೆಗೂ ಉತ್ತಮ ಆಟವಾಡಿ ಶತಕವನ್ನು ಬಾರಿಸಿದರು. 118 ಚೆಂಡುಗಳಲ್ಲಿ 133 ರನ್‌ ಗಳಿಸಿದ ಡಸ್ಸೆನ್ ಅಟದಲ್ಲಿ 9 ಬೌಂಡರಿ, 5 ಭರ್ಜರಿ ಸಿಕ್ಸರ್‌ಗಳಿದ್ದವು.

ಡಸ್ಸೆನ್‌ ಔಟಾದ ನಂತರ ಮಿಲ್ಲರ್ ತಮ್ಮ ಸ್ಫೋಟಕ ಆಟವನ್ನು ಮುಂದುವರೆಸಿ 30 ಚೆಂಡುಗಳಲ್ಲಿ 4 ಭರ್ಜರಿ ಸಿಕ್ಸರ್‌ ಹಾಗೂ 2 ಬೌಂಡರಿಗಳೊಂದಿಗೆ 53 ರನ್‌ ಬಾರಿಸಿದರು. ಅಂತಿಮವಾಗಿ ದಕ್ಷಿಣ ಆಫ್ರಿಕಾ 50 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 357 ರನ್‌ಗಳ ಭರ್ಜರಿ ಮೊತ್ತ ಪೇರಿಸಿತು.

ದಕ್ಷಿಣ ಈ ಟೂರ್ನಿಯಲ್ಲಿ ಮೊದಲು ಬ್ಯಾಟಿಂಗ್‌ ನಡೆಸಿದ ಎಲ್ಲ ಪಂದ್ಯಗಳಲ್ಲಿಯೂ 300 ಮೇಲ್ಪಟ್ಟು ರನ್‌ ಪೇರಿಸಿರುವುದು ದಾಖಲೆಯೇ ಸರಿ.

ದಕ್ಷಿಣ ಆಫ್ರಿಕಾದ  ಗುರಿಯನ್ನು ಬೆನ್ನಟ್ಟಿರುವ ನ್ಯೂಜಿಲೆಂಡ್‌ ಆರಂಭಿಕ ಆಘಾತ ಅನುಭವಿಸಿದ್ದು,  6 ಓವರ್‌ಗಳಲ್ಲಿ 1 ವಿಕೆಟ್‌ ನಷ್ಟಕ್ಕೆ 25 ರನ್‌ ಗಳಿಸಿದೆ.

 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...