ವಿಶ್ವಕಪ್ ಫೈನಲ್ ಪಂದ್ಯ ಬಂಡವಾಳ ಮಾಡಿಕೊಂಡ ವಿಮಾನಯಾನ ಸಂಸ್ಥೆ, ಹೋಟೆಲ್‌ಗಳು: ಟಿಕೆಟ್, ಕೊಠಡಿ ಬಾಡಿಗೆ ಹತ್ತು ಪಟ್ಟು ಹೆಚ್ಚಳ

Date:

ಗುಜರಾತಿನ ಅಹಮದಾಬಾದಿನಲ್ಲಿ ನ.19ರಂದು ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಫೈನಲ್‌ ಪಂದ್ಯ ನಡೆಯಲಿದೆ. ಟ್ರೋಫಿ ಯಾರು ಗೆಲ್ಲುತ್ತಾರೆಂದು ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳು ಕಾತರದಿಂದ ಕಾಯುತ್ತಿರುವ ಕ್ರೀಡಾ ಹಬ್ಬಕ್ಕೆ ಭಾನುವಾರ ರಾತ್ರಿ ತೆರೆ ಬೀಳಲಿದೆ.

ಲಕ್ಷಕ್ಕೂ ಹೆಚ್ಚು ಮಂದಿ ಸಾಮರ್ಥ್ಯವಿರುವ ಅಹಮದಾಬಾದಿನ ನರೇಂದ್ರ ಮೋದಿ ಕ್ರೀಡಾಂಗಣ ಈಗಾಗಲೇ ಸಂಪೂರ್ಣವಾಗಿ ಭರ್ತಿಯಾಗಿದೆ. ಹಲವು ಕ್ರಿಕೆಟ್ ತಾರೆಗಳು, ಸಿನಿಮಾ ದಿಗ್ಗಜರಲ್ಲದೆ ಭಾರತ ಹಾಗೂ ಆಸ್ಟ್ರೇಲಿಯಾ ಪ್ರಧಾನಿಗಳು ಈ ಪಂದ್ಯವನ್ನು ವೀಕ್ಷಿಸುವ ಸಾಧ್ಯತೆಯಿದೆ.

ಟೀಂ ಇಂಡಿಯಾ ವಿಶ್ವಕಪ್ ಫೈನಲ್‌ ಪ್ರವೇಶಿಸಿರುವ ಪಂದ್ಯವನ್ನು ಕ್ರೀಡಾಂಗಣದಲ್ಲಿ ಕೂತು ನೋಡಬೇಕೆಂದು ಕ್ರೀಡಾ ಪ್ರೇಮಿಗಳು ಹಂಬಲಿಸುವುದು ಸಹಜ. ಇದನ್ನೇ ಬಂಡವಾಳ ಮಾಡಿಕೊಂಡಿರುವ ವಿಮಾನಯಾನ ಸಂಸ್ಥೆಗಳು ಹಾಗೂ ಹೋಟೆಲ್‌ಗಳು ಟಿಕೆಟ್‌ ಹಾಗೂ ಕೊಠಡಿ ಬಾಡಿಗೆಯ ಬೆಲೆಯನ್ನು ಹತ್ತು ಪಟ್ಟು ಹೆಚ್ಚಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಚಿನ್‌ ರವೀಂದ್ರ ರೀತಿ ಶ್ರೇಯಸ್‌ ಅಯ್ಯರ್‌ಗೂ ಕೂಡ ಇದೆ ಕರ್ನಾಟಕದ ನಂಟು

ಬೆಂಗಳೂರಿನಿಂದ ಅಹಮದಾಬಾದಿಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪ್ರಯಾಣಿಸಲು ಸಾಮಾನ್ಯ ವಿಮಾನಯಾನ ದರ 5 ರಿಂದ 10 ಸಾವಿರ ರೂ. ಇರುತ್ತದೆ. ಆದರೆ ನವೆಂಬರ್‌ 18 ಮತ್ತು 19 ರಂದು ಈ ದರವನ್ನು 30 ರಿಂದ 40 ಸಾವಿರ ರೂ.ಗಳಿಗೆ ಏರಿಸಲಾಗಿದೆ. ಇದು ಒಂದು ಬಾರಿ ತೆರಳುವ ಏಕಮುಖ ಸಂಚಾರ ದರವಾಗಿದ್ದು, ವಾಪಸ್‌ ಆಗಮಿಸಬೇಕೆಂದರೆ ಮುಂದಿನ ಎರಡು ದಿನಗಳಲ್ಲಿ ದರವು ಅಷ್ಟೆ ಪ್ರಮಾಣದಲ್ಲಿದೆ.

ಇದು ಬೆಂಗಳೂರಿನಿಂದ ಮಾತ್ರವಲ್ಲ ಇತರ ಮೆಟ್ರೋ ನಗರಗಳಾದ ಕೋಲ್ಕತ್ತಾ, ಮುಂಬೈ, ದೆಹಲಿ ಹಾಗೂ ಚೆನ್ನೈನಿಂದ ಕೂಡ ಟಿಕೆಟ್ ದರವನ್ನು ವಿಪರೀತ ಏರಿಸಲಾಗಿದೆ ಎಂದು ಕ್ರೀಡಾ ಪ್ರೇಮಿಗಳು ಅಳಲು ತೋಡಿಕೊಂಡಿದ್ದಾರೆ.

ಇದೇ ರೀತಿ ಅಹಮದಾಬಾದಿನ ಹೋಟೆಲ್‌ಗಳ ಬಾಡಿಗೆ ದರವನ್ನು ಹಲವು ಪಟ್ಟು ಏರಿಸಲಾಗಿದೆ. ಸಾಮಾನ್ಯವಾಗಿ ಅಹಮದಾಬಾದ್‌ನಲ್ಲಿ ಐಷಾರಾಮಿ ಹೋಟೆಲ್ ಕೊಠಡಿ ಬೆಲೆ (ಒಂದು ರಾತ್ರಿಗೆ) ಸುಮಾರು 10 ಸಾವಿರ ರೂಪಾಯಿ ಇರುತ್ತದೆ. ಆದರೆ ಸದ್ಯ ಫೋರ್ ಸ್ಟಾರ್ ಮತ್ತು ಫೈವ್ ಸ್ಟಾರ್ ಹೋಟೆಲ್‌ಗಳ ಬೆಲೆಗಳು ಬೆಚ್ಚಿ ಬೀಳಿಸುವಂತಿವೆ.

ಒಂದು ಕೊಠಡಿ ಬಾಡಿಗೆಗೆ ಪಡೆಯಲು ರಾತ್ರಿಗೆ ರೂ.1 ಲಕ್ಷ ರೂ.ವರೆಗೂ ಪಾವತಿಸಬೇಕಿದೆ. ಇತರೆ ಐಷಾರಾಮಿ ಹೋಟೆಲ್ ಮಾಲೀಕರು 24 ಸಾವಿರದಿಂದ 2 ಲಕ್ಷದ 15 ಸಾವಿರ ರೂ.ವರೆಗೂ ವಸೂಲಿ ಮಾಡುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...