ವಿಶ್ವಕಪ್ 2023 | ನ್ಯೂಜಿಲೆಂಡ್‌ಗೆ ಹ್ಯಾಟ್ರಿಕ್ ಸೋಲಿನ ಆಘಾತ; ಸೆಮಿಫೈನಲ್‌ನತ್ತ ದಕ್ಷಿಣ ಆಫ್ರಿಕಾ

Date:

ಪ್ರಬಲ ದಕ್ಷಿಣ ಆಫ್ರಿಕಾ ತಂಡ ಐಸಿಸಿ ಏಕದಿನ ವಿಶ್ವಕಪ್‌ ಕ್ರಿಕೆಟ್ 2023ರ ಟೂರ್ನಿಯಲ್ಲಿ ತನ್ನ ವಿಜಯದ ಯಾತ್ರೆಯನ್ನು ಮುಂದುವರೆಸಿದೆ. ಆರಂಭದ ಪಂದ್ಯಗಳಲ್ಲಿ ಗೆಲುವು ಸಾಧಿಸುತ್ತ ಬಂದ ನ್ಯೂಜಿಲೆಂಡ್‌ ತಂಡವನ್ನು 190 ರನ್ನುಗಳ ಭಾರಿ ಅಂತರದಿಂದ ಮಣಿಸಿ ಸೆಮಿಫೈನಲ್‌ ದಾರಿಯನ್ನು ಸುಗಮಗೊಳಿಸಿಕೊಂಡಿದೆ.

ಆಸ್ಟ್ರೇಲಿಯಾ ವಿರುದ್ಧದ ಕಳೆದ ಪಂದ್ಯದಲ್ಲಿ ಪ್ರಬಲ ಪೈಪೋಟಿ ನೀಡಿ ಸನಿಹದಲ್ಲಿ ಸೋತಿದ್ದ ನ್ಯೂಜಿಲೆಂಡ್‌ ಇಂದು ಪುಣೆಯಲ್ಲಿ ನಡೆದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ನೀಡಿದ್ದ 358 ರನ್ನುಗಳ ಭಾರಿ ಸವಾಲನ್ನು ಬೆನ್ನಟ್ಟಿ 35.3 ಓವರ್‌ಗಳಲ್ಲಿ ಕೇವಲ 167 ರನ್‌ಗಳಿಗೆ ಆಲೌಟ್‌ ಆಗಿ ಸೋಲಿಗೆ ಶರಣಾಯಿತು.

ಕೊನೆಯಲ್ಲಿ ಉತ್ತಮ ಆಟವಾಡಿದ ಗ್ಲೆನ್‌ ಫೆಲಿಪ್ಸ್‌ (60), ವಿಲ್‌ ಯಂಗ್‌ (33) ಹಾಗೂ ಡೇರಿಲ್‌ ಮಿಚಲ್‌(24)  ಅವರ ಸಣ್ಣ ಮೊತ್ತವನ್ನು ಬಿಟ್ಟರೆ ಉಳಿದ ಬ್ಯಾಟ್ಸ್‌ಮನ್‌ಗಳ್ಯಾರು ಒಂದಂಕಿಯ ಮೊತ್ತವನ್ನು ಗಳಿಸಲಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕರಾರುವಕ್‌ ಬೌಲಿಂಗ್‌ ನಡೆಸಿದ ದಕ್ಷಿಣ ಆಫ್ರಿಕಾದ ಕೇಶವ್‌ ಮಹಾರಾಜ್‌ 46/4, ಮಾರ್ಕೊ ಜಾನ್‌ಸೆನ್‌ 31/3 ಹಾಗೂ ಜೆರಾಲ್ಡ್ ಕೋಟ್ಜಿ 41/2  ವಿಕೆಟ್ ಕಬಳಿಸಿ ಗೆಲುವಿನ ರೂವಾರಿಯಾದರು.

ಸತತ ಮೂರು ಪಂದ್ಯಗಳನ್ನು ಸೋತಿರುವ ನ್ಯೂಜಿಲೆಂಡ್ ಸೆಮಿಫೈನಲ್‌ನಲ್ಲಿ ಸ್ಥಾನ ಖಚಿತಪಡಿಸಿಕೊಳ್ಳಲು ಲೀಗ್‌ನ ಉಳಿದ ಎರಡೂ ಪಂದ್ಯಗಳನ್ನು ಉತ್ತಮ ರನ್‌ರೇಟ್‌ನಲ್ಲಿ ಗೆಲ್ಲಬೇಕಿದೆ.

ಮೊದಲು ಟಾಸ್‌ ಗೆದ್ದ ನ್ಯೂಜಿಲೆಂಡ್‌ ತಂಡದ ನಾಯಕ ಟಾಮ್ ಲ್ಯಾಥಮ್ ದಕ್ಷಿಣ ಆಫ್ರಿಕಾ ತಂಡವನ್ನು ಬ್ಯಾಟಿಂಗ್‌ ಆಹ್ವಾನಿಸಿದರು. ಆರಂಭಿಕರಾಗಿ ಕಣಕ್ಕಿಳಿದ ನಾಯಕ ಟೆಂಬಾ ಬವುಮಾ ಹಾಗೂ ಸ್ಪೋಟಕ ಆಟಗಾರ ಕ್ವಿಂಟನ್‌ ಡಿ ಕಾಕ್ ಉತ್ತಮ ಆರಂಭ ನೀಡಿದರು.

ಆದರೆ 9 ನೇ ಓವರ್‌ನಲ್ಲಿ ಬೋಲ್ಟ್‌ ಬೌಲಿಂಗ್‌ನಲ್ಲಿ ಕೆಟ್ಟ ಹೊಡೆತಕ್ಕೆ ಮುಂದಾದ ನಾಯಕ ಟೆಂಬಾ ಬವುಮಾ (24) ಮಿಚೆಲ್‌ಗೆ ಕ್ಯಾಚಿತ್ತು ಔಟಾದರು.

ನಂತರ ಶುರುವಾದದ್ದು ರಾಸ್ಸಿ ವ್ಯಾನ್ ಡೆರ್ ಡಸ್ಸೆನ್ ಹಾಗೂ ಕ್ವಿಂಟನ್‌ ಡಿ ಕಾಕ್‌ ಸೊಗಸಾದ ಆಟ. ಆಗಾಗ ಸಿಕ್ಸರ್‌, ಬೌಂಡರಿಗಳನ್ನು ಬಾರಿಸುತ್ತ ಉಳಿದ ಸಮಯದಲ್ಲಿ ರಕ್ಷಣಾತ್ಮಕವಾಗಿ ಆಡಿದ ಡಸ್ಸೆನ್ ಹಾಗೂ ಡಿ ಕಾಕ್‌ ಜೋಡಿ ಎರಡನೇ ವಿಕೆಟ್ ನಷ್ಟಕ್ಕೆ ಅದ್ಭುತ 200 ರನ್‌ಗಳ ಜೊತೆಯಾಟವಾಡಿದರು.

ವಿಶ್ವಕಪ್‌ನಲ್ಲಿ ಡಿ ಕಾಕ್‌ 4ನೇ ಶತಕ

ಶತಕ ಬಾರಿಸಿದ ನಂತರ 40 ನೇ ಓವರ್‌ನಲ್ಲಿ ತಂಡದ ಮೊತ್ತ 238 ರನ್‌ ಇದ್ದಾಗ 114(116 ಚೆಂಡು) ರನ್‌ ಗಳಿಸಿದ್ದ ಕ್ವಿಂಟನ್‌ ಡಿ ಕಾಕ್‌ ಸೌಥಿ ಬೌಲಿಂಗ್‌ನಲ್ಲಿ ಫಿಲಿಪ್ಸ್‌ಗೆ ಕ್ಯಾಚಿತ್ತು ಔಟಾದರು. ಅವರ ಅದ್ಭುತ ಆಟದಲ್ಲಿ 10 ಬೌಂಡರಿ ಹಾಗೂ 3 ಸಿಕ್ಸರ್‌ ಒಳಗೊಂಡಿದ್ದವು.

ಡಿ ಕಾಕ್‌ 2023ರ ವಿಶ್ವಕಪ್‌ ಟೂರ್ನಿಯಲ್ಲಿ 4ನೇ ಶತಕವಾಗಿದೆ. ರೋಹಿತ್‌ ಶರ್ಮಾ ಅವರ ಒಂದೇ ವಿಶ್ವಕಪ್‌ನಲ್ಲಿ ಪೇರಿಸಿರುವ 5 ಶತಕ ಸರಿಗಟ್ಟಲು ಒಂದು ಶತಕ ಬಾಕಿಯಿದೆ. ಅಲ್ಲದೆ ಈ ಟೂರ್ನಿಯಲ್ಲಿ 545 ರನ್‌ಗಳೊಂದಿಗೆ ಮೊದಲ ಸ್ಥಾನದಲ್ಲಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕೋಚ್ ದ್ರಾವಿಡ್ ಕಾಣ್ಕೆ ಕಾಣುತ್ತಿಲ್ಲವೇಕೆ?

ರಾಸ್ಸಿ ವ್ಯಾನ್ ಡೆರ್ ಡಸ್ಸೆನ್ ಉತ್ತಮ ಬ್ಯಾಟಿಂಗ್‌

ಡಿ ಕಾಕ್‌ಗೆ ಉತ್ತಮ ಜೊತೆ ನೀಡಿದ ಡೆರ್ ಡಸ್ಸೆನ್ 48ನೇ ಓವರ್‌ಗಳವರೆಗೂ ಉತ್ತಮ ಆಟವಾಡಿ ಶತಕವನ್ನು ಬಾರಿಸಿದರು. 118 ಚೆಂಡುಗಳಲ್ಲಿ 133 ರನ್‌ ಗಳಿಸಿದ ಡಸ್ಸೆನ್ ಅಟದಲ್ಲಿ 9 ಬೌಂಡರಿ, 5 ಭರ್ಜರಿ ಸಿಕ್ಸರ್‌ಗಳಿದ್ದವು. ಡೆರ್ ಡಸ್ಸೆನ್ ಕೂಡ ವಿಶ್ವಕಪ್‌ ಟೂರ್ನಿಯಲ್ಲಿ ಎರಡನೇ ಶತಕ ಬಾರಿಸಿದರು.

ಡಸ್ಸೆನ್‌ ಔಟಾದ ನಂತರ ಮಿಲ್ಲರ್ ತಮ್ಮ ಸ್ಫೋಟಕ ಆಟವನ್ನು ಮುಂದುವರೆಸಿ 30 ಚೆಂಡುಗಳಲ್ಲಿ 4 ಭರ್ಜರಿ ಸಿಕ್ಸರ್‌ ಹಾಗೂ 2 ಬೌಂಡರಿಗಳೊಂದಿಗೆ 53 ರನ್‌ ಬಾರಿಸಿದರು. ಅಂತಿಮವಾಗಿ ದಕ್ಷಿಣ ಆಫ್ರಿಕಾ 50 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 357 ರನ್‌ಗಳ ಭರ್ಜರಿ ಮೊತ್ತ ಪೇರಿಸಿತು.

ದಕ್ಷಿಣ ಈ ಟೂರ್ನಿಯಲ್ಲಿ ಮೊದಲು ಬ್ಯಾಟಿಂಗ್‌ ನಡೆಸಿದ ಎಲ್ಲ ಪಂದ್ಯಗಳಲ್ಲಿಯೂ 300 ಮೇಲ್ಪಟ್ಟು ರನ್‌ ಪೇರಿಸಿರುವುದು ದಾಖಲೆಯೇ ಸರಿ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...