ಆಸೀಸ್ – ದಕ್ಷಿಣ ಆಫ್ರಿಕಾ ವಿಶ್ವಕಪ್ ಸೆಮಿಫೈನಲ್: ಹರಿಣಗಳ ತಂಡಕ್ಕೆ ಆರಂಭಿಕ ಆಘಾತ

Date:

ದಕ್ಷಿಣ ಆಫ್ರಿಕಾ ಹಾಗೂ ಆಸ್ಟ್ರೇಲಿಯಾ ನಡುವೆ ಏಕದಿನ ವಿಶ್ವಕಪ್‌ 2023ರ ಎರಡನೇ ಸೆಮಿಫೈನಲ್ ಪಂದ್ಯ ಇಂದು ಕೋಲ್ಕತ್ತಾದ ಈಡನ್‌ ಗಾರ್ಡನ್‌ ಕ್ರೀಡಾಂಗಣದಲ್ಲಿ ಆರಂಭವಾಗಿದೆ.

ಟಾಸ್‌ ಗೆದ್ದಿರುವ ದಕ್ಷಿಣ ಆಫ್ರಿಕಾ ತಂಡದ ನಾಯಕ ತೆಂಬಾ ಬವುಮಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಮಿಚೆಲ್ ಸ್ಟಾರ್ಕ್ ಬೌಲಿಂಗ್‌ನಲ್ಲಿ ತೆಂಬಾ ಬವುಮಾ ಔಟಾಗಿದ್ದು, ಹರಿಣಗಳ ತಂಡ ಆರಂಭಿಕ ಆಘಾತ ಅನುಭವಿಸಿದೆ. ಇತ್ತೀಚಿನ ವರದಿಗಳಂತೆ ದಕ್ಷಿಣ ಆಫ್ರಿಕಾ 9 ಓವರ್‌ಗಳಲ್ಲಿ ಎರಡು ವಿಕೆಟ್ ನಷ್ಟಕ್ಕೆ 17 ರನ್‌ ಗಳಿಸಿದೆ.

ಐದು ಬಾರಿಯ ಚಾಂಪಿಯನ್ ಆಸೀಸ್ ಹಾಗೂ ನಾಲ್ಕು ಬಾರಿ ಸೆಮಿಫೈನಲ್‌ ಪ್ರವೇಶಿಸಿ ಸೋಲು ಅನುಭವಿಸಿದ್ದ ಹರಿಣಗಳ ತಂಡ ಟೂರ್ನಿಯಲ್ಲಿ ಸಮಬಲ ಸಾಧಿಸಿವೆ. ಎರಡು ತಂಡಗಳು ಎರಡು ಬಾರಿ ಸೋಲು ಕಂಡಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತೆಂಬಾ ಬವುಮಾ ನೇತೃತ್ವದ ಹರಿಣಗಳ ತಂಡ ಆಸ್ಟ್ರೇಲಿಯಾ ವಿರುದ್ಧ ರೌಂಡ್ ರಾಬಿನ್ ಲೀಗ್‌ ಹಂತದಲ್ಲಿ ಜಯಗಳಿಸಿದೆ. ಈ ಪಂದ್ಯದಲ್ಲಿ ಗೆಲುವು ಸಾಧಿಸಿದ ತಂಡ ನ.19ರಂದು ಅಹಮದಾಬಾದ್‌ನಲ್ಲಿ ಭಾರತದ ವಿರುದ್ಧ ನಡೆಯುವ ಫೈನಲ್‌ನಲ್ಲಿ ಸೆಣಸಲಿದೆ.

ಈ ಸುದ್ದಿ ಓದಿದ್ದೀರಾ? ಶ್ರೀಲಂಕಾ ಕ್ರಿಕೆಟ್ ಮಂಡಳಿ ಹಾಳಾಗಲು ಜಯ್ ಶಾ ಕಾರಣ: ಅರ್ಜುನ ರಣತುಂಗ ಸ್ಫೋಟಕ ಹೇಳಿಕೆ

16 ವರ್ಷಗಳ ಬಳಿಕ ದಕ್ಷಿಣ ಆಫ್ರಿಕಾ ತಂಡ ಏಕದಿನ ವಿಶ್ವಕಪ್ ನಾಕೌಟ್‌ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು ಎದುರಿಸುತ್ತಿದೆ. 1999 ಮತ್ತು 2007ರಲ್ಲಿ ಉಭಯ ತಂಡಗಳು ಪರಸ್ಪರ ಮುಖಾಮುಖಿಯಾದ್ದವು. ಆ ಎರಡೂ ಸಂದರ್ಭಗಳಲ್ಲಿ ಆಸ್ಟ್ರೇಲಿಯಾ ಗೆದ್ದಿದೆ. ದಕ್ಷಿಣ ಆಫ್ರಿಕಾ ತಂಡಕ್ಕೆ ಈ ಬಾರಿ ‘ಚೋಕರ್ಸ್’ ಪಟ್ಟ ಕಳಚುವ ಮತ್ತೊಂದು ಅವಕಾಶ ಬಂದಿದೆ. ಟೂರ್ನಿಯಲ್ಲಿ ಟೂರ್ನಿ ಎರಡೂ ತಂಡಗಳು ಪ್ರಬಲ ತಂಡಗಳಾಗಿ ಹೊರಹೊಮ್ಮಿವೆ.

ಇಲ್ಲಿಯವರೆಗೆ ಆಸ್ಟ್ರೇಲಿಯಾ ಮತ್ತು ಹರಿಣಗಳ ತಂಡಗಳು ಏಕದಿನ ವಿಶ್ವಕಪ್ ಇತಿಹಾಸದಲ್ಲಿ ಒಟ್ಟು 7 ಬಾರಿ ಮುಖಾಮುಖಿಯಾಗಿವೆ. ಇಲ್ಲಿ ತಂಡಗಳು ಸಮಬಲದ ಹೋರಾಟ ನಡೆಸಿವೆ. ಆಸ್ಟ್ರೇಲಿಯಾ 3 ಮತ್ತು ದಕ್ಷಿಣ ಆಫ್ರಿಕಾ ಕೂಡ 3 ಪಂದ್ಯ ಗೆದ್ದಿದೆ. ಒಂದು ಪಂದ್ಯ ಟೈ ಆಗಿತ್ತು.

ಕ್ವಿಂಟನ್ ಡಿ ಕಾಕ್, ಮ್ಯಾಕ್ಸ್‌ವೆಲ್ ಆಕರ್ಷಣೆ

ದಕ್ಷಿಣ ಆಫ್ರಿಕಾದ ಆರಂಭಿಕ ಆಟಗಾರ ಕ್ವಿಂಟನ್ ಡಿ ಕಾಕ್ ನಾಲ್ಕು ಶತಕಗಳೊಂದಿಗೆ ಒಟ್ಟು 591 ರನ್‌ ಗಳಿಸಿದ್ದಾರೆ. ರೆಸಿ ವ್ಯಾನ್ ಡರ್ ಡಸೆ (442 ರನ್)  ಮತ್ತು  ಏಡನ್ ಮರ್ಕರಮ್ (396 ರನ್)  ಅವರೂ ಉತ್ತಮ ಫಾರ್ಮ್‌ನಲ್ಲಿದ್ದಾರೆ.

ಆಸ್ಟ್ರೇಲಿಯಾ ಲೀಗ್‌ ಹಂತದಲ್ಲಿ ದಕ್ಷಿಣ ಆಫ್ರಿಕಾ ಹಾಗೂ ಭಾರತದ ಎದುರು ಸೋತ ನಂತರ ಸತತ ಏಳು ಪಂದ್ಯಗಳನ್ನು ಗೆದ್ದಿದೆ. ಆಸೀಸ್ ಬ್ಯಾಟರ್‌ಗಳು ಅಮೋಘ ಲಯದಲ್ಲಿದ್ದಾರೆ. ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್ ಮತ್ತು ದ್ವಿಶತಕ ಬಾರಿಸಿ ಗಮನ ಸೆಳೆದಿರುವ ಗ್ಲೆನ್ ಮ್ಯಾಕ್ಸ್‌ವೆಲ್ ಬ್ಯಾಟಿಂಗ್ ವಿಭಾಗದ ಶಕ್ತಿಯಾಗಿದ್ದಾರೆ.

ಹರಿಣಗಳ ತಂಡದ ಬೌಲರ್‌ಗಳಾದ ಲುಂಗಿ ಗಿಡಿ, ಮಾರ್ಕೊ ಯಾನ್ಸನ್, ಸ್ಪಿನ್ನರ್ ಕೇಶವ್ ಮಹಾರಾಜ್ ಮತ್ತು ಕಗಿಸೊ ರಬಾಡ ಅವರ ಮುಂದೆ  ಮ್ಯಾಕ್ಸ್‌ವೆಲ್ ಅವರನ್ನು ಕಟ್ಟಿಹಾಕುವ ಪ್ರಮುಖ ಸವಾಲು ಇದೆ. ಆಸೀಸ್‌ ಪರ ಬೌಲಿಂಗ್‌ನಲ್ಲಿ ನಾಯಕ ಪ್ಯಾಟ್ ಕಮಿನ್ಸ್ ಒಳಗೊಂಡು ಆಡಮ್ ಜಂಪಾ, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್ ಉತ್ತಮ ಲಯದಲ್ಲಿದ್ದಾರೆ.

11ರ ಬಳಗದ ಉಭಯ ತಂಡಗಳು

ದಕ್ಷಿಣಆಫ್ರಿಕಾ:

ತೆಂಬಾ ಬವುಮಾ (ನಾಯಕ), ಜೆರಾಲ್ಡ್ ಕೋಜಿ, ಕ್ವಿಂಟನ್ ಡಿ ಕಾಕ್ (ವಿಕೆಟ್‌ಕೀಪರ್), ರೀಜಾ ಹೆನ್ರಿಕ್ಸ್, ಮಾರ್ಕೊ ಯಾನ್ಸನ್, ಹೆನ್ರಿಚ್ ಕ್ಲಾಸನ್ (ವಿಕೆಟ್‌ಕೀಪರ್), ಆ್ಯಂಡಿಲೆ ಪಿಶುವಾಯೊ, ಕೇಶವ್ ಮಹಾರಾಜ್, ಏಡನ್ ಮರ್ಕರಂ, ಡೇವಿಡ್ ಮಿಲ್ಲರ್, ಲುಂಗಿ ಗಿಡಿ, ಕಗಿಸೊ ರಬಾಡ, ತಬ್ರೇಜ್ ಶಮ್ಸಿ, ರಸಿ ವ್ಯಾನ್ ಡೆರ್ ಡಸೆ, ಲಿಜಾದ್ ವಿಲಿಯಮ್ಸ್.

ಆಸ್ಟ್ರೇಲಿಯಾ:

ಪ್ಯಾಟ್ ಕಮಿನ್ಸ್ (ನಾಯಕ), ಸ್ಟೀವ್ ಸ್ಮಿತ್, ಅಲೆಕ್ಸ್ ಕ್ಯಾರಿ (ವಿಕೆಟ್‌ ಕೀಪರ್), ಜೋಶ್ ಇಂಗ್ಲಿಷ್ (ವಿಕೆಟ್‌ಕೀಪರ್), ಸೀನ್ ಅಬಾಟ್, ಆ್ಯಷ್ಟನ್ ಆಗರ್, ಕ್ಯಾಮರಾನ್ ಗ್ರೀನ್ , ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೋಯಿನಿಸ್, ಡೇವಿಡ್ ವಾರ್ನರ್, ಆ್ಯಡಂ ಜಂಪಾ, ಮಿಚೆಲ್ ಸ್ಟಾರ್ಕ್.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...