ಆಸ್ಟ್ರೇಲಿಯಾ ವಿಶ್ವಕಪ್ ಗೆಲುವಿನ ಹಿಂದಿದೆ ಮಂಗಳೂರು ಯುವತಿಯ ಪಾತ್ರ

Date:

ಆರನೇ ಬಾರಿ ಏಕದಿನ ವಿಶ್ವಕಪ್‌ ಕ್ರಿಕೆಟ್ ಚಾಂಪಿಯನ್‌ ಆಗಿರುವ ಆಸ್ಟ್ರೇಲಿಯಾ ತಂಡದ ಗೆಲುವಿನ ಹಿಂದೆ ಮಂಗಳೂರು ಮೂಲದ ಉರ್ಮಿಳಾ ರೊಸಾರಿಯೋ ಎಂಬುವವರು ಪ್ರಮುಖ ಪಾತ್ರ ವಹಿಸಿದ್ದಾರೆ.

ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಕೇರ್‌ ಟೇಕರ್‌ ಆಗಿರುವ ಮಂಗಳೂರು ಮೂಲದ ಯುವತಿ ಉರ್ಮಿಳಾ ರೊಸಾರಿಯೋ ಆಸೀಸ್ 2023ರ ವಿಶ್ವಕಪ್‌ ಎತ್ತಿ ಹಿಡಿಯುವಲ್ಲಿ ತಮ್ಮ ಕೊಡುಗೆಯನ್ನು ಸಹ ನೀಡಿದ್ದಾರೆ. 34 ವರ್ಷದ ಉರ್ಮಿಳಾ ರೊಸಾರಿಯೋ ಅವರು ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟ್ ತಂಡದ ಮ್ಯಾನೇಜರ್ ಆಗಿ ಕೂಡ ಕಾರ್ಯನಿರ್ವಹಿಸುತ್ತಿದ್ದಾರೆ.

ಇವರು ಮೂಲತಃ ಮಂಗಳೂರಿನ ಕಟೀಲಿನ ಕಿನ್ನಿಗೋಳಿಯವರಾಗಿರುವ ಐವಿ ಮತ್ತು ವಾಲೆಂಟೈನ್ ರೊಸಾರಿಯೋ ದಂಪತಿಯ ಪುತ್ರಿ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉರ್ಮಿಳಾ ರೊಸಾರಿಯೋ ಪೋಷಕರು ಕಿನ್ನಿಗೋಳಿಯಿಂದ ಉದ್ಯೋಗದ ನಿಮಿತ್ತ ಕತಾರ್‌ನ ದೋಹಾ ವಲಸೆ ಹೋಗಿದ್ದರು. ಉರ್ಮಿಳಾ ಅವರು ಜನನವಾಗಿದ್ದು ಕತಾರ್‌ನಲ್ಲಿಯೇ. ಬಾಲ್ಯದಿಂದಲೇ ಕ್ರೀಡೆ ಬಗ್ಗೆ ಅಪರಿಮಿತ ಆಸಕ್ತಿ ಹೊಂದಿದ್ದ ಉರ್ಮಿಳಾ, ಮೊದಲು ಕತಾರ್ ಟೆನ್ನಿಸ್ ಫೆಡರೇಶನ್‌ನಲ್ಲಿ ಕಾರ್ಯನಿರ್ವಹಿಸಿದ್ದರು.

ಊರ್ಮಿಳಾ ಪೋಷಕರು ಏಳು ವರ್ಷಗಳ ಹಿಂದೆ ಭಾರತಕ್ಕೆ ಮರಳಿ ಸದ್ಯ ಹಾಸನದ ಸಕಲೇಶಪುರದಲ್ಲಿ ಕಾಫಿ ಎಸ್ಟೇಟ್ ಖರೀದಿಸಿ ಅಲ್ಲಿಯೇ ನೆಲೆಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಚಿನ್‌ ರವೀಂದ್ರ ರೀತಿ ಶ್ರೇಯಸ್‌ ಅಯ್ಯರ್‌ಗೂ ಕೂಡ ಇದೆ ಕರ್ನಾಟಕದ ನಂಟು

ಈ ನಡುವೆ, ಊರ್ಮಿಳಾ ಕಾರ್ನೆಗೀ ಮೆಲನ್ ವಿಶ್ವವಿದ್ಯಾನಿಲಯದಿಂದ ಬಿಬಿಎ ಪದವಿ ಪಡೆಯಲು ಆಸ್ಟ್ರೇಲಿಯಾಕ್ಕೆ ತೆರಳಿದ್ದರು. ಕ್ರೀಡೆಯಲ್ಲಿ ಹೆಚ್ಚು ಆಸಕ್ತಿಯಿದ್ದ ಕಾರಣ ವಿದ್ಯಾಭ್ಯಾಸದ ನಂತರ ಮೊದಲು ಆಸ್ಟ್ರೇಲಿಯಾದ ಅಡಿಲೇಡ್ ಕ್ರಿಕೆಟ್ ತಂಡದೊಂದಿಗೆ ಸುಮಾರು ಮೂರು ವರ್ಷಗಳ ಕಾಲ ಕೆಲಸ ಮಾಡಿದರು. ಅನಂತರ, ತಮ್ಮ ಕೆಲಸದ ಬದ್ಧತೆಯಿಂದಾಗಿ ಮ್ಯಾನೇಜರ್ ಆಗಿ ಆಸ್ಟ್ರೇಲಿಯಾದ ಮಹಿಳಾ ಕ್ರಿಕೆಟ್ ತಂಡಕ್ಕೆ ನಿಯೋಜನೆಗೊಂಡರು. ಹಾಗೆಯೆ ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟ್ ತಂಡದ ಟೀಮ್ ಮ್ಯಾನೇಜರ್ ಆಗಿಯೂ ಕರ್ತವ್ಯ ನಿರ್ವಹಿಸಿದ್ದರು.

ಉರ್ಮಿಳಾ ರೊಸಾರಿಯೋ

ಕತಾರ್‌ನಲ್ಲಿ ಫುಟ್‌ಬಾಲ್ ಕ್ರೀಡಾಂಗಣವನ್ನು ನಿರ್ವಹಿಸುವ ಪ್ರಯುಕ್ತ ಆಸ್ಟ್ರೇಲಿಯಾ ಕ್ರಿಕೆಟ್ ತಂಡದಿಂದ ಕೆಲಕಾಲ ಬಿಡುವು ಪಡೆದುಕೊಂಡರು. ಕತಾರ್‌ನಲ್ಲಿಯೇ ನಾಲ್ಕು ತಿಂಗಳ ಕಾಲ ಇದ್ದು ಫುಟ್‌ಬಾಲ್ ಕ್ರೀಡಾಂಗಣ ನಿರ್ಮಾಣದಲ್ಲಿ ಪ್ರಮುಖ ಪಾತ್ರವಹಿಸಿದರು. ಈ ವರ್ಷದ ಸೆಪ್ಟೆಂಬರ್‌ನಲ್ಲಿ ಕತಾರ್‌ನಿಂದ ಆಸ್ಟ್ರೇಲಿಯಾಕ್ಕೆ ಹಿಂದಿರುಗಿದ ನಂತರ, ಊರ್ಮಿಳಾ ಅವರ ಕೆಲಸದ ಬದ್ಧತೆಯನ್ನು ಗಮನಿಸಿದ ಆಸೀಸ್ ಕ್ರಿಕೆಟ್ ಮಂಡಳಿ, ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯಾದ ಪುರುಷರ ಕ್ರಿಕೆಟ್ ತಂಡವನ್ನು ನೋಡಿಕೊಳ್ಳಲು ಸಲುವಾಗಿ ಊರ್ಮಿಳಾ ಅವರನ್ನು ಕೇರ್‌ ಟೇಕರ್‌ ಆಗಿ ನೇಮಿಸಿತು. ಒಂದೂವರೆ ತಿಂಗಳ ಕಾಲ ಭಾರತದ ವಿವಿಧ ನಗರಗಳಲ್ಲಿ ಆಸ್ಟ್ರೇಲಿಯಾ ಕ್ರಿಕೆಟ್ ತಂಡವನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ.

“ಆಸೀಸ್‌ ತಂಡದ ಕೇರ್‌ ಟೇಕರ್ ಆಗಿದ್ದ ಸಂದರ್ಭದಲ್ಲಿ ಉರ್ಮಿಳಾ ಆಟಗಾರರು ಹೋಗುವ ದೇಶದಲ್ಲಿ ಆಟಗಾರರ ಊಟೋಪಚಾರ, ವಸತಿ ಎಲ್ಲವನ್ನೂ ನಿಭಾಯಿಸಿದ್ದಾರೆ. ಆಕೆಗೆ ಕನ್ನಡ, ಇಂಗ್ಲಿಷ್, ಹಿಂದಿ, ಕೊಂಕಣಿ ಭಾಷೆಗಳ ಹಿಡಿತವಿದೆ. ಅವಳ ಕೆಳಗೆ ದೊಡ್ಡ ತಂಡವೇ ಕಾರ್ಯ ನಿರ್ವಹಿಸುತ್ತಿದೆ. ಮಗಳ ಸಾಧನೆ ಬಗ್ಗೆ ಹೆಮ್ಮೆ ಇದೆ. ಕೆಲಸದಲ್ಲಿ ಸಮಯ ಸಿಕ್ಕಾಗ ಸಕಲೇಶಪುರದ ಎಸ್ಟೇಟಿಗೆ ಆಗಮಿಸುತ್ತಾಳೆ” ಎಂದು ಉರ್ಮಿಳಾ ತಂದೆ ವಾಲೆಂಟೈನ್ ರೊಸಾರಿಯೋ ಹೇಳುತ್ತಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಕರಾವಳಿಯಲ್ಲಿ ನಾಳೆ (ಮಾ- 20) ಈದುಲ್ ಫಿತ್ರ್ ಆಚರಣೆ

ಪವಿತ್ರ ರಮಝಾನ್ ತಿಂಗಳ ಉಪವಾಸ ಸಮಾಪ್ತಿಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ...

ಉಜಿರೆ ಅನೈತಿಕ ಪೊಲೀಸ್ ಗಿರಿ ಪ್ರಕರಣ : SDPI ತೀವ್ರ ಖಂಡನೆ

ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ನಡೆದ ಅಪ್ರಾಪ್ತ ಮುಸ್ಲಿಂ ಬಾಲಕನ ಅಪಹರಣೆ, ಅಮಾನುಷ...

ಬೆಳ್ತಂಗಡಿ | ಅಪ್ರಾಪ್ತ ಮುಸ್ಲಿಂ ವಿದ್ಯಾರ್ಥಿ ಮೇಲೆ ಗುಂಪು ಹಲ್ಲೆ ಆರೋಪ; ಭಜರಂಗದಳದ ಕಾರ್ಯಕರ್ತರ ವಿರುದ್ಧ ದೂರು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದ...

ಐಪಿಎಲ್ | ಅತಿ ಹೆಚ್ಚು ವಿಕೆಟ್ ಪಡೆದರೂ ‘ಪರ್ಪಲ್ ಕ್ಯಾಪ್’ ಒಲಿಯದ 5 ದಿಗ್ಗಜ ಬೌಲರ್‌ಗಳು

ಐಪಿಎಲ್ ಇತಿಹಾಸದಲ್ಲಿ ಬೌಲರ್‌ಗಳ ಸಾಧನೆಯನ್ನು ಗುರುತಿಸಲು ಪ್ರತಿ ಆವೃತ್ತಿಯಲ್ಲಿ ಅತಿ ಹೆಚ್ಚು...