ಕಾಲ್ತುಳಿತದಲ್ಲಿ 11 ಸಾವು, ಸುದ್ದಿ ಕೇಳಿ ಕರುಳು ಹಿಂಡುತ್ತಿದೆ: ವಿರಾಟ್‌ ಕೊಹ್ಲಿ ಸಂತಾಪ

Date:

ಐಪಿಎಲ್‌ ಇತಿಹಾಸದಲ್ಲಿ ಟ್ರೋಪಿ ವಂಚಿತ ತಂಡವಾಗಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಐಪಿಎಲ್ ಹದಿನೆಂಟನೇ ಆವೃತ್ತಿಯನ್ನು ಪಂಜಾಬ್‌ ವಿರುದ್ಧ ಗೆಲ್ಲುವ ಮೂಲಕ 18 ವರ್ಷದ ಕನಸು ನನಸಾದ ಹಿನ್ನೆಲೆಯಲ್ಲಿ ಆಯೋಜಿಸಿದ್ದ ವಿಜಯೋತ್ಸವ ವೇಳೆ ಕಾಲ್ತುಳಿತ ಉಂಟಾಗಿ 11 ಅಭಿಮಾನಿಗಳು ಸಾವನ್ನಪ್ಪಿದ್ದು, 50ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.

ಆರ್​ಸಿಬಿ ತಂಡ ಐಪಿಎಲ್ ಚಾಂಪಿಯನ್ ಆಗಿರುವುದರಿಂದ ಕರ್ನಾಟಕದಲ್ಲಿ ಸಂಭ್ರಮ ಮನೆ ಮಾಡಿತ್ತು. ಈ ದುರಂತದಿಂದ ರಾಜ್ಯದಲ್ಲಿ ಸೂತಕದ ಛಾಯೆ ಆವರಿಸಿದೆ. ದೇಶಾದ್ಯಂತ ಸಂತಾಪ ವ್ಯಕ್ತವಾಗಿದೆ.

ಕಾಲ್ತುಳಿತ ದುರಂತದ ಬಗ್ಗೆ ಆರ್‌ಸಿಬಿ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಸಂತಾಪ ಸೂಚಿಸಿದ್ದು, “ಮಾತೇ ಬರುತ್ತಿಲ್ಲ, ಈ ಘಟನೆ ಕರುಳು ಹಿಂಡುತ್ತಿದೆ” ಅಂತ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆಯ ಕುರಿತು ಆರ್‌ಸಿಬಿ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, ‘ಇಂದು (ಬುಧವಾರ) ಮಧ್ಯಾಹ್ನ ಆರ್‌ಸಿಬಿ ತಂಡದ ಆಗಮನದ ನಿರೀಕ್ಷೆಯಲ್ಲಿ ಬೆಂಗಳೂರಿನಾದ್ಯಂತ ಸಾರ್ವಜನಿಕ ಸಭೆಗಳ ಕುರಿತು ಮಾಧ್ಯಮ ವರದಿಗಳ ಮೂಲಕ ಬೆಳಕಿಗೆ ಬಂದಿರುವ ದುರದೃಷ್ಟಕರ ಘಟನೆಗಳಿಂದ ನಾವು ತೀವ್ರ ದುಃಖಿತರಾಗಿದ್ದೇವೆ. ಪ್ರತಿಯೊಬ್ಬರ ಸುರಕ್ಷತೆ ಮತ್ತು ಯೋಗಕ್ಷೇಮ ನಮಗೆ ಅತ್ಯಂತ ಮುಖ್ಯವಾಗಿದೆ. ದುರಂತದಲ್ಲಾದ ಜೀವಹಾನಿಗೆ ಆರ್‌ಸಿಬಿ ಶೋಕ ವ್ಯಕ್ತಪಡಿಸುತ್ತದೆ. ಸಂತ್ರಸ್ತ ಕುಟುಂಬಗಳಿಗೆ ನಮ್ಮ ಸಂತಾಪವನ್ನು ವ್ಯಕ್ತಪಡಿಸುತ್ತದೆ” ಎಂದು ಹೇಳಿದೆ.

ಮೃತರ ಕುಟುಂಬಗಳಿಗೆ 15 ಲಕ್ಷ ಪರಿಹಾರ

ಮೃತರ ಕುಟುಂಬಸ್ಥರಿಗೆ ರಾಜ್ಯ ಸರ್ಕಾರದಿಂದ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ. ಈ ಬಗ್ಗೆ ಖುದ್ದು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ. ಗಾಯಾಳುಗಳಿಗೆ ಉಚಿತ ಚಿಕಿತ್ಸೆ ವ್ಯವಸ್ಥೆ ಮಾಡಲಾಗಿದೆ ಅಂತಲೂ ಮಾಹಿತಿ ನೀಡಿದ್ದಾರೆ.

ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಉಂಟಾದ ನೂಕು ನುಗ್ಗಲಿನಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ ₹5 ಲಕ್ಷ ಪರಿಹಾರ ನೀಡುವುದಾಗಿ ಆರ್‌ಸಿಬಿ- ಕೆಎಸ್‌ಸಿಎ ಬುಧವಾರ ರಾತ್ರಿ ಪ್ರಕಟಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...