ಐಪಿಎಲ್ ಸೀಸನ್ 17ರ ಫೈನಲ್ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗುತ್ತಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂದಿನ ಪಂದ್ಯದಲ್ಲಿ ಸನ್‌ರೈಸರ್ಸ್ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್ ಟಾಸ್ ಗೆದ್ದಿದ್ದು, ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.
ಫೈನಲ್ ಪಂದ್ಯಕ್ಕಾಗಿ ಬ್ಯಾಟಿಂಗ್ಗೆ ಸಹಕಾರಿಯಾಗುವಂತಹ ಪಿಚ್ ಅನ್ನು ಸಿದ್ಧಪಡಿಸುತ್ತಿರುವುದಾಗಿ ಎಂಎ ಚಿದಂಬರಂ ಮೈದಾನದ ಕ್ಯುರೇಟರ್ ತಿಳಿಸಿರುವುದಾಗಿ ಐಪಿಎಲ್ ವೀಕ್ಷಕ ವಿವರಣೆಗಾರ ಕೆವಿನ್ ಪೀಟರ್ಸನ್ ಹೇಳಿದ್ದರು. ಹೀಗಾಗಿ ಅಂತಿಮ ಹಣಾಹಣಿಯಲ್ಲಿ ಟಾಸ್ ಗೆದ್ದಿರುವ ಹೈದರಾಬಾದ್, ಬ್ಯಾಟಿಂಗ್ ಆಯ್ದುಕೊಂಡಿದೆ. ಈ ಹಿನ್ನೆಲೆಯಲ್ಲಿ ಬೃಹತ್ ಮೊತ್ತವನ್ನು ಕಲೆ ಹಾಕುವ ನಿರೀಕ್ಷೆಯಲ್ಲಿದೆ ಪ್ಯಾಟ್ ಕಮ್ಮಿನ್ಸ್ ಬಳಗ.
🚨 Toss Update 🚨
Sunrisers Hyderabad 🧡 elect to bat in the #Final against Kolkata Knight Riders 💜
Follow the Match ▶️ https://t.co/lCK6AJCdH9#TATAIPL | #KKRvSRH | #TheFinalCall pic.twitter.com/f4PWxfLFEK
— IndianPremierLeague (@IPL) May 26, 2024
ಗುಜರಾತ್‌ನ ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದಿದ್ದ ವಿಶ್ವಕಪ್ ಫೈನಲ್‌ನಲ್ಲಿ ಆಸ್ಟ್ರೇಲಿಯಾ ತಂಡವನ್ನು ಮುನ್ನಡೆಸಿದ್ದ ಪ್ಯಾಟ್ ಕಮ್ಮಿನ್ಸ್, ಟೀಮ್ ಇಂಡಿಯಾ ವಿರುದ್ಧ ಕೂಡ ಟಾಸ್ ಗೆದ್ದಿದ್ದರು. ಟಾಸ್ ಗೆದ್ದಿದ್ದರಿಂದ ಮೊದಲು ಬೌಲಿಂಗ್ ನಡೆಸಿದ್ದರು. ಫೈನಲ್‌ನಲ್ಲಿ ಟೀಮ್ ಇಂಡಿಯಾವನ್ನು 240 ರನ್‌ಗಳಿಗೆ ಕಟ್ಟಿ ಹಾಕುವಲ್ಲಿ ಯಶಸ್ವಿಯಾಗಿದ್ದಲ್ಲದೇ, ಆಸ್ಟ್ರೇಲಿಯಾವು 43 ಓವರ್‌ಗಳಲ್ಲಿ ಕೇವಲ 4 ವಿಕೆಟ್ ಕಳೆದುಕೊಂಡು ಈ ಗುರಿಯನ್ನು ಮುಟ್ಟಿತ್ತು. ಟ್ರಾವಿಸ್ ಹೆಡ್ ಆಸೀಸ್ ಪರ 137 ರನ್ ಗಳಿಸಿ, ಮಿಂಚಿದ್ದರು.
Our 𝐅𝐈𝐍𝐀𝐋 𝐗𝐈 of #TATAIPL2024 as we bat first in Chepauk 🧡
Let the g̶a̶m̶e̶s̶ flames begin 🔥#PlayWithFire #KKRvSRH @Dream11 pic.twitter.com/G3oIX505SC
— SunRisers Hyderabad (@SunRisers) May 26, 2024
ಟ್ರಾವಿಸ್ ಹೆಡ್ ಅವರು ಕೂಡ ಈ ಬಾರಿ ಪ್ಯಾಟ್ ಕಮ್ಮಿನ್ಸ್ ನೇತೃತ್ವದ ಸನ್‌ರೈಸರ್ಸ್ ಹೈದರಾಬಾದ್ ತಂಡ ಆರಂಭಿಕರಾಗಿದ್ದಾರೆ. ಕೆಕೆಆರ್ ವಿರುದ್ಧದ ಇಂದಿನ ಪಂದ್ಯದಲ್ಲಿ ಅವರಿಂದ ಸ್ಫೋಟಕ ಬ್ಯಾಟಿಂಗ್‌ನ ನಿರೀಕ್ಷೆ ಇದೆ.
ಉಭಯ ತಂಡಗಳ ಪ್ಲೇಯಿಂಗ್ 11:
ಸನ್‌ರೈಸರ್ಸ್ ಹೈದರಾಬಾದ್:
ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ಏಡನ್ ಮಾರ್ಕ್ರಮ್. ನಿತೀಶ್ ಕುಮಾರ್ ರೆಡ್ಡಿ, ಹೆನ್ರಿಕ್ ಕ್ಲಾಸೆನ್ (ವಿಕೆಟ್ ಕೀಪರ್), ಶಹಬಾಜ್ ಅಹ್ಮದ್, ಪ್ಯಾಟ್ ಕಮ್ಮಿನ್ಸ್ (ನಾಯಕ), ಭುವನೇಶ್ವರ್ ಕುಮಾರ್, ಜಯದೇವ್ ಉನದ್ಕಟ್, ಟಿ ನಟರಾಜನ್.
ಕೋಲ್ಕತಾ ನೈಟ್ ರೈಡರ್ಸ್
ಸುನೀಲ್ ನರೇನ್, ರೆಹಮಾನುಲ್ಲಾ ಗುರ್ಬಾಝ್ (ವಿಕೆಟ್ ಕೀಪರ್), ವೆಂಕಟೇಶ್ ಅಯ್ಯರ್, ಶ್ರೇಯಸ್ ಅಯ್ಯರ್ (ನಾಯಕ), ರಿಂಕು ಸಿಂಗ್, ಆಂಡ್ರೆ ರಸೆಲ್, ರಮಣ್‌ದೀಪ್ ಸಿಂಗ್, ಮಿಚೆಲ್ ಸ್ಟಾರ್ಕ್, ವೈಭವ್ ಅರೋರಾ, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ
Pat Cummins wins the toss and SRH are batting first #IPLFinal | #IPL2024
— ESPNcricinfo (@ESPNcricinfo) May 26, 2024





