ಟಿ20 ವಿಶ್ವಕಪ್ | ಟೀಮ್ ಇಂಡಿಯಾಗೆ ರೋಹಿತ್ ಶರ್ಮಾ ನೇತೃತ್ವ: ಬಿಸಿಸಿಐ ಕಾರ್ಯದರ್ಶಿ ಜಯ್‌ಶಾ ಘೋಷಣೆ

Date:

ಮುಂಬರುವ ಟಿ20 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾದ ನೇತೃತ್ವವನ್ನು ಯಾರು ವಹಿಸಲಿದ್ದಾರೆ ಎಂಬ ಕುತೂಹಲಕ್ಕೆ ಬಿಸಿಸಿಐ ಕಾರ್ಯದರ್ಶಿ ಜಯ್‌ಶಾ ತೆರೆ ಎಳೆದಿದ್ದಾರೆ.

ಈ ವರ್ಷ ಅಮೆರಿಕದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾವನ್ನು ರೋಹಿತ್ ಶರ್ಮಾ ನಾಯಕತ್ವ ವಹಿಸಲಿದ್ದಾರೆ. ಟಿ20 ವಿಶ್ವಕಪ್ ಗೆಲ್ಲುವಲ್ಲಿ ರೋಹಿತ್ ಶರ್ಮಾ ತಂಡ ಖಂಡಿತವಾಗಿಯೂ ಯಶಸ್ವಿಯಾಗಲಿದೆ ಎಂದು ಜಯ್ ಶಾ ಭರವಸೆ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್‌ಕೋಟ್‌ನಲ್ಲಿ ನಾಳೆ(ಫೆ.15) ಆರಂಭವಾಗಲಿರುವ ಮೂರನೇ ಟೆಸ್ಟ್‌ಗೂ ಮುನ್ನ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೆಶನ್ ವತಿಯಿಂದ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಮಾತನಾಡಿದ ಜಯ್ ಶಾ, ”2023ರ ಏಕದಿನ ವಿಶ್ವಕಪ್‌ನ ಫೈನಲ್ ಪಂದ್ಯದಲ್ಲಿ ನಮ್ಮ ತಂಡ ಸೋಲು ಕಂಡಿದೆ. ಆದರೆ, ಟೂರ್ನಿಯಲ್ಲಿ ನೀಡಿದ ಪ್ರದರ್ಶನ ಟೀಂ ಇಂಡಿಯಾ ಅಭಿಮಾನಿಗಳ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಭಾರತ ಸತತ 10 ಪಂದ್ಯಗಳನ್ನು ಗೆದ್ದಿದೆ. ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ ಈ ಬಾರಿಯ ಟಿ20 ವಿಶ್ವಕಪ್ ಗೆಲ್ಲುವ ವಿಶ್ವಾಸವಿದೆ” ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿದ್ದೀರಾ? ಯುಎಇ | ಅಬುಧಾಬಿಯಲ್ಲಿ ಮೊದಲ ಹಿಂದೂ ದೇವಾಲಯ ಲೋಕಾರ್ಪಣೆಗೊಳಿಸಿದ ಪ್ರಧಾನಿ ಮೋದಿ

ಏಕದಿನ ವಿಶ್ವಕಪ್ ಸೋಲಿನ ಬಳಿಕ ಟಿ20 ವಿಶ್ವಕಪ್ ಟೂರ್ನಿಗೆ ಹಾರ್ದಿಕ್ ಪಾಂಡ್ಯ ನಾಯಕತ್ವದಡಿ ಟೀಂ ಇಂಡಿಯಾ ಸಾಗಲಿದೆ ಎಂದು ವರದಿಯಾಗಿತ್ತು.

ಇದೀಗ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ, ಭಾರತದ ಟಿ20 ನಾಯಕನ ಹೆಸರು ಬಹಿರಂಗಪಡಿಸುವ ಮೂಲಕ ಬಹುದಿನಗಳಿಂದ ಭಾರೀ ಕುತೂಹಲವನ್ನು ಮೂಡಿಸಿದ್ದ ಪ್ರಶ್ನೆಗೆ ತೆರೆ ಎಳೆದಿದ್ದಾರೆ. ವೆಸ್ಟ್‌ ಇಂಡೀಸ್‌ ಹಾಗೂ ಅಮೆರಿಕದಲ್ಲಿ ಟಿ20 ವಿಶ್ವಕಪ್‌ ನಡೆಯಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...