2025ರ ಏಕದಿನ ವಿಶ್ವಕಪ್ ಪಂದ್ಯಗಳು ಬೆಂಗಳೂರಿನಿಂದ ಸ್ಥಳಾಂತರ

Date:

2025 ರ ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ವೇಳಾಪಟ್ಟಿಯಲ್ಲಿ ದೊಡ್ಡ ಬದಲಾವಣೆಯಾಗಿದೆ. ಈ ಮೊದಲೇ ಊಹಿಸಿದಂತೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಲೀಗ್ ಹಂತದ ಹಾಗೂ ಸೆಮಿಫೈನಲ್ ಪಂದ್ಯಗಳನ್ನು ನವಿ ಮುಂಬೈನಲ್ಲಿ ನಡೆಸಲು ಐಸಿಸಿ ನಿರ್ಧರಿಸಿದೆ.

ವಾಸ್ತವವಾಗಿ ಐಸಿಸಿ ನಿರ್ಧಾರಕ್ಕೆ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಉಂಟಾಗಿದ್ದ ಕಾಲ್ತುಳಿತ ದುರಂತವೇ ಪ್ರಮುಖ ಕಾರಣ ಎನ್ನಬಹುದು. ಇದರಿಂದಾಗಿ ವಿಶ್ವಕಪ್ ಪಂದ್ಯಗಳು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಬದಲು ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯಲಿವೆ.

ಮಹಿಳಾ ವಿಶ್ವಕಪ್‌ನ ಹೊಸ ವೇಳಾಪಟ್ಟಿಯ ಪ್ರಕಾರ, ಐದು ಪಂದ್ಯಗಳು ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯಲಿವೆ. ಈ ಪಂದ್ಯಗಳಲ್ಲಿ ಮೂರು ಲೀಗ್ ಪಂದ್ಯಗಳು ಮತ್ತು ಒಂದು ಸೆಮಿಫೈನಲ್ ಸೇರಿವೆ. ಪಾಕಿಸ್ತಾನ ಫೈನಲ್ ತಲುಪದಿದ್ದರೆ, ಪಂದ್ಯಾವಳಿಯ ಫೈನಲ್ ಕೂಡ ಈ ಕ್ರೀಡಾಂಗಣದಲ್ಲಿ ನಡೆಯಲಿದೆ. ನವಿ ಮುಂಬೈ ಜೊತೆಗೆ, ವಿಶ್ವಕಪ್ ಪಂದ್ಯಗಳನ್ನು ಎಸಿಎ ಕ್ರೀಡಾಂಗಣ (ಗುವಾಹಟಿ), ಹೋಳ್ಕರ್ ಕ್ರೀಡಾಂಗಣ (ಇಂದೋರ್), ಎಸಿಎ-ವಿಡಿಸಿಎ ಕ್ರೀಡಾಂಗಣ (ವಿಶಾಖಪಟ್ಟಣ) ಮತ್ತು ಆರ್. ಪ್ರೇಮದಾಸ ಕ್ರೀಡಾಂಗಣ (ಕೊಲಂಬೊ, ಶ್ರೀಲಂಕಾ) ಗಳಲ್ಲಿಯೂ ನಡೆಸಲಾಗುವುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಳೆಯ ವೇಳಾಪಟ್ಟಿಯ ಪ್ರಕಾರ, ಭಾರತ ಮತ್ತು ಶ್ರೀಲಂಕಾ ನಡುವಿನ ಪಂದ್ಯ ಸೆಪ್ಟೆಂಬರ್ 30 ರಂದು ಬೆಂಗಳೂರಿನ ಮೈದಾನದಲ್ಲಿ ನಡೆಯಬೇಕಿತ್ತು. ಈಗ ಅದು ಗುವಾಹಟಿ ಮೈದಾನದಲ್ಲಿ ನಡೆಯಲಿದೆ. ಇಂಗ್ಲೆಂಡ್ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಪಂದ್ಯವು ಅಕ್ಟೋಬರ್ 3 ರಂದು ಬೆಂಗಳೂರಿನಲ್ಲಿ ನಡೆಯಬೇಕಿತ್ತು, ಈಗ ಅದು ಗುವಾಹಟಿಯಲ್ಲಿ ನಡೆಯಲಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮಹೇಶ್‌ ಶೆಟ್ಟಿ ತಿಮರೋಡಿ ಬಂಧನ; ಜನರ ಪ್ರಶ್ನೆಗಳಿಗೆ ಸರ್ಕಾರದ ಉತ್ತರ ಏನು?

ಶ್ರೀಲಂಕಾ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯವು ಅಕ್ಟೋಬರ್ 20 ರಂದು ಕೊಲಂಬೊ ಮೈದಾನದಲ್ಲಿ ನಡೆಯಬೇಕಿತ್ತು, ಈಗ ಅದು ನವಿ ಮುಂಬೈ ಮೈದಾನದಲ್ಲಿ ನಡೆಯಲಿದೆ. ಇವುಗಳು ಮಾತ್ರವಲ್ಲದೆ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಭಾರತ ಹಾಗೂ ನ್ಯೂಜಿಲೆಂಡ್ (ಅಕ್ಟೋಬರ್ 23) ಮತ್ತು ಭಾರತ ಹಾಗೂ ಬಾಂಗ್ಲಾದೇಶ (ಅಕ್ಟೋಬರ್ 26) ನಡುವಿನ ಲೀಗ್ ಪಂದ್ಯಗಳು ಕೂಡ ನವಿ ಮುಂಬೈ ಮೈದಾನದಲ್ಲಿ ನಡೆಯಲಿವೆ.

ಉಳಿದಂತೆ ಮಹಿಳಾ ವಿಶ್ವಕಪ್ ಫೈನಲ್ ನವೆಂಬರ್ 2 ರಂದು ಕೊಲಂಬೊ ಅಥವಾ ನವಿ ಮುಂಬೈನಲ್ಲಿ ನಡೆಯಲಿದೆ. ಮೊದಲ ಸೆಮಿಫೈನಲ್ ಅಕ್ಟೋಬರ್ 29 ರಂದು ಗುವಾಹಟಿ ಅಥವಾ ಕೊಲಂಬೊದಲ್ಲಿ ಮತ್ತು ಎರಡನೇ ಸೆಮಿಫೈನಲ್ ಅಕ್ಟೋಬರ್ 30 ರಂದು ನವಿ ಮುಂಬೈನಲ್ಲಿ ನಡೆಯಲಿದೆ. ಪಾಕಿಸ್ತಾನ ಅರ್ಹತೆ ಪಡೆದರೆ, ಅದು ಕೊಲಂಬೊದಲ್ಲಿ ಮೊದಲ ಸೆಮಿಫೈನಲ್ ಅನ್ನು ಆಡುತ್ತದೆ. ಆ ಬಳಿಕ ಪಾಕಿಸ್ತಾನ ಫೈನಲ್ ತಲುಪಿದರೆ, ಫೈನಲ್ ಪಂದ್ಯ ಕೊಲಂಬೊದಲ್ಲಿ ನಡೆಯಲಿದೆ. ಪಾಕಿಸ್ತಾನ ಸೆಮಿಫೈನಲ್ ತಲುಪದಿದ್ದರೆ, ಎಲ್ಲಾ ನಾಕೌಟ್ ಪಂದ್ಯಗಳನ್ನು ಭಾರತದಲ್ಲಿ ನಡೆಸಲಾಗುತ್ತದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...