ಆ್ಯಷಸ್ ಸರಣಿ | ಬ್ರೂಕ್‌ – ವೋಕ್ಸ್‌ ಜೊತೆಯಾಟ; ಮೂರನೇ ಟೆಸ್ಟ್‌ನಲ್ಲಿ ಇಂಗ್ಲೆಂಡ್‌ಗೆ ರೋಚಕ ಜಯ

Date:

ಎರಡನೇ ಟೆಸ್ಟ್‌ನಲ್ಲಿ ಆಸ್ಟ್ರೇಲಿಯ ತಂಡದ ವಿರುದ್ಧ ಕೊನೆಯ ಹಂತದಲ್ಲಿ ಎಡವಿದ್ದ ಇಂಗ್ಲೆಂಡ್‌ ತಂಡ ಆ್ಯಷಸ್ ಸರಣಿಯ ಮೂರನೇ ಟೆಸ್ಟ್‌ನಲ್ಲಿ ಅಂತಹ ತಪ್ಪುಗಳನ್ನು ಮಾಡಲಿಲ್ಲ. ಹ್ಯಾರಿ ಬ್ರೂಕ್‌ ಹಾಗೂ ಕ್ರಿಸ್‌ ವೋಕ್ಸ್‌ ಅವರು 7ನೇ ವಿಕೆಟ್‌ಗೆ 59 ರನ್‌ಗಳ ಜೊತೆಯಾಟದ ನೆರವಿನಿಂದ ಮೂರು ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿತು.

ಆ್ಯಷಸ್ ಸರಣಿಯ ಮೂರನೇ ಟೆಸ್ಟ್‌ನ ನಾಲ್ಕನೇ ಇನ್ನಿಂಗ್ಸ್‌ನಲ್ಲಿ 250 ರನ್‌ಗಳ ಗುರಿ ಪಡೆದಿದ್ದ ಇಂಗ್ಲೆಂಡ್, ನಾಲ್ಕನೇ ದಿನದಲ್ಲಿಯೇ 50 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ ಜಯ ದಾಖಲಿಸಿತು. ಮಧ್ಯಮ ಕ್ರಮಾಂಕದ ಆಟಗಾರ ಹ್ಯಾರಿ ಬ್ರೂಕ್‌ 93 ಎಸೆತಗಳಲ್ಲಿ 9 ಬೌಂಡರಿಗಳೊಂದಿಗೆ ಸಮಯೋಚಿತ 75 ರನ್‌ ಹಾಗೂ ಆಲ್‌ರೌಂಡರ್‌ ಕ್ರಿಸ್‌ ವೋಕ್ಸ್ 47 ಚೆಂಡುಗಳಲ್ಲಿ 4 ಬೌಂಡರಿಗಳೊಂದಿಗೆ ಅಜೇಯ 32 ರನ್‌ ಗಳಿಸಿ ಗೆಲುವಿನ ರೂವಾರಿಯಾದರು.

ಆಸ್ಟ್ರೇಲಿಯ ಪರ ವೇಗದ ಬೌಲರ್‌ ಮಿಷಲ್‌ ಸ್ಟಾರ್ಕ್‌ 78/5 ವಿಕೆಟ್‌ ಪಡೆದರೂ ಜಯವನ್ನು ಕಿತ್ತುಕೊಳ್ಳಲು ಸಾಧ್ಯವಾಗಲಿಲ್ಲ. ಇದರೊಂದಿಗೆ 5 ಟೆಸ್ಟ್‌ಗಳ ಸರಣಿಯಲ್ಲಿ ಇಂಗ್ಲೆಂಡ್‌ 2-1 ರೊಂದಿಗೆ ಕೊಂಚ ಹಿನ್ನಡೆಯನ್ನು ತಪ್ಪಿಸಿಕೊಂಡು ಸರಣಿಯ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಲೀಡ್ಸ್‌ನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ನಾಲ್ಕನೇ ದಿನವಾದ ಇಂದು (ಜುಲೈ 9) ಇಂಗ್ಲೆಂಡ್‌ 250 ರನ್‌ಗಳ ಗುರಿ ಪಡೆದರೂ 93 ರನ್‌ಗಳಾಗುವಷ್ಟರಲ್ಲಿ 3 ವಿಕೆಟ್ ಪಡೆದ ಆಸೀಸ್ ಬೌಲರ್‌ಗಳು ಆರಂಭಿಕ ಮುನ್ನಡೆ ಪಡೆದರು.

ಈ ಸುದ್ದಿ ಓದಿದ್ದೀರಾ? ಆ್ಯಷಸ್‌ ಸರಣಿ | ಬೆನ್‌ ಸ್ಟೋಕ್ಸ್ ಸ್ಫೋಟಕ ಆಟ ವ್ಯರ್ಥ; ಎರಡನೇ ಗೆಲುವು ದಾಖಲಿಸಿದ ಆಸ್ಟ್ರೇಲಿಯ

ಝಾಕ್‌ ಕ್ರಾಲಿ 44, ಬೆನ್‌ ಡಕೆಟ್ 23,ಜೋ ರೂಟ್‌ 21, ಹ್ಯಾರಿ ಬ್ರೂಕ್‌ 75, ಕ್ರಿಸ್‌ ವೋಕ್ಸ್‌ ಅಜೇಯ 32 ಹಾಗೂ ಅಂತಿಮವಾಗಿ ಮಾರ್ಕ್‌ ವುಡ್‌ ಅಜೇಯ 16 ರನ್‌ ಗಳಿಸುವುದರೊಂದಿಗೆ ಇಂಗ್ಲೆಂಡ್‌ಗೆ ಸರಣಿಯ ಮೊದಲ ಗೆಲುವು ತಂದುಕೊಟ್ಟರು.

ಆಸ್ಟ್ರೇಲಿಯ 263 ರನ್‌ಗಳ ಮೊದಲ ಮೊದಲ ಇನ್ನಿಂಗ್ಸ್‌ಗೆ ಉತ್ತರವಾಗಿ ಇಂಗ್ಲೆಂಡ್‌ 237 ರನ್‌ ಗಳಿಸಿ 26 ರನ್‌ಗಳ ಹಿನ್ನಡೆ ಅನುಭವಿಸಿತ್ತು. ಎರಡನೇ ಇನ್ನಿಂಗ್ಸ್‌ ಆಡಿದ್ದ ಆಸ್ಟ್ರೇಲಿಯ 224 ರನ್‌ ಗಳಿಸಿ ಅತಿಥೇಯ ತಂಡದ ಗೆಲುವಿಗೆ 250 ರನ್‌ಗಳ ಗುರಿ ನೀಡಿತ್ತು. ಜುಲೈ 19 ರಂದು ಇಂಗ್ಲೆಂಡ್‌ನ ಮ್ಯಾಂಚಿಸ್ಟರ್‌ನಲ್ಲಿ ಆ್ಯಷಸ್ ಸರಣಿಯ ನಾಲ್ಕನೇ ಟೆಸ್ಟ್‌ ಆರಂಭವಾಗಲಿದೆ.

ಇಂಗ್ಲೆಂಡ್ ಸರಣಿ ಆಸೆ ಜೀವಂತ

5 ಪಂದ್ಯಗಳ ಆ್ಯಷಸ್ ಸರಣಿಯ ಮೊದಲೆರಡು ಪಂದ್ಯಗಳಲ್ಲಿ ಆಸ್ಟ್ರೇಲಿಯಾ ತಂಡವು ಜಯ ಸಾಧಿಸಿದೆ. ಬರ್ಮಿಂಗ್​ಹ್ಯಾಮ್​ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯವನ್ನು 2 ವಿಕೆಟ್​ಗಳಿಂದ ಗೆದ್ದುಕೊಂಡಿತ್ತು. ಲಾರ್ಡ್ಸ್​ ಮೈದಾನದಲ್ಲಿ ನಡೆದ 2ನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ 43 ರನ್​ಗಳಿಂದ ಜಯ ಸಾಧಿಸಿತ್ತು. ಲೀಡ್ಸ್ ಮೈದಾನದಲ್ಲಿ ಜಯ ಸಾಧಿಸುವ ಮೂಲಕ ಇಂಗ್ಲೆಂಡ್ ತಂಡವು ಸರಣಿಯನ್ನು 2-1 ಅಂತರಕ್ಕೆ ಇಳಿಸಿದ್ದಾರೆ. ಈ ಮೂಲಕ ಸರಣಿ ಗೆಲ್ಲುವ ಆಸೆಯನ್ನು ಜೀವಂತವಿರಿಸಿಕೊಂಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...