ಪ್ರಥಮ ದರ್ಜೆ ಕ್ರಿಕೆಟ್ | ಒಂದೇ ಓವರ್‌ನಲ್ಲಿ 43 ರನ್ ಚಚ್ಚಿಸಿಕೊಂಡ ಇಂಗ್ಲೆಂಡ್‌ ವೇಗಿ ಒಲ್ಲಿ ರಾಬಿನ್ಸನ್!

Date:

ಇಂಗ್ಲೆಂಡ್‌ನ ವೇಗದ ಬೌಲರ್ ಒಲ್ಲಿ ರಾಬಿನ್ಸನ್ ಕೌಂಟಿ ಚಾಂಪಿಯನ್‌ಶಿಪ್ ಪಂದ್ಯದಲ್ಲಿ ಒಂದೇ ಓವರ್‌ನಲ್ಲಿ 43 ರನ್‌ಗಳನ್ನು ಚಚ್ಚಿಸಿಕೊಳ್ಳುವ ಮೂಲಕ ಪ್ರಥಮ ದರ್ಜೆ ಕ್ರಿಕೆಟ್ ಇತಿಹಾಸದಲ್ಲಿ ಎರಡನೇ ಅತ್ಯಂತ ದುಬಾರಿ ಬೌಲಿಂಗ್ ಮಾಡುವ ಅನಗತ್ಯ ದಾಖಲೆಯನ್ನು ತನ್ನ ಹೆಸರಿನಲ್ಲಿ ಬರೆಸಿಕೊಂಡಿದ್ದಾರೆ.

2021ರಲ್ಲಿ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದ ಬಲಗೈ ಬೌಲರ್ ರಾಬಿನ್ಸನ್, ಇಂಗ್ಲೆಂಡ್ ಪರ 20 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಅವರು ಇಲ್ಲಿ ಹೋವ್‌ನಲ್ಲಿ ಸಸೆಕ್ಸ್‌ಗಾಗಿ ಆಡುತ್ತಿರುವಾಗ ಲೀಸೆಸ್ಟರ್‌ಶೈರ್ ವಿರುದ್ಧ ಡಿವಿಷನ್ ಎರಡು ಪಂದ್ಯದಲ್ಲಿ ತಮ್ಮ ಓವರ್ ಅನ್ನು ಪೂರ್ಣಗೊಳಿಸಲು ಒಟ್ಟು ಒಂಭತ್ತು ಎಸೆತಗಳನ್ನು ಬೌಲ್ ಮಾಡಿ, 43 ರನ್ ಚಚ್ಚಿಸಿಕೊಂಡಿದ್ದಾರೆ. ಇದು 134 ವರ್ಷಗಳ ಕೌಂಟಿ ಚಾಂಪಿಯನ್‌ಶಿಪ್ ಇತಿಹಾಸದಲ್ಲಿ ಅತ್ಯಂತ ದುಬಾರಿ ಓವರ್ ಆಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಲೀಸೆಸ್ಟರ್‌ಶೈರ್‌ನ ಲೂಯಿಸ್ ಕಿಂಬರ್, ರಾಬಿನ್ಸನ್ ಎಸೆತದಲ್ಲಿ ಐದು ಸಿಕ್ಸರ್ (ಮೂರು ನೋಬಾಲ್), ಮೂರು ಬೌಂಡರಿ ಮತ್ತು ಒಂದು ರನ್ ಬಾರಿಸಿ 43 ರನ್ ಗಳಿಸಿದರು.

ರಾಬಿನ್ಸನ್ ಅವರ 13ನೇ ಓವರ್‌ನಲ್ಲಿ ನೋ ಬಾಲ್‌ನಲ್ಲಿ 6, 6, ನೋ ಬಾಲ್‌ನಲ್ಲಿ 4, 6, 4, 6, ನೋ ಬಾಲ್‌ನಲ್ಲಿ 4, 6 ಮತ್ತು ಒಂದು ರನ್ ಗಳಿಸಿದರು. ಈ ಮೂಲಕ ಇಂಗ್ಲೆಂಡ್ ಪರ ಅತಿ ಹೆಚ್ಚು ರನ್ ನೀಡಿದ ದಾಖಲೆಯನ್ನೂ ರಾಬಿನ್ಸನ್ ಮುರಿದರು. ರಾಬಿನ್ಸನ್ ಮಾಜಿ ಟೆಸ್ಟ್ ವೇಗದ ಬೌಲರ್ ಅಲೆಕ್ಸ್ ಟ್ಯೂಡರ್ ಅವರ 38 ರನ್‌ಗಳನ್ನು ಕೊಟ್ಟಿದ್ದ ದಾಖಲೆಯನ್ನು ಹಿಂದಿಕ್ಕಿದರು.

ಎರಡನೇ ಅತಿವೇಗದ ದ್ವಿಶತಕ ಬಾರಿಸಿದ ಲೂಯಿಸ್ ಕಿಂಬರ್

ರಾಬಿನ್ಸನ್ ಓವರ್‌ನಲ್ಲಿ 43 ರನ್ ಬಂದಿದ್ದು ಒಂದೆಡೆಯಾದರೆ, ಪ್ರಥಮ ದರ್ಜೆ ಕ್ರಿಕೆಟ್ ಇತಿಹಾಸದಲ್ಲಿ ಅತ್ಯಂತ ವೇಗದ ಡಬಲ್ ಸೆಂಚುರಿ ಬಾರಿಸಿದ ಕೀರ್ತಿಗೆ ಲೂಯಿಸ್ ಕಿಂಬರ್ ಪಾತ್ರರಾಗಿದ್ದಾರೆ.

ಲೂಯಿಸ್ ಕಿಂಬರ್ ಅವರು, ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಕೇವಲ 100 ಎಸೆತಗಳಲ್ಲಿ ಎರಡನೇ ಅತಿವೇಗದ ದ್ವಿಶತಕ ಬಾರಿಸಿದರು. ಈ ಮೊದಲು 2018ರಲ್ಲಿ ಕಾಬೂಲ್ ರೀಜನ್ Vs ಬೂಸ್ಟ್ ರೀಜನ್‌ನ ಪಂದ್ಯದಲ್ಲಿ ಶಫೀಕುಲ್ಲಾ ಅವರು 89 ಎಸೆತಗಳಲ್ಲಿ ಅತಿವೇಗದ ದ್ವಿಶತಕ ಬಾರಿಸಿದ್ದರು. ಈ ಪಟ್ಟಿಯಲ್ಲಿ ಭಾರತದ ರವಿಶಾಸ್ತ್ರೀ ಹಾಗೂ ತನ್ಮಯ್ ಅಗರ್ವಾಲ್ ಹೆಸರು ಕೂಡ ಇದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...