ನಾಲ್ಕನೇ ಟೆಸ್ಟ್‌ | ಕೈಕೊಟ್ಟ ಬ್ಯಾಟಿಂಗ್: ಆಸ್ಟ್ರೇಲಿಯಾ ವಿರುದ್ಧ ಟೀಮ್ ಇಂಡಿಯಾಗೆ ಹೀನಾಯ ಸೋಲು

Date:

ಆಸ್ಟ್ರೇಲಿಯಾ ವಿರುದ್ಧ ಮೆಲ್ಬೋರ್ನ್‌ನ ಎಂಸಿಜಿ ಕ್ರೀಡಾಂಗಣದಲ್ಲಿ ನಡೆದ ನಾಲ್ಕನೇ ಟೆಸ್ಟ್‌ನ ಕೊನೆಯ ದಿನ ಟೀಮ್ ಇಂಡಿಯಾದ ಬ್ಯಾಟಿಂಗ್ ವಿಭಾಗ ಕೈಕೊಟ್ಟ ಪರಿಣಾಮ 184 ರನ್‌ಗಳಿಂದ ಹೀನಾಯ ಸೋಲು ಅನುಭವಿಸಿದೆ.

ನಾಲ್ಕನೇ ಟೆಸ್ಟ್‌ನ ಗೆಲುವಿನೊಂದಿಗೆ ಪ್ಯಾಟ್ ಕಮ್ಮಿನ್ಸ್‌ ನೇತೃತ್ವದ ಆಸ್ಟ್ರೇಲಿಯಾ ತಂಡವು, ಐದು ಟೆಸ್ಟ್‌ ಪಂದ್ಯಗಳ ಸರಣಿಯಲ್ಲಿ 2-1 ಗೆಲುವಿನೊಂದಿಗೆ ಮುನ್ನಡೆ ಕಾಯ್ದುಕೊಂಡಿದೆ. ಕೊನೆಯ ಟೆಸ್ಟ್‌ ಪಂದ್ಯವು ಸಿಡ್ನಿಯಲ್ಲಿ ನಡೆಯಲಿದೆ.

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಟೂರ್ನಿಯಲ್ಲಿ ಅರ್ಹತೆ ಗಿಟ್ಟಿಸಿಕೊಳ್ಳಲು ಸಿಡ್ನಿಯಲ್ಲಿ ನಡೆಯಲಿರುವ ಕೊನೆಯ ಟೆಸ್ಟ್‌ ಪಂದ್ಯದಲ್ಲಿ ರೋಹಿತ್ ಶರ್ಮಾ ಬಳಗವು ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಒಂದು ವೇಳೆ ಸೋತರೆ ಅಥವಾ ಡ್ರಾ ಆದರೆ ಅರ್ಹತೆ ಕಳೆದುಕೊಳ್ಳಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೆಲ್ಬೋರ್ನ್​ನಲ್ಲಿ ನಡೆದ ಬಾರ್ಡರ್ – ಗವಾಸ್ಕರ್ ಟ್ರೋಫಿ ಸರಣಿಯ ಬಾಕ್ಸಿಂಗ್ ಡೇ ಟೆಸ್ಟ್‌ ಪಂದ್ಯದಲ್ಲಿ ಆಸೀಸ್‌ ತನ್ನ ಮೊದಲ ಇನಿಂಗ್ಸ್‌ನಲ್ಲಿ 122.4 ಓವರ್‌ಗಳಲ್ಲಿ 474 ರನ್‌ಗಳಿಗೆ ಆಲೌಟ್ ಆಗಿತ್ತು. 311/6 ರನ್‌ನೊಂದಿಗೆ ಎರಡನೇ ದಿನದಾಟ ಆರಂಭಿಸಿದ್ದ ಆಸ್ಟ್ರೇಲಿಯಾವು ಸ್ಟೀವನ್‌ ಸ್ಮಿತ್‌ ಅವರ ಆಕರ್ಷಕ ಶತಕದ(140) ನೆರವಿನಿಂದಿಗೆ 470ರ ಗಡಿ ದಾಟಿತ್ತು.

ಬಳಿಕ ಮೊದಲ ಇನ್ನಿಂಗ್ಸ್ ಆರಂಭಿಸಿದ್ದ ರೋಹಿತ್ ಬಳಗವು, ನಿತೀಶ್ ಕುಮಾರ್ ರೆಡ್ಡಿ ಹಾಗೂ ವಾಷಿಂಗ್ಟನ್ ಸುಂದರ್ ಉತ್ತಮ ಆಟವಾಡಿದ್ದರಿಂದ ಫಾಲೋ ಆನ್ ಭೀತಿಯಿಂದ ಪಾರಾಗಿತ್ತು. ಶನಿವಾರ ದಿನದಾಟದ ಕೊನೆಗೆ 9ಕ್ಕೆ 358 ರನ್ ಗಳಿಸಿದ್ದ ಭಾರತ ತಂಡವು ಭಾನುವಾರ ಹೆಚ್ಚು ಹೊತ್ತು ಆಡಲಿಲ್ಲ. ಈ ಮೊತ್ತಕ್ಕೆ 11 ರನ್‌ಗಳು ಸೇರಿದ ನಂತರ ಸ್ಪಿನ್ನರ್ ನೇಥನ್ ಲಯನ್ ಬೌಲಿಂಗ್‌ನಲ್ಲಿ ಮೊದಲ ಶತಕ ಬಾರಿಸಿ ಮಿಂಚಿದ್ದ (114 ರನ್) ನಿತೀಶ್ ಕುಮಾರ್ ರೆಡ್ಡಿ ಔಟಾದರು. ಟೀಮ್ ಇಂಡಿಯಾ ಮೊದಲ ಇನಿಂಗ್ಸ್‌ನಲ್ಲಿ 369 ರನ್ ದಾಖಲಿಸಿತ್ತು. ಇದರಿಂದಾಗಿ ಆಸ್ಟ್ರೇಲಿಯಾ 105 ರನ್‌ಗಳ ಮುನ್ನಡೆಯೊಂದಿಗೆ ಎರಡನೇ ಇನಿಂಗ್ಸ್ ಆರಂಭಿಸಿತ್ತು.

ಮೊದಲ ಇನ್ನಿಂಗ್ಸ್‌ನಲ್ಲಿ 105 ರನ್‌ ಮುನ್ನಡೆ ಪಡೆದಿದ್ದ ಆಸ್ಟ್ರೇಲಿಯಾ ಎರಡನೇ ಇನ್ನಿಂಗ್ಸ್‌ನಲ್ಲಿ 235 ರನ್‌ಗಳ ಗೆಲುವಿನ ಗುರಿಯನ್ನು ಭಾರತ ತಂಡಕ್ಕೆ ನೀಡಿತು. ಗುರಿ ಬೆನ್ನಟ್ಟಿದ ಭಾರತ 155 ರನ್‌ಗಳಿಗೆ ಸರ್ವ ಪತನವಾಗುವ ಮೂಲಕ ಅವಮಾನಕರ ಸೋಲು ಕಂಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಂಜುಗೆ ಧೋನಿ ಕೀಪಿಂಗ್ ಗ್ಲೌಸ್ ಹಸ್ತಾಂತರ; ಮುಂದೆ ನಾಯಕತ್ವವೂ? ಸಿಎಸ್‌ಕೆ ಯೋಜನೆ ಬಗ್ಗೆ ಕುಂಬ್ಳೆ ವಿಶ್ಲೇಷಣೆ

ಭಾರತದ ಟಿ20 ವಿಶ್ವಕಪ್ ಗೆಲುವಿನಲ್ಲಿ ರುವಾರಿ ಎಂದೇ ಮಿಂಚುತ್ತಿರುವ ಸಂಜು ಸ್ಯಾಮ್ಸನ್,...

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

BREAKING NEWS | ದಾವಣಗೆರೆ, ಬಾಗಲಕೋಟೆ ಉಪಚುನಾವಣೆ ದಿನಾಂಕ ಘೋಷಣೆ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆ ಘೋಷಣೆಯ...