2025ರ ಚಾಂಪಿಯನ್ಸ್ ಟ್ರೋಫಿ ಗೆದ್ದ ಭಾರತ ತಂಡಕ್ಕೆ ₹58 ಕೋಟಿ ಬಹುಮಾನ ಘೋಷಣೆ

Date:

2025ರ ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದ ಭಾರತ ಕ್ರಿಕೆಟ್ ತಂಡಕ್ಕೆ 58 ಕೋಟಿ ನಗದು ಬಹುಮಾನವನ್ನು ನೀಡಲಾಗುವುದು ಎಂದು ಬಿಸಿಸಿಐ ಗುರುವಾರ ತಿಳಿಸಿದೆ.

ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ಚಾಂಪಿಯನ್ಸ್ ಟ್ರೋಫಿಯ ಎಲ್ಲ ಪಂದ್ಯಗಳನ್ನು ಗೆದ್ದು ಮೂರನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದೆ. ದುಬೈನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡವನ್ನು ಸೋಲಿಸಿ ಟ್ರೋಫಿ ಮುಡಿಗೇರಿಸಿಕೊಂಡಿತ್ತು.

ಈ ಶ್ರೇಷ್ಠ ಸಾಧನೆಯನ್ನು ಗೌರವಿಸುವ ಸಲುವಾಗಿ ಬಿಸಿಸಿಐ ಇದೀಗ 58 ಕೋಟಿ ರೂ. ನಗದು ಬಹುಮಾನ ಘೋಷಿಸಿದೆ. ಈ ಮೊತ್ತವನ್ನು ಆಟಗಾರರು, ತರಬೇತಿ ಹಾಗೂ ಸಹಾಯಕ ಸಿಬ್ಬಂದಿಗಳು ಹಂಚಿಕೊಳ್ಳಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2024 ರಲ್ಲಿ ಟಿ-20 ವಿಶ್ವಕಪ್ ಗೆದ್ದಿದ್ದ ಭಾರತ ತಂಡಕ್ಕೆ ಬಿಸಿಸಿಐ 125 ಕೋಟಿ ರೂ. ಬಹುಮಾನ ಮೊತ್ತ ನೀಡಿತ್ತು. ಆ ಬಹುಮಾನ ಮೊತ್ತವನ್ನು ಆಟಗಾರರು ಹಾಗೂ ಸಿಬ್ಬಂದಿಗಳಿಗೆ ಹಂಚಲಾಗಿದೆ. ಆಗ ಟೀಮ್ ಇಂಡಿಯಾ ಆಟಗಾರರಿಗೆ ಹಾಗೂ ಕೋಚ್ ರಾಹುಲ್ ದ್ರಾವಿಡ್ ಅವರಿಗೆ ತಲಾ 5 ಕೋಟಿ ರೂ. ನೀಡಲಾಗಿದೆ. ಇನ್ನುಳಿದ ಸಿಬ್ಬಂದಿಗಳಿಗೆ ತಲಾ 2.5 ಕೋಟಿ ರೂ. ನಿಗದಿ ಮಾಡಲಾಗಿತ್ತು. ಇದೇ ಮಾದರಿಯಲ್ಲಿ ಈ ಬಾರಿ 58 ಕೋಟಿ ರೂ. ಅನ್ನು ಟೀಮ್ ಇಂಡಿಯಾ ಸದಸ್ಯರಿಗೆ ಹಂಚುವ ಸಾಧ್ಯತೆ ಇದೆ.

ಚಾಂಪಿಯನ್ಸ್ ಟ್ರೋಫಿಯ ಭಾರತ ತಂಡದ ಸದಸ್ಯರು

ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್. ಶಮಿ, ಅರ್ಷದೀಪ್ ಸಿಂಗ್, ರವೀಂದ್ರ ಜಡೇಜಾ, ವರುಣ್ ಚಕ್ರವರ್ತಿ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...