7 ಇನ್ನಿಂಗ್ಸ್‌ನಲ್ಲಿ 752 ರನ್, 6 ಬಾರಿ ನಾಟ್‌ಔಟ್‌; ಹೊಸ ದಾಖಲೆಯ ಅಂಚಿನಲ್ಲಿ ಕರುಣ್ ನಾಯರ್

Date:

ವಿದರ್ಭ ತಂಡದ ಬ್ಯಾಟರ್‌ ಕರುಣ್ ನಾಯರ್ ಅವರು ಇತ್ತೀಚೆಗೆ ಆಡಿದ 7 ಇನ್ನಿಂಗ್ಸ್‌ಗಳಲ್ಲಿ 5 ಶತಕಗಳೊಂದಿಗೆ 752 ರನ್‌ ಗಳಿಸಿದ್ದಾರೆ. ಮಾತ್ರವಲ್ಲದೆ, ಆರು ಇನ್ನಿಂಗ್ಸ್‌ಗಳಲ್ಲಿ ಔಟ್‌ ಆಗದೇ ಉಳಿದಿದ್ದಾರೆ. ಆ ಮೂಲಕ ಹೊಸ ದಾಖಲೆ ಬರೆಯುವತ್ತ ಹೆಜ್ಜೆ ಇಟ್ಟಿದ್ದಾರೆ.’

ವಿಜಯ್ ಹಜಾರೆ ಟ್ರೋಫಿಯಲ್ಲಿ ವಿದರ್ಭ ತಂಡವನ್ನು ಮುನ್ನಡೆಸುತ್ತಿರುವ ನಾಯರ್, ಆ ಟೂರ್ನಿಯ 7 ಪಂದ್ಯಗಳಲ್ಲಿ ಅದ್ಭುತವಾಗಿ ಬ್ಯಾಟಿಂಗ್ ಮಾಡಿದ್ದಾರೆ. ಟೂರ್ನಿಯ ಪಂದ್ಯವೊಂದರಲ್ಲಿ ಅಜೇಯ 163 ರನ್ ಕಲೆ ಹಾಕಿ ಗರಿಷ್ಠ ಮೊತ್ತ ದಾಖಲಿಸಿದ್ದಾರೆ.

ಗುರುವಾರ, ಮಹಾರಾಷ್ಟ್ರದ ವಿರುದ್ಧ ನಡೆದ ಸೆಮಿಫೈನಲ್‌ನಲ್ಲಿ ನಾಯರ್ 44 ಎಸೆತಗಳಲ್ಲಿ 9 ಬೌಂಡರಿಗಳು ಮತ್ತು 5 ಸಿಕ್ಸರ್‌ಗಳೊಂದಿಗೆ 88* ರನ್ ಗಳಿಸಿದರು. ವಿದರ್ಭ ತಂಡವು 380 ರನ್‌ಗಳನ್ನು ಪೇರಿಸಿ, ಸೆಮಿಫೈನಲ್‌ನಲ್ಲಿ ಗೆಲುವು ಸಾಧಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶನಿವಾರ, ವಿದರ್ಭ ಮತ್ತು ಕರ್ನಾಟಕದ ನಡುವೆ ಗುಜರಾತ್‌ನ ವಡೋದರಾದಲ್ಲಿ ಫೈನಲ್ ಪಂದ್ಯ ನಡೆಯಲಿದೆ. ಪಂದ್ಯದಲ್ಲಿ ಎಲ್ಲರ ಚಿತ್ತವೂ ನಾಯರ್ ಅವರು ಅಬ್ಬರದ ಬ್ಯಾಟಿಂಗ್‌ ಮೇಲೆಯೇ ಕೇಂದ್ರೀಕರಿಸಲಿದೆ.

ಈ ಪಂದ್ಯದಲ್ಲಿ ನಾಯರ್ ಉತ್ತಮ ಪ್ರದರ್ಶನ ನೀಡಿದರೆ, ಹಜಾರೆ ಟ್ರೋಫಿಯಲ್ಲಿ ಸಾರ್ವಕಾಲಿಕ ದಾಖಲೆ ಮುರಿದು, ಹೊಸ ದಾಖಲೆ ನಿರ್ಮಿಸಲಾಗಿದ್ದಾರೆ. ಅವರು ಫೈನಲ್‌ ಪಂದ್ಯದಲ್ಲಿ 79 ರನ್ ಗಳಿಸಿದರೂ, ಟ್ರೋಫಿಯಲ್ಲಿ ಅತೀ ಹೆಚ್ಚು ರನ್‌ ಗಳಿಸಿದ ನ್ಯಾಟರ್‌ ಎಂಬ ಖ್ಯಾತಿಗೆ ಪಾತ್ರರಾಗಲಿದ್ದಾರೆ.

ಈ ಹಿಂದೆ, 2022/23ರಲ್ಲಿ ನಡೆದಿದ್ದ, ಹಜಾರೆ ಟ್ರೋಫಿಯಲ್ಲಿ ತಮಿಳುನಾಡಿನ ಬ್ಯಾಟರ್ ನಾರಾಯಣ್ ಜಗದೀಶನ್ ಅವರು ಒಟ್ಟು 8 ಪಂದ್ಯಗಳಿಂದ 830 ರನ್‌ ಗಳಿಸಿದ್ದರು. ಇಗ, ನಾಯರ್ 79 ರನ್‌ಗಳಿಸಿದರೆ, ನಾರಾಯಣ್ ಅವರ ದಾಖಲೆಯನ್ನು ಮುರಿಯಬಹುದು.

ನಾಯರ್ ಅವರ ಪ್ರದರ್ಶನದ ಬಗ್ಗೆ ಟ್ವೀಟ್ ಮಾಡಿರುವ ಸಚಿನ್ ತೆಂಡೂಲ್ಕರ್, “7 ಇನ್ನಿಂಗ್ಸ್‌ಗಳಲ್ಲಿ 5 ಶತಕಗಳೊಂದಿಗೆ 752 ರನ್ ಗಳಿಸುವುದು ಅಸಾಧಾರಣ. ಈ ರೀತಿಯ ಪ್ರದರ್ಶನಗಳು ಕೇವಲ ಸಂಭವಿಸುವುದಿಲ್ಲ. ಕಠಿಣ ಪರಿಶ್ರಮದಿಂದ ಬರುತ್ತವೆ. ಬಲಿಷ್ಠವಾಗಿ ಮುಂದುವರಿಯಿರಿ ಮತ್ತು ಪ್ರತಿಯೊಂದು ಅವಕಾಶವನ್ನೂ ಗಣನೆಗೆ ತೆಗೆದುಕೊಳ್ಳಿ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...