ಮೊದಲ ಏಕದಿನ ಪಂದ್ಯ: ಸೌತ್ ಆಫ್ರಿಕಾ ವಿರುದ್ಧ ಟೀಮ್ ಇಂಡಿಯಾ ಮಹಿಳಾ ತಂಡಕ್ಕೆ ಭರ್ಜರಿ ಜಯ

Date:

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ ಹಾಗೂ ದಕ್ಷಿಣ ಆಫ್ರಿಕಾ ಮಹಿಳೆಯರ ತಂಡಗಳ ನಡುವೆ ಭಾನುವಾರ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ ಭರ್ಜರಿ ಶತಕ ಹಾಗೂ ಆಶಾ ಶೋಭಾನ ಅವರ 4 ವಿಕೆಟ್‌ಗಳ ಗೊಂಚಲಿನಿಂದ 143 ರನ್‌ಗಳ ಭರ್ಜರಿ ಜಯ ಗಳಿಸಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ್ದ ಹರ್ಮನ್ ಪ್ರೀತ್ ಕೌರ್ ನೇತೃತ್ವದ ವನಿತೆಯರ ಪಡೆಯು ಆರಂಭಿಕ ಬ್ಯಾಟರ್ ಸ್ಮೃತಿ ಮಂಧಾನ ಅವರ ಭರ್ಜರಿ ಶತಕದ ನೆರವಿನಿಂದ ನಿಗದಿತ 50 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 265 ರನ್ ಕಲೆಹಾಕಿತ್ತು.

ಈ ಗುರಿಯನ್ನು ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ತಂಡ ಆಶಾ ಶೋಭಾನವರವರ ಸ್ಪಿನ್ ದಾಳಿಗೆ ಸಿಲುಕಿ, 37.4 ಓವರ್‌ಗಳಲ್ಲಿ 122 ರನ್ ಗಳಿಸುವಷ್ಟರಲ್ಲಿ ಆಲೌಟಾಯಿತು. ಆ ಮೂಲಕ ಟೀಮ್ ಇಂಡಿಯಾ 143 ರನ್‌ಗಳ ಭರ್ಜರಿ ಜಯ ಗಳಿಸಿತ್ತಲ್ಲದೇ, ಮೂರು ಏಕದಿನ ಪಂದ್ಯದ ಸರಣಿಯಲ್ಲಿ 1-0 ಮುನ್ನಡೆ ಗಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸೌತ್ ಆಫ್ರಿಕಾ ತಂಡದ ಪರ ಬ್ಯಾಟಿಂಗ್‌ನಲ್ಲಿ ಸುನೆ ಲೂಸ್ 33 ರನ್, ಸಿನಾಲೊ ಜಾಫ್ತಾ 27 ರನ್ ಹಾಗೂ ಮರಿಝಾನೆ ಕಾಪ್ 24 ರನ್ ಗಳಿಸಿದರು.

ಟೀಮ್ ಇಂಡಿಯಾ ಪರ ಮೊದಲ ಏಕದಿನ ಪಂದ್ಯವನ್ನಾಡುತ್ತಿರುವ ಆಶಾ ಶೋಭಾನ 21ಕ್ಕೆ 4 ವಿಕೆಟ್ ಪಡೆಯುವ ಮೂಲಕ ಪದಾರ್ಪಣೆ ಪಂದ್ಯದಲ್ಲೇ ಬೌಲಿಂಗ್‌ನಲ್ಲಿ ಮಿಂಚಿದರು.

ದೀಪ್ತಿ ಶರ್ಮಾ 2 ವಿಕೆಟ್ ಪಡೆದುಕೊಂಡರು. ಉಳಿದಂತೆ ರೇಣುಕಾ ಸಿಂಗ್, ಪೂಜಾ ವಸ್ತ್ರಕರ್ ಹಾಗೂ ರಾಧಾ ಯಾದವ್ ತಲಾ ಒಂದೊಂದು ವಿಕೆಟ್ ಪಡೆಯುವಲ್ಲಿ ಸಫಲರಾದರು.

ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಸ್ಮೃತಿ ಮಂಧಾನ ಅವರ 6ನೇ ಶತಕ

ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ. ತಂಡದ ಸ್ಕೋರ್ 15 ರನ್ ಆಗುವಷ್ಟರಲ್ಲಿ ಆರಂಭಿಕ ಆಟಗಾರ್ತಿ ಶಫಾಲಿ ವರ್ಮಾ 7 ರನ್​ಗಳಿಗೆ ವಿಕೆಟ್ ಒಪ್ಪಿಸಿದರೆ, ನಂತರ ಬಂದ ದಯಾಳನ್ ಹೇಮಲತಾ ಕೂಡ 12 ರನ್​ಗಳಿಗೆ ಪೆವಿಲಿಯನ್ ಸೇರಿಕೊಂಡರು. ನಾಯಕಿ ಹರ್ಮನ್​ಪ್ರೀತ್ ಕೌರ್ ಕೂಡ 10 ರನ್​ಗಳಿಗೆ ಸುಸ್ತಾದರು. ಹೀಗಾಗಿ ತಂಡ ಕೇವಲ 53 ರನ್​ಗಳಿಗೆ ಪ್ರಮುಖ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು.

ಆ ಬಳಿಕ ಕ್ರೀಸ್‌ನಲ್ಲಿದ್ದ ಸ್ಮೃತಿಗೆ ಜೊತೆಯಾದ ಜೆಮಿಮಾ ರಾಡ್ರಿಗಸ್ 17 ರನ್​ಗಳ ಕಾಣಿಕೆ ನೀಡಿದ್ದಲ್ಲದೆ ತಂಡದ ಮೊತ್ತವನ್ನು 90 ರನ್​ಗಳ ಗಡಿ ದಾಟಿಸಿದರು. ಈ ವೇಳೆ ಸಿಕ್ಸರ್ ಸಿಡಿಸುವ ಯತ್ನದಲ್ಲಿ ಜೆಮಿಮಾ ಕ್ಯಾಚಿತ್ತು ಔಟಾದರು. ನಂತರ ಬಂದ ರಿಚಾ ಘೋಷ್ 3 ರನ್​​ಗಳಿಗೆ ತಮ್ಮ ಇನ್ನಿಂಗ್ಸ್ ಮುಗಿಸಿದರು. ಹೀಗಾಗಿ ಮತ್ತೊಮ್ಮೆ ತಂಡ ಸಂಕಷ್ಟಕ್ಕೆ ಸಿಲುಕಿತು. ಆದರೆ 7ನೇ ಕ್ರಮಾಂಕದಲ್ಲಿ ಬಂದ ದೀಪ್ತಿ ಶರ್ಮಾ ಜೊತೆಗೆ, ಜೊತೆಯಾಟ ನೀಡಿದರು.

ಸಂಕಷ್ಟದ ಸಮಯದಲ್ಲಿ ತಂಡದ ಇನ್ನಿಂಗ್ಸ್ ಜವಾಬ್ದಾರಿ ಹೊತ್ತಿದ್ದ ಸ್ಮೃತಿ ಮಂದಾನ 116 ಎಸೆತಗಳಲ್ಲಿ 10 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ ಶತಕ ಪೂರೈಸಿದರು. ಇದು ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಮಂಧಾನ ಅವರ 6ನೇ ಶತಕವಾಗಿದೆ. ಈ ಶತಕದ ಇನ್ನಿಂಗ್ಸ್ ಜೊತೆಗೆ ಸ್ಮೃತಿ, ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 7000 ರನ್ ಪೂರೈಸಿದ ದಾಖಲೆಯನ್ನು ನಿರ್ಮಿಸಿದ್ದಾರೆ. ಅಲ್ಲದೆ ಈ ಸಾಧನೆ ಮಾಡಿದ ಭಾರತ ವನಿತಾ ತಂಡದ ಎರಡನೇ ಆಟಗಾರ್ತಿ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...